Breaking News

Crime

ಹಳೆ ದ್ವೇಷಕ್ಕೆ ವ್ಯಕ್ತಿಗೆ ಚಾಕು ಇರಿತ!!

ಮುಂಬೈನಲ್ಲಿ ಹಳೆ ದ್ವೇಷಕ್ಕೆ ಸಂಬಂಧಿಸಿದಂತೆ ಇಬ್ಬರು ವ್ಯಕ್ತಿಗಳು 45 ವರ್ಷದ ವ್ಯಕ್ತಿಯೊಬ್ಬನಿಗೆ ಚಾಕುವಿನಿಂದ ಹಲವು ಬಾರಿ ಇರಿದು ಗಂಭೀರವಾಗಿ ಗಾಯಗೊಳಿಸಿದ್ದಾರೆ. ಭಾನುವಾರ ರಾತ್ರಿ ಮುಂಬೈನ ಚೀತಾ ಕ್ಯಾಂಪ್ ಪ್ರದೇಶದಲ್ಲಿ ನಡೆದ ಈ ಘಟನೆ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.ತಕ್ಷಣವೇ ಅವರ ಕುಟುಂಬದವರು ಸಿಯಾನ್ ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿ ಅವರು ಪ್ರಾಣಾಪಾಯ ಸ್ಥಿತಿಯಲ್ಲಿದ್ದಾರೆ ಎಂದು ತಿಳಿದು ಬಂದಿದೆ. ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳ ಪತ್ತೆಗಾಗಿ ತನಿಖೆ ಮುಂದುವರಿಸಿದ್ದಾರೆ.

Read More »

ಕುಂದಾಪುರ: ಕೊಲೆಯತ್ನ, ಹಲ್ಲೆ, ಮೂವರು ಆರೋಪಿಗಳ ಬಂಧನ!

ಗಂಗೊಳ್ಳಿ ಮತ್ತು ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೊಲೆಯತ್ನ, ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಒಟ್ಟು ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸುಧೀರ್ ಕೆಲಸ ಮುಗಿಸಿಕೊಂಡು ಇಡೂರು ಕುಂಜ್ಞಾಡಿ ಗ್ರಾಮದ ಬಸ್ ನಿಲ್ದಾಣದಲ್ಲಿ ಬಸ್ಸಿಂದ ಇಳಿದು ನಡೆದುಕೊಂಡು ಹೋಗುತ್ತಿದ್ದು, ಈ ವೇಳೆ ರಸ್ತೆ ಬದಿಯಲ್ಲಿ ಬೈಕ್ ನಿಲ್ಲಿಸಿಕೊಂಡಿದ್ದ ಕಾರ್ತಿಕ್, ವಿಷ್ಣು ಹಾಗೂ ರಕ್ಷಿತ್ ಎಂಬವರು ಸುಧೀರ್ ಅವರಿಗೆ ಅವಾಚ್ಯ ಶಬ್ದಗಳಿಂದ ಬೈದು, ಕೆನ್ನೆಗೆ ಹೊಡೆದು, ಕುತ್ತಿಗೆಯನ್ನು ಒತ್ತಿ ಹಿಡಿದು ಕೊಲ್ಲಲು ಪ್ರಯತ್ನಿಸಿರು …

Read More »

ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿನ 31 ಆರೋಪಿಗಳ ಗಡಿಪಾರು..!!

ವಯಸ್ಸಿದೆ ಅಂತ ದಾದಾಗಿರಿ ಮಾಡಿದ್ರೆ ಗಡಿಪಾರು ಗ್ಯಾರಂಟಿ ಅಂದ ಮಾತು ಸತ್ಯ ಆಯ್ತು!! ರಿಲ್ಸ್ ಮಾಡ್ರಿ ಅಂತ ಪೋಜ್ ಕೊಡ್ತಿದ್ದ ದಾವೂದ ಮೈಸೂರಿಗೆ ಮೂರನೆ ಲಿಸ್ಟ್ ರೇಡಿ ಆಗ್ತಿದೆ… ಸೈಲೆಂಟ್ ಆಗಿ ಮನೆಗೆ ಮಗ ಆಗಿ ಇದ್ರೆ ಇರ್ತಾರೆ ಇಲ್ಲಂದ್ರ ಗಡಿಪಾರು…!!! ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಾಲ್ವರ ಮೇಲೆ ಗೂಂಡಾ ಕಾಯ್ದೆ ಹಾಗೂ 31 ಆರೋಪಿತರನ್ನು ಗಡಿಪಾರು ಮಾಡಲಾಗಿದೆ ಎಂದು ಪೊಲೀಸ್ …

Read More »

ಮದ್ಯ ಸೇವನೆಗಾಗಿ ಬಸ್ ಇಳಿದ ವ್ಯಕ್ತಿ ದುರ್ಗದ ಇಬ್ಬರು ಅಪರಿಚಿತರಿಂದ ಹತ್ಯೆ!!

ಜೂನ್ 1ರ ರಾತ್ರಿ ವ್ಯಕ್ತಿಯ ಬರ್ಬರ ಹತ್ಯೆ ನಡೆದುಹೋಗಿತ್ತು. ಮೈಮೇಲೆ ಬಟ್ಟೆಗಳು ಸಹ ಇಲ್ಲದ ಸ್ಥಿತಿಯಲ್ಲಿ ಶವ ಪತ್ತೆ ಆಗಿತ್ತು. ಮೃತ ದೇಹದ ಗುರುತು ಹಚ್ಚುವುದೇ ಪೊಲೀಸರಿಗೆ ಸವಾಲಾಗಿ ಪರಿಣಮಿಸಿತ್ತು. ಶವದ ಆಸುಪಾಸಿನಲ್ಲಿ ಪರಿಶೀಲನೆ ನಡೆಸಿದಾಗ ಮೃತ ವ್ಯಕ್ತಿಯ ಐಡಿ ಪತ್ತೆ ಆಗಿತ್ತು. ಬಳಿಕ ಮೃತ ವ್ಯಕ್ತಿ ಬೆಂಗಳೂರಿನಲ್ಲಿ ಜಿಯೋ ಕಂಪನಿ ಉದ್ಯೋಗಿ, ಬಾಗಲಕೋಟೆಯ ಇಳಕಲ್ ಮೂಲದ ಬಸವರಾಜ ಎಂಬುವುದು ಗೊತ್ತಾಗಿತ್ತು.ಬಸವರಾಜನಿಗೆ ಕುಡಿಯುವ ಚಟವಿತ್ತು ಎಂಬಂಶ ತಿಳಿದಾಗಲೇ ಪೊಲೀಸರಿಗೆ ಕೊಲೆ …

Read More »

ಹೊಸಪೇಟೆ:ನಕಲಿ ಪ್ರಮಾಣಪತ್ರ ಸೃಷ್ಟಿಸಿದವರ ವಿರುದ್ಧ ಕಠಿಣ ಕ್ರಮ!

ಬಳ್ಳಾರಿಯ ಶ್ರೀಕೃಷ್ಣದೇವರಾಯ ವಿವಿಯ ಘಟಿಕೋತ್ಸವ ಪ್ರಮಾಣ ಪತ್ರ ಮತ್ತು ಇತರೆ ದಾಖಲೆಯನ್ನು ಸೃಷ್ಟಿಸಿ ವಿವಿಗೆ ಕೋಟ್ಯಂತರ ರೂಪಾಯಿ ನಷ್ಟ ಸಂಭವಿಸುವಂತೆ ಮಾಡಿದವರ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ಎಸ್‍ಎಫ್‍ಐ ವಿಜಯನಗರ ಜಿಲ್ಲಾ ಸಮಿತಿಯಿಂದ ಮಂಗಳವಾರ ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ಅವರಿಗೆ ಮನವಿ ಪತ್ರ ಕಳುಹಿಸಿದರು.ಒಂದೊಂದು ಘಟಿಕೋತ್ಸವ ಪ್ರಮಾಣ ಪತ್ರಕ್ಕೆ ವಿದ್ಯಾರ್ಥಿಗಳಿಂದ ಕನಿಷ್ಠ ₹8 ಸಾವಿರ ಸಂಗ್ರಹಣೆ ಮಾಡಿದ್ದಾರೆ’ ಎಂದು ಆರೋಪಿಸಿದರು.

Read More »

ಕನಕಪುರ: ಡಿಕೆ ಸಹೋದರರ ನಿಂದನೆ, ಆರೋಪಿ ವಿರುದ್ಧ FIR!

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಂಸದ ಡಿ.ಕೆ.ಸುರೇಶ್‌ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬರ ಮೇಲೆ ಕೋಡಿಹಳ್ಳಿ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆಅವಾಚ್ಯ ಶಬ್ದಗಳಿಂದ ನಿಂದಿಸಿರುವ ಆರೋಪದ ಮೇಲೆ ತಾಲ್ಲೂಕಿನ ಕೋಡಿಹಳ್ಳಿಯ ಬೆಟ್ಟದ ಹಲಸೂರು ಗ್ರಾಮದ ರವೀಂದ್ರ (44) ಅವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

Read More »

ಉಡುಪಿ: ಮಟ್ಕಾ ದಂಧೆ ವಿರುದ್ಧ ಪೊಲೀಸರ ಕಾರ್ಯಾಚರಣೆ, 12 ಮಂದಿಯ‌ ಬಂಧನ!

ಉಡುಪಿ ಜಿಲ್ಲೆಯಲ್ಲಿ ಮಟ್ಕಾ ದಂಧೆ ವಿರುದ್ಧ ಪೊಲೀಸರ ಬೇಟೆ ಮುಂದುವರಿದಿದ್ದು, ಇಂದು ವಿವಿಧ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಒಟ್ಟು 12 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕ‌ರ್ ಅಧಿಕಾರ ಸ್ವೀಕರಿಸಿದ ಕೆಲವೇ ದಿನಗಳಲ್ಲಿ ಜಿಲ್ಲೆಯಲ್ಲಿನ ಮಟ್ಕಾ ದಂಧೆ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.

Read More »

ವ್ಯಕ್ತಿ ಕೊಲೆ ಮಾಡಿ ಸುಟ್ಟು ಹಾಕಿದ ಅರೆಬೆಂದ ದೇಹ ಪತ್ತೆ!!

ವ್ಯಕ್ತಿಯನ್ನು ಕೊಲೆ ಮಾಡಿ ಸುಟ್ಟು ಹಾಕಿರುವ ಅರೆಬೆಂದ ದೇಹ ಪತ್ತೆಯಾಗಿರುವ ಘಟನೆ ಸಮೀಪದ ಹಾಡ್ಲಿ ಗ್ರಾಮದ ಬಳಿ ಜರುಗಿದೆ.ಗ್ರಾಮದ ಸುಶೀಲಮ್ಮ ಕೋಂ ಲೇಟ್ ಸಿದ್ದೇಗೌಡರ ನೀಲಿಗಿರಿ ಜಮೀನಿನ ಆಜು-ಬಾಜಿನಲ್ಲಿ ಕುರಿ ಮೇಯಿಸುತ್ತಿದ್ದವರಿಗೆ ಸುಟ್ಟು ಹಾಕಿರುವ ಅರ್ಧ ಬೆಂದ ಮೃತದೇಹ ಇರುವುದನ್ನು ನೋಡಿ ತಕ್ಷಣ ಹಲಗೂರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.ಘಟನಾ ಸ್ಥಳಕ್ಕೆ ಸರ್ಕಲ್ ಇನ್ಸ್ ಪೆಕ್ಟರ್ ಶ್ರೀಧರ್ ಮತ್ತು ಸಬ್ ಇನ್ಸ್ ಪೆಕ್ಟರ್ ಲೋಕೇಶ್ ಮತ್ತು ಸಿಬ್ಬಂದಿ ಭೇಟಿ ನೀಡಿ …

Read More »

ಸ್ಕೂಟರ್‌ನಲ್ಲಿ ಒಣ ಗಾಂಜಾ ಸಾಗಟ: ಮಾಲು ಸಮೇತ ಸಿಕ್ಕಿಬಿದ್ದ ಆರೋಪಿ!!

ಸ್ಕೂಟರ್‌ನಲ್ಲಿ ಅಕ್ರಮವಾಗಿ ಒಣ ಗಾಂಜಾ ಸಾಗಿಸುತ್ತಿದ್ದ ವ್ಯಕ್ತಿಯನ್ನು ಅಬಕಾರಿ ಪೊಲೀಸರು ಮಾಲು ಸಮೇತ ಸೋಮವಾರ ರಾತ್ರಿ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.ಪಟ್ಟಣದ ವಿ.ಸಿ.ಕಾಲನಿ ನಿವಾಸಿ ರಂಗಸ್ವಾಮಿ ಅವರ ಪುತ್ರ ಆರ್.ಪ್ರಕಾಶ್ (29) ಬಂಧಿತ ಆರೋಪಿ.

Read More »

80 ವರ್ಷದ ವೃದ್ಧೆ ಮೇಲೆ ಅತ್ಯಾಚಾರವೆಸಗಿ ಕೊಲೆ!!

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನಲ್ಲಿ ದುರುಳರು ಸೋಮವಾರ ಸಂಜೆ ಬಸ್ ಗಾಗಿ ಕಾದು ಕುಳಿತಿದ್ದ 80 ವರ್ಷದ ವೃದ್ಧೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿ, ಬಳಿಕ 15,೦೦೦ ರೂಪಾಯಿ ಹಣ ದೋಚಿ ಪರಾರಿಯಾಗಿದ್ದಾರೆ.ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಶ್ರೀನಿವಾಸಪುರದ ಹೆಚ್.ಜಿ.ಹೊಸೂರು ಗ್ರಾಮದ ಲಕ್ಷ್ಮೀದೆವಮ್ಮ ಕೊಲೆಯಾದ ಮಹಿಳೆ.

Read More »