Breaking News

ಮಡಿಕೇರಿ

ಪತ್ನಿಯ ಕೊಲೆಗೆ ಜೈಲುಪಾಲಾಗಿದ್ದ ಪತಿಗೆ ಶಾಕ್, 5 ವರ್ಷದ ಬಳಿಕ ಪ್ರಿಯಕರನ ಜತೆ ರೆಡ್​ಹ್ಯಾಂಡ್ ಆಗಿ ಸಿಕ್ಕ ಹೆಂಡತಿ!

ಪೊಲೀಸರ ದಾಖಲೆಗಳ ಪ್ರಕಾರ ಮಲ್ಲಿಗೆ ಎಂಬಾಕೆ ಆಕೆಯ ಗಂಡನ ಕೈಯಿಂದಲೇ ಹತ್ಯೆ ಆಗಿ ಅದಾಗಲೇ ಐದು ವರ್ಷ ಆಗಿ ಹೋಗಿದೆ. ಆಕೆಯನ್ನು ಕೊಲೆ ಮಾಡಿದ್ದಾಕ್ಕಾಗಿ ಗಂಡ ಸುರೇಶ್​ ಎರಡು ವರ್ಷ ಜೈಲೂಟ ಕೂಡ ಮಾಡಿ ಬಂದಿದ್ದಾರೆ. ಆದರೆ, ವಿಚಿತ್ರ ಎಂದರೆ, ಕೊಲೆಯಾಗಿದ್ದಾಳೆ ಎಂದು ಭಾವಿಸಲಾಗಿದ್ದ ಮಲ್ಲಿಗೆ ಮಂಗಳವಾರ ಸಂಜೆ ಮಡಿಕೇರಿ ನಗರದ ಹೋಟೆಲ್​ ಒಂದರಲ್ಲಿ ತಿಂಡಿ ತಿನ್ನುತ್ತಾ ಇರುವುದು ಸುರೇಶ್​ಗೆ ಕಾಣಿಸಿದೆ. ಅದೂ ಕೂಡ ಆಕೆಯ ಲವರ್ ಜತೆ! ಇದನ್ನು …

Read More »

ರೈತರಿಗೆ ಗುಡ್ ನ್ಯೂಸ್: ಸ್ಪ್ರಿಂಕ್ಲರ್ ಗೆ ಶೇ.90 ರಷ್ಟು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಮಡಿಕೇರಿ: 2024-25 ನೇ ಸಾಲಿನಲ್ಲಿ ಕೃಷಿ ಇಲಾಖೆಯ ಮುಖಾಂತರ ಸ್ಪ್ರಿಂಕ್ಲರ್‍ಗೆ ಶೇ.90ರಷ್ಟು ಸಹಾಯಧನವನ್ನು ನೀಡಲಾಗುತ್ತಿದೆ. ಈ ಸೌಲಭ್ಯವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದವರಿಗೂ ಸಹ ಶೇ.90 ರಷ್ಟು ಸಹಾಯಧನವನ್ನು ನೀಡಲಾಗುತ್ತಿದೆ. ರೈತ ಬಾಂಧವರು ತಮ್ಮ ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ರೈತ ಸಂಪರ್ಕ ಕೇಂದ್ರದಲ್ಲಿ ಉಚಿತವಾಗಿ ನೀಡುವ ಅರ್ಜಿಯೊಂದಿಗೆ ತಮ್ಮ ಆಧಾರ್ ಕಾರ್ಡ್ ಜೆರಾಕ್ಸ್, ಪಹಣಿ, ಬ್ಯಾಂಕ್ ಪಾಸ್ ಪುಸ್ತಕ ಜೆರಾಕ್ಸ್, …

Read More »

ರೈತರಿಗೆ ಸಿಹಿಸುದ್ದಿ: ಶೇ.50 ರಷ್ಟು ಸಹಾಯಧನದಲ್ಲಿ ಮಿನಿ ಟ್ರ್ಯಾಕ್ಟರ್ ಖರೀದಿಗೆ ಅರ್ಜಿ ಆಹ್ವಾನ

ಮಡಿಕೇರಿ: ಪ್ರಸಕ್ತ (2024-25) ಸಾಲಿನಲ್ಲಿ ಕೃಷಿ ಯಾಂತ್ರೀಕರಣ ಮತ್ತು ಕೃಷಿ ಉತ್ಪನ್ನಗಳ ಸಂಸ್ಕರಣೆ ಕಾರ್ಯಕ್ರಮದಲ್ಲಿ ಸಾಮಾನ್ಯ ವರ್ಗದ ರೈತರಿಗೆ ಶೇ.50ರ ರಿಯಾಯಿತಿಯಲ್ಲಿ ಕೃಷಿ ಯಂತ್ರೋಪಕರಣಗಳು ಲಭ್ಯವಿದೆ. ಆಸಕ್ತ ರೈತರು ತಮ್ಮ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿಯೊಂದಿಗೆ ಪಹಣಿ(ಆರ್‍ಟಿಸಿ), ಆಧಾರ್ ಕಾರ್ಡ್‍ನ ಜೆರಾಕ್ಸ್, ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್, ಒಂದು ಭಾವಚಿತ್ರ 100 ರೂ.ಛಾಫಾ ಕಾಗದ ದಾಖಲಾತಿಗಳನ್ನು ಸಲ್ಲಿಸಿ ಇಲಾಖೆಯಲ್ಲಿ ಸಿಗುವ ಕೃಷಿ ಯಂತ್ರೋಪಕರಣಗಳ ಸದುಪಯೋಗ ಪಡೆದುಕೊಳ್ಳಲು …

Read More »

ಗ್ರಾಮ ಪಂಚಾಯತಿ ಗ್ರಂಥಾಲಯ ಮೇಲ್ವಿಚಾರಕರ ನೇಮಕಾತಿಗೆ ಅರ್ಜಿ ಆಹ್ವಾನ

ಮಡಿಕೇರಿ: ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಆಯ್ಕೆ ಸಮಿತಿ ಸಭೆಯಲ್ಲಿ ಕೊಡಗು ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಖಾಲಿ ಇರುವ 10 ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳನ್ನು ರೋಸ್ಟರ್ ಬಿಂದುವನ್ನು ಗುರುತಿಸಿ ನೇಮಕಾತಿ ಮಾಡಲು ತೀರ್ಮಾನಿಸಲಾಗಿದೆ. …

Read More »

ಮಡಿಕೇರಿ: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಪ್ರಕ್ರಿಯೆ ಆರಂಭ

ಮಡಿಕೇರಿ : ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಪ್ರಕ್ರಿಯೆ ಡಿಸೆಂಬರ್ 1 ರಿಂದ ಆರಂಭವಾಗಿದ್ದು, ಜಿಲ್ಲೆಯ ರೈತರು ಯೋಜನೆಯ ಸದುಪಯೋಗವನ್ನು ಪಡೆದುಕೊಳ್ಳುವಂತೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರಾದ ಶ್ರೀಧರಮೂರ್ತಿ ಜೆ.ಬಿ.ಅವರು ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಆದೇಶದಂತೆ 2024-25ನೇ ಸಾಲಿಗೆ ರೈತರಿಂದ ಕನಿಷ್ಟ ಬೆಂಬಲ ಬೆಲೆಯೋಜನೆಯಡಿ ಭತ್ತ ಖರೀದಿ ಮಾಡಲಾಗುತ್ತಿದ್ದು, ಡಿಸೆಂಬರ್, 01 ರಿಂದ ಆರಂಭವಾಗಿದ್ದು, 2025 ರ ಮಾರ್ಚ್, 31 ರವರೆಗೆ …

Read More »

ರಾಜ್ಯ ಸರ್ಕಾರದಿಂದ ಅಲ್ಪಸಂಖ್ಯಾತ ಜನಾಂಗದವರಿಗೆ ಅರಿವು ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಮಡಿಕೇರಿ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ(ನಿ) ಇವರ ವತಿಯಿಂದ 2024-25ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್, ಪಾರ್ಸಿ ಜನಾಂಗದವರಿಗೆ ಅರಿವು (ರಿನಿವಲ್) ಯೋಜನೆಯಡಿಯಲ್ಲಿ ನಿಗಮದಿಂದ ಸಾಲ ಸೌಲಭ್ಯಗಳನ್ನು ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಅರಿವು (ರಿನಿವಲ್) ವಿಧ್ಯಾಭ್ಯಾಸ ಯೋಜನೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (ಕೆಇಎ-ಸಿಇಟಿ/ನೀಟ್ ಮುಖಾಂತರ) ಎಂಬಿ, ಎಂಎಸ್‍ಎಂಡಿ, ಎಂಎಸ್, ಬಿಡಿಎಸ್, ಎಂಡಿಎಸ್, ಬ್ಯಾಚುಲರ್ ಆಫ್ …

Read More »

ರಾಷ್ಟ್ರೀಯ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ವಿಶೇಷ ಅತಿಥಿಯಾಗಿ ರಾಜ್ಯದ 12 ಗ್ರಾಮ ಪಂಚಾಯತಿ ಅಧ್ಯಕ್ಷರಿಗೆ ಭಾಗವಹಿಸಲು ಅವಕಾಶ

ಮಡಿಕೇರಿ: ಜನವರಿ 26 ರಂದು ದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರೀಯ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ವಿಶೇಷ ಅತಿಥಿಯಾಗಿ ರಾಜ್ಯದ 12 ಗ್ರಾಮ ಪಂಚಾತಿಯಿತಿ ಅಧ್ಯಕ್ಷರಿಗೆ ಭಾಗವಹಿಸಲು ಅವಕಾಶ ನೀಡಿ ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯ ಆದೇಶ ಹೊರಡಿಸಿದ್ದು, ಕೊಡಗು ಜಿಲ್ಲೆಯಿಂದ ಏಕೈಕ ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೆ ಭಾಗವಹಿಸಲು ಅವಕಾಶ ದೊರೆತಿದೆ. ಮಡಿಕೇರಿ ತಾಲ್ಲೂಕಿನ ಹೊದ್ದೂರು ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿರುವ ಹೆಚ್.ಎ ಹಂಸ ಕೊಟ್ಟಮುಡಿ ಅವರನ್ನು ಭಾರತ, …

Read More »

ಜಾತಿಗಣತಿ ವರದಿ ಜಾರಿ ಕುರಿತು ವಿರೋಧ ಸರಿಯಲ್ಲ: ಸಚಿವ ಸತೀಶ್ ಜಾರಕಿಹೊಳಿ

ಮಡಿಕೇರಿ: ಜಾತಿ ಗಣತಿ ವರದಿಯಲ್ಲಿ ಏನಿದೆ ಎಂದು ಯಾರಿಗೂ ಗೊತ್ತಿಲ್ಲ. ಆದರೆ, ವರದಿ ಜಾರಿ ಕುರಿತು ವಿವಿಧ ಸಂಘಟನೆಗಳು ವಿರೋಧ ವ್ಯಕ್ತಪಡಿಸುತ್ತಿರುವುದು ಸರಿಯಲ್ಲ ಎಂದು ಲೋಕೋಪಯೋಗಿ ಖಾತೆ ಸಚಿವ ಸತೀಶ್‌ ಜಾರಕಿಹೊಳಿ ಪ್ರತಿಪಾದಿಸಿದರು. ಈ ಕುರಿತು ಸರ್ಕಾರ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವೆಲ್ಲರೂ ಬದ್ಧರಾಗಿರಬೇಕು. ವೈಯಕ್ತಿಕ ಅಭಿಪ್ರಾಯಗಳು ಏನೇ ಇದ್ದರೂ ಅದು ಮುಂದಿನ ಸಂಪುಟ ಸಭೆಯಲ್ಲಿ ಚರ್ಚೆಯಾಗುತ್ತದೆ. ವರದಿ ಜಾರಿ ಸಂಬಂಧ ಸಂಪುಟ ಉಪಸಮಿತಿ ರಚಿಸಬೇಕೇ ಅಥವಾ ಸದನಕ್ಕೆ ಬಿಡಬೇಕೇ ಎಂಬ …

Read More »

ಗ್ರಾಮೀಣ ರೈತ ಮಹಿಳೆಯರಿಗೆ ನಾಟಿ ಕೋಳಿ ಮರಿಗಳನ್ನು ಪಡೆಯಲು ಅರ್ಜಿ ಆಹ್ವಾನ

ಮಡಿಕೇರಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ ಮೈಸೂರು ಹಾಗೂ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ 2024-25 ನೇ ಸಾಲಿನಲ್ಲಿ ಗ್ರಾಮೀಣ ರೈತ ಮಹಿಳೆಯರಿಗೆ ಐದು ವಾರದ ನಾಟಿ ಕೋಳಿ ಮರಿಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿ ಜಿಲ್ಲೆಗೆ 218 (ಪರಿಶಿಷ್ಟ ಜಾತಿ-9, ಪರಿಶಿಷ್ಟ ಪಂಗಂಡ 189, ಸಾಮಾನ್ಯ 20) ಗುರಿ ನಿಗಧಿಯಾಗಿದ್ದು ಆಯ್ಕೆಯಾಗುವ ಪ್ರತಿ ಫಲಾನುಭವಿಗಳಿಗೆ ಐದು ವಾರದ ನಾಟಿ ಕೋಳಿ ಮರಿಗಳನ್ನು ಉಚಿತವಾಗಿ …

Read More »

ಕೊಡಗು ಜಿಲ್ಲೆಯಲ್ಲಿ 13 ವಿದ್ಯುತ್ ಉಪ ಕೇಂದ್ರಗಳ ಸ್ಥಾಪನೆ: ಸಚಿವ ಕೆ.ಜೆ.ಜಾರ್ಜ್‌

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಒಟ್ಟು 13 ವಿದ್ಯುತ್ ಸರಬರಾಜು ಉಪಕೇಂದ್ರಗಳ ಸ್ಥಾಪನೆಗೆ ಉದ್ದೇಶಿಸಲಾಗಿದ್ದು, ಇವುಗಳಲ್ಲಿ ಈಗಾಗಲೇ 4 ಉಪಕೇಂದ್ರಕ್ಕೆ ಟೆಂಡರ್ ಕರೆಯಲಾಗಿದೆ. ಇನ್ನುಳಿದ ಕೇಂದ್ರಗಳ ಸ್ಥಾಪನೆಗೂ ತ್ವರಿತ ಕ್ರಮ ಕೈಗೊಂಡು ಕೊಡಗು ಜಿಲ್ಲೆಯಲ್ಲಿ ವಿದ್ಯುತ್ ಸರಬರಾಜಿನಲ್ಲಿ ಆಗುವ ತೊಂದರೆಗಳನ್ನು ಸಂಪೂರ್ಣವಾಗಿ ನಿವಾರಿಸಲಾಗುವುದು ಎಂದು ಇಂಧನ ಖಾತೆ ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು. ನನಗೆ ಕೊಡಗು ಎಂದರೆ ಹೆಚ್ಚು ಪ್ರೀತಿ. ಇಲ್ಲಿಯೇ ಓದಿದ್ದೇನೆ, ನನ್ನ ಬೆಳವಣಿಗೆಗೂ ಕೊಡಗು ಕಾರಣವಾಗಿದೆ. ಹಾಗಾಗಿ, ನಾನು ಯಾವುದೇ …

Read More »