Breaking News

ಮೇಲುಕೋಟೆ

ಕಾರ್ತಿಕಮಾಸದ ತೊಟ್ಟಿಲಮಡು ಜಾತ್ರಾಮಹೋತ್ಸವವೆಂದೇ ಪ್ರಖ್ಯಾತವಾದ ”ಅಷ್ಠತೀರ್ಥೋತ್ಸವ” ಬುಧವಾರ ವೈಭವದಿಂದ ನೆರವೇರಿತು….

ಮೇಲುಕೋಟೆ: ಶ್ರೀಚೆಲುವನಾರಾಯಣಸ್ವಾಮಿಯವರ ಕಾರ್ತಿಕಮಾಸದ ತೊಟ್ಟಿಲಮಡು ಜಾತ್ರಾಮಹೋತ್ಸವವೆಂದೇ ಪ್ರಖ್ಯಾತವಾದ ”ಅಷ್ಠತೀರ್ಥೋತ್ಸವ” ಬುಧವಾರ ವೈಭವದಿಂದ ನೆರವೇರಿತು. ರಾಜಮುಡಿ ಬ್ರಹ್ಮೋತ್ಸವದ ಆರನೇ ತಿರುನಾಳ್ ಮತ್ತು ದಶಮಿತಿಥಿ ಕೂಡಿದ ವಿಶೇಷ ದಿನದಂದು ಶ್ರೀಚೆಲುವನಾರಾಯಣನ ಬಂಗಾರದ ಪಾದುಕೆಗೆ ಪಂಚಕಲ್ಯಾಣಿ, ವೈಕುಂಠಗಂಗೆ ಹಾಗೂ ಎಲ್ಲಾ ಎಂಟು ತೀರ್ಥಗಳಲ್ಲಿ ವೇದಘೋಷದೊಂದಿಗೆ ಅಭಿಷೇಕ ನೆರವೇರಿಸಲಾಯಿತು. ರಾಜ್ಯದ ವಿವಿಧಭಾಗಗಳು ಮತ್ತು ಆಂದ್ರಪ್ರದೇಶದಿಂದ ಭಕ್ತರು ಹಾಗೂ ಮಕ್ಕಳಭಾಗ್ಯ ಅಪೇಕ್ಷಿಸಿ ಮಡಿಲು ತುಂಬಿ ಹರಕೆ ಹೊತ್ತ ನೂರಾರು ದಂಪತಿಗಳು, ಕಂಕಣಭಾಗ್ಯ ಅಪೇಕ್ಷಿತರು, ಪಾದುಕೆಯ ಪಲ್ಲಕ್ಕಿಯೊಡನೆ 20ಕಿಮಿಗೂ …

Read More »