BigTv News
October 28, 2024
Breaking News, ಮಹಾರಾಷ್ಟ್ರ
ಮುಂಬೈ: ಸತತ ಕುಸಿತದ ಹಾದಿಯಲ್ಲಿದ್ದ ಭಾರತೀಯ ಷೇರುಮಾರುಕಟ್ಟೆ ಸತತ 5 ದಿನಗಳ ಕುಸಿತ ಬಳಿಕ ಇಂದು ಅಂದರೆ ವಾರದ ಮೊದಲ ದಿನವೇ ಭರ್ಜರಿ ಚೇತರಿಕೆ ಕಂಡಿದೆ. ಕಳೆದ ವಾರವಿಡೀ ಕುಸಿತದಲ್ಲೇ ವಹಿವಾಟು ಅಂತ್ಯಗೊಳಿಸಿದ್ದ ಭಾರತೀಯ ಷೇರುಮಾರುಕಟ್ಟೆ ಇಂದು ಭರ್ಜರಿ ಕಮ್ ಬ್ಯಾಕ್ ಮಾಡಿದ್ದು, ಸೆನ್ಸೆಕ್ಸ್ 602.75 ಅಂಕಗಳ ಏರಿಕೆಯೊಂದಿಗೆ 80,005.04 ಅಂಕಗಳಿಗೆ ಏರಿ ದಿನದ ವಹಿವಾಟು ಅಂತ್ಯಗೊಳಿಸಿದೆ. ಅಂತೆಯೇ ನಿಫ್ಟಿ ಕೂಡ 158.35 ಅಂಕಗಳ ಏರಿಕೆಯೊಂದಿಗೆ 24,339.15 ಅಂಕಗಳಿಗೆ ಏರಿಕೆಯಾಗಿ …
Read More »
BigTv News
October 27, 2024
Breaking News, ಮಹಾರಾಷ್ಟ್ರ
ಮುಂಬೈ: ಮುಂಬೈನ ಬಾಂದ್ರಾ ರೈಲು ನಿಲ್ದಾಣದಲ್ಲಿ ಕಾಲ್ತುಳಿತ ಸಂಭವಿಸಿದ್ದು, 9 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಬಾಂದ್ರಾದ ಟರ್ಮಿನಲ್ ರೈಲು ನಿಲ್ದಾಣದಲ್ಲಿ ಬಾಂದ್ರಾ-ಗೋರಖ್ ಪುರ ಮಾರ್ಗದ ರೈಲು ಹತ್ತಲೆಂದು ಏಕಾಏಕಿ ಜನರು ನುಗ್ಗಿದ್ದು, ಈ ವೇಳೆ ಕಾಲ್ತುಳಿತ ಸಂಭವಿಸಿದೆ. ಘಟನೆಯಲ್ಲಿ 9 ಜನರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ತಕ್ಷಣ ಗಾಯಾಳುಗಳನ್ನು ಮುಂಬೈನ ಬಾಬಾ ಆಸ್ಪತ್ರೆಗೆ ದಾಖಲಿಸಲಾಗಿದೆ.
Read More »
BigTv News
October 27, 2024
Breaking News, ಮಹಾರಾಷ್ಟ್ರ
ಮಹರಾಷ್ಟ್ರ:ರಾಜ್ಯದ ಕೊಲ್ಲಾಪುರದಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ಚಲಿಸುತ್ತಿದ್ದ ಬಸ್ ನಲ್ಲಿ ಬೆಂಕಿ ಅವಘಡ ಸಂಭವಿಸಿ ಓರ್ವ ವ್ಯಕ್ತಿ ಸಜೀವ ದಹನವಾಗಿದ್ದಾರೆ. ಬೆಳಗಾವಿಯಿಂದ ಪುಣೆಗೆ ಹೊರಟಿದ್ದ ಬಸ್ ನಲ್ಲಿ ಈ ದುರಂತ ಸಂಭವಿಸಿದೆ. ಮಹಾರಾಷ್ಟ್ರದ ಕೊಲ್ಲಾಪುರದ ಬಳಿ ತಡರಾತ್ರಿ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಚಾಲಕ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಕೆಳಗಿಳಿಯುವಂತೆ ಸೂಚಿಸಿದ್ದಾರೆ, ಬಹುತೇಕ ಎಲ್ಲಾ ಪ್ರಯಾಣಿಕರು ಬಸ್ ನಿಂದ ಕೆಳಗಿಳಿದಿದ್ದಾರೆ. ಆದರೆ ಓರ್ವ ಪ್ರಯಾಣಿಕ ಬಸ್ ನಲ್ಲಿ …
Read More »
BigTv News
October 21, 2024
Breaking News, ಮಹಾರಾಷ್ಟ್ರ
ಮುಂಬೈ: ವಾರದ ಆರಂಭಿಕ ವಹಿವಾಟಿನಲ್ಲೇ ಷೇರುಪೇಟೆಯಲ್ಲಿ ಹಾವುಏಣಿಯಾಟ ಶುರುವಾಗಿದೆ. ಆರಂಭಿಕ ವಹಿವಾಟಿನಲ್ಲಿ ಏರಿಕೆ ಕಂಡಿದ್ದ ದೇಶೀಯ ಷೇರು ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಬಳಿಕ ಕುಸಿದಿವೆ. ನಿಫ್ಟಿ 124 ಅಂಶಗಳ ಏರಿಕೆಯೊಂದಿಗೆ 24,978ರಲ್ಲಿ ವಹಿವಾಟು ಆರಂಭಿಸಿದರೆ, ಬಿಎಸ್‌ಇ ಸೆನ್ಸೆಕ್ಸ್ 545 ಅಂಶಗಳ ಏರಿಕೆಯೊಂದಿಗೆ 81,770ರಲ್ಲಿ ವಹಿವಾಟು ಆರಂಭಿಸಿತ್ತು. ಬಳಿಕ ಸೆನ್ಸೆಕ್ಸ್ 136 ಮತ್ತು ನಿಫ್ಟಿ 100 ಅಂಶಗಳಷ್ಟು ಕುಸಿದವು. ಇಂದು ಸೆನ್ಸೆಕ್ಸ್‌ನ ಟೈಟಾನ್, ಎಚ್‌ಡಿಎಫ್‌ಸಿ ಬ್ಯಾಂಕ್, ಏಷಿಯನ್ ಪೇಟ್ಸ್, ಆಕ್ಸಿಸ್ …
Read More »
BigTv News
October 20, 2024
Breaking News, ಮಹಾರಾಷ್ಟ್ರ
ಮುಂಬೈ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮುಂಬೈನ ತಿಲಕ್ ಭವನದಲ್ಲಿ ಆಯೋಜಿಸಿದ್ದ ಪಕ್ಷದ ಹಿರಿಯ ವೀಕ್ಷಕರ ಸಭೆಯಲ್ಲಿ ರಾಜ್ಯದಿಂದ ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಮತ್ತು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭಾಗವಹಿಸಿ ಚುನಾವಣಾ ತಯಾರಿ ಕುರಿತು ಚರ್ಚಿಸಿದರು. ಸಭೆಯಲ್ಲಿ ಚುನಾವಣಾ ಉಸ್ತುವಾರಿ ರಮೇಶ್ ಚೆನ್ನಿತ್ತಲ, ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಛತ್ತೀಸ್‍ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಾಘೇಲ್, ಪಂಜಾಬ್ ಮಾಜಿ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ, ಮಾಜಿ ಮುಖ್ಯಮಂತ್ರಿ …
Read More »
BigTv News
October 16, 2024
Breaking News, ಮಹಾರಾಷ್ಟ್ರ
ಮುಂಬೈ: ಲೋಖಂಡವಾಲಾ ಕಾಂಪ್ಲೆಕ್ಸ್‌ನಲ್ಲಿರುವ 14 ಅಂತಸ್ತಿನ ವಸತಿ ಕಟ್ಟಡವೊಂದರಲ್ಲಿ ಬುಧವಾರ ಬೆಳಿಗ್ಗೆ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೂವರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಂಧೇರಿ ಪ್ರದೇಶದ ಲೋಖಂಡವಾಲಾ ಕಾಂಪ್ಲೆಕ್ಸ್‌ನ 4 ನೇ ಅಡ್ಡ ರಸ್ತೆಯಲ್ಲಿರುವ ರಿಯಾ ಪ್ಯಾಲೇಸ್ ಕಟ್ಟಡದ 10 ನೇ ಮಹಡಿಯಲ್ಲಿ ಬೆಳಿಗ್ಗೆ 8 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ನಾಗರಿಕ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬೆಂಕಿಯಿಂದ ಗಾಯಗೊಂಡಿದ್ದ ಮೂವರನ್ನು ಕೂಪರ್ ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ಅಲ್ಲಿ ಅವರು ಮೃತಪಟ್ಟಿದ್ದಾರೆ …
Read More »
BigTv News
October 14, 2024
Breaking News, ಮಹಾರಾಷ್ಟ್ರ
ಮಂಬೈ : ಮಹಾರಾಷ್ಟ್ರ ರಾಜ್ಯ ಕೌಶಲ್ಯ ವಿಶ್ವವಿದ್ಯಾಲಯವನ್ನು ಪದ್ಮವಿಭೂಷಣ ರತನ್ ಟಾಟಾ ಮಹಾರಾಷ್ಟ್ರ ರಾಜ್ಯ ಕೌಶಲ್ಯ ವಿಶ್ವವಿದ್ಯಾಲಯ ಎಂದು ಮರುನಾಮಕರಣ ಮಾಡಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ ಎಂದು ರಾಜ್ಯ ಕೌಶಲ್ಯ ಅಭಿವೃದ್ಧಿ ಸಚಿವ ಮಂಗಲ್ ಪ್ರಭಾತ್ ಲೋಧಾ ಸೋಮವಾರ ತಿಳಿಸಿದ್ದಾರೆ . ಅಕ್ಟೋಬರ್ 9 ರಂದು ಮುಂಬೈನಲ್ಲಿ ಕೊನೆಯುಸಿರೆಳೆದ ದಿವಂಗತ ಭಾರತೀಯ ಐಕಾನ್ ಮತ್ತು ಕೈಗಾರಿಕೋದ್ಯಮಿ ರತನ್ ಟಾಟಾ ಅವರನ್ನು ಗೌರವಿಸಲು ಸರ್ಕಾರ ಈ ನಿರ್ಧಾರವನ್ನು ಪ್ರಕಟಿಸಿದೆ. ಕೌಶಲ್ಯ ಅಭಿವೃದ್ಧಿ …
Read More »
BigTv News
October 11, 2024
Breaking News, ಮಹಾರಾಷ್ಟ್ರ
ನಾಸಿಕ್: ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಫಿರಂಗಿ ಕೇಂದ್ರದಲ್ಲಿ ಫೈರಿಂಗ್ ಅಭ್ಯಾಸದ ವೇಳೆ ಭಾರತೀಯ ಫೀಲ್ಡ್ ಗನ್ ನಿಂದ ಬಂದ ಶೆಲ್ ಸ್ಫೋಟಗೊಂಡು ಇಬ್ಬರು ಅಗ್ನಿವೀರ್ ಗಳು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ನಾಸಿಕ್ ರಸ್ತೆ ಪ್ರದೇಶದ ಫಿರಂಗಿ ಕೇಂದ್ರದಲ್ಲಿ ಗುರುವಾರ ಮಧ್ಯಾಹ್ನ ಈ ಘಟನೆ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಗ್ನಿವೀರರಾದ ಗೋಹಿಲ್ ವಿಶ್ವರಾಜ್ ಸಿಂಗ್ (20) ಮತ್ತು ಸೈಫತ್ ಶಿತ್ (21) ಸ್ಫೋಟದಲ್ಲಿ ಸಾವನ್ನಪ್ಪಿದ್ದಾರೆ ಎಂದು ಅವರು …
Read More »
BigTv News
October 11, 2024
Breaking News, ಮಹಾರಾಷ್ಟ್ರ
ಮಹಾರಾಷ್ಟ್ರ : ಮುಂದಿನ ತಿಂಗಳು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಮಹಾರಾಷ್ಟ್ರದ ಬಿಜೆಪಿ ನೇತೃತ್ವದ ಮಹಾಯುತಿ ಸರ್ಕಾರ ಮುಸ್ಲಿಂ ಅಲ್ಪಸಂಖ್ಯಾತ ಮತ್ತು ಹಿಂದುಳಿದ ಸಮುದಾಯಗಳನ್ನು ಓಲೈಸಲು ಹಲವಾರು ಕ್ರಮಗಳನ್ನು ಕೈಗೊಂಡಿದೆ. ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ, ಮದ್ರಸಾ ಶಿಕ್ಷಕರ ವೇತನ ಮತ್ತು ಮೌಲಾನಾ ಆಜಾದ್ ಫೈನಾನ್ಶಿಯಲ್ ಕಾರ್ಪೊರೇಶನ್‌ನ ಕಾರ್ಯ ಬಂಡವಾಳವನ್ನು ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ. ಡಿ ಎಡ್ ಪದವಿ ಹೊಂದಿರುವ ಪ್ರಾಥಮಿಕ ಶಿಕ್ಷಕರಿಗೆ ಅವರ …
Read More »
BigTv News
October 10, 2024
Breaking News, ಮಹಾರಾಷ್ಟ್ರ
ಮುಂಬೈ: ದಂತಕಥೆ, ಕೈಗಾರಿಕೋದ್ಯಮಿ ರತನ್ ಟಾಟಾ ಅವರ ಪಾರ್ಥಿವ ಶರೀರವನ್ನು ಗುರುವಾರ ಬೆಳಗ್ಗೆ ಅವರ ಮನೆಯಿಂದ ಬಿಳಿ ಹೂವುಗಳಿಂದ ಅಲಂಕರಿಸಲ್ಪಟ್ಟ ಆಂಬ್ಯುಲೆನ್ಸ್ ನಲ್ಲಿ ದಕ್ಷಿಣ ಮುಂಬೈನ ಎನ್‌ಸಿಪಿಎಗೆ ಕೊಂಡೊಯ್ಯಲಾಯಿತು, ಅಲ್ಲಿ ಜನರಿಗೆ ಅಂತಿಮ ನಮನ ಸಲ್ಲಿಸಲು ಇಡಲಾಗಿದೆ. ನ್ಯಾಷನಲ್ ಸೆಂಟರ್ ಫಾರ್ ಪರ್ಫಾರ್ಮಿಂಗ್ ಆರ್ಟ್ಸ್ ದಿಂದ ಒಂದೆರಡು ಕಿಲೋಮೀಟರ್ ದೂರದಲ್ಲಿರುವ ಟಾಟಾ ಅವರ ಮನೆಯಿಂದ ವಾಹನವು ಬರುವ ಮೊದಲು, ಮುಂಬೈ ಪೊಲೀಸ್ ಬ್ಯಾಂಡ್ ಅವರಿಗೆ ಗೌರವಾರ್ಥವಾಗಿ ಸಂಗೀತ ನುಡಿಸಿತು.
Read More »