Breaking News

ಉತ್ತರ ಪ್ರದೇಶ

ಉತ್ತರ ಪ್ರದೇಶ: ಪ್ರಯಾಗ್‌ರಾಜ್‌ನಲ್ಲಿ ಇಂದು ವಿಶೇಷ ಸಚಿವ ಸಂಪುಟ ಸಭೆ

ಪ್ರಯಾಗ್ ರಾಜ್: ಉತ್ತರ ಪ್ರದೇಶ ಸರ್ಕಾರದ ವಿಶೇಷ ಸಚಿವ ಸಂಪುಟ ಸಭೆ ಇಂದು ಪ್ರಯಾಗ್‌ರಾಜ್‌ನಲ್ಲಿ ನಡೆಯಲಿದೆ. ಉತ್ತರ ಪ್ರದೇಶ ಸರ್ಕಾರದ ಎಲ್ಲಾ 54 ಸಚಿವರನ್ನು ಈ ಸಭೆಯಲ್ಲಿ ಭಾಗವಹಿಸಲು ಆಹ್ವಾನಿಸಲಾಗಿದೆ. ಈ ಸಭೆಯನ್ನು ಮೊದಲು ಕುಂಭ ಮೇಳ ಪ್ರಾಧಿಕಾರದ ಸಭಾಂಗಣದಲ್ಲಿ ನಡೆಸಲು ಯೋಜಿಸಲಾಗಿತ್ತು ಆದರೆ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲು ಮಹಾಕುಂಭಕ್ಕೆ ಭೇಟಿ ನೀಡುವ ಭಕ್ತರು ಮತ್ತು ಯಾತ್ರಾರ್ಥಿಗಳಿಗೆ ಅನಾನುಕೂಲತೆಯನ್ನು ತಪ್ಪಿಸಲು ಸ್ಥಳವನ್ನು ಬದಲಾಯಿಸಲಾಗಿದೆ ಎಂದು ಹೇಳಲಾಗಿದೆ.

Read More »

ಉತ್ತರ ಪ್ರದೇಶ: ಸಿಎಂ ಯೋಗಿ ಆದಿತ್ಯನಾಥ್ ನೇತೃತ್ವದಲ್ಲಿ ಮಹಾ ಕುಂಭಮೇಳದಲ್ಲಿ ವಿಶೇಷ ಸಚಿವ ಸಂಪುಟ ಸಭೆ

ಪ್ರಯಾಗರಾಜ್: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದಲ್ಲಿ ಬುಧವಾರ(ನಾಳೆ) ಮಹಾ ಕುಂಭಮೇಳದಲ್ಲಿ ವಿಶೇಷ ಸಚಿವ ಸಂಪುಟ ಸಭೆ ನಡೆಯಲಿದೆ. ಇಂದು ಬಿಡುಗಡೆಯಾದ ಅಧಿಕೃತ ಪ್ರಕಟಣೆಯ ಪ್ರಕಾರ, ಯೋಗಿ ಸಂಪುಟದ ಎಲ್ಲಾ 54 ಸಚಿವರನ್ನು ಸಭೆಗೆ ಆಹ್ವಾನಿಸಲಾಗಿದ್ದು, ಈ ಸಭೆಯಲ್ಲಿ ಹಲವಾರು ಮಹತ್ವದ ಪ್ರಸ್ತಾವನೆಗಳು ಮತ್ತು ಯೋಜನೆಗಳಿಗೆ ಅನುಮೋದನೆ ನೀಡುವ ನಿರೀಕ್ಷೆಯಿದೆ. ಸಭೆಯ ನಂತರ, ಮುಖ್ಯಮಂತ್ರಿ ಆದಿತ್ಯನಾಥ್ ಮತ್ತು ಅವರ ಸಂಪುಟ ಸಹೋದ್ಯೋಗಿಗಳು ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲಿದ್ದಾರೆ ಎಂದು …

Read More »

ಮಹಾಕುಂಭಮೇಳಕ್ಕೆ ಡಿಜಿಟಲ್ ತಂತ್ರಜ್ಞಾನದ ಸ್ಪರ್ಶ: ಸರ್ಕಾರದಿಂದ ಸಿದ್ಧತೆ

ಪ್ರಯಾಗ್‌ರಾಜ್‌ : ಹನ್ನೆರಡು ವರ್ಷಕ್ಕೊಮ್ಮೆ ನಡೆಯುವ ಮಹಾಕುಂಭಮೇಳಕ್ಕೆ ಪ್ರಯಾಗ್‌ರಾಜ್‌ ನಗರ ಸಜ್ಜಾಗುತ್ತಿದೆ. ಉತ್ತರ ಪ್ರದೇಶ ಸರಕಾರ ಕಳೆದ ಐದಾರು ತಿಂಗಳಿನಿಂದಲೇ ಕುಂಭಮೇಳಕ್ಕಾಗಿ ತಯಾರಿ ನಡೆಸುತ್ತಿದ್ದು, ಈ ಸಲದ ಕುಂಭಮೇಳ ಸಂಪೂರ್ಣವಾಗಿ ಡಿಜಿಟಲ್‌ ತಂತ್ರಜ್ಞಾನದ ಸ್ಪರ್ಶದೊಂದಿಗೆ ನಡೆಯುತ್ತಿರುವುದು ವಿಶೇಷವಾಗಿದೆ. ಭಕ್ತರಿಗೆ ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿ ಸೌಲಭ್ಯ ಕಲ್ಪಿಸಲು ಸರಕಾರ ಸಿದ್ಧತೆ ಮಾಡಿಕೊಂಡಿದೆ. ಸಾರಿಗೆ, ಭದ್ರತೆ, ವಸತಿ, ಪಾರ್ಕಿಂಗ್‌… ಹೀಗೆ ಪ್ರತಿಯೊಂದನ್ನು ಕೂಡ ಅತ್ಯಾಧುನಿಕ ತಂತ್ರಜ್ಞಾನ ಬಳಸಿ ಸಿದ್ಧಗೊಳಿಸಲಾಗಿದೆ. ಉತ್ತರ ಪ್ರದೇಶದ ಮುಖ್ಯಮಂತ್ರಿ …

Read More »

ಉತ್ತರ ಪ್ರದೇಶದಲ್ಲಿ ಯೋಗಿ ಸರ್ಕಾರದಿಂದ ಬಿಜೆಪಿ ಕಚೇರಿ ನೆಲಸಮ

ಉತ್ತರಪ್ರದೇಶ: ಉತ್ತರಪ್ರದೇಶದಲ್ಲಿ ಗೂಂಡಾಗಿರಿ ಮಾಡುವವರ, ಲವ್ ಜಿಹಾದ್‌ ಮಾಡುವವರ ಮತ್ತು ಅಕ್ರಮ ಭೂಮಿ ಇರುವವರ ಮನೆಗೆ ಬುಲ್ಡೋಜರ್ ನುಗ್ಗಿಸುವ ಕಾರ್ಯ ಇನ್ನೂ ಪ್ರಗತಿಯಲ್ಲಿದೆ. ಅದೇ ರೀತಿ, ಬಿಜೆಪಿ ಕಚೇರಿಯೊಂದು ಅಕ್ರಮವಾಗಿ ಕಟ್ಟಲಾಗಿದ್ದು, ಅದನ್ನು ಬುಲ್ಡೋಜರ್ ಮೂಲಕ, ನೆಲಸಮ ಮಾಡಲಾಗಿದೆ. ಉತ್ತರಪ್ರದೇಶದಲ್ಲಿರುವ ಬಲ್ಲಿಯಾದಲ್ಲಿರುವ ಬಿಜೆಪಿ ಕಚೇರಿಯನ್ನು ಬಿಜೆಪಿ ಅತಿಕ್ರಮಣ ಮಾಡಿಕೊಂಡಿತ್ತು ಎಂಬ ಆರೋಪವಿತ್ತು. ಹಾಗಾಗಿ ಈ ಮೊದಲು ಎರಡು ಬಾರಿ ಕಟ್ಟಡ ತೆರವುಗೊಳಿಸಲು ಬಂದಿದ್ದರು ಕೂಡ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸುರೇಂದ್ರ …

Read More »

ಉತ್ತರ ಪ್ರದೇಶ ರಾಜ್ಯದ 56 ಲಕ್ಷ ಹಿರಿಯ ನಾಗರಿಕರಿಗೆ ವೃದ್ಧಾಪ್ಯ ವೇತನ: ಸಿಎಂ ಯೋಗಿ ಆದಿತ್ಯನಾಥ್

ಉತ್ತರ ಪ್ರದೇಶ: ರಾಜ್ಯದ 56 ಲಕ್ಷ ಅರ್ಹ ಹಿರಿಯ ನಾಗರಿಕರಿಗೆ ವೃದ್ಧಾಪ್ಯ ವೇತನ ನೀಡುವ ಭರವಸೆಯನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಈಡೇರಿಸಿದ್ದಾರೆ. 2024-25ರ ಆರ್ಥಿಕ ವರ್ಷದ ಮೊದಲ ತ್ರೈಮಾಸಿಕದಲ್ಲಿ, 56 ಲಕ್ಷ ಫಲಾನುಭವಿಗಳ ಖಾತೆಗಳಿಗೆ ತಿಂಗಳಿಗೆ 1 ಸಾವಿರ ರೂ.ಗಳನ್ನು ಜಮಾ ಮಾಡಲಾಗಿದ್ದು, ಈ ಉಪಕ್ರಮಕ್ಕಾಗಿ ಸರ್ಕಾರವು 1,67,975 ಲಕ್ಷ ರೂ.ಗಳನ್ನು ಮಂಜೂರು ಮಾಡಿದೆ. ತಮ್ಮ ಜನಪರ ನೀತಿಗಳಿಂದ ಪ್ರೇರಿತರಾಗಿ, ಸಿಎಂ ಯೋಗಿ ಸಮಾಜದ ಪ್ರತಿಯೊಂದು ವರ್ಗದ ಪ್ರಗತಿಗೆ ಸಮಗ್ರ …

Read More »

ಪ್ರಧಾನಿ ಮೋದಿಯಿಂದ ವಾರಣಾಸಿಯಲ್ಲಿ ಶಂಕರ ನೇತ್ರಾಲಯ ಸೇರಿ ವಿವಿಧ ಯೋಜನೆಗಳಿಗೆ ಚಾಲನೆ

ಲಕ್ನೋ: ಪ್ರಧಾನಿ ನರೇಂದ್ರ ಮೋದಿ ಅವರು ವಾರಣಾಸಿಯಲ್ಲಿ ಆರ್‌ಜೆ ಶಂಕರ ನೇತ್ರಾಲಯ ಸೇರಿ ಬಹು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದರು. ಆರ್‌ಜೆ ಶಂಕರ ಕಣ್ಣಿನ ಆಸ್ಪತ್ರೆಯು ವಿವಿಧ ಕಣ್ಣಿನ ಕಾಯಿಲೆಗಳಿಗೆ ಸಮಗ್ರ ಸಮಾಲೋಚನೆ ಮತ್ತು ಚಿಕಿತ್ಸೆಯನ್ನು ನೀಡುತ್ತದೆ. ಕಂಚಿ ಮಠದಿಂದ ನಡೆಸಲ್ಪಡುತ್ತಿರುವ ಆರ್‌ಜೆ ಶಂಕರ ಕಣ್ಣಿನ ಆಸ್ಪತ್ರೆಯು ಪೂರ್ವ ಉತ್ತರ ಪ್ರದೇಶದ 20 ಜಿಲ್ಲೆಗಳ ಜನರಿಗೆ ಮತ್ತು ಬಿಹಾರ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದ ಗಡಿ ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ಪ್ರಯೋಜನವನ್ನು …

Read More »

ಇಸ್ರೇಲ್ ರಾಯಭಾರಿ ರುವೆನ್ ಅಜರ್ ಅಯೋಧ್ಯೆಯ ರಾಮ ಮಂದಿರಕ್ಕೆ ಭೇಟಿ

ಅಯೋಧ್ಯೆ : ಭಾರತದಲ್ಲಿರುವ ಇಸ್ರೇಲ್ ರಾಯಭಾರಿ ರುವೆನ್ ಅಜರ್ ಅವರು ಇಂದು ಶ್ರೀ ರಾಮ ಜನ್ಮಭೂಮಿ ಅಯೋಧ್ಯೆಯ ರಾಮ ಮಂದಿರಕ್ಕೆ ಭೇಟಿ ನೀಡಿದರು. ಭೇಟಿ ಬಳಿಕ ಮಾತನಾಡಿದ ಅಜರ್ ಭಗವಾನ್ ರಾಮನ ಈ ಭವ್ಯವಾದ ದೇವಾಲಯಕ್ಕೆ ಭೇಟಿ ನೀಡಿರುವುದು ನನಗೆ ನಿಜವಾಗಿಯೂ ಗೌರವ ತಂದಿದೆ. ಪ್ರತಿ ದಿನವೂ ಬರುವ ಯಾತ್ರಿಕರ ಸಂಖ್ಯೆ ನೋಡಿದೆ ಇದು ಹಿಂದೂ ನಂಬಿಕೆಗೆ ಸ್ಥಳದ ಪ್ರಾಮುಖ್ಯತೆಗೆ ಸಾಕ್ಷಿಯಾಗಿದೆ. ಭಾರತದ ಜನರಂತೆ ಇಸ್ರೇಲ್ ಜನರು ಪ್ರಾಚೀನ ಧರ್ಮ, …

Read More »

ಗುತ್ತಿಗೆ ಆಧಾರದ ನೇಮಕಾತಿಯಲ್ಲಿ ಮೀಸಲಾತಿ ಜಾರಿಗೊಳಿಸಲು ಯುಪಿ ಸರ್ಕಾರ ನಿರ್ಧಾರ

ಲಖನೌ: ಸರ್ಕಾರದ ಹೊರಗುತ್ತಿಗೆ ಹಾಗೂ ಗುತ್ತಿಗೆ ಆಧಾರದ ಉದ್ಯೋಗಿಗಳ ನೇಮಕಾತಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ಸಮುದಾಯಗಳಿಗೆ ಮೀಸಲಾತಿ ಜಾರಿಗೊಳಿಸಲು ಉತ್ತರ ಪ್ರದೇಶ ಸರ್ಕಾರ ನಿರ್ಧಾರ ಕೈಗೊಂಡಿದೆ. ರಾಜ್ಯದ 10 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಮೇಲೆ ಕಣ್ಣಿಟ್ಟು ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎಂದು ವಿಶ್ಲೇಷಿಸಲಾಗಿದೆ. ಮೂಲಗಳ ಪ್ರಕಾರ, ಈ ಪ್ರಸ್ತಾಪವನ್ನು ಮುಂದಿನ ಕೆಲವೇ ದಿನಗಳಲ್ಲಿ ನಡೆಯಲಿರುವ ಸಚಿವ ಸಂಪುಟದಲ್ಲಿ ಮಂಡಿಸಿ, ಒಪ್ಪಿಗೆ ಪಡೆಯಲು ನಿರ್ಧರಿಸಿದೆ. …

Read More »

ಯುಪಿಯಲ್ಲಿ ಮುಖ್ಯಮಂತ್ರಿ ಯುವ ಉದ್ಯಮಿ ವಿಕಾಸ ಅಭಿಯಾನ ಜಾರಿಗೆ ತರಲು ನಿರ್ಧಾರ

ಲಕ್ನೋ: ರಾಜ್ಯದ ಯುವಕರಿಗೆ ಸ್ವಯಂ ಉದ್ಯೋಗ ಅವಕಾಶಗಳನ್ನು ಒದಗಿಸುವ ಉದ್ದೇಶದಿಂದ ಯೋಗಿ ಸರ್ಕಾರ ಮುಖ್ಯಮಂತ್ರಿ ಯುವ ಉದ್ಯಮಿ ವಿಕಾಸ ಅಭಿಯಾನ (ಮುಖ್ಯಮಂತ್ರಿ ಯುವ) ವನ್ನು ಜಾರಿಗೆ ತರಲು ನಿರ್ಧರಿಸಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧ್ಯಕ್ಷತೆಯಲ್ಲಿ ನಡೆದ ಕ್ಯಾಬಿನೆಟ್ ಸಭೆಯಲ್ಲಿ ಈ ಪ್ರಸ್ತಾವನೆಗೆ ಅನುಮೋದನೆ ನೀಡಲಾಯಿತು. ರಾಜ್ಯದ ಆರ್ಥಿಕತೆಯಲ್ಲಿ ಎಂಎಸ್‌ಎಂಇ ವಲಯದ ಮಹತ್ವದ ಕೊಡುಗೆಯನ್ನು ಗಮನದಲ್ಲಿಟ್ಟುಕೊಂಡು ಈ ಯೋಜನೆಯನ್ನು ಪ್ರಾರಂಭಿಸಲಾಗಿದೆ. ಮಂತ್ರಿ ಮಂಡಳ ಸಭೆಯಲ್ಲಿ ಒಟ್ಟು 25 ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದೆ …

Read More »

ಉತ್ತರ ಪ್ರದೇಶದಲ್ಲಿ ಭತ್ತ ಖರೀದಿ ಪ್ರಕ್ರಿಯೆ ಆರಂಭ: 4 ಸಾವಿರ ಭತ್ತ ಖರೀದಿ ಕೇಂದ್ರಗಳ ಸ್ಥಾಪನೆ

ಉತ್ತರ ಪ್ರದೇಶ: ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರವು ಅಕ್ಟೋಬರ್ 1 ರಿಂದ ಪಶ್ಚಿಮ ಉತ್ತರ ಪ್ರದೇಶದಲ್ಲಿ ಭತ್ತ ಖರೀದಿಯನ್ನು ಪ್ರಾರಂಭಿಸಲು ಸಜ್ಜಾಗಿದೆ. ಹರ್ದೋಯಿ, ಲಖಿಂಪುರ್ ಖೇರಿ ಮತ್ತು ಸೀತಾಪುರದಂತಹ ಜಿಲ್ಲೆಗಳಲ್ಲಿ ಖರೀದಿ ಪ್ರಕ್ರಿಯೆ ಪ್ರಾರಂಭವಾಗಲಿದ್ದು, ನವೆಂಬರ್ 1 ರಿಂದ ಲಕ್ನೋ ವಿಭಾಗದ ಇತರ ಪ್ರದೇಶಗಳಾದ ಲಕ್ನೋ, ರಾಯ್ ಬರೇಲಿ ಮತ್ತು ಉನ್ನಾವೋಗಳಿಗೆ ವಿಸ್ತರಿಸಲಿದೆ. ರಾಜ್ಯ ಸರ್ಕಾರವು ಈ ಪ್ರಕ್ರಿಯೆಯನ್ನು ಸುಗಮಗೊಳಿಸಲು 4,000 ಭತ್ತ ಖರೀದಿ ಕೇಂದ್ರಗಳನ್ನು ಸ್ಥಾಪಿಸಿದ್ದು, …

Read More »