Breaking News

ವಿಜಯನಗರ

ಮದುವೆ ಆಗಲು ನಿರಾಕರಣೆ: ಯುವತಿಗೆ ಚಾಕು ಇರಿದ ಪ್ರೇಮಿ!

ಯುವತಿಯು ಮದುವೆಗೆ ನಿರಾಕರಿಸಿದಕ್ಕೆ ಆಂಧ್ರಪ್ರದೇಶದ ನಂದ್ಯಾಲ ಗ್ರಾಮದಿಂದ ಹೊಸಪೇಟೆ ನಗರಕ್ಕೆ ಆಗಮಿಸಿದ ಯುವಕ ಆಕೆಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ್ದಾನೆ ಎಂದು ತಿಳಿದು ಬಂದಿದೆ.ಭಾರತಿ ಶಾವಿ ಹಲ್ಲೆಗೊಳಗಾದ ಮಹಿಳೆ. ವಿಜಯಭಾಸ್ಕರ್ ಹಲ್ಲೆ ಮಾಡಿದ ಪ್ರೇಮಿ.ಮದುವೆಯಾಗಲು ನಿರಾಕರಿಸಿದ ಹಿನ್ನೆಲೆ ಯುವಕನೋರ್ವ ಯುವತಿಗೆ ಚಾಕು ಇರಿದಿರುವ ಘಟನೆ ಜಿಲ್ಲೆಯ ಹೊಸಪೇಟೆಯ ನಗರಸಭೆ ಕಾರ್ಯಾಲಯ ಎದುರುಗಡೆ ನಡೆದಿದೆ.

Read More »

ಐದು ವರ್ಷ ಸಿದ್ಧರಾಮಯ್ಯ ಅವರೇ ಸಿಎಂ: ಸಚಿವ ಎಂ.ಬಿ.ಪಾಟೀಲ್

ವಿಜಯನಗರ: ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ, ಸಿದ್ದರಾಮಯ್ಯ ಅವರೇ ಪೂರ್ತಿ ಐದು ವರ್ಷ ಮುಖ್ಯಮಂತ್ರಿ ಆಗಿರುತ್ತಾರೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ಅವರ ವಿರುದ್ಧ ಪರೋಕ್ಷವಾಗಿ ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಗುಡುಗಿದ್ದಾರೆ. ಈ ಕುರಿತು ಸಿರಸಂಗಿ ಲಿಂಗರಾಜ ದೇಸಾಯಿ ಅವರ 164ನೇ ಜಯಂತ್ಯೋತ್ಸವ ಪ್ರಯುಕ್ತ ಹಮ್ಮಿಕೊಂಡಿರುವ ರಾಜ್ಯ ಮಟ್ಟದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬಂದಿದ್ದ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ಎರಡೂವರೆ ವರ್ಷದ ಬಳಿಕ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡುವ …

Read More »

ತುಂಗಭದ್ರ ನೀರು ರೈತರಿಗೆ ಸಮರ್ಪಕವಾಗಿ ಸರಬರಾಜು ಆಗುವಂತೆ ಕ್ರಮ ಕೈಗೊಳ್ಳಿ: ಸಚಿವ ಬೋಸರಾಜು

ವಿಜಯನಗರ: ನೀರಾವರಿ ಸಲಹಾ ಸಮಿತಿಯ ನಿರ್ಣಯದಂತೆ ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ಹರಿಸಲಾಗುತ್ತಿರುವ 3800 ಕ್ಯೂಸೆಕ್ ನೀರು ಕೊನೆಯ ಭಾಗದ ರೈತರಿಗೂ ಸಮರ್ಪಕವಾಗಿ ನೀರು ಸರಬರಾಜು ಆಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಭೋಸರಾಜು ಸೂಚನೆ ನೀಡಿದ್ದಾರೆ. ಹೊಸಪೇಟೆಯ ಟಿ.ಬಿ.ಡ್ಯಾಂನ ಪ್ರವಾಸಿ ಮಂದಿರದಲ್ಲಿ ತುಂಗಭದ್ರಾ ಅಣೆಕಟ್ಟಿನ ಹಿರಿಯ ಅಧಿಕಾರಿಗಳೊಂದಿಗೆ ಅವರು ಶುಕ್ರವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಜ.1 ರಿಂದ ಎಡದಂಡೆ ಕಾಲುವೆಯಲ್ಲಿ 3800 …

Read More »

ತುಂಗಭದ್ರಾ ಜಲಾಶಯ ಅಣೆಕಟ್ಟಿಗೆ ಕ್ರಸ್ಟ್ ಗೇಟ್ ಗಳನ್ನು ಅಳವಡಿಸುವ ಕುರಿತು ಮಾದರಿ ಸಂಗ್ರಹ

ವಿಜಯನಗರ: ತುಂಗಭದ್ರಾ ಅಣೆಕಟ್ಟೆಗೆ ಹೊಸ ಕ್ರಸ್ಟ್‌ ಗೇಟ್‌ಗಳನ್ನು ತುರ್ತಾಗಿ ಅಳವಡಿಸಬೇಕೆ ಅಥವಾ ಬೇಡವೇ ಎಂಬುದನ್ನು ತಿಳಿದುಕೊಳ್ಳಲು ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಸಂಸ್ಥೆಯ (ಸಿಎಸ್‌ಐಆರ್‌) ಸ್ಟ್ರಕ್ಚರಲ್‌ ಎಂಜಿನಿಯರಿಂಗ್ ಸಂಶೋಧನಾ ವಿಭಾಗದ ಐವರು ತಜ್ಞರು ಇಲ್ಲಿ ಪರಿಶೀಲಿಸಿದರು. ಜೆಮ್‌ಶೆಡ್‌ಪುರದ ಮೆಟೀರಿಯಲ್‌ ಎಂಜಿನಿಯರಿಂಗ್ ಪ್ರಯೋಗಾಲಯದ ಹೇಮೇಂದ್ರನಾಥ್‌ ನೇತೃತ್ವದಲ್ಲಿ ಎರಡು ಗಂಟೆ 33 ಗೇಟ್‌ಗಳನ್ನು ಪರಿಶೀಲಿಸಿದ ತಂಡ, ಪ್ರತಿಯೊಂದು ಗೇಟ್‌ನಲ್ಲಿ ಬಳಸಲಾದ ಸಾಮಗ್ರಿಗಳ ಮಾದರಿ ಸಂಗ್ರಹಿಸಿತು. ಈ ಮಾದರಿಗಳನ್ನು ನಾವು ಕೂಲಂಕಷ ಪರಿಶೀಲನೆಗೆ ಒಳಪಡಿಸಲಿದ್ದೇವೆ. …

Read More »

ಹೊಸಪೇಟೆಯಲ್ಲಿ ಅಂಬೇಡ್ಕರ್ ಅಪಮಾನ ಖಂಡಿಸಿ ಅಮಿತ್‌ ಶಾ ವಿರುದ್ಧ ಪ್ರತಿಭಟನೆ

ಹೊಸಪೇಟೆ: ಸಂಸತ್‌ನಲ್ಲಿ ಗೃಹ ಸಚಿವ ಅಮಿತ್ ಶಾ ಅವರು ಅಂಬೇಡ್ಕರ್‌ ಅವರಿಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ವಿವಿಧ ಸಂಘಟನೆಗಳ ವತಿಯಿಂದ ಇಂದು ಇಲ್ಲಿನ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ಅಮಿತ್ ಶಾ ವಿರುದ್ಧ ಧಿಕ್ಕಾರ ಕೂಗಿದ ಪ್ರತಿಭಟನಕಾರರು, ಶಾ ಭಾವಚಿತ್ರಗಳಿಗೆ ಚಪ್ಪಲಿ ಏಟು ನೀಡಿದರು ಹಾಗೂ ಕೊನೆಯಲ್ಲಿ ಭಾವಚಿತ್ರಗಳನ್ನು ಸುಟ್ಟು ಹಾಕಿದರು. ಬಿಜೆಪಿ ಮನುವಾದಿ ಪಕ್ಷ, ಆ ಪಕ್ಷದ ನಿಜವಾದ ಬಣ್ಣ ಈಗ ಮತ್ತೊಮ್ಮೆ ಬಯಲಾಗಿದೆ. ಅಮಿತ್ ಶಾ …

Read More »

ವಿಶ್ವ ಪಾರಂಪರಿಕ ಪಟ್ಟಿಗೆ ನಾಲ್ಕು ಸ್ಥಳ ಸೇರಿಸಲು ಪ್ರಯತ್ನ: ಸಚಿವ ಎಚ್‌.ಕೆ.ಪಾಟೀಲ್

ಹೊಸಪೇಟೆ: ಡೆಕ್ಕನ್ ಸುಲ್ತಾನಿ, ಹಿರೇಬೆನಕಲ್‍ನ ಪ್ರೀಹಿಸ್ಟಾರಿಕ್ ಸೈಟ್, ಶ್ರೀರಂಗಪಟ್ಟಣದ ಕೋಟೆಗಳು ಹಾಗೂ ಬದಾಮಿ ಐಹೊಳೆಗಳನ್ನು ವಿಶ್ವ ಪಾರಂಪರಿಕ ಪಟ್ಟಿಗೆ ಸೇರಿಸಲು ಪ್ರಯತ್ನ ನಡೆದಿದೆ ಎಂದು ಪ್ರವಾಸೋದ್ಯಮ ಸಚಿವ ಎಚ್‌.ಕೆ.ಪಾಟೀಲ್ ಹೇಳಿದರು. ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಆರಂಭವಾದ ಕರ್ನಾಟಕ ಇತಿಹಾಸ ಅಕಾಡೆಮಿಯ 38ನೇ ವಾರ್ಷಿಕ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ಇತಿಹಾಸ ಅಕಾಡೆಮಿಯ ಸಂಶೋಧಕರ ಸಂಶೋಧನೆಗಾಗಿ ಪ್ರತಿ ವರ್ಷ ₹5 ಲಕ್ಷ ನೆರವು ನೀಡುವುದಾಗಿ ಪ್ರಕಟಿಸಿದರು. ರಾಜ್ಯದ 25 ಸಾವಿರ …

Read More »

ಉಪಚುನಾವಣೆ ನಂತರ ಸಿಎಂ ಸಿದ್ದರಾಮಯ್ಯ ರಾಜೀನಾಮೆ: ಬಿ.ವೈ ವಿಜಯೇಂದ್ರ

ಕೊಟ್ಟೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ನಂತರ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಅವರು ರಾಜೀನಾಮೆ ನೀಡುವುದನ್ನು ಯಾವುದೇ ಶಕ್ತಿ ತಡೆ ಯಲಾರದು ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಪೆರೋಲ್ ಮೇಲೆ ಹೊರಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ಉಜ್ಜಯನಿ ಸದ್ದರ್ಮ ಪೀಠಕ್ಕೆ ಆಗಮಿಸಿ ಜಗದ್ಗುರುಗಳಿಂದ ಆಶೀರ್ವಾದ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಮುಡಾ ಹಗರಣದ ತನಿಖೆ ತೀವ್ರಗತಿಯಲ್ಲಿ ಸಾಗಿದೆ ಇದರ ಸತ್ಯಾಸತ್ಯತೆ ಸಿದ್ದರಾಮಯ್ಯ ಅವರ …

Read More »

ಸೋಲಾರ್ ದೀಪ, ಹೈಮಾಸ್ಕ್ ದೀಪಗಳಿಗೆ ಅನವಶ್ಯಕ ಹಣ ಖರ್ಚು ಬೇಡ: ಜಿಲ್ಲಾಧಿಕಾರಿ

ಹೊಸಪೇಟೆ: ಸೋಲಾರ್ ದೀಪ, ಹೈಮಾಸ್ಕ್ ದೀಪಗಳಿಗೆ ಅನವಶ್ಯಕವಾಗಿ ಹಣ ಖರ್ಚು ಮಾಡಬೇಡಿ ಅಗತ್ಯ ಕಾರ್ಯಗಳಿಗೆ ಹಣ ಬಳಸಿ ಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ ಅವರು ಹೇಳಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಧಾನ ಮಂತ್ರಿ ಆದರ್ಶ ಗ್ರಾಮ ಯೋಜನೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಗ್ರಾಮಗಳಲ್ಲಿ ಸೋಲಾರ್ ದೀಪ, ಹೈಮಾಸ್ಕ್ ದೀಪ ಅಳವಡಿಸುವುದು ಬೇಡ, ಈಗಾಗಲೇ ಇರುವ ವಿದ್ಯುತ್ ಕಂಬಳಿಗೆ ಅವಶ್ಯಕತೆ ಇದ್ದಲ್ಲಿ ಹೆಚ್ಚುವರಿಯಾಗಿ ದೀಪಗಳನ್ನು ಅಳವಡಿಸಿ, …

Read More »

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿದ ಸರ್ಕಾರಿ ಬಸ್: ಮಹಿಳೆ ಸಾವು

ಅರಸೀಕೆರೆ: ಹೋಬಳಿಯ ಸತ್ತೂರು ಕೆರೆ ಬಳಿ ಇಂದು ಸಂಜೆ ಕೆಕೆಆರ್‌ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿ ಬಿದ್ದಿದ್ದು, ಮಹಿಳೆ ಮೃತಪಟ್ಟಿದ್ದಾರೆ, 20 ಮಂದಿ ಗಾಯಗೊಂಡಿದ್ದಾರೆ. ಬಸ್‌ ದಾವಣಗೆರೆಯಿಂದ ಹರಪನಹಳ್ಳಿ ಕಡೆಗೆ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಸತ್ತೂರು ಗ್ರಾಮದ ಹನುಮಕ್ಕ (52) ಸ್ಥಳದಲ್ಲೇ ಮೃತಪಟ್ಟವರು, ಗಾಯಗೊಂಡವರನ್ನು ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಸ್‌ನಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರು ಇದ್ದರು ಚಾಲಕನ ಅತಿವೇಗ …

Read More »

ವಿಜಯನಗರದ ನೂತನ ಜಿಲ್ಲಾ ಆಸ್ಪತ್ರೆ ಕಟ್ಟಡ ಕಾಮಗಾರಿ ಪರಿಶೀಲಿಸಿದ ಸಚಿವ ದಿನೇಶ್ ಗುಂಡೂರಾವ್

ವಿಜಯನಗರ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ದಿನೇಶ್ ಆರ್. ಗುಂಡೂರಾವ್ ಅವರು ವಿಜಯನಗರ ಹೊಸಪೇಟೆಯಲ್ಲಿ ನಿರ್ಮಾಣವಾಗುತ್ತಿರುವ ಜಿಲ್ಲಾ ಆಸ್ಪತ್ರೆ ಕಟ್ಟಡ ಕಾಮಗಾರಿಯನ್ನು ಶಾಸಕರೊಂದಿಗೆ ಪರಿಶೀಲನೆ ನಡೆಸಿದರು. ನೂತನ ಜಿಲ್ಲೆಯಾದ ನಂತರ ಜಿಲ್ಲಾ ಆಸ್ಪತ್ರೆ ನಿರ್ಮಾಣ ಕಾಮಗಾರಿ ನಡೆಯುತ್ತಿದೆ, ಸುಸಜ್ಜಿತ ಆಸ್ಪತ್ರೆ ಇಲ್ಲದೆ ಅಕ್ಕಪಕ್ಕದ ಜಿಲ್ಲೆಗಳಿಗೆ ಉನ್ನತ ಚಿಕಿತ್ಸೆಗಾಗಿ ತೆರಳಬೇಕಾಗಿದೆ ಆದಷ್ಟು ಬೇಗ ಜಿಲ್ಲಾಸ್ಪತ್ರೆ 300 ಹಾಸಿಗೆ ಸಾಮಥ್ರ್ಯದ ಜಿಲ್ಲಾ ಆಸ್ಪತ್ರೆ ನಿರ್ಮಾಣದವಾದರೆ ಇಲ್ಲಿಯೇ ತುರ್ತು ಚಿಕಿತ್ಸೆ, ಶಸ್ತ್ರಚಿಕಿತ್ಸೆ …

Read More »