BigTv News
May 22, 2025
Breaking News, Crime
ಪಾದಚಾರಿಗೆ ಪಿಕ್‌ಆಪ್ ಢಿಕ್ಕಿ ಹೊಡೆದ ಪರಿಣಾಮ ಅವರು ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಅಬ್ಬಕ್ಕ ಸರ್ಕಲ್ ಬಳಿ ಬುಧವಾರ ರಾತ್ರಿ ನಡೆದಿದೆ.ಗಂಭೀರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆ ವೇಳೆಗೆ ಅವರು ಮೃತಪಟ್ಟಿದ್ದಾರೆ.ಈ ಬಗ್ಗೆ ಮಂಗಳೂರು ಗ್ರಾಮಾಂತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಘಟನಾ ಸ್ಥಳಕ್ಕೆ ಪೊಲೀಸ್ ಸಂಚಾರಿ ವಿಭಾಗದ ಡಿಸಿಪಿ ರವಿಶಂಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Read More »
BigTv News
May 22, 2025
Breaking News, Crime
ಆನ್‌ಲೈನ್ ಲೈಂಗಿಕ ದಂಧೆಯನ್ನು ಭೇದಿಸಿರುವ ಅಂಬೋಲಿ ಪೊಲೀಸರು, ಈ ಅಕ್ರಮ ವ್ಯವಹಾರದಲ್ಲಿ ತೊಡಗಿದ್ದ 28 ವರ್ಷದ ಏಜೆಂಟ್ ಒಬ್ಬನನ್ನು ಬಂಧಿಸಿದ್ದಾರೆ. ಈ ಕಾರ್ಯಾಚರಣೆಯ ಸಂದರ್ಭದಲ್ಲಿ ಒಬ್ಬ ಮಹಿಳೆಯನ್ನು ರಕ್ಷಿಸಲಾಗಿದ್ದು, ವೈದ್ಯಕೀಯ ಪರೀಕ್ಷೆಯ ನಂತರ ಅವರನ್ನು ಕಂಡಿವಲಿಯ ಖಾಸಗಿ ರಕ್ಷಣಾ ಕೇಂದ್ರಕ್ಕೆ ಕಳುಹಿಸಲಾಗಿದೆ.ಈ ಕಾರ್ಯಾಚರಣೆಯಲ್ಲಿ, 30 ವರ್ಷದ ಮಹಿಳೆಯೊಬ್ಬರನ್ನು ರಕ್ಷಿಸಲಾಯಿತು. ವಿಚಾರಣೆಯ ವೇಳೆ, ಸರ್ಫರಾಜ್ ತನ್ನನ್ನು ವೇಶ್ಯಾವಾಟಿಕೆಗಾಗಿ ಹೋಟೆಲ್‌ಗೆ ಕರೆತಂದಿದ್ದಾಗಿ ಅವರು ಬಹಿರಂಗಪಡಿಸಿದರು.ಘಟನೆಯ ನಂತರ, ಅಂಬೋಲಿ ಪೊಲೀಸರು ಸರ್ಫರಾಜ್ ವಿರುದ್ಧ ಸಂಬಂಧಿತ …
Read More »
BigTv News
May 22, 2025
Breaking News, Crime
ಅಂಬೇಡ್ಕರ್ ವೃತ್ತದ ಮುಂದಿರುವ ವಕ್ಫ್ ಮಂಡಳಿಗೆ ಸಂಬಂಧಿಸಿದ ಹಾಶ್ಮಿಯ ಕಾಂಪೌಂಡ್ ಜಮೀನು ಅತಿಕ್ರಮಣದ ಬಗ್ಗೆ ಕಲಬುರಗಿಯ ನ್ಯಾಯ ಮಂಡಳಿಯಲ್ಲಿ ವಾದ-ವಿವಾದ ನಡೆದು ಕೊನೆಗೆ ನ್ಯಾಯಾಲಯವು ಜಿಲ್ಲಾ ವಕ್ಫ್ ಮಂಡಳಿ ಪರವಾಗಿ ತೀರ್ಪು ನೀಡಿದೆ.ಅತಿಕ್ರಮಣ ತೆರವಿನ ಬಗ್ಗೆ ಮಾಹಿತಿ ತಿಳಿದ ಸ್ಥಳೀಯ ನಿವಾಸಿಗಳು ಕುಟುಂಬ ಸಮೇತ ಹಾಶ್ಮಿಯ ಕಾಂಪೌಂಡ್ ಮುಖ್ಯದ್ವಾರದ ಬಳಿ ಪ್ರತಿಭಟನಾ ಧರಣಿ ಆರಂಭಿಸಿ ತೆರವಿಗೆ ವಿರೋಧ ವ್ಯಕ್ತಪಡಿಸಿ ಘೋಷಣೆ ಕೂಗಾಲಾರಂಭಿಸಿದರು.ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷರು ಮತ್ತು ಅಧಿಕಾರಿಗಳು …
Read More »
BigTv News
May 22, 2025
Breaking News, Crime
ರಾಜಧಾನಿಯಲ್ಲಿ ಭಯೋತ್ಪಾದಕ ದಾಳಿ ನಡೆಸುವ ಐಎಸ್‌ಐ ಸಂಚನ್ನು ಭಾರತದ ಗುಪ್ತಚರ ಏಜೆನ್ಸಿಗಳು ವಿಫಲಗೊಳಿಸಿವೆ. ಮೂರು ತಿಂಗಳ ಯೋಜಿತ ಕಾರ್ಯಾಚರಣೆಯಲ್ಲಿ ಐಎಸ್‌ಐ ಯತ್ನವನ್ನು ವಿಫಲಗೊಳಿಸಿ, ದಾಳಿ ನಡೆಸಲು ತೀವ್ರ ತರಬೇತಿ ಪಡೆದ ಇಬ್ಬರನ್ನು ಬಂಧಿಸಲಾಗಿದೆ.ದಾಳಿ ನಡೆಸುವ ಹೊಣೆ ಹೊತ್ತಿದ್ದ ಪಾಕಿಸ್ತಾನದ ಅನ್ಸಾರುಲ್ ಮಿಯಾ ಅನ್ಸಾರಿ ಕೂಡಾ ಬಂಧಿತರಲ್ಲಿ ಸೇರಿದ್ದಾನೆ. ಈತ ಭಾರತ ಸಶಸ್ತ್ರ ಪಡೆಗಳ ಬಗ್ಗೆ ಸೂಕ್ಷ್ಮ ಮಾಹಿತಿಗಳನ್ನು ಕಲೆ ಹಾಕುತ್ತಿದ್ದ ಎನ್ನಲಾಗಿದೆ.ರಾಂಚಿ ನಿವಾಸಿ ಅಖ್ಲಾಕ್ ಆಝಮ್ ಎಂಬಾತ ಕೂಡಾ ಇದರಲ್ಲಿ …
Read More »
BigTv News
May 22, 2025
Breaking News, Crime
ಕಿಲಾಡಿ ಸ್ಟಾರ್ ಹಾಗೂ ನಟ ಮಡೆನೂರು ಮನು ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ನಟನ ವಿರುದ್ಧ ಸಹ ಕಲಾವಿದೆ ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ.ಅತ್ಯಾಚಾರ ಪ್ರಕರಣ ದಾಖಲಾಗುತ್ತಿದ್ದಂತೆ ನಟ ತಲೆಮರೆಸಿಕೊಂಡಿದ್ದಾನೆ. ಆರೋಪಿ ಮನುಗಾಗಿ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಇದೀಗ ಹುಡುಕಾಟ ನಡೆಸುತ್ತಿದ್ದಾರೆ.ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.ಕುಲದಲ್ಲಿ ಕೀಳ್ಯಾವೋದು ಸಿನಿಮಾ’ ನಾಳೆ ರಿಲೀಸ್ ಆಗಬೇಕಿದ್ದು, ಇದರ ನಡುವೆ ನಟ ಮಡೆನೂರು ಮನು ಮೇಲೆ ಅತ್ಯಾಚಾರದ ಆರೋಪ ಕೇಳಿ ಬಂದಿದೆ.
Read More »
BigTv News
May 22, 2025
Breaking News, Crime
ಮದ್ಯವ್ಯಸನಿಯಾಗಿದ್ದ ಮಣಿಕಂದನ್ ಸದಾ ಕುಡಿದ ಅಮಲಿನಲ್ಲಿ ಇರುತ್ತಿದ್ದ. ನಿನ್ನೆ ರಾತ್ರಿ ಕೂಡ ಕಂಠಪೂರ್ತಿ ಮದ್ಯ ಸೇವಿಸಿ ಮನೆಗೆ ಬಂದಿದ್ದಾನೆ. ಕುಡಿದ ಮತ್ತಿನಲ್ಲಿದ್ದ ಮಣಿಕಂದನ್ ತಾಯಿ ಓಮನಾ ಜೊತೆ ಜಳಗ ತೆಗೆದಿದ್ದು, ಆಕೆಯನ್ನು ಮನಬಂದಂತೆ ಒದ್ದು, ತುಳಿದು ಹಾಕಿದ್ದಾನೆ.ಮಗನಿಂದ ತುಳಿತಕ್ಕೊಳಗಾಗಿ ಸಾವು ಬದುಕಿನ ಮಧ್ಯೆ ಒದ್ದಾಡುತ್ತಿದ್ದ ಓಮನಾಳನ್ನು ಸ್ಥಳೀಯರು ಕೂಡಲೇ ತಿರುವನಂತಪುರಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ದುರಾದೃಷ್ಟವಶಾತ್ ರಾತ್ರಿ 11 ಗಂಟೆ ಸುಮಾರಿಗೆ ಚಿಕಿತ್ಸೆ ಫಲಿಸದೇ ಓಮನಾ …
Read More »
BigTv News
May 22, 2025
Breaking News, Crime
ಶಾಲಾ ಪ್ರಾಂಶುಪಾಲೆ ತನ್ನ ಪತಿಯನ್ನು ಕೊಲೆ ಮಾಡಿದ್ದು, ಈ ಕ್ರೂರ ಕೃತ್ಯದಲ್ಲಿ ತನ್ನ ಮೂವರು ವಿದ್ಯಾರ್ಥಿಗಳನ್ನು ಶಾಮೀಲುಗೊಳಿಸಿರುವುದು ಆಘಾತ ಮೂಡಿಸಿದೆ.ಯವತ್ಮಾಲ್ ನಗರದ ಬಳಿಯ ಚೌಸಾಲಾ ಅರಣ್ಯ ಪ್ರದೇಶದಲ್ಲಿ ಸುಟ್ಟು ಕರಕಲಾದ ದೇಹವೊಂದು ಪತ್ತೆಯಾದಾಗ ಈ ಪ್ರಕರಣ ಬೆಳಕಿಗೆ ಬಂದಿತು. ತನಿಖೆಯ ನಂತರ, ಪೊಲೀಸರು ಆ ದೇಹವನ್ನು ಸನ್‌ರೈಸ್ ಇಂಗ್ಲಿಷ್ ಮೀಡಿಯಂ ಶಾಲೆಯ ಶಿಕ್ಷಕ ಶಾಂತನು ದೇಶಮುಖ್ ಎಂದು ಗುರುತಿಸಿದ್ದಾರೆ. ಈ ಕೊಲೆಯ ಹಿಂದಿನ ಆಘಾತಕಾರಿ ತಿರುವು ಎಂದರೆ, ಕೊಲೆಯನ್ನು ಹೊರಗಿನವರು …
Read More »
BigTv News
May 22, 2025
Breaking News, Crime
ಮಾರುಕಟ್ಟೆಯಲ್ಲಿ ಬಂಗಾರದ ಮೇಲೆ ಹೂಡಿಕೆ ಮಾಡಿದರೆ ಹೆಚ್ಚು ಲಾಭಗಳಿಸಬಹುದು ಎಂಬ ಆಸೆ ತೋರಿಸಿ ಫೇಸ್‌ಬುಕ್‌ನ ಅಪರಿಚಿತ ವ್ಯಕ್ತಿಯೊಬ್ಬ ನಗರದ ವೈದ್ಯರೊಬ್ಬರಿಗೆ ಸುಮಾರು 2.40 ಕೋಟಿ ರೂ. ವಂಚನೆ ಮಾಡಿರುವುದಾಗಿ ಬೆಳಕಿಗೆ ಬಂದಿದೆ. ವಂಚಕನು ವಾಟ್ಸ್‌ಆಪ್‌ನಲ್ಲಿ ಕಳುಹಿಸಿದ ಲಿಂಕ್ ಮೂಲಕ ಸಿಎಂಸಿ ಮಾರ್ಕೆಟ್ ವೆಬ್‌ಸೈಟ್‌ನಲ್ಲಿ ಕಳೆದ ಫೆ.18ರಿಂದ ಮೇ 15ರವರೆಗೆ ಒಟ್ಟು 2,40,92,150 ರೂ. ವೈದ್ಯರು ಹೂಡಿಕೆ ಮಾಡಿದ್ದಾರೆ. ನಾನಾ ಬ್ಯಾಂಕ್ ಖಾತೆಗಳಿಗೆ ಒಟ್ಟು 17 ಬಾರಿ ಹಣ ವರ್ಗಾವಣೆ ಮಾಡಿರುವ …
Read More »
BigTv News
May 22, 2025
Breaking News, Crime
ತಡರಾತ್ರಿ ನಾಲ್ವರು ಸ್ನೇಹಿತರೊಂದಿಗೆ ಗೌತಮ್ ಕಾರಿನಲ್ಲಿ ತೆರಳಿದ್ದ. ವಾಹನವನ್ನು ದಾರಿ ಮಧ್ಯೆ ನಿಲ್ಲಿಸಿ ಉಳಿದ ಸ್ನೇಹಿತರನ್ನು ಅಲ್ಲಿಯೇ ಬಿಟ್ಟು ಬಂದೂಕು ಹಿಡಿದುಕೊಂಡು ಸಮೀಪದ ಗುಡ್ಡ ಏರಿದ್ದಾನೆ.ಬಂದೂಕಿನ ಟ್ರಿಗರ್ ಎಳೆದು ಗುಡ್ಡ ಹತ್ತುವಾಗ ಕಾಲು ಜಾರಿ ಕೆಳಗೆ ಬಿದ್ದ ವೇಳೆ ಬಂದೂಕಿನಿಂದ ಗುಂಡು ಸಿಡಿದು ಕುತ್ತಿಗೆ ಮೂಲಕ ಮುಖವನ್ನು ಸೀಳಿಕೊಂಡು ಹೋಗಿ ಮೃತಪಟ್ಟಿದ್ದಾನೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೃತ ಯುವಕನನ್ನು ಬಸವಾನಿ ಗ್ರಾಮ ಪಂಚಾಯಿತಿ …
Read More »
BigTv News
May 22, 2025
Breaking News, Crime
ಬೂದಗುಂಪ ಗ್ರಾಮದಲ್ಲಿ ಶಿವಪ್ಪ ಎಂಬಾತ ಕೊಡಲಿಯಿಂದ ಕೊಚ್ಚಿ ಪತ್ನಿ ಗಂಗಮ್ಮ ದೊಣ್ಣೆ (38) ಎಂಬುವರನ್ನು ಹತ್ಯೆ ಮಾಡಿ ಪರಾರಿಯಾಗಿದ್ದಾರೆ.ಶಿವಪ್ಪ ಪ್ರತಿನಿತ್ಯ ಪತಿ ಕುಡಿದು ಬಂದು ಗಲಾಟೆ ಮಾಡುತ್ತಿದ್ದ ಇದರಿಂದ ನಿತ್ಯ ಗಂಡ ಹೆಂಡತಿ ನಡುವೆ ಜಗಳ ನಡೆಯುತ್ತಿತ್ತು.ನಿನ್ನೆ ಜಗಳ ತಾರಕಕ್ಕೇರಿದ್ದು, ರೊಚ್ಚಿಗೆದ್ದ ಶಿವಪ್ಪ ಪತ್ನಿ ಮಲಗಿದ್ದಾಗ ಕೊಡಲಿಯಿಂದ ಕೊಚ್ಚಿ ಕೊಂದು ಪರಾರಿ ಆಗಿದ್ದಾನೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ
Read More »