Breaking News

ಚೆನ್ನೈ

ಯುಗಾದಿ, ರಂಜಾನ್ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳು.

ಯುಗಾದಿ ಹಾಗೂ ರಂಜಾನ್ ಹಬ್ಬಗಳ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಸರಿದೂಗಿಸಲು ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ಸ್ಟೇಷನ್ ಹಾಗೂ ಚೆನ್ನೈನ ರಾಮಚಂದ್ರನ್ ಸೆಂಟ್ರಲ್ ರೈಲ್ವೆ ನಿಲ್ದಾಣದ ನಡುವೆ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆಗೆ ರೈಲ್ವೆ ಮಂಡಳಿಗೆ ಅನುಮೋದನೆ ನೀಡಲಾಗಿದೆ. ಬೆಂಗಳೂರು,ಚೆನ್ನೈ, ಕಲಬುರಗಿ ಕಾರವಾರಕ್ಕೆ ವಿಶೇಷ ರೈಲುಗಳ ನಿರ್ಮಾಣ ಕಾರ್ಯ ನಡೆಯುತ್ತಿದೆ.

Read More »

ಚೆನೈ: ಹಾಡಹಗಲೇ ಪೊಲೀಸ್ ಅಧಿಕಾರಿಯ ಬರ್ಬರ ಹತ್ಯೆ, ವಿಡಿಯೋ ವೈರಲ್.!

ಚೆನ್ನೈನಲ್ಲಿ ಹಾಡಹಗಲೇ ಹೆದ್ದಾರಿಯಲ್ಲಿ ಕೆಲವು ಆಕ್ರಮಣಕಾರರು ಪೊಲೀಸ್ ಅಧಿಕಾರಿಯನ್ನು ಕ್ರೂರವಾಗಿ ಹತ್ಯೆ ಮಾಡಿದ್ದಾರೆ.ಚಾಕುಗಳಿಂದ ಪೊಲೀಸ್ ಅಧಿಕಾರಿಯ ತಲೆಯನ್ನು ಕತ್ತರಿಸಿ ಕೊಂದಿದ್ದಾರೆ. ರಂಜಾನ್ ಉಪವಾಸದ ಭಾಗವಾಗಿ ದರ್ಗಾಕ್ಕೆ ಹೋಗಿ ನಂತರ ಮನೆಗೆ ಮರಳಿದರು. ಅದೇ ಸಮಯದಲ್ಲಿ, ಕೆಲವು ಆಕ್ರಮಣಕಾರರು ಬೈಕ್‌ನಲ್ಲಿ ಬಂದು ಜಾಕಿರ್ ಹುಸೇನ್ ಮೇಲೆ ಚಾಕುಗಳಿಂದ ಹಲ್ಲೆ ನಡೆಸಿ ಬರ್ಬರವಾಗಿ ಕೊಲೆ ಮಾಡಿದ್ದಾರೆ. ಝಾಕೀರ್ ಎಷ್ಟೇ ಪ್ರಯತ್ನಿಸಿದರೂ ವಿಫಲರಾಗಿದ್ದಾರೆ. ಅವರು ಕಾರಿನಲ್ಲಿದ್ದಾಗ ಅವರ ಮೇಲೆ ಚಾಕುಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.

Read More »

ಆಧ್ಯಾತ್ಮಿಕ ಹಿನ್ನೆಲೆಯುಳ್ಳ ಬೆಟ್ಟಕ್ಕೆ ಕರೆದೊಯ್ದು ಮಹಿಳೆಮೇಲೆ ಲೈಂಗಿಕ ದೌರ್ಜನ್ಯ.!

ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯ ಪವಿತ್ರ ಬೆಟ್ಟದಲ್ಲಿ ವ್ಯಕ್ತಿಯೊಬ್ಬ ಫ್ರೆಂಚ್ ಮಹಿಳೆಗೆ ಮೋಕ್ಷ ಕೊಡಿಸುತ್ತೇನೆಂದು ನಂಬಿಸಿ ಆಧ್ಯಾತ್ಮಿಕ ಹಿನ್ನೆಲೆಯುಳ್ಳ ಬೆಟ್ಟಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಲಾಗಿದೆ.ಮಹಿಳೆ ಅಲ್ಲಿಂದ ತಪ್ಪಿಸಿಕೊಂಡು ಬೆಟ್ಟದಿಂದ ಇಳಿದು ತಿರುವಣ್ಣಾಮಲೈ ಪಶ್ಚಿಮ ಪೊಲೀಸರಿಗೆ ದೂರು ನೀಡಿದ್ದಾಳೆ. ಪೊಲೀಸರು ಪ್ರಕರಣದ ತನಿಖೆಗಾಗಿ ವಿಶೇಷ ತಂಡಗಳನ್ನು ರಚಿಸಿ ವೆಂಕಟೇಶನನ್ನು ಬಂಧಿಸಿದ್ದಾರೆ. ಸಂತ್ರಸ್ತೆಗೆ ಚಿಕಿತ್ಸೆಗಾಗಿ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆಗಳು ನಡೆಯುತ್ತಿವೆ.

Read More »

ಚೆನೈ ತ್ಯಾಜ್ಯ ನಿರ್ವಹಣೆ ಅಧ್ಯಯನಕ್ಕೆ ಭೇಟಿ ನೀಡಿದ ಡಿಕೆಶಿ

ಚೆನೈ: ಚೆನೈನ ಚೆಟ್​ಪೇಟೆಯಲ್ಲಿರುವ ಬಯೋ ಸಿಎನ್​ಜಿ ಘಟಕಕ್ಕೆ ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭೇಟಿ ನೀಡಿದ್ದು ಘನ ತ್ಯಾಜ್ಯ ವಿಲೇವಾರಿ ಮತ್ತು ನಿರ್ವಹಣೆ ಸಂಬಂಧ ಮಾಹಿತಿ ಪಡೆದಿದ್ದಾರೆ. ಈ ವೇಳೆ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಘನ ತ್ಯಾಜ್ಯ ನಿರ್ವಹಣೆಯಲ್ಲಿ ಚೆನ್ನೈ ಮಾದರಿ ಅಧ್ಯಯನ ಮಾಡಲು ನಾನು ನನ್ನ ತಂಡದೊಂದಿಗೆ ಇಲ್ಲಿಗೆ ಬಂದಿದ್ದೇವೆ, ಇಲ್ಲಿನ ತ್ಯಾಜ್ಯ ನಿರ್ವಹಣೆಯಿಂದ ಸಾಕಷ್ಟು ವಿಚಾರಗಳನ್ನು ತಿಳಿದುಕೊಂಡಂತಾಯಿತು.ಕಳೆದ ಒಂದು ವರ್ಷದಿಂದ ಭೇಟಿ ನೀಡಬೇಕು ಎಂದುಕೊಂಡಿದ್ದೆ. ಈಗ ಸಮಯ …

Read More »

ಕೆ ಪೊನ್ಮುಡಿ ಅವರಿಗೆ ಮದ್ರಾಸ್ ಹೈಕೋರ್ಟ್ ಗುರುವಾರ ಮೂರು ವರ್ಷಗಳ ಜೈಲು ಶಿಕ್ಷೆ…

ಚೆನ್ನೈ: ಭ್ರಷ್ಟಾಚಾರ ಪ್ರಕರಣದಲ್ಲಿ ತಮಿಳುನಾಡು ಸಂಪುಟದಲ್ಲಿ ಉನ್ನತ ಶಿಕ್ಷಣ ಸಚಿವ ಸ್ಥಾನ ಕಳೆದುಕೊಂಡು ಶಾಸಕರಾಗಿ ಅನರ್ಹಗೊಂಡಿರುವ ಡಿಎಂಕೆ ಪಕ್ಷದ ಹಿರಿಯ ನಾಯಕ ಕೆ ಪೊನ್ಮುಡಿ ಅವರಿಗೆ ಮದ್ರಾಸ್ ಹೈಕೋರ್ಟ್ ಗುರುವಾರ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಪೊನ್ಮುಡಿ ಅವರು ಭ್ರಷ್ಟಾಚಾರ ಪ್ರಕರಣದಲ್ಲಿ ಶಿಕ್ಷೆಗೊಳಗಾದ ನಂತರ ತಮ್ಮ ಸ್ಥಾನವನ್ನು ಕಳೆದುಕೊಂಡ ಮೊದಲ ಡಿಎಂಕೆ ಮತ್ತು ಎಐಎಡಿಎಂಕೆಯಿಂದ ಜೆ ಜಯಲಲಿತಾ ಮತ್ತು ಬಾಲಕೃಷ್ಣ ರೆಡ್ಡಿ ಅವರ ನಂತರ ತಮಿಳುನಾಡಿನ ಮೂರನೇ ನಾಯಕರಾಗಿದ್ದಾರೆ. …

Read More »

ನಿವೃತ್ತ ಐಪಿಎಸ್ ಅಧಿಕಾರಿ ಜಿ ಸಂಪತ್ ಕುಮಾರ್ ಅವರಿಗೆ ಮದ್ರಾಸ್ ಹೈಕೋರ್ಟ್ ಹದಿನೈದು ದಿನಗಳ ಜೈಲು ಶಿಕ್ಷೆ…

ಚೆನ್ನೈ: ಕ್ರಿಕೆಟಿಗ ಎಂಎಸ್ ಧೋನಿ ಸಲ್ಲಿಸಿದ್ದ ಕ್ರಿಮಿನಲ್ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿವೃತ್ತ ಐಪಿಎಸ್ ಅಧಿಕಾರಿ ಜಿ ಸಂಪತ್ ಕುಮಾರ್ ಅವರಿಗೆ ಮದ್ರಾಸ್ ಹೈಕೋರ್ಟ್ ಹದಿನೈದು ದಿನಗಳ ಜೈಲು ಶಿಕ್ಷೆ ವಿಧಿಸಿದೆ ಎಂದು ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಐಪಿಎಸ್ ಅಧಿಕಾರಿ ಜಿ ಸಂಪತ್ ಕುಮಾರ್ 2013ರಲ್ಲಿ ಐಪಿಎಲ್ ಬೆಟ್ಟಿಂಗ್ ಮತ್ತು ಮ್ಯಾಚ್ ಫಿಕ್ಸಿಂಗ್ ದಂಧೆಯನ್ನು ಬಯಲಿಗೆಳೆದಿದ್ದರು. ನ್ಯಾಯಮೂರ್ತಿಗಳಾದ ಎಸ್.ಎಸ್.ಸುಂದರ್ ಮತ್ತು ಸುಂದರ್ ಮೋಹನ್ ಅವರಿದ್ದ ವಿಭಾಗೀಯ …

Read More »

ಚಿಚಾಂಗ್ ಚಂಡಮಾರುತದ ಪರಿಣಾಮದಿಂದ ಚೆನ್ನೈನಲ್ಲಿ ಭಾರಿ ಮಳೆಯಾಗುತ್ತಿದ್ದು ಪ್ರವಾಹದ ಪರಿಸ್ಥಿತಿ ಉಂಟಾಗಿದೆ…..

ಚಿಚಾಂಗ್ ಚಂಡಮಾರುತದ ಪರಿಣಾಮದಿಂದ ಚೆನ್ನೈನಲ್ಲಿ ಭಾರಿ ಮಳೆಯಾಗುತ್ತಿದ್ದು ಪ್ರವಾಹದ ಪರಿಸ್ಥಿತಿ ಉಂಟಾಗಿದೆ. ಚೆನ್ನೈ ವಿಮಾನ ನಿಲ್ದಾಣದ ರನ್‌ವೇನಲ್ಲಿ ಭಾರಿ ಪ್ರಮಾಣದ ನೀರು ನಿಂತ ಕಾರಣ ಡಿಸೆಂಬರ್ 4 ರಂದು ಬೆಳಿಗ್ಗೆ ಎರಡು ಗಂಟೆಗಳ ಕಾಲ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ. ಇದರಿಂದ ವಿಮಾನ ಪ್ರಯಾಣ ವೇಳಾಪಟ್ಟಿ ಮೇಲೆ ಪರಿಣಾಮ ಬೀರಿದ್ದು, ಜೋರು ಗಾಳಿಯ ಪರಿಣಾಮ ಸರಿಸುಮಾರು 10 ಚೆನ್ನೈಗೆ ಹೋಗುವ ವಿಮಾನಗಳನ್ನು ಬೆಂಗಳೂರಿಗೆ ತಿರುಗಿಸಲಾಯಿತು. ಚೆನ್ನೈನಲ್ಲಿ ಇಳಿಯಬೇಕಿದ್ದ ದೇಶೀಯ ಮತ್ತು ಅಂತರಾಷ್ಟ್ರೀಯ ವಿಮಾನಗಳನ್ನು …

Read More »

ಚೆನ್ನೈ ಸೆಂಟ್ರಲ್-ಮೈಸೂರು-ಚೆನ್ನೈ ಸೆಂಟ್ರಲ್ ವಂದೇ ಭಾರತ್ ಎಕ್ಸ್‌ಪ್ರೆಸ್ ವಿಶೇಷ ರೈಲು…..

ದೇಶಾದ್ಯಂತ ವಂದೇ ಭಾರತ್ ಎಕ್ಸ್‌ಪ್ರೆಸ್ (Vande Bharat Express) ರೈಲುಗಳು ಸೆಮಿ-ಹೈಸ್ವೀಡ್ ರೈಲುಗಳಾಗಿ ದೊಡ್ಡ ಮಟ್ಟದಲ್ಲಿ ಖ್ಯಾತಿ ಗಳಿಸಿವೆ. ಇದೀಗ, ರೈಲ್ವೆ ಇಲಾಖೆ ತನ್ನ ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. ಹಬ್ಬದ ಋತುವಿನಲ್ಲಿ ಪ್ರಯಾಣಿಕರ ದಟ್ಟಣೆಯನ್ನು ಕಡಿಮೆಗೊಳಿಸಲು ಈ ಮಾರ್ಗದಲ್ಲಿ ಮತ್ತೊಂದು ವಂದೇ ಭಾರತ್ ರೈಲನ್ನು ಪರಿಚಯಿಸಿದೆ. ವಂದೇ ಭಾರತ್ ಎಕ್ಸ್‌ಪ್ರೆಸ್ ವಿಶೇಷ ರೈಲು ಡಾ ಎಂಜಿಆರ್ ಚೆನ್ನೈ ಸೆಂಟ್ರಲ್ (Dr MGR Chennai Central) ಮತ್ತು ಮೈಸೂರು ಜಂಕ್ಷನ್ …

Read More »

ಬಿಜೆಪಿ ಆಡಳಿತದಲ್ಲಿ ರಾಜ್ಯದ ಹಕ್ಕುಗಳನ್ನು ಹತ್ತಿಕ್ಕಲಾಗಿದೆ….

ಚೆನ್ನೈ: ರಾಜ್ಯ ಸ್ವಾಯತ್ತತೆ ದ್ರಾವಿಡ ಮುನ್ನೇತ್ರ ಕಳಗಂನ ಪ್ರಮುಖ ಗುಣಗಳಲ್ಲಿ ಒಂದಾಗಿದ್ದು, ಕೇಂದ್ರದಲ್ಲಿ ಬಿಜೆಪಿ ಆಡಳಿತದಲ್ಲಿ ರಾಜ್ಯದ ಹಕ್ಕುಗಳನ್ನು ಹತ್ತಿಕ್ಕಲಾಗಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಮಂಗಳವಾರ ಹೇಳಿದ್ದಾರೆ. ತಮಿಳುನಾಡಿನ ಎಲ್ಲಾ ಜನಪ್ರತಿನಿಧಿಗಳು ವಿಧಾನಸಭೆಯಲ್ಲಿ ಅಂಗೀಕರಿಸಿದ 19 ವಿಧೇಯಕಗಳ ಅನುಮೋದನೆಯನ್ನು ತಡೆಯಲು ಬಿಜೆಪಿ ರಾಜ್ಯಪಾಲರನ್ನು ಬಳಸಿಕೊಳ್ಳುತ್ತಿದೆ. ಒಂದೇ ಪಕ್ಷ – ಒಂದೇ ನಾಯಕತ್ವ – ಒಂದೇ ಪ್ರಧಾನತೆಯತ್ತ ಸಾಗುತ್ತಿದೆ. ಏಕವಚನ ಶಕ್ತಿ ಹೊಂದಿರುವ ಸಚಿವರು, ಅವರು ವಿಶ್ವದ ಎರಡನೇ …

Read More »

ಇರ್ಫಾನ್ ಪಠಾಣ್ ಕೂಡಾ, ರಶೀದ್ ಖಾನ್ ಜತೆಗೂಡಿ ಕುಣಿದು ಕುಪ್ಪಳಿಸಿದರು….

ಕ್ರಿಕೆಟ್ ಜಗತ್ತಿನ ಹೊಸ ಬದ್ದ ಎದುರಾಳಿಗಳೆಂದು ಬಿಂಬಿತವಾಗಿರುವ ಪಾಕಿಸ್ತಾನ ಹಾಗೂ ಆಫ್ಘಾನಿಸ್ತಾನ ತಂಡಗಳ ನಡುವಿನ ಕಾದಾಟದಲ್ಲಿ ಕೊನೆಗೂ ಆಫ್ಘಾನಿಸ್ತಾನ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸುವಲ್ಲಿ ಯಶಸ್ವಿಯಾಗಿದೆ. ಇದು ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಆಫ್ಘಾನಿಸ್ತಾನ ದಾಖಲಿಸಿದ ಅತಿದೊಡ್ಡ ಗೆಲುವು ಎನಿಸಿಕೊಂಡಿತು.ಇಲ್ಲಿನ ಚೆಪಾಕ್‌ ಮೈದಾನದಲ್ಲಿ ನಡೆದ ಜಿದ್ದಾಜಿದ್ದಿನ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ ತಂಡವು ನಿಗದಿತ 50 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 282 ರನ್ ಬಾರಿಸಿತ್ತು. ಇದಕ್ಕುತ್ತರವಾಗಿ …

Read More »