BigTv News
April 11, 2025
Breaking News, Crime, ಜೈಪುರ
ರಾಜಸ್ತಾನ ರಾಜಧಾನಿ ಜೈಪುರ ಬಳಿ ಸಾಮೂಹಿಕ ವಿವಾಹದ ಹೆಸರಲ್ಲಿ ಬಡ ಕುಟುಂಬದ ಯುವತಿಯರನ್ನು ಪುರುಷರಿಗೆ ಮಾರಾಟ ಮಾಡುತ್ತಿದ್ದ ಖತರ್ನಾಕ್ ಜಾಲವನ್ನು ಪೊಲೀಸರು ಬೇದಿಸಿದ್ದಾರೆ.ಬಡ ಕುಟುಂಬಗಳ ಮಹಿಳೆಯರಿಗೆ ಸಾಮೂಹಿಕ ವಿವಾಹಗಳನ್ನು ಆಯೋಜಿಸುವ ಎನ್‌ಜಿಒ ಸೋಗಿನಲ್ಲಿ ನಡೆಸಲಾಗುತ್ತಿದ್ದ ಮಾನವ ಕಳ್ಳಸಾಗಣೆ ಜಾಲ ಇದಾಗಿದ್ದು, ಎನ್‌ಜಿಒ ನಡೆಸುತ್ತಿದ್ದ ಮಹಿಳೆ, ಬಡ ಕುಟುಂಬಗಳಿಂದ ಹುಡುಗಿಯರನ್ನು ಕಳ್ಳಸಾಗಣೆ ಮಾಡುವ ಏಜೆಂಟ್‌ಗಳಿಂದ ‘ಖರೀದಿಸಿ’ ವಧುವನ್ನು ಹುಡುಕುತ್ತಿರುವ ಯುವಕರಿಗೆ 2.5-5 ಲಕ್ಷ ರೂ.ಗೆ ‘ಮಾರಾಟ’ ಮಾಡುತ್ತಿದ್ದಳು ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಬಸ್ಸಿಯ …
Read More »
BigTv News
March 23, 2025
Breaking News, Crime, ಜೈಪುರ
ಜೈಪುರದ ಮಹಾರಾಜ ಕಾಲೇಜಿನ ಗೋಖಲೆ ಹಾಸ್ಟೆಲ್‌ನಲ್ಲಿ ಆತಂಕಕಾರಿ ಪರಿಸ್ಥಿತಿ ಉಂಟಾಗಿದ್ದು, ಕಾಲೇಜಿನ ಆಡಳಿತ ಮತ್ತು ಹಾಸ್ಟೆಲ್ ಮೇಲ್ವಿಚಾರಣೆಯ ಬಗ್ಗೆ ಗಂಭೀರ ಕಾಳಜಿಗಳನ್ನು ಹುಟ್ಟುಹಾಕಿದೆ. ಮಹಿಳಾ ವಿದ್ಯಾರ್ಥಿನಿಯೊಬ್ಬಳು ಬಾಲಕರ ಹಾಸ್ಟೆಲ್‌ನಲ್ಲಿ ರಾತ್ರಿ ಕಳೆದಿದ್ದಾಳೆ ಎಂದು ವರದಿಯಾಗಿದೆ. ಆಕೆ ಮುಂಜಾನೆ ಆವರಣದಿಂದ ಹೊರಗೆ ಹೋಗುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದಂತೆ ಈ ಸತ್ಯ ಬಹಿರಂಗವಾಗಿದೆ. ಸುಮಾರು ಒಂದು ವಾರದ ಹಿಂದೆ ವೈರಲ್ ಆದ ಈ ವಿಡಿಯೋ ಈಗ ಕಾಲೇಜು ಅಧಿಕಾರಿಗಳನ್ನು ತಲುಪಿದೆ. ಆದಾಗ್ಯೂ, …
Read More »
BigTv News
March 21, 2025
Breaking News, Crime, Rajasthan, ಜೈಪುರ
ದಕ್ಷಿಣ ಜೈಪುರದಲ್ಲಿ ಈ ಘಟನೆ ನಡೆದಿದ್ದು, ಕೊಲೆ ಮಾಡಿ ಆರೋಪಿಗಳು ಹಾಡಹಗಲೇ ಶವವನ್ನು ಮೂಟೆಕಟ್ಟಿ ಬೈಕ್ ನಲ್ಲಿ ಸಾಗಿಸಿರುವ ವಿಡಿಯೋ ವ್ಯಾಪಕ ವೈರಲ್ ಆಗುತ್ತಿದೆ. ಮದುವೆಯಾಗಿದ್ದರೂ ತನ್ನ ಪ್ರಿಯಕರನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಮಹಿಳೆ ತನ್ನ ಪ್ರಿಯಕರನ ನೆರವಿನಿಂದ ಗಂಡನನ್ನು ಕೊಲೆ ಮಾಡಿದ್ದಾಳೆ. ಇಬ್ಬರೂ ದೇಹವಿದ್ದ ಚೀಲದೊಂದಿಗೆ ಬೈಕ್ ನಲ್ಲಿ ಹೋಗುತ್ತಿರುವುದು ಸ್ಥಳದಲ್ಲಿನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬಳಿಕ ಪೊಲೀಸರು ಆರೋಪಿ ಮಹಿಳೆ ಸೇರಿದಂತೆ ವಶಕ್ಕೆ ಪಡೆದು ತೀವ್ರ ತನಿಖೆ ನಡೆಸಿದಾಗ …
Read More »
BigTv News
January 4, 2025
Breaking News, ಜೈಪುರ
ಜೈಪುರ: ಸೂಫಿ ಸಂತ ಅಜ್ಮೀರ್‌ನ ಖಾಜಾ ಮೊಯಿನುದ್ದೀನ್ ಚಿಶ್ತಿ ಅವರ ಉರುಸ್ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ನೀಡಿದ ‘ಚಾದರ್’ ಅನ್ನು ಅವರ ಪರವಾಗಿ ಕೇಂದ್ರ ಸಚಿವ ಕಿರಣ್ ರಿಜಿಜು ಅವರು ದರ್ಗಾಕ್ಕೆ ಇಂದು ಸಮರ್ಪಿಸಿದರು. ಅಜ್ಮೀರ್ ಷರೀಫ್ ಉರುಸ್: ದರ್ಗಾಕ್ಕೆ ಅರ್ಪಿಸಲು ಚಾದರ್ ನೀಡಿದ ಪ್ರಧಾನಿ ಮೋದಿ, ಭಾರಿ ಭದ್ರತೆಯೊಂದಿಗೆ ಸಚಿವರು ದರ್ಗಾಕ್ಕೆ ಆಗಮಿಸಿದರು. ದೆಹಲಿಯಿಂದ ಜೈಪುರಕ್ಕೆ ವಿಮಾನದಲ್ಲಿ ಬಂದ ಅವರು, ಬಳಿಕ ಅಲ್ಲಿಂದ ರಸ್ತೆ ಮಾರ್ಗದ ಮೂಲಕ …
Read More »
BigTv News
December 28, 2024
Breaking News, ಜೈಪುರ
ಜೈಪುರ: ಮಾಜಿ ಪ್ರಧಾನಿ ದಿವಗಂತ ಮನಮೋಹನ ಸಿಂಗ್ ಅವರ ಸ್ಮಾರಕ ನಿರ್ಮಾಣ ವಿಚಾರದಲ್ಲಿ ಎನ್‌ಡಿಎ ಸರ್ಕಾರ ಅನಗತ್ಯ ವಿವಾದ ಸೃಷ್ಟಿಸಿದೆ ಎಂದು ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಕಿಡಿಕಾರಿದ್ದಾರೆ. ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಮನಮೋಹನ ಸಿಂಗ್ ಅವರಂತಹ ಮಹಾನ್ ಚೇತನದ ಅಂತ್ಯಕ್ರಿಯೆ ವಿಚಾರದಲ್ಲೂ ಕೇಂದ್ರ ಸರ್ಕಾರ ಕಡೆಗಣಿಸಿದ್ದು, ಇದೀಗ ಸಿಂಗ್ ಅವರಿಗೆ ಸ್ಮಾರಕ ನಿರ್ಮಾಣ ವಿಚಾರದಲ್ಲೂ ಅನಗತ್ಯ ವಿವಾದ ಸೃಷ್ಟಿಸಿದೆ ಎಂದು …
Read More »
BigTv News
December 12, 2023
ಜೈಪುರ, ಸುದ್ದಿ
ಜೈಪುರ: ರಾಜಸ್ಥಾನ ಮುಖ್ಯಮಂತ್ರಿ ಹುದ್ದೆ ಯಾರ ಪಾಲಾಗಲಿದೆ ಎಂಬ ಕುತೂಹಲ ಹೆಚ್ಚಾಗಿದ್ದು, ಹೈಕಮಾಂಡ್ ಇಂದು ಸಭೆ ನಡೆಸಿ ಅಭ್ಯರ್ಥಿ ಘೋಷಿಸಲಿದೆ. ಈ ನಿಟ್ಟಿನಲ್ಲಿ ಸಿಎಂ ರೇಸ್‌ನಲ್ಲಿ ಮುಂಚೂಣಿಯಲ್ಲಿರುವ ಹಿರಿಯ ನಾಯಕಿ ವಸುಂಧರಾ ರಾಜೇ ಅವರ ಮನೆಯಲ್ಲಿ ಹಲವು ಮಂದಿ ಶಾಸಕರು ಬೀಡುಬಿಟ್ಟಿದ್ದಾರೆ. ಇಂದು ನಡೆಯಲಿರುವ ಬಿಜೆಪಿ ಶಾಸಕಾಂಗ ಪಕ್ಷದ ಸಭೆಗೂ ಮುನ್ನ ಮಾಜಿ ಸಿಎಂ ವಸುಂಧರಾ ರಾಜೇ ಅವರ ನಿವಾಸಕ್ಕೆ ಪಕ್ಷದ ಶಾಸಕರು ಆಗಮಿಸಿದ್ದಾರೆ. ಸಿವಿಲ್ ಲೈನ್‌ನ ಪಕ್ಷದ ಶಾಸಕ …
Read More »
BigTv News
December 3, 2023
ಜೈಪುರ, ಸುದ್ದಿ
ಜೈಪುರ: ಛತ್ತೀಸ್‌ಗಢ, ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಬಿಜೆಪಿ ಸರ್ಕಾರ ರಚಿಸಲಿದೆ ಎಂದು ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ರಮಣ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬಿಜೆಪಿಯು ಮಧ್ಯಪ್ರದೇಶದಲ್ಲಿ ಅಧಿಕಾರವನ್ನು ಉಳಿಸಿಕೊಳ್ಳಲು ಸಜ್ಜಾಗಿದ್ದು, ಛತ್ತೀಸ್‌ಗಢ ಮತ್ತು ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರದಿಂದ ಅಧಿಕಾರ ಕಸಿಯುವ ಹಂತದಲ್ಲಿದೆ. ಈ ಹೊತ್ತಿನ ಟ್ರೆಂಡ್ ಪ್ರಕಾರ, ಅಲ್ಲೂ ಬಿಜೆಪಿಗೆ ಬಹುಮತ ಬರುವ ಸಾಧ್ಯತೆ ಇದೆ. ಫಲಿತಾಂಶದ ಟ್ರೆಂಡ್‌ಗಳಲ್ಲಿ ಬಿಜೆಪಿಗೆ ಸ್ಪಷ್ಟ ಬೆಂಬಲವಿದೆ, ಜನರ ಕೋಪವು ಮತದಾನದಲ್ಲಿ ಪ್ರತಿಫಲಿಸುತ್ತದೆ. ಎಲ್ಲಾ ಮೂರು …
Read More »
BigTv News
November 25, 2023
ಜೈಪುರ, ಸುದ್ದಿ
ಜೈಪುರ: ಪ್ರಮುಖ ರಾಜ್ಯ ರಾಜಸ್ಥಾನದಲ್ಲಿ ವಿಧಾನಸಭೆ ಚುನಾವಣೆಗೆ ಮತದಾನ ಇಂದು ಬೆಳಿಗ್ಗೆ 7 ಗಂಟೆಗೆ ಪ್ರಾರಂಭವಾಗಿದೆ. 200 ಕ್ಷೇತ್ರಗಳ ಪೈಕಿ 199 ಕ್ಷೇತ್ರಗಳಲ್ಲಿ ಬೆಳಗ್ಗೆ 7ರಿಂದ ಸಂಜೆ 6ರವರೆಗೆ ಮತದಾನ ನಡೆಯಲಿದ್ದು, ಡಿ.3ರಂದು ಮತ ಎಣಿಕೆ ನಡೆಯಲಿದೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಮತದಾರರಿಗೆ ಮನವಿ ಮಾಡಿದ್ದಾರೆ.ರಾಜಸ್ಥಾನ ವಿಧಾನಸಭೆ ಚುನಾವಣೆಗೆ ಇಂದು ಮತದಾನ ನಡೆಯಲಿದೆ. ಎಲ್ಲಾ ಮತದಾರರು ತಮ್ಮ ಹಕ್ಕುಗಳನ್ನು ಗರಿಷ್ಠ ಸಂಖ್ಯೆಯಲ್ಲಿ ಚಲಾಯಿಸುವ ಮೂಲಕ ಮತದಾನದ ಹೊಸ …
Read More »
BigTv News
November 23, 2023
ಜೈಪುರ, ಸುದ್ದಿ
ಜೈಪುರ: ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ ಅವರ ಆಪ್ತ ರಾಜಪಾಲ್ ಸಿಂಗ್ ಶೆಖಾವತ್ ಅವರನ್ನು ರಾಜಸ್ಥಾನದ ಚುನಾವಣಾ ಕಣದಿಂದ ಹಿಂದೆ ಸರಿಯುವಂತೆ ಮಾಡಿದ್ದರಿಂದ ಬಿಜೆಪಿಯಲ್ಲಿ ಬಂಡಾಯ ನಾಯಕರ ಪಡೆಗೆ ಸೇರ್ಪಡೆಯಾಗಿದ್ದಾರೆ ಎಂದು ವರದಿಗಳು ತಿಳಿಸಿವೆ. ಈ ಬಾರಿ ವಿಧಾನಸಭಾ ಚುನಾವಣೆ ಗೆಲ್ಲುವ ಸಲುವಾಗಿ ಬಿಜೆಪಿ ಹಲವಾರು ಮಂದಿ ನಾಯಕರನ್ನು ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ಮಾಡಿದೆ. ಅಲ್ಲದೆ ನವೆಂಬರ್ 25 ರಂದು ಅಧಿಕೃತ ಅಭ್ಯರ್ಥಿಗಳ ಗೆಲುವಿಗಾಗಿ ಕೆಲಸ ಮಾಡಲು ಮನವೊಲಿಸಲು ಪ್ರಯತ್ನಿಸುತ್ತಿದೆ. …
Read More »
BigTv News
November 11, 2023
ಜೈಪುರ, ಸುದ್ದಿ
ಜೈಪುರ: ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ 4 ವರ್ಷದ ಬಾಲಕಿಯ ಮೇಲೆ ಎಸ್‌ಐ ಅತ್ಯಾಚಾರವೆಸಗಿದ ಆರೋಪದ ಮೇಲೆ ಪೊಲೀಸ್ ಠಾಣೆಯ ಹೊರಗೆ ಬೃಹತ್ ಪ್ರತಿಭಟನೆ ನಡೆಸಲಾಯಿತು.ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ ಜನರು ಆತನನ್ನು ಹಿಡಿದು ಥಳಿಸಿದರು. ದೊಡ್ಡ ಸಂಖ್ಯೆಯಲ್ಲಿ ಪೊಲೀಸ್ ಠಾಣೆಯ ಬಳಿಕ ಬಂದ ಗ್ರಾಮಸ್ಥರು, ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪಿ ಸಬ್ ಇನ್ಸ್‌ಪೆಕ್ಟರ್‌ಗೆ ಥಳಿಸಿದರು.ಚುನಾವಣಾ ಕರ್ತವ್ಯದಲ್ಲಿದ್ದ ಸಬ್ ಇನ್ಸ್ ಪೆಕ್ಟರ್ ಭೂಪೇಂದ್ರ ಸಿಂಗ್ ಬಾಲಕಿಯನ್ನು ತನ್ನ ಕೋಣೆಗೆ …
Read More »