admin
February 19, 2022
Breaking News, ಜಿಲ್ಲೆ, ಮಂಗಳೂರು
ಮಂಗಳೂರು: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಸಾವನ್ನಪ್ಪಿರುವ ಘಟನೆ ಮಂಗಳೂರಿನ ಬಂದರು ಪೊಲೀಸ್ ಠಾಣೆಯಲ್ಲಿ ನಡೆದಿದೆ. ಮಂಗಳೂರು ನಗರದ ಉರ್ವಾದ ನಿವಾಸಿ ರಾಜೇಶ್ (30) ಮೃತ ವ್ಯಕ್ತಿ. ನಗರದ ಜ್ಯೋತಿ ಬಳಿ ಸ್ಮಾರ್ಟ್ ಸಿಟಿ ಕಾಮಗಾರಿಯ ಕಬ್ಬಿಣದ ಸರಳು ಕದ್ದೊಯುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಆರೋಪಿಗಳ ಪೈಕಿ ರಾಜೇಶ್ಗೆ ರಾತ್ರಿ ವೇಳೆಗೆ ಎದೆ ನೋವು ಕಾಣಿಸಿಕೊಂಡಿದ್ದು, ಕೂಡಲೇ ಆತನನ್ನು ವೆನ್ಲಾಕ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ತಪಾಸಣೆ ನಡೆಸಿದ ವೈದ್ಯರಿಂದ ರಾಜೇಶ್ …
Read More »
admin
February 16, 2022
Breaking News, ಜಿಲ್ಲೆ, ಮಂಗಳೂರು
ಮಂಗಳೂರು (ದ.ಕನ್ನಡ): ಪ್ಯಾರಾಮೆಡಿಕಲ್ ವಿದ್ಯಾರ್ಥಿಯೊಬ್ಬರು ಆಸ್ಪತ್ರೆಯ ರೆಸ್ಟ್ ರೂಮ್ನಲ್ಲಿ ಮಲಗಿದ್ದಲ್ಲೇ ಸಾವನ್ನಪ್ಪಿದ್ದ ಮನಕುಲ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ನಿವಾಸಿ ನಾಗೇಶ್ (23) ಸಾವನ್ನಪ್ಪಿದ ವಿದ್ಯಾರ್ಥಿ. ಇವರು ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಭಾನುವಾರ ರಾತ್ರಿ ರೆಸ್ಟ್ ರೂಮ್ನಲ್ಲಿ ಮಲಗಿದ್ದು, ಬೆಳಗ್ಗೆ ನೋಡಿದಾಗ ಮೃತಪಟ್ಟಿದ್ದಾರೆ.
Read More »
admin
February 8, 2022
Breaking News, ಜಿಲ್ಲೆ, ಮಂಗಳೂರು
ಮಂಗಳೂರು : ಹಿಜಾಬ್ ವಿವಾದ ಸೃಷ್ಟಿಯಿಂದ ದೇಶಕ್ಕೆ ಅವಮಾನವಾಗಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಿ.ಕೆ.ಶಿವ ಕುಮಾರ್ ಹೇಳಿದ್ದಾರೆ. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು,ಪ್ರಸ್ತುತ ಜನರಿಗೆ ಬೇಕಾಗಿರುವುದು ಆರ್ಥಿಕ ಭದ್ರತೆ, ಉದ್ಯೋಗ, ನೆಮ್ಮದಿಯ ಬದುಕು. ಜನತೆಯ ಈ ಆಶೋತ್ತರಗಳನ್ನು ಈಡೇರಿಸುವುದೇ ಕಾಂಗ್ರೆಸ್‌ನ ಗುರಿ. ನಾವು ಆದ್ಯತೆ ನೀಡುವುದು ಇದಕ್ಕೆ. ಆದರೆ ಬಿಜೆಪಿಗೆ ಈ ಆದ್ಯತೆಗಳು ಬೇಕಾಗಿಲ್ಲ . ಅವರ ಗಮನ ಇರುವುದು ಮತೀಯ ಭಾವನೆಗಳನ್ನು ಕೆರಳಿಸಿ ಅರಾಜಕತೆ …
Read More »
admin
February 4, 2022
Breaking News, ಜಿಲ್ಲೆ, ಮಂಗಳೂರು
ಮಂಗಳೂರು: ವೇಗವಾಗಿ ಬಂದ ಕಾರೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಫೆಬ್ರವರಿ 3 ರಂದು ಸಂಜೆ 4 ಗಂಟೆಗೆ ಚಿಲಿಂಬಿ ಬಳಿಯ ಕೋಟೆಕಣಿ ರಸ್ತೆ ಮತ್ತು ಕುಳೂರು ಫೆರ್ರಿ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.ಕಾರಿನ ಚಾಲಕ ಕೋಟೆಕಣಿಯಿಂದ ಇಳಿಜಾರಿನ ರಸ್ತೆಯಲ್ಲಿ ತೆರಳುತ್ತಿರುವ ವೇಳೆ, ಲೇಡಿಹಿಲ್‌ನಿಂದ ಉರ್ವಾ ಸ್ಟೋರ್ಸ್ ಕಡೆಗೆ ಹೋಗುತ್ತಿದ್ದ ಹೋಂಡಾ ಆಕ್ಟಿವಾಕ್ಕೆ ಢಿಕ್ಕಿ ಹೊಡೆದ ಪರಿಣಾಮ, ಆಕ್ಟಿವಾದಲ್ಲಿದ್ದ ಇಬ್ಬರು …
Read More »
admin
January 26, 2022
Breaking News, ಜಿಲ್ಲೆ, ಮಂಗಳೂರು
ಮಂಗಳೂರು: ಖ್ಯಾತ ಸಂಗೀತ ಕಲಾವಿದೆ ಶೀಲಾ ದಿವಾಕರ್ ಅವರು ಬುಧವಾರದಂದು (ಜನವರಿ 26) ನಿಧನರಾದರು.ಮೆದುಳಿನ ರಕ್ತಸ್ರಾವದಿಂದ ಬಳಲುತ್ತಿದ್ದ ಅವರು ಇಂದು ಸಾವನ್ನಪ್ಪಿದ್ದಾರೆ. ಕಳೆದ 28 ವರ್ಷಗಳಿಂದ ಸಂಗೀತ ರಂಗದ ನೂರಾರು ಮೇರು ಪ್ರತಿಭೆಗಳಿಗೆ ಗುರುವಾಗಿರುವ ಶೀಲಾ ದಿವಾಕರ್ ಅನಾರೋಗ್ಯದ ಕಾರಣದಿಂದ ಕೆಲ ದಿನಗಳ ಹಿಂದೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.ಆದರೆ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.
Read More »
admin
January 26, 2022
Breaking News, ಜಿಲ್ಲೆ, ಮಂಗಳೂರು
ಮಂಗಳೂರು: ‘ಬಂಟ್ವಾಳ ತಾಲ್ಲೂಕಿನ ಅಡ್ಯನಡ್ಕ ಸಮೀಪದ ಅಮೈ ಮಹಾಲಿಂಗ ನಾಯ್ಕ (76 ವರ್ಷ) ಕರಾವಳಿ ಭಾಗದ ಭಗೀರಥ’ ಎಂದೇ ಖ್ಯಾತಿ ಗಳಿಸಿರುವ ಅವರು ಕೃಷಿ ಕ್ಷೇತ್ರದ ಸಾಧನೆಗಾಗಿ 2022ನೇ ಸಾಲಿನ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕೃಷಿಗೆ ನೀರು ಹಾಯಿಸಲು ಪಂಪ್ ಸೆಟ್‌ಗಳ ಸೌಲಭ್ಯಗಳೇ ಇಲ್ಲದ ಕಾಲದಲ್ಲಿ ಹಿಂದಿನ ತಲೆಮಾರಿನವರು ಅವಲಂಬಿಸಿದ್ದ ಸುರಂಗ ನೀರಿನ ವ್ಯವಸ್ಥೆಯಲ್ಲಿ ನಂಬಿಕೆ ಇಟ್ಟು, ಇದೇ ವ್ಯವಸ್ಥೆಯಲ್ಲಿ ವಿದ್ಯುತ್ ರಹಿತವಾಗಿ ಗುರುತ್ವಾಕರ್ಷಣೆಯ ನೆರವಿನಲ್ಲಿ ಕೃಷಿಗೆ ತುಂತುರು ನೀರಾವರಿ, ಹನಿ …
Read More »
admin
January 7, 2022
Breaking News, ಕರ್ನಾಟಕ, ಮಂಗಳೂರು
ಮಂಗಳೂರು: ಜಿಲ್ಲೆಯ ಕೆಲ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಸ್ಕಾರ್ಫ್ ಹಾಗೂ ಕೇಸರಿ ಶಾಲು ವಿವಾದವನ್ನು ಸಂಬಂಧಪಟ್ಟಂತೆ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಯಡಪಡಿತ್ತಾಯ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. ಮಂಗಳೂರು ವಿವಿ ಕಾಲೇಜಿನ ರವೀಂದ್ರ ಕಲಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆಡಳಿತ ಮಂಡಳಿ ಸೂಕ್ತ ಕ್ರಮ ಕೈಗೊಳ್ಳದ್ದಕ್ಕೆ ಬೇಸರ ವ್ಯಕ್ತ ಪಡಿಸಿದ್ದಾರೆ.
Read More »
admin
January 6, 2022
Breaking News, ಕರ್ನಾಟಕ, ಮಂಗಳೂರು
ಮಂಗಳೂರು; ಕರ್ನಾಟಕದಲ್ಲಿ ಜನಸಂದಣಿ ಸೇರುವನ್ನು ತಡೆಯಲು ಅನೇಕ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಹೊಸ ಕೋವಿಡ್ ಪ್ರಕರಣ ಮತ್ತು ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಇದರಿಂದಾಗಿ ಈ ನಿಯಮಗಳ ಪ್ರಭಾವ ದೇವಾಲಯಗಳ ಮೇಲೂ ಬಿದ್ದಿದೆ. ದೇವಸ್ಥಾನಗಳಲ್ಲೂ ಕೇವಲ ದರ್ಶನ ಮಾತ್ರ ಎಂಬ ನಿಯಮ ತಂದಿದೆ. ಈ ಹಿನ್ನಲೆಯಲ್ಲಿ ಜಿಲ್ಲೆಯ ಪ್ರಸಿದ್ಧ ನಾಗ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತರಿಗೆ ಜನವರಿ 16ರವರೆಗೆ ಕೇವಲ ದೇವರ ದರ್ಶನಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಈ ಬಗ್ಗೆ ದೇವಸ್ಥಾನದ …
Read More »
admin
December 15, 2021
Breaking News, ಕರ್ನಾಟಕ, ಮಂಗಳೂರು, ಸುದ್ದಿ
ಮಂಗಳೂರು: ಪುತ್ತೂರು ಉಪವಿಭಾಗ ವ್ಯಾಪ್ತಿಯಲ್ಲಿ ಬರುವ 4 ತಾಲೂಕಿನಲ್ಲಿ ತಕ್ಷಣದಿಂದ ಡಿಸೆಂಬರ್ 17ರ ಮಧ್ಯರಾತ್ರಿವರೆಗೆ 144 ಸೆಕ್ಷನ್ ನಡಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಮಂಗಳವಾರ ರಾತ್ರಿ ಉಪ್ಪಿನಂಗಡಿ ಪೊಲೀಸ್ ಠಾಣೆಯ ಎದುರು ಪಿಎಫ್‍ಐ ಕಾರ್ಯಕರ್ತರ ಮೇಲೆ ಲಾಠಿಚಾರ್ಜ್ ನಡೆದಿತ್ತು. ಇದರ ಬೆನ್ನಲ್ಲೇ ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತ ಡಾ.ಯತೀಶ್ ಉಳ್ಳಾಲ್ ಅವರು ಪುತ್ತೂರು, ಬೆಳ್ತಂಗಡಿ, ಸುಳ್ಯ ಮತ್ತು ಕಡಬ ತಾಲೂಕಿನಾದ್ಯಂದ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ. ಪುತ್ತೂರು ಉಪವಿಭಾಗದಲ್ಲಿ ಕೋಮುಗಲಭೆ ತಡೆಯುವ …
Read More »
admin
December 11, 2021
Breaking News, ಅಪರಾಧ, ಕರ್ನಾಟಕ, ಮಂಗಳೂರು
ಮಂಗಳೂರು: ಕರಾವಳಿಯ ಜನ ಭಯ, ಭಕ್ತಿಯಿಂದ ಆರಾಧಿಸುವ ದೈವಸ್ಥಾನಗಳಿಗೆ ನುಗ್ಗಿ ದೈವಗಳ ಆಭರಣ ಕದಿಯುತ್ತಿದ್ದ ಕುಖ್ಯಾತ ಕಳ್ಳರ ಜಾಲವನ್ನು ಮಂಗಳೂರು ಪೊಲೀಸರು ಭೇದಿಸಿದ್ದಾರೆ. ಒಂಟಿ ಮನೆಗಳು, ದೇವಸ್ಥಾನಗಳನ್ನು ಟಾರ್ಗೆಟ್ ಮಾಡಿ ದೋಚುತ್ತಿದ್ದ ಈ ಖದೀಮರು ಬಳಿಕ ಒಂದು ಚೂರು ಸಾಕ್ಷ್ಯ ಸಿಗದ ರೀತಿ ಕೆಲಸ ಮುಗಿಸುತ್ತಿದ್ದರು.ಆದರೆ ಈಗ ಕಳ್ಳರ ಪಾಪದ ಕೊಡ ತುಂಬಿದ್ದು, ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಈ ಇಬ್ಬರು ಕಳ್ಳರ ಮೂಲಕ ಒಟ್ಟು 16 ಕಳ್ಳತನ ಪ್ರಕರಣಗಳಿಗೆ ಇತಿಶ್ರೀ …
Read More »