BigTv News
December 19, 2025
Breaking News, Crime
ಮೈಸೂರು : ಡಾ. ಅನೂಪ್ ಹಲ್ಲೆಗೊಳಗಾದ ವೈದ್ಯರಾಗಿದ್ದು, ರುಬಿಯಾಷ್ ಷರೀಫ್ ಎಂಬಾತ ಹಾಗೂ ಆತನ ತಂದೆ ವೈದ್ಯರ ಮೇಲೆ ಹಲ್ಲೆ ನಡೆಸಿದ ಆರೋಪಿಗಳಾಗಿದ್ದಾರೆ.ರುಬಿಯಾಜ್ ಷರೀಫ್ ನ ಮೂರು ವರ್ಷದ ಮಗು ಆಸ್ಪತ್ರೆಗೆ ದಾಖಲಾಗಿತ್ತು. ಈ ವೇಳೆ ಮಗುವನ್ನು ನೋಡಲು ರುಬಿಯಾಜ್ ಷರೀಫ್ ಚಪ್ಪಲಿ ಧರಿಸಿಯೇ ಆಸ್ಪತ್ರೆಯೊಳಗೆ ಬಂದಿದ್ದ. ಆಗ ವೈದ್ಯರು ಚಪ್ಪಲಿ ಹೊರಗೆ ಬಿಟ್ಟು ಬನ್ನಿ ಎಂದು ಹೇಳಿದ್ದರು. ಚಪ್ಪಲಿ ಹೊರಗೆ ಬಿಡುವುದಿಲ್ಲ ಎಂದು ಗಲಾಟೆ ಮಾಡಿದ್ದ ರುಬಿಯಾಜ್, ನೀವು …
Read More »
BigTv News
December 19, 2025
Breaking News, Crime
ಮೈಸೂರಿನ ಬಿ.ಎಂ. ಶ್ರೀ ನಗರದಲ್ಲಿ ಪತ್ನಿ ತನಗೆ ಗೌರವ ನೀಡುತ್ತಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಪಾನಿಪುರಿ ವ್ಯಾಪಾರಿ ಮಹೇಶ್ ಎಂಬಾತ ತನ್ನ ಪತ್ನಿ ನಾಗರತ್ನಳನ್ನು ಕೊಲೆ ಮಾಡಲು ಮುಂದಾಗಿದ್ದಾನೆ. ಪತ್ನಿ ತನ್ನ ಹಣವನ್ನು ಬಡ್ಡಿಗೆ ನೀಡುತ್ತಿದ್ದರೂ ತನಗೆ ಹಣ ನೀಡುತ್ತಿರಲಿಲ್ಲ ಎಂಬುದು ಮಹೇಶನ ಅಸಮಾಧಾನಕ್ಕೆ ಕಾರಣವಾಗಿತ್ತು.ಇದಕ್ಕಾಗಿ ತನ್ನ ಸ್ನೇಹಿತರಾದ ಭಾಸ್ಕರ್ ಮತ್ತು ಅಭಿಷೇಕ್ ಎಂಬುವವರಿಗೆ 5 ಲಕ್ಷ ರೂ. ಸುಪಾರಿ ನೀಡಿದ್ದ. ಆರೋಪಿಗಳು ನಾಗರತ್ನ ಒಬ್ಬರೇ ಇದ್ದಾಗ ಮನೆಗೆ ನುಗ್ಗಿ …
Read More »
Shaikh BigTv
December 19, 2025
Breaking News, Crime, ಕರ್ನಾಟಕ, ಬೆಳಗಾವಿ
ಬೆಳಗಾವಿ, ಕಳ್ಳತನ, ದರೋಡೆ, ಕೊಲೆ, ಸುಲಿಗೆ ಸೇರಿದಂತೆ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಪೊಲೀಸರು ಶಾಮೀಲಾಗಿರುವುದು ಕಂಡುಬಂದರೆ ಅಂಥವರನ್ನು ಮುಲಾಜಿಲ್ಲದೆ ಸೇವೆಯಿಂದ ವಜಾಗೊಳಿಸುವ ಕಾನೂನು ಜಾರಿ ಮಾಡಿದ್ದೇವೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಎಚ್ಚರಿಸಿದ್ದಾರೆ….ವಿಧಾನಪರಿಷತ್‌ನಲ್ಲಿ ಜೆಡಿಎಸ್‌ನ ಶರವಣ.ಟಿ.ಎ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಯಾವುದೇ ಕಾರಣಕ್ಕೂ ಇಲಾಖೆಯ ಪೊಲೀಸರು ಅಪರಾಧ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬಾರದು. ಒಂದು ವೇಳೆ ಯಾರಾದರೂ ಇಂಥ ಕೃತ್ಯಗಳಲ್ಲಿ ಶಾಮೀಲಾಗಿರುವುದು ಕಂಡುಬಂದರೆ ಅವರನ್ನು ಸೇವೆಯಿಂದ ಅಮಾನತುಪಡಿಸುವುದು, ಬಂಧಿಸುವುದು, ನೋಟಿಸ್ ಕೊಡುವ ಪ್ರಕ್ರಿಯೆ …
Read More »
BigTv News
December 18, 2025
Breaking News, Crime, ಕರ್ನಾಟಕ, ಬೆಂಗಳೂರು
ನಕಲಿ ಆಧಾರ್ ಕಾರ್ಡ್ ತಯಾರಿಕೆಯ ಸುಳ್ಳು ಆರೋಪ ಮಾಡಿ ಕನಕಪುರದ ಜೆರಾಕ್ಸ್ ಅಂಗಡಿ ಮಾಲೀಕ ರಾಜೇಶ್ ಅವರಿಂದ ₹1.6 ಲಕ್ಷ ವಸೂಲಿ ಮಾಡಿದ್ದ ಕಗ್ಗಲೀಪುರ ಪಿಎಸ್‌ಐ ಹರೀಶ್ ಅವರನ್ನು ರಾಮನಗರ ಎಸ್.ಪಿ. ಶ್ರೀನಿವಾಸ್ ಗೌಡ ಅಮಾನತುಗೊಳಿಸಿದ್ದಾರೆ. ಗೃಹ ಸಚಿವರಿಗೆ ದೂರು ನೀಡಿದ ನಂತರ ಕ್ರಮ ಕೈಗೊಳ್ಳಲಾಗಿದೆ. ರಾಮನಗರ: ನಕಲಿ ಆಧಾರ್ ಕಾರ್ಡ್ ತಯಾರಿಕೆಯ ಸುಳ್ಳು ಆರೋಪದ ಬೆದರಿಕೆ ಹಾಕಿ, ಜೆರಾಕ್ಸ್ ಅಂಗಡಿ ಮಾಲೀಕರೊಬ್ಬರಿಂದ ಲಕ್ಷಾಂತರ ರೂಪಾಯಿ ಹಣ ವಸೂಲಿ ಮಾಡಿದ್ದ …
Read More »
Shaikh BigTv
December 17, 2025
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನಡೆಸುತ್ತಿದ್ದ ಉದ್ಯೋಗಾಕಾಂಕ್ಷಿ ಯುವತಿ ರೈಲು ಹಳಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ನಗರದ ಶಿವಗಿರಿಯಲ್ಲಿ ನಡೆದಿದೆ.ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ನಡೆಸಲೆಂದು ಬಂದಿದ್ದ ಯುವತಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘೋರ ಧಾರವಾಡದ ತಪೋವನ ಬಳಿ ನಡೆದಿದೆ.ಬಳ್ಳಾರಿ ಮೂಲಕ ಪಲ್ಲವಿ (22) ಆತ್ಮಹತ್ಯೆಗೆ ಶರಣಾದ ಯುವತಿ. ಸ್ಪರ್ಧಾತ್ಮಕ ಪರೀಕ್ಷೆ ಸಿದ್ಧತೆಯಲ್ಲಿದ್ದ ಯುವತಿ ಇಂದು ಬೆಳಿಗ್ಗೆ ಇದ್ದಕ್ಕಿದ್ದಂತೆ ರೈಲಿಗೆ ತಲೆಕೊಟ್ಟು ಸಾವಿಗೆ ಶರಣಾಗಿದ್ದಾಳೆ. ಯುವತಿ ಆತ್ಮಹತ್ಯೆಗೆ ನಿಖರ …
Read More »
Shaikh BigTv
December 15, 2025
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ ಕಳೆದ ಒಂದು ತಿಂಗಳ ಹಿಂದೆ ಹುಬ್ಬಳ್ಳಿಯ ಮಂಟೂರ ರೋಡ್ ಬ್ಯಾಳಿ ಪ್ಲಾಟ್ ಬಳಿ ಮಹಮ್ಮದ್ ಮಲಿಕ್ ಜಾನ್ ಮೇಲೆ ಸೆಟ್ಲಿಮೆಂಟ್ ಗ್ಯಾಂಗ್ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಆರೋಪಿಗಳನ್ನು ಬೆಂಡಿಗೇರಿ ಠಾಣೆ ಬಂಧಿಸಿದ್ದರು. ಆದ್ರೆ ಪ್ರಮುಖ ಆರೋಪಿ ರವಿ ಜಾಧವನನ್ನು ಇಂದು ಬಂಧಿಸಿದ್ದಾರೆ. ಬೆಂಡಿಗೇರಿ ಠಾಣೆ ಇನ್ಸ್ಪೆಕ್ಟರ್ ಎಸ್.ಆರ್ ನಾಯ್ಕ್ ಅವರು ಇಂದು ಕಾರ್ಯಾಚರಣೆ ನಡೆಸಿ ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ. ಮಂಟೂರ …
Read More »
Shaikh BigTv
December 13, 2025
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಸಭಾಪತಿ ಬಸವರಾಜ ಹೊರಟ್ಟಿಯವರ ಅಭಿನಂದನಾ ಗೌರವ ಸನ್ಮಾನ ಕಾರ್ಯಕ್ರಮಕ್ಕೆ ಸಿಎಂ ಸಿದ್ಧರಾಮಯ್ಯ ದೀಪ ಬೆಳಗುವ ಮೂಲಕ ವಿದ್ಯುಕ್ತವಾಗಿ ಚಾಲನೆ ನೀಡಿದರು. ಹುಬ್ಬಳ್ಳಿಯ ನೆಹರೂ ಮೈದಾನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಸಚಿವರಾದ ಎಚ್.ಕೆ.ಪಾಟೀಲ, ಸಂತೋಷ ಲಾಡ್, ಮಾಜಿ ಸಿಎಂ ಜಗದೀಶ ಶೆಟ್ಟರ್ ನೇತೃತ್ವದಲ್ಲಿ ಕಾರ್ಯಕ್ರಮಕ್ಕೆ ಅದ್ದೂರಿಯಾಗಿ ಚಾಲನೆ ದೊರೆಯಿತು.ಇನ್ನೂ ಕಾರ್ಯಕ್ರಮದಲ್ಲಿ ಸಚಿವರು, ಶಾಸಕರು ಹಾಗೂ ರಾಜಕೀಯ ಮುಖಂಡರು ಸೇರಿದಂತೆ ನಾಡಿನ ವಿವಿಧ …
Read More »
Shaikh BigTv
December 13, 2025
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ರಾಜ್ಯ ರಾಜಕಾರಣದ ಮೂಲಕ ವಿಶ್ವದಾಖಲೆ ನಿರ್ಮಿಸಿರುವ ಸಭಾಪತಿ ಬಸವರಾಜ ಹೊರಟ್ಟಿಯವರ ಅಭಿನಂದನಾ ಕಾರ್ಯಕ್ರಮಕ್ಕೆ ಸಿಎಂ ಸಿದ್ಧರಾಮಯ್ಯನವರು ಆಗಮಿಸಿದ್ದು, ನಾಡದೊರೆಗೆ ಆತ್ಮೀಯವಾಗಿ ಸ್ವಾಗತ ಕೋರಲಾಯಿತು.ಕಾರ್ಯಕ್ರಮಕ್ಕೆ ಆಗಮಿಸಿದ ಸಿಎಂ ಸಿದ್ಧರಾಮಯ್ಯನವರಿಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಬಸವರಾಜ ಹೊರಟ್ಟಿ ಸೇರಿದಂತೆ ಆಗಮಿಸಿದ ನಾಯಕರು ಆತ್ಮೀಯವಾಗಿ ಬರಮಾಡಿಕೊಂಡು ಶುಭ ಕೋರಿದರು.ಇನ್ನೂ ನೆಹರೂ ಮೈದಾನದಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಸಿಎಂ ಆಗಮಿಸುತ್ತಿದ್ದಂತೆಯೇ ಎಲ್ಲೆಡೆಯೂ ಜೈಕಾರ್ ಮೊಳಗಿರುವುದು ವಿಶೇಷವಾಗಿದೆ.
Read More »
BigTv News
December 13, 2025
Breaking News, Crime
ಬಿ.ಆರ್.ಟಿ. ಹುಲಿ ಸಂರಕ್ಷಿತ ಪ್ರದೇಶ ಯಳಂದೂರು ವನ್ಯಜೀವಿ ಉಪವಿಭಾಗ ವ್ಯಾಪ್ತಿಯ ಕೊಳ್ಳೇಗಾಲ ವನ್ಯಜೀವಿ ವಲಯ ಅಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ಆನೆ ದಂತ ಮಾರಾಟ ಮಾಡಲು ಯತ್ನಿಸಿದ್ದ ಐವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಘಟನೆ ನಡೆದಿದೆ.ಮೂಡುಬಿದಿರೆಯಲ್ಲಿ ಪತ್ತೆ ಹಚ್ಚಿ ಕೊಳ್ಳೇಗಾಲಕ್ಕೆ ಕರೆತಂದು ವಿಚಾರಣೆ ನಡೆಸಲಾಗಿದ್ದು, ಇವರಿಬ್ಬರೂ ಪ್ರಮುಖ ಆರೋಪಿಗಳೆಂದು ಇವರಿಬ್ಬರನ್ನು ಕೂಡ ಶುಕ್ರವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
Read More »
BigTv News
December 13, 2025
Breaking News, Crime
ನೆಲಮಂಗಲ ಗ್ರಾಮಾಂತರ ಠಾಣೆಯ ಹೆಡ್ ಕಾನ್ಸ್ಟೇಬಲ್ ಗಿರಿಜೇಶ್ ವಿರುದ್ಧ ಡಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಸುಮಾರು 25 ಕೋಟಿ ರೂ. ಮೌಲ್ಯದ ಭೂಮಿಯನ್ನು ಅಕ್ರಮವಾಗಿ ಲಪಟಾಯಿಸಿದ ಆರೋಪ ಗಿರಿಜೇಶ್ ಮತ್ತು ಆತನ ಸಹಚರರ ಮೇಲಿದೆ. ಗಿರಿಜೇಶ್ ಜೊತೆಗೆ ಮನೋಜ್, ರೋಹಿಣಿ ಸೇರಿದಂತೆ ಇನ್ನೂ ಹಲವರ ವಿರುದ್ಧ ಭೂಗಳ್ಳತನ ಪ್ರಕರಣ ದಾಖಲಿಸಲಾಗಿದೆ.ಹಿಂದೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಗಿರಿಜೇಶ್‌ನನ್ನು ಅಮಾನತು ಮಾಡಲಾಗಿತ್ತು. ಮನೆಯಲ್ಲಿದ್ದರೂ ಬುದ್ಧಿ ಕಲಿಯದ ಈ ಆರೋಪಿ, ಭೂ …
Read More »