BigTv News
June 5, 2025
Breaking News, Crime
ಮಾದಕ ವಸ್ತು ಮಾರಾಟಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಕುಂದಾಪುರ ಪೊಲೀಸರು ಜೂ.4ರಂದು ಕೋಡಿ ಚಕ್ರೇಶ್ವರಿ ದೇವಸ್ಥಾನದ ಸಮೀಪ ಬಂಧಿಸಿದ್ದಾರೆ.ಇವರಿಂದ 2,49,440 ರೂ. ಮೌಲ್ಯದ ಒಟ್ಟು 124.72 ಗ್ರಾಂ ಎಂಡಿಎಂಎ, 9 ಇನ್ಸುಲಿನ್ ಸಿರಿಂಜ್, 2 ವೇಯಿಂಗ್ ಮೇಶಿನ್, ಚೂರಿ, 4540 ರೂ., 3 ಮೊಬೈಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »
BigTv News
June 5, 2025
Breaking News, Crime
ಬಾಲಕಿಯರಿಗೆ ವಿವಾಹ ನಡೆಯುತ್ತಿರುವುದಾಗಿ ಮಕ್ಕಳ ಸಹಾಯವಾಣಿಗೆ ಕರೆ ಬಂದಿದೆ.ಇದನ್ನು ಆಧರಿಸಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಮದುವೆ ನಡೆಯುತ್ತಿರುವ ಸೋಮಲಾಪುರಕ್ಕೆ ತೆರಳಿದ್ದರು. ಆದರೆ, ಅಧಿಕಾರಿಗಳು ಸ್ಥಳಕ್ಕೆ ಹೋಗುವುದಕ್ಕೂ ಮೊದಲೇ, ಇಬ್ಬರೂ ಬಾಲಕಿಯರ ವಿವಾಹ ನಡೆದಿತ್ತು ಎಂದು FIR ಉಲ್ಲೇಖಿಸಲಾಗಿದೆ. ಘಟನೆ ಸಂಬಂಧ, ಬಿ. ಮಂಜುಳಾ, ಯಲ್ಲಪ್ಪ, ರೇಣುಕಮ್ಮ, ವೀರಾಪುರ ಸಿದ್ಧಮ್ಮ, ವಿ. ಶಿವಾನಂದ, ಚಿದಾನಂದ ಎಂಬುವವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.
Read More »
BigTv News
June 5, 2025
Breaking News, Crime
ಅಡೂರು ಸಂಜೆಕಡವಿನ ಮುಹಮ್ಮದ್ ರಾಫಿ ಅವರ ಮನೆಯ ಸಮೀಪದ ಗೋದಾಮಿನಲ್ಲಿ ಇರಿಸಿದ್ದ ನಾಲ್ಕು ಅಡುಗೆ ಅನಿಲ ಸಿಲಿಂಡರ್‌ಗಳನ್ನು ಕಳವು ಮಾಡಲಾಗಿದೆ. ಆದೂರು ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
Read More »
BigTv News
June 5, 2025
Breaking News, Crime
ರಶೀದ್ ಅವರಿಗೆ ಹಲ್ಲೆಗೈದು ಬೆದರಿಕೆಯೊಡ್ಡಿ ಹಣವನ್ನು ತಮ್ಮ ಖಾತೆಗೆ ಬದಲಾಯಿಸಿಕೊಂಡ ಬಳಿಕ ಪೆರ್ಮುದೆ ಪೇಟೆಯಲ್ಲಿ ಇಳಿಸಿ ಪರಾರಿಯಾಗಿದ್ದರು. ಮುಖ್ಯ ಆರೋಪಿಯಾದ ಪುತ್ತಿಗೆ ಚಳ್ಳಂಗಯದ ಸಯ್ಯಿದ್ (31) ನನ್ನು ಕೆಲವು ದಿನಗಳ ಹಿಂದೆ ಬಂಧಿಸಲಾಗಿತ್ತು.ಹಾಡಹಗಲೇ ಕುಂಬಳೆ ಪೇಟೆಯಿಂದ ಕಾರಿನಲ್ಲಿ ಅಪಹರಿಸಿ 18,46,127 ರೂ. ಲಪಟಾಯಿಸಿದ ಪ್ರಕರಣದಲ್ಲಿ ಇನ್ನಿಬ್ಬರನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ.
Read More »
BigTv News
June 5, 2025
Breaking News, Crime
ಕ್ಷುಲ್ಲಕ ಕಾರಣಕ್ಕೆ ಬಸ್ ನಿರ್ವಾಹಕನಿಗೆ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಘಟನೆಗೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಗಣೇಶ್ ಅವರ ಎದೆಗೆ ಕಾಲಿನಿಂದ ತುಳಿದು, ಅವರ ಕೈಯಲ್ಲಿದ್ದ ಬ್ಯಾಗ್‌ನಿಂದ ಸುಮಾರು 15,700 ರೂ. ಹಣವನ್ನು ಕಸಿದುಕೊಂಡು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ದೂರಲಾಗಿದೆ.ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆಗೆ ಇಳಿದ ಪೊಲೀಸರು ಆರೋಪಿ ಪ್ರದೀಪ್ ನನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
Read More »
BigTv News
June 5, 2025
Breaking News, Crime
ನಗರಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ರಮೇಶ್ ಗೆದ್ದಿದ್ದರು.ಇದ್ದಕ್ಕಿದಂತೆ ನಾಪತ್ತೆಯಾಗಿದ್ದ ಬಿಜೆಪಿ ಮುಖಂಡ ರಮೇಶ್ ರೈ ಶವವಾಗಿ ಪತ್ತೆಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.ಪುತ್ತೂರು ನಗರಸಭೆಯ ಬಿಜೆಪಿ ಸದಸ್ಯ ರಮೇಶ್ ರೈ ಪಾಣೆಮಂಗಳೂರಿನ ಸೇತುವೆ ಬಳಿ ನೇತ್ರಾವತಿ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.ಬಂಟ್ವಾಳ ಪೊಲೀಸ್ ಠಾಣೆ ವ್ಯಾಪ್ತಿಯಲಿ ಘಟನೆ ನಡೆದಿದ್ದು ಪೊಲೀಸರು ಪರಿಶೀಲಿಸುತ್ತಿದ್ದಾರೆ.
Read More »
BigTv News
June 5, 2025
Breaking News, Crime
ಬೆಂಗಳೂರಿನ ಪೀಣ್ಯಾದ ಅಂಜನಾ ನಗರದ ಚೇತನ ಪ್ಯಾಕೇಜಿಂಗ್ ಕಂಪನಿಯಲ್ಲಿ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದ ಯುವತಿಯೊಬ್ಬರು, ಕಂಪನಿಯ ಮಾಲೀಕ ಅವಿನಾಶ್ ಶಶಿಕಾಂತ್ ಶಾ ಅವರ ವಿರುದ್ಧ ಅಸಭ್ಯ ವರ್ತನೆ ಹಾಗೂ ಬಲವಂತವಾಗಿ ಅತ್ಯಾಚಾರ ಕೃತ್ಯಕ್ಕೆ ಯತ್ನಿಸಿದ ಆರೋಪದ ಮೇಲೆ ಅವಿನಾಶ್ ರವರು ಅವರ ನಿವಾಸದ ಬಳಿ ಬಂದು, ‘ನಿನ್ನನ್ನು ಆಫೀಸ್ ಗೆ ಡ್ರಾಪ್ ಮಾಡುತ್ತೇನೆ’ ಎಂಬ ನೆಪದಲ್ಲಿ ತಮ್ಮ ಕಾರಿನಲ್ಲಿ ಕರೆದುಕೊಂಡು ಹೋಗಿದ್ದಾರೆ. ಆದರೆ ಆಫೀಸ್‌ಗೆ ಹೋಗದೇ, ನಾಗಸಂದ್ರ ಬಳಿ …
Read More »
BigTv News
June 5, 2025
Breaking News, Crime
ಮೊಬೈಲ್ ಫೋನ್ ಹಿಡಿದುಕೊಂಡು ಕ್ರಿಕೆಟ್ ಬೆಟ್ಟಿಂಗ್ ವೆಬ್‌ಸೈಟ್ ಮೂಲಕ ಚಂದ್ರ ಜನ್ನಾಡಿ ಜೊತೆ ಸಂಘಟಿತವಾಗಿ ಅಕ್ರಮವಾಗಿ ಕ್ರಿಕೆಟ್ ಬೆಟ್ಟಿಂಗ್ ಆಟ ನಡೆಸುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಯಂತೆ ದಾಳಿ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳು ವಶಕ್ಕೆ ಪಡೆದು ಕ್ರಿಕೆಟ್ ಬೆಟ್ಟಿಂಗ್‌ಗೆ ಬಳಸಿದ 3 ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸ ಲಾಗಿದೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಶಿವರಾಜ್ (32) ಹಾಗೂ ಪ್ರದೀಪ(37) ಬಂಧಿತ …
Read More »
BigTv News
June 5, 2025
Breaking News, Crime
ಬಸ್ಸು ಎಂಆರ್‌ಎಸ್‌ನಿಂದ ಶಿವಮೊಗ್ಗ ಸಿಟಿ ಕಡೆ ಬರುತ್ತಿದ್ದ ವೇಳೆ ಹಿಂದಿನಿಂದ ಬಂದ ಕಾರು ಢಿಕ್ಕಿ ಹೊಡೆದಿದೆ ಈ ವೇಳೆ ಕಾರಿನಲ್ಲಿದ್ದ ಮೂವರು ಗಾಯಗೊಂಡಿದ್ದಾರೆ. ಘಟನೆಯಿಂದ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು ಬಸ್ಸಿನ ಹಿಂಭಾಗಕ್ಕೂ ಹಾನಿಯಾಗಿದೆ.ಘಟನೆಯಿಂದ ರಸ್ತೆ ಮಧ್ಯೆ ನಿಂತ್ತಿದ್ದ ಕಾರನ್ನು ಸ್ಥಳೀಯರು ಸೇರಿ ಬದಿಗೆ ಸರಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಪೂರ್ವ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Read More »
BigTv News
June 5, 2025
Breaking News, Crime
ಕೇರಳದಿಂದ ಕರ್ನಾಟಕದ ಕಡೆಗೆ ಕಂಟೈನರ್ ವಾಹನವೊಂದರಲ್ಲಿ ಅಕ್ರಮ ಜಾನುವಾರು ಸಾಗಾಟವನ್ನು ಪತ್ತೆ ಹಚ್ಚಿ 24 ಜಾನುವಾರನ್ನು ರಕ್ಷಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ.ಕಂಟೈನರ್ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಅ.ಕ್ರ 82/2025 ರಂತೆ ಪ್ರಕರಣ ದಾಖಲಾಗಿದ್ದು ತನಿಖೆ ನಡೆಸುತ್ತಿದ್ದಾರೆ.ರಕ್ಷಿಸಿರುವ 24 ಜಾನುವಾರುಗಳನ್ನು ಗೋಶಾಲೆಗೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Read More »