BigTv News
May 22, 2025
Breaking News, Crime
ಇಂಧನ ತುಂಬಿಸಿ ಪೆಟ್ರೋಲ್ ಬಂಕ್ ಗೆ ಹಣ ನೀಡದೆ ಪರಾರಿಯಾದ ಕಾರೊಂದು ಅಪಘಾತಕ್ಕೀಡಾಗಿ ಅದರಲ್ಲಿದ್ದ ಯುವಕರಿಬ್ಬರು ಪೊಲೀಸರ ಅತಿಥಿಗಳಾದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಸಾಲೆತ್ತೂರು ಎಂಬಲ್ಲಿ ಸಂಭವಿಸಿರುವುದು ವರದಿಯಾಗಿದೆ.ದ್ವಿಚಕ್ರ ವಾಹನವೊಂದಕ್ಕೆ ಢಿಕ್ಕಿ ಹೊಡೆದಿದೆ. ಇದರಿಂದ ದ್ವಿಚಕ್ರ ವಾಹನ ಸವಾರ ಕಟ್ಟತ್ತಿಲ ನಿವಾಸಿ ಅಬೂಬಕರ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ.ಸ್ಥಳಕ್ಕೆ 112 ಪೊಲೀಸರು ಮತ್ತು ವಿಟ್ಲ ಪೊಲೀಸರು ಆಗಮಿಸಿ ಕಾರಿನಲ್ಲಿದ್ದ ಯುವಕರಿಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಮದ್ಯದ ನಶೆಯಲ್ಲಿ ತೇಲಾಡುತ್ತಿದ್ದ ಯುವಕರಿಬ್ಬರೂ …
Read More »
BigTv News
May 22, 2025
Breaking News, Crime
ಚಲಿಸುತ್ತಿದ್ದ ರೈಲಿನ ಮುಂದೆ ಜಿಗಿದ 28 ವರ್ಷದ ಯುವಕ ಸಾವನ್ನಪ್ಪಿದ್ದು ಆತನ ಪ್ರೇಯಸಿ 24 ವರ್ಷದ ಯುವತಿ ತನ್ನ ಎರಡೂ ಕಾಲುಗಳನ್ನು ಕಳೆದುಕೊಂಡಿದ್ದಾಳೆ.ಸ್ಥಳೀಯ ಪೊಲೀಸ್ ಠಾಣಾಧಿಕಾರಿ ರಮೇಶ್ ಕುಮಾರ್ ಮಾಹಿತಿ ನೀಡಿ, “ಸೊನ್ಹಾರ್ ಮಹುವಾ ಪಟ್ಟಿಯ ನಿವಾಸಿಗಳಾದ ರೋಹಿತ್ ಕುಮಾರ್ ಯಾದವ್ (28) ಮತ್ತು ಕಾಜಲ್ ಗೌತಮ್ (24) ಎಂಬುವವರು ಮಂಗಳವಾರ ರಾತ್ರಿ 10 ಗಂಟೆ ಸುಮಾರಿಗೆ ಭದೋಹಿ-ವಾರಾಣಸಿ ಗಡಿಯ ಕಾಂಢಿಯಾ ರೈಲ್ವೆ ಕ್ರಾಸಿಂಗ್ ಬಳಿ ಚಲಿಸುತ್ತಿದ್ದ ರೈಲಿನ ಮುಂದೆ …
Read More »
BigTv News
May 22, 2025
Breaking News, Crime
ಪತಿಯೇ ಪತ್ನಿಯನ್ನು ಚಾಕುವಿನಿಂದ ಇರಿದು ಹತ್ಯೆಗೈದಿರುವ ಘಟನೆ ಹನೂರು ತಾಲೂಕಿನ ಒಡೆಯರ ಪಾಳ್ಯ ಸಮೀಪದ ಗುಳ್ಳದ ಬಯಲು ಗ್ರಾಮದಲ್ಲಿ ಮೇ 21ರ ಬುಧವಾರ ನಡೆದಿದೆ.ಬುಧವಾರ ಬೆಳಿಗ್ಗೆ 11ರ ವೇಳೆ ದಂಪತಿಗಳಿಬ್ಬರ ನಡುವೆ ಕೌಟುಂಬಿಕ ಕಲಹ ತಾರಕಕೇರಿದ್ದು, ಪತಿ ಚಾಕುವಿನಿಂದ ಇರಿದ ಪರಿಣಾಮ ಪತ್ನಿ ಮಾದೇವಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.ಈ ಸಂಬಂಧ ಹನೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಆರೋಪಿಯನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಪೊಲೀಸರ ತನಿಖೆಯಿಂದ …
Read More »
BigTv News
May 21, 2025
Breaking News, Crime
ಕಾಮುಕನೊಬ್ಬ ಮಾನಸಿಕ ಅಸ್ವಸ್ಥೆ ಮಹಿಳೆಯನ್ನು ಅತ್ಯಾಚಾರಕ್ಕೆ ಯತ್ನಿಸಿದ ಘಟನೆಗೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಬಂಧಿಸಿದ ಘಟನೆ ಬುಧವಾರ ನಡೆದಿದೆ.ಮಾನಸಿಕ ಅಸ್ವಸ್ಥೆಯನ್ನು ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಮುಂದಾಗಿದ್ದಾನೆ. ಟಂ ಟಂ ನಲ್ಲಿ ಹೋಗುತ್ತಿರುವ ಯುವಕರು ಇದನ್ನು ವಿಡಿಯೋ ತೆಗೆಯಲು ಮುಂದಾಗಿದ್ದಾಗ ಅಲ್ಲಿಂದ ಮೊಬೈಲ್‌ನಲ್ಲಿ ಮಾತನಾಡುತ್ತಾ ಅಲ್ಲಿಂದ ಕಾಲ್ಕಿತ್ತಿದ್ದಾನೆ. ಈ ವಿಡಿಯೋ ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡಿದ್ದರಿಂದ ಎಚ್ಚೇತ್ತ ಪೊಲೀಸರು ಆರೋಪಿಯನ್ನು ಪೊಲೀಸ್ ಠಾಣೆಗೆ ಕರೆತಂದು ವಿಚಾರಣೆ ಮಾಡಿದ್ದಾರೆ. ನಂತರ ಸಿಡಿಪಿಒ ವಿರುಪಾಕ್ಷಿ ಆರೋಪಿಯ …
Read More »
BigTv News
May 21, 2025
Breaking News, Crime
ಆಹಾರ ಇಲಾಖೆ ಅಧಿಕಾರಿಗಳು ನ್ಯಾಯಬೆಲೆ ಅಂಗಡಿ ಮುಂದೆ ಅಕ್ರಮವಾಗಿ ಅಕ್ಕಿ ಖರೀದಿ ಮಾಡುವವರ ಮೇಲೆ ದಾಳಿ ಮಾಡಿ ಪಡಿತರ ಅಕ್ಕಿ ವಶಪಡಿಸಿಕೊಂಡ ಘಟನೆ ಬುಧವಾರ ಬೆಳಿಗ್ಗೆ ನಗರದ ಪಿಡಬ್ಲ್ಯೂಡಿ ಕ್ಯಾಂಪ್‌ನಲ್ಲಿ ನಡೆದಿದೆ.ನಗರದ ಪಿಡಬ್ಲ್ಯೂಡಿ ಕ್ಯಾಂಪ್‌ನಲ್ಲಿ ಕೆ.ಗೋಪಾಲರಾವ್ ನ್ಯಾಯಬೆಲೆ ಅಂಗಡಿ ಸಂಖ್ಯೆ-134 ಮುಂದೆ ಅಕ್ರಮವಾಗಿ ಅಕ್ಕಿ ಖರೀದಿ ಮಾಡುವ ಕುರಿತು ಸಾರ್ವಜನಿಕರ ದೂರಿನ ಮೇರೆಗೆ ಬುಧವಾರ ಆಹಾರ ಇಲಾಖೆ ನಿರೀಕ್ಷಕ ಹನಮೇಶ ನಾಯಕ ದಿಢೀರನೇ ಭೇಟಿ ನೀಡಿ ಅಕ್ರಮವಾಗಿ ಖರೀದಿ ಮಾಡುತ್ತಿದ್ದವರಿಂದ …
Read More »
BigTv News
May 21, 2025
Breaking News, Crime
ಕಾರಿನ ಬಾಡಿಗೆ ಸಂಬಂಧ ಸಚಿನ ಕೋಡ್ಕಣಿ ಅವರಿಂದ 20 ಸಾವಿರ ರೂ. ಹಣ ಸ್ವೀಕರಿಸು ತ್ತಿದ್ದ ವೇಳೆ ಪ್ರಥಮ ದರ್ಜೆ ಲೆಕ್ಕಾಧಿಕಾರಿಯನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬುಧವಾರ ಬೆಳಿಗ್ಗೆ ಪಂಚಾಯತ ರಾಜ್ ಇಂಜಿನಿಯರಿಂಗ್ ವಿಭಾಗದ ಕಚೇರಿ ಮೇಲೆ ಲೋಕಾಯುಕ್ತ ದಾಳಿ ಸಂದರ್ಭ ಪ್ರಥಮ ದರ್ಜೆ ಲೆಕ್ಕಾಧಿಕಾರಿ ಸುರೇಶ ಬಿಳಗಿ ಅವರನ್ನು ವಶಕ್ಕೆ ಪಡೆಯಲಾಯಿತು.ಲೋಕಾಯುಕ್ತ ಇನ್ಸ್ಪೇಕ್ಟರ್ ವಿನಾಯಕ ಬಿಲ್ಲವ ನೇತೃತ್ವದಲ್ಲಿ ದಾಳಿ ನಡೆಸಲಾಯಿತು. ಕಾರಿನ ಬಾಡಿಗೆ ಸಂಬಂಧ ಹಣ ಸ್ವೀಕರಿಸುತ್ತಿದ್ದ …
Read More »
BigTv News
May 21, 2025
Breaking News, Crime
ಚಂದಾಪುರದ ರೈಲ್ವೆ ಸೇತುವೆ ಬಳಿ ಬುಧವಾರ ಅನಾಥವಾಗಿ ಬಿದ್ದಿದ್ದ ಸೂಟ್‌ಕೇಸ್‌ನಲ್ಲಿ ಸುಮಾರು 16 ವಯಸ್ಸಿನ ಬಾಲಕಿಯ ಶವ ಪತ್ತೆಯಾಗಿದೆ.ಬಾಲಕಿಯ ಕೈಕಾಲು ಮಡಚಿ ಸೂಟ್‌ಕೇಸ್‌ನಲ್ಲಿ ತುಂಬಲಾಗಿದ್ದು, ಕಿವಿ ಮತ್ತು ಮೂಗಿನಲ್ಲಿ ರಕ್ತಸ್ರಾವವಾಗಿರುವ ಕುರುಹುಗಳಿವೆ.ಬಾಲಕಿಯನ್ನು ಬೇರೆಡೆ ಕೊಲೆ ಮಾಡಿದ ನಂತರ ಶವವನ್ನು ಸೂಟ್‌ಕೇಸ್‌ನಲ್ಲಿಟ್ಟು ರೈಲಿನಿಂದ ಎಸೆದಿರಬಹುದು ಎಂದು ಸ್ಥಳಕ್ಕೆ ಭೇಟಿ ನೀಡಿದ್ದ ಬೈಯಪ್ಪನಹಳ್ಳಿ ರೈಲ್ವೆ ಪೊಲೀಸರು ಮತ್ತು ಸೂರ್ಯ ಸಿಟಿ ಪೊಲೀಸರು ಶಂಕಿಸಿದ್ದಾರೆ. ರಸ್ತೆಯಲ್ಲಿ ಅನಾಥವಾಗಿ ಬಿದ್ದಿದ್ದ ನೀಲಿ ಬಣ್ಣದ ಸೂಟ್‌ಕೇಸ್ ತೆರೆದುಕೊಂಡಿತ್ತು. …
Read More »
BigTv News
May 21, 2025
Breaking News, Crime
ರಾಜರಾಜೇಶ್ವರಿ ನಗರ ಕ್ಷೇತ್ರದ ಶಾಸಕ ಮುನಿರತ್ನ ವಿರುದ್ಧ ಸಾಕಷ್ಟು ಆರೋಪಗಳು ಕೇಳಿ ಬರುತ್ತಿದೆ. ಇದೀಗ 40 ವರ್ಷದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಅನ್ವಯ ಆರ್‌ಎಮ್‌ಸಿ ಯಾರ್ಡ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.ಅಪರಿಚಿತ ವ್ಯಕ್ತಿಯಿಂದ ಇಂಜೆಕ್ಷನ್ ತರಿಸಿ ಇಂಜೆಕ್ಟ್ ಮಾಡಿಸಿದ್ದರೆಂದು ದೂರಿನಲ್ಲಿ ದಾಖಲಾಗಿದೆ.ಅತ್ಯಾಚಾರಕ್ಕೂ ಮುನ್ನ ನೀಡಿದ ಇಂಜೆಕ್ಷನ್ನಿಂದ ಈಗ ನನಗೆ ಇಡಿಆರ್ ಎಂಬ ಕಾಯಿಲೆ ಬಂದಿದೆ. ಇದ್ರಿಂದ ಮನನೊಂದ ನಾನು ಆತ್ಮಹತ್ಯೆಗೆ ಯತ್ನಿಸಿದ್ದೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.ಈ …
Read More »
BigTv News
May 21, 2025
Breaking News, Crime
ಜ್ಯೋತಿ ಮೂಲತಃ ಭಾರತದವಳಾಗಿ, ಭಾರತದ ವಾತಾವರಣದಲ್ಲಿ ಬೆಳೆದು, ಭಾರತದ ಅನ್ನುವನ್ನು ತಿಂದು, ಪಾಪಿ ಪಾಕಿಸ್ತಾನದ ಜೊತೆ ಕೈ ಜೋಡಿಸಿದ್ದ ಮಹಿಳೆ. ಟ್ರಾವೆಲ್ ವಿತ್ ಜೋ ಎಂಬ ಯೂಟ್ಯೂಬ್ ಚಾನೆಲ್ ಹೆಸರಿನಲ್ಲಿ ಮಣ್ಣು ತಿನ್ನುವ ಕೆಲಸವನ್ನು ಮಾಡಿ ಸದ್ಯ ಪೊಲೀಸರ ಅತಿಥಿಯಾಗಿದ್ದಾಳೆ.ಐಎಸ್‌ಐ ಏಜೆಂಟ್ ಅಲಿ ಹಸನ್ ಜೊತೆಗಿನ ಜ್ಯೋತಿ ಮಲ್ಹೋತ್ರಾ ಮಾಡಿದ್ದ ವಾಟ್ಸಾಪ್ ಚಾಟ್‌ಗಳು ಪೊಲೀಸ್ ತನಿಖೆ ವೇಳೆ ಬಯಲಾಗಿದ್ದು, ಪಾಕಿಸ್ತಾನದಲ್ಲಿ ಮದುವೆಯಾಗಬೇಕೆನ್ನುವ ಕನಸನ್ನು ಜ್ಯೋತಿ ಕಂಡಿದ್ದರು ಎನ್ನುವುದು ಬಹಿರಂಗವಾಗಿದೆ.ಒಟ್ಟು ನಾಲ್ಕು …
Read More »
BigTv News
May 21, 2025
Breaking News, Crime
ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್ ತೂಗುದೀಪ ಹಾಗೂ ಇನ್ನಿತರ ಆರೋಪಿಗಳು ಜಾಮೀನಿನ ಮೇಲೆ ಹೊರಬಂದಿದ್ದಾರೆ. ಆದರೆ ದರ್ಶನ್ ಸೇರಿದಂತೆ ಆರೋಪಿಗಳಿಗೆ ನೀಡಿರುವ ಜಾಮೀನು ರದ್ದು ಮಾಡಬೇಕು ಎಂದು ಪೊಲೀಸರು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಕೈಗೆತ್ತಿಕೊಂಡಿದೆ.ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ದರ್ಶನ್ ಹಾಗೂ ಪ್ರಕರಣದ ಆರೋಪಿಗಳಿಗೆ ತಾತ್ಕಾಲಿಕ ರಿಲೀಫ್ ನೀಡಿದೆ.ಈ ಕೇಸ್ ಕುರಿತಂತೆ ಮೊದಲ ದೋಷಾರೋಪ ಪಟ್ಟಿಯಲ್ಲಿ 262 ಸಾಕ್ಷಿಗಳನ್ನು ಉಲ್ಲೇಖಿಸಲಾಗಿತ್ತು. ಈಗ 10 …
Read More »