Breaking News

Crime

ಕೇಶ್ವಾಪುರ ಬಟ್ಟೆ ಬಿಚ್ಚಿ ಪ್ರಕರಣ : ನಾಗರಿಕ ಸಮಾಜ ತಲೆತಗ್ಗಿಸುವಂತ ಘಟನೆ..

ಹುಬ್ಬಳ್ಳಿ: ನಗರದ ಕೇಶ್ವಾಪುರ ಠಾಣೆಯ ಪೊಲೀಸರು ಅಮಾಯಕ ಮಹಿಳೆಯ ಮೇಲೆ ಥಳಿಸಿರುವುದು ಅಕ್ಷಮ್ಯ ಅಪರಾಧ. ಮಹಿಳೆಯನ್ನು ಅಸಭ್ಯವಾಗಿ ನಡೆಸಿಕೊಂಡ ರೀತಿ ನಾಚಿಕೆಗೇಡು. ಕಾಂಗ್ರೆಸ್ ಕಾರ್ಪೊರೇಟರ್ ನೀಡಿದ ದೂರಿನ ಮೇರೆಗೆ ಬಿಜೆಪಿ ಕಾರ್ಯಕರ್ತೆಯ ಮೇಲೆ ಪೊಲೀಸರು ತಮ್ಮ ದರ್ಪವನ್ನು ಪ್ರದರ್ಶಿಸಿರುವುದು ರಾಜ್ಯದಲ್ಲಿ ಮಹಿಳೆಯರು ಅಸುರಕ್ಷಿತರು ಹಾಗೂ ದುರಾಡಳಿತಕ್ಕೆ ಹಿಡಿದ ಕೈಗನ್ನಡಿ ಎಂದು ಕೇಂದ್ರ ಸಚಿವ ಶ್ರೀ ಪ್ರಲ್ಲಾದ ಜೋಶಿ ಅವರು ಆರೋಪಿಸಿದ್ದಾರೆ.ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಹಾಳುಮಾಡಿರುವ ಕಾಂಗ್ರೆಸ್‌ ಸರ್ಕಾರ, ದಬ್ಬಾಳಿಕೆಯನ್ನು ನಡೆಸುತ್ತಿದೆ. …

Read More »

ಮಹಿಳೆ ತಾನಾಗಿಯೇ ಬಟ್ಟೆ ಬಿಚ್ಚಿಕೊಂಡಿದ್ದಾಳೆ : ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಸ್ಪಷ್ಟನೆ

ಹುಬ್ಬಳ್ಳಿಯಲ್ಲಿ ಅಮಾನವೀಯ ಘಟನೆ ನಡೆದಿದ್ದು ಬಿಜೆಪಿ ಕಾರ್ಯಕರ್ತೆಯನ್ನ ವಿವಸ್ತ್ರಗೊಳಿಸಿ, ಪುರುಷ ಪೊಲೀಸ್ ಸಿಬ್ಬಂದಿ ಮುಂದೆ ಹಲ್ಲೆ ಮಾಡಿರುವ ಘಟನೆ ವರದಿಯಾಗಿದ್ದು ಇದೀಗ ಈ ವಿಚಾರಕ್ಕೆ ಸಂಬಂಧಪಟ್ಟಂತೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಅವರು ಮಹಿಳೆ ತಾನಾಗಿಯೇ ಬಟ್ಟೆ ಬಿಚ್ಚಿಕೊಂಡಿದ್ದಾಳೆ ಎಂದು ಸ್ಪಷ್ಟಪಡಿಸಿದ್ದಾರೆ.ಬಿಜೆಪಿ ಕಾರ್ಯಕರ್ತೆಯ ಮೇಲೆ ಪೊಲೀಸರು ದಬ್ಬಾಳಿಕೆ ನಡೆಸಿರುವ ಆರೋಪ ವಿಚಾರವಾಗಿ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ ಅವರು ಆಕೆಯೇ ನಾಲ್ವರು ಪೊಲೀಸ್ ಬಂದಿಯ ಮೇಲೆ ಹಲ್ಲೆ ಮಾಡಿದ್ದಾಳೆ . …

Read More »

ಲಾಭದ ಆಮಿಷವೊಡ್ಡಿ 30 ಲ.ರೂ. ವಂಚನೆ

ಉಡುಪಿ: ಸ್ಟಾಕ್ ಮಾರ್ಕೆಟ್ ನಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ಗಳಿಸಬಹುದು ಎಂದು ನಿವೃತ್ತ ಬ್ಯಾಂಕ್ ಉದ್ಯೋಗಿಗೆ ಲಕ್ಷಾಂತರ ರೂ.ವಂಚಿಸಿದ ಘಟನೆ ನಡೆದಿದೆ.ಎಂಐಟಿ ನಿವೃತ್ತ ಉದ್ಯೋಗಿ ಉಮಾನಂದ ಕೆ.ವಿ. ಹಣ ಕಳೆದುಕೊಂಡವರು. ವಾಟ್ಸಾಪ್ ನಲ್ಲಿ ವಂಚಕನೊಬ್ಬ ಇವರನ್ನು ಸಂಪರ್ಕಿಸಿ ಆಮಿಷವೊಡ್ಡಿದ್ದಾನೆ.ವಂಚಕರ ಮಾತು ನಂಬಿದ ಅವರು ನ. 6 ರಿಂದ ಡಿ. 31 ರ ವರೆಗೆ ಸ್ಟಾಕ್ ಮಾರ್ಕೇಟ್ ಕಂಪೆನಿಯಲ್ಲಿ ಆರೋಪಿಗಳು ಸೂಚಿಸಿದ ವಿವಿಧ ಖಾತೆಗಳಿಗೆ ಒಟ್ಟು 30,32,000 ರೂ. …

Read More »

ಗಾಂಜಾ ಮಾರಾಟ: ಇಬ್ಬರ ಬಂಧನ

ಹೂವಿನಹಡಗಲಿ: ಪಟ್ಟಣ ಹಾಗೂ ತಾಲ್ಲೂಕಿನ ಇಟ್ಟಿಗಿ ಗ್ರಾಮದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆಪಟ್ಟಣ ಹೊರ ವಲಯ ನಂದಿಪುರ ದೊಡ್ಡಬಸವೇಶ್ವರ ಗದ್ದುಗೆ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ದಾಸರಹಳ್ಳಿ ತಾಂಡಾದ ಸುನೀಲ್ ನಾಯ್ಕ ಎಂಬಾತನ ಬಂಧಿಸಿ ₹10 ಸಾವಿರ ಮೌಲ್ಯದ 393.85 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ.ಇಟ್ಟಿಗಿ ಗ್ರಾಮದ ಹೊರ ವಲಯ ಹಾಲಿನ ಡೇರಿ ಹತ್ತಿರ ಗಾಂಜಾ ಮಾರಾಟ ಮಾಡುತ್ತಿದ್ದ ದಾಸರಹಳ್ಳಿ ತಾಂಡಾದ ನಿವಾಸಿ, ಮೂಲತಃ ಹಾವೇರಿ …

Read More »

ಮರಳು ಅಕ್ರಮ ದಂಧೆ: ಎಂಟು ಜನರ ವಿರುದ್ಧ ಎಫ್‌ಐಆರ್‌

ಕನಕಗಿರಿ: ತಾಲ್ಲೂಕಿನ ನವಲಿ ಗ್ರಾಮದ ಸೀಮೆ ಹಾಗೂ ಭೂಮಿಯಲ್ಲಿ ಅಕ್ರಮ ಮರಳು ದಂಧೆ ನಡೆಸುತ್ತಿದ್ದ ಸ್ಥಳದ ಮೇಲೆ ಮಂಗಳವಾರ ಬೆಳಗಿನ ಜಾವ ಪೊಲೀಸರು ದಾಳಿ ನಡೆಸಿದ್ದು, ಎಂಟು ಹಿಟಾಚಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮರಳು ಕಳ್ಳತನ ಮಾಡಿದ ಆರೋಪದ ಮೇಲೆ ಎಂಟು ಜನರ ವಿರುದ್ಧ ಇಲ್ಲಿನ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.ಗಂಗಾವತಿ ಪೊಲೀಸ್ ಉಪ ವಿಭಾಗಾಧಿಕಾರಿ ಜಾಯಪ್ಪ ನ್ಯಾಮಗೌಡ ಹಾಗೂ ಪೊಲೀಸ್‌ ಇನ್‌ಸ್ಟೆಕ್ಟರ್‌ ಎಂ.ಡಿ.‌ ಫೈಜುಲ್ಲಾ ನೇತೃತ್ವದಲ್ಲಿ ನಸುಕಿನ ಜಾವ ದಾಳಿ …

Read More »

ಅಂಚಟಗೇರಿ ಬಳಿ ಭೀಕರ ರಸ್ತೆ ಅಪಘಾತ- ತಂದೆ ಸೇರಿ ಇಬ್ಬರು ಮಕ್ಕಳು ದುರ್ಮರಣ..

ಹುಬ್ಬಳ್ಳಿ: ಕಾರವಾರದಿಂದ ಹುಬ್ಬಳ್ಳಿಯತ್ತ ಬರುತ್ತಿದ್ದ ಸಾರಿಗೆ ಸಂಸ್ಥೆಯ ಬಸ್, ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿ ತಂದೆ ಹಾಗೂ ಇಬ್ಬರು ಮಕ್ಕಳು ಸಾವನ್ನಾಪ್ಪಿದ್ದ ಘಟನೆ ಮಂಗಳವಾರ ಬೆಳಿಗ್ಗೆ ಹುಬ್ಬಳ್ಳಿಯ ಅಂಚಟಗೇರಿ ಬಳಿ ಸಂಭವಿಸಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, ತಂದೆಯೊಬ್ಬರು ತಮ್ಮ ಇಬ್ಬರು ಮಕ್ಕಳೊಂದಿಗೆ ಬೈಕ್‌ನಲ್ಲಿ ಊರಿಗೆ ಹೊರಟಿದ್ದರು. ಇದೇ ವೇಳೆ, ವೇಗವಾಗಿ ಬಂದ ಕಾರವಾರ ಸಾರಿಗೆ ಬಸ್ ಚಾಲಕ ಓವರ್‌ಟೇಕ್ ಮಾಡುವ ಪ್ರಯತ್ನದಲ್ಲಿ ಏಕಾಏಕಿ ಬೈಕ್‌ಗೆ ಹಿಂಭಾಗದಿಂದ ಡಿಕ್ಕಿ …

Read More »

ಬೆಂಗಳೂರಲ್ಲಿ ಡ್ರಗ್ಸ್ ಫ್ಯಾಕ್ಟರಿ​​​​​​​​​ ಕೇಸ್, ಮೂವರು Police inspectors Suspended…

ಡ್ರಗ್ ಕೇಸ್ ಗೆ Drug case ಸಂಬಂಧಪಟ್ಟಂತೆ ಮಹಾರಾಷ್ಟ್ರ ಪೊಲೀಸರು Maharashtra police ಬೆಂಗಳೂರಲ್ಲಿ ಮಾದಕ ವಸ್ತು ತಯಾರಿಕ ಘಟಕದ ಮೇಲೆ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮೂವರು ಪೊಲೀಸ್ ಇನ್ಸ್‌ಪೆಕ್ಟರ್‌ಗಳನ್ನು Police inspectors Suspended ಈ ಸಂಬಂಧ ಪೊಲೀಸ್ ಕಮೀಷನರ್ ಸೀಮಂತ್ ಕುಮಾರ್ ಸಿಂಗ್ Seemant Kumar Singh ಅವರು ಅಧಿಕೃತ ಆದೇಶ ಹೊರಡಿಸಿದ್ದು, ಕೊತ್ತನೂರು, ಬಾಗಲೂರು, ಅವಲಹಳ್ಳಿ ಪೊಲೀಸ್ ಇನ್ಸ್‌ಪೆಕ್ಟರ್‌ಗಳನ್ನು ಅಮಾನತು ಮಾಡಿದ್ದಾರೆ.ಮಹಾರಾಷ್ಟ್ರ ಎಎನ್‌ಟಿಎಫ್‌ ಬೆಂಗಳೂರಲ್ಲಿ …

Read More »

ಇಟ್ಟಿಗೆ ಬೇಯಿಸಲು ಮರಗಳ ಮಾರಣಹೋಮ: ಚಾಮರಾಜನಗರದಲ್ಲಿ 30ಕ್ಕೂ ಹೆಚ್ಚು ಮರಗಳನ್ನು ಕಡಿದಿರುವ ದುಷ್ಕರ್ಮಿಗಳು

ಚಾಮರಾಜನಗರ: ಇಟ್ಟಿಗೆ ಬೇಯಿಸಲು ಮರಗಳ ಮಾರಣಹೋಮ ನಡೆಸಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದಿದೆಇಲ್ಲಿನ ಹಲವು ಗ್ರಾಮಗಳಲ್ಲಿ 30ಕ್ಕೂ ಹೆಚ್ಚು ಮರಗಳನ್ನು ದುಷ್ಕರ್ಮಿಗಳು ಕಡಿದು ಹಾಕಿದ್ದಾರೆ. ಕೆಂಪಯ್ಯನಹಟ್ಟಿ, ರಾಮಾಪುರ, ದೊಮ್ಮನಗದ್ದೆ, ಪಳನಿಮೇಡು ಗ್ರಾಮದಳಲ್ಲಿ ಲೈಸನ್ಸ್ ಪಡೆಯದೇ ಅಕ್ರಮವಾಗಿ ಇಟ್ಟಿಗೆ ಫ್ಯಾಕ್ಟರಿಗಳು ತಲೆ ಎತ್ತಿದ್ದು, ಇಟ್ಟಿಗೆ ಬೇಯಿಸಲು ಮರಗಳನ್ನು ಕಡಿಯಲಾಗುತ್ತಿದೆ.ಈ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿಗಳಿದ್ದರೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಇದು ಮಲೆಮಹದೇಶ್ವರ ವನ್ಯಜೀವಿಧಾಮ ಭಾಗದ …

Read More »

ರೌಡಿಶೀಟರ್ ಜೊತೆಗೆ ನಿಕಟ ನಂಟು: ಪೊಲೀಸ್ ಸಬ್‌ ಇನ್ಸ್‌ಪೆಕ್ಟರ್‌ ಸಸ್ಪೆಂಡ್‌..

ಪೊಲೀಸರನ್ನು ಕಂಡರೆ ರೌಡಿಗಳು ಹೆದರುವುದು ಸಾಮಾನ್ಯ. ಆದರೆ ಪೊಲೀಸರೇ ಸಮಾಜಘಾತುಕ ಶಕ್ತಿಗಳೊಡನೆ ಕೈಜೋಡಿಸಿದರೆ ಬೇಲಿಯೇ ಎದ್ದು ಹೊಲ ಮೇಯ್ದಂತಲ್ಲವೇ? ಇಂಥದ್ದೇ ಒಂದು ಘಟನೆ ಬೆಂಗಳೂರಿನಲ್ಲಿ ನಡೆದಿದೆ . ಯಲಹಂಕ ನ್ಯೂಟೌನ್‌ ಪೊಲೀಸ್‌ ಠಾಣೆಯ ಪಿಎಸ್‌ಐ ನಾಗರಾಜ್‌ ತಮ್ಮ ವರ್ತನೆಯಿಂದ ಈಗ ಆರೋಪಿ ಸ್ಥಾನದಲ್ಲಿ ನಿಂತಿದ್ದಾರೆ…ಸಮಾಜ ಘಾತುಕ ಮತ್ತು ರೌಡಿ ಚಟುವಟಿಕೆ ನಡೆಸುವ , ಕ್ರಿಮಿನಲ್ ಹಿನ್ನಲೆಯುಳ್ಳವರನ್ನು ರೌಡಿಶೀಟರ್‌ ದಾಸ ಮತ್ತು ಅವನ ಸಂಗಡಿಗರನ್ನು ಮನೆಗೆ ಕರೆಸಿ ಬರ್ತ್‌ಡೇ ಆಚರಿಸಿ ಪಿಎಸ್‌ಐ …

Read More »

ಗರ್ಭಿಣಿ ಮಗಳ ಕ್ರೂರವಾಗಿ ಹತ್ಯೆಗೈದ ತಂದೆ: ಕೃತ್ಯಕ್ಕೆ ಬೆಚ್ಚಿಬಿದ್ದ ಧಾರವಾಡ

ದಲಿತ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದ ಕಾರಣಕ್ಕೆ ಪಾಪಿ ತಂದೆ ಹೆತ್ತ ಮಗಳ ಮೇಲೆಯೇ ಪೈಪ್‌ನಿಂದ ಹಲ್ಲೆ ನಡೆಸಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ 19 ವರ್ಷದ ಯುವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ. ಹುಬ್ಬಳ್ಳಿಯ ಇನಾಂ ವೀರಾಪುರ ಗ್ರಾಮದ ಯುವತಿ ಹಾಗೂ ಯುವಕ ಪೋಷಕರ ವಿರೋಧದ ನಡುವೆಯೇ ಕಳೆದ ಏಳು ತಿಂಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ಈ ಮದುವೆ ಹಿನ್ನೆಲೆಯಲ್ಲಿ ಎರಡು ಕುಟುಂಬಗಳ ನಡುವೆ ಉದ್ವಿಗ್ನತೆ ಉಂಟಾಗಿದ್ದು, ಪೊಲೀಸರು ಸಮ್ಮುಖದಲ್ಲೇ ರಾಜಿ ಪಂಚಾಯಿತಿ …

Read More »