BigTv News
May 19, 2025
Breaking News, Crime
ಬಿಡದಿಯಲ್ಲಿ ವಿಶೇಷಚೇತನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ ಕೇಳಿಬಂದ ಬೆನ್ನಲ್ಲೇ ಮಂಡ್ಯ ಜಿಲ್ಲೆಯಲ್ಲಿ ಬುದ್ಧಿಮಾಂದ್ಯ ಯುವತಿ ಮೇಲೆ ಅಪ್ರಾಪ್ತ ವಯಸ್ಸಿನ ಬಾಲಕನೊಬ್ಬ ಅತ್ಯಾಚಾರ ಎಸಗಿ, ಜಾತಿನಿಂದನೆ ಮಾಡಿರುವ ಆರೋಪ ಕೇಳಿಬಂದಿದೆ.ಯುವತಿ ಚೀರಾಟ ಕೇಳಿದ ಪಕ್ಕದ ಮನೆಯಲ್ಲಿದ್ದ ಯುವತಿಯ ಅಜ್ಜಿ ಬಂದು ನೋಡಿದಾಗ ಬಾಲಕನ ಕೃತ್ಯ ಬಯಲಾಗಿದೆ. ಈ ವೇಳೆ ದೌರ್ಜನ್ಯ ತಡೆಯಲು ಬಂದ ಅಜ್ಜಿ ಮೇಲೆ ಬಾಲಕ ಹಲ್ಲೆ ನಡೆಸಿದ್ದಲ್ಲದೇ ಜಾತಿನಿಂದನೆ ಮಾಡಿದ್ದಾನೆಂದು ಯುವತಿಯ ಪೋಷಕರು ಆರೋಪಿಸಿದ್ದಾರೆ.ಅಪ್ರಾಪ್ತ …
Read More »
BigTv News
May 19, 2025
Breaking News, Crime
ನೆಲಮಂಗಲ ಕಲ್ಯಾಣ ಮಂಟಪದಲ್ಲಿ ನಡೆದ ಮದುವೆ ಸಮಾರಂಭದ ವೇಳೆ ಕದ್ದಿದ್ದ ಚಿನ್ನಾಭರಣ ಪ್ರಕರಣದಲ್ಲಿ ದಾವಣಗೆರೆ ಮೂಲದ ಕಿರಣ್ ಅಲಿಯಾಸ್ ಚೌಲ್ಟ್ರಿ ಕಿರಣ್ (25) ಎಂಬಾತನನ್ನು ನೆಲಮಂಗಲ ಟೌನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.ಪೊಲೀಸರು ಮಂಟಪದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ, ಆರೋಪಿ ದಾವಣಗೆರೆಯ ಮನೆಗೆ ದಾಳಿ ನಡೆಸಿ ಬಂಧಿಸಿದ್ದಾರೆ. ಪ್ರಕರಣವನ್ನು ನಯನ ಅವರ ತಂದೆ ವೆಂಕಟೇಶ್ ಅವರು ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ದಾಖಲಿಸಿದ್ದರು.ತನಿಖೆ ಮುಂದುವರಿದಿದ್ದು, ಹೆಚ್ಚಿನ ಮಾಹಿತಿ ಹೊರಬರುವ ನಿರೀಕ್ಷೆಯಿದೆ. ಪೊಲೀಸರು …
Read More »
BigTv News
May 19, 2025
Breaking News, Crime
ಉತ್ತರ ಪ್ರದೇಶದ ಬರೇಲಿಯಿಂದ ಅಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಇಲ್ಲಿ ಕ್ರೂರ ಗಂಡನೊಬ್ಬ ತನ್ನ ಹೆಂಡತಿಯನ್ನು ಮನೆಯ ಟೆರೇಸ್‌ನಿಂದ ತಲೆಕೆಳಗಾಗಿ ನೇತುಹಾಕಿ ಐದು ನಿಮಿಷಗಳ ಕಾಲ ಹಾಗೆಯೇ ಬಿಟ್ಟಿದ್ದಾನೆ.ಮಹಿಳೆಯ ಕಿರುಚಾಟ ಕೇಳಿ ನೆರೆಹೊರೆಯವರು ಧಾವಿಸಿ ಬಂದ ನಂತರ ಆಕೆಯನ್ನು ರಕ್ಷಿಸಲಾಗಿದೆ. ಈ ಸಂಬಂಧ ಪೊಲೀಸರು ಪತಿ ಸೇರಿದಂತೆ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.ಸಂತ್ರಸ್ತೆಯ ಸಹೋದರ ರಘುನಾಥ್ ಸಿಂಗ್ ಅವರು ತಮ್ಮ ಭಾವನ ವಿರುದ್ಧ ದೂರು ದಾಖಲಿಸಿದ್ದಾರೆ. ಕೆಲವು ವರದಿಗಳ ಪ್ರಕಾರ, …
Read More »
BigTv News
May 19, 2025
Breaking News, Crime
ಕಳೆದ ಆರು ತಿಂಗಳಿಂದ ದೆಹಲಿಯಲ್ಲಿ ಏರೋಸ್ಪೇಸ್ ಇಂಜಿನಿಯರ್ ಕಾರ್ಯನಿರ್ವಹಿಸುತ್ತಿದ್ದ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಮೂಲದ ಯವತಿಯೊಬ್ಬಳು ಪಂಜಾಬ್ ನಲ್ಲಿ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.ಅಷ್ಟೇ ಅಲ್ಲದೆ, ಉದ್ಯೋಗಕ್ಕಾಗಿ ಜಪಾನ್ ಗೆ ತೆರಳಲು ಪ್ಲಾನ್ ಮಾಡಿದ್ದಳು. ಹೀಗಾಗಿ ಕಾಲೇಜಿನಲ್ಲಿ ಸರ್ಟಿಫಿಕೇಟ್ ತೆಗೆದುಕೊಂಡು ಮನೆಗೆ ಕರೆ ಮಾಡಿದ್ದರು, ಇದಾದ ಬಳಿಕ ಆಕಾಂಕ್ಷಾ ಯಾರ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಇದೀಗ ಯುವತಿ ನಿಗೂಢವಾಗಿ ಶವವಾಗಿ ಪತ್ತೆಯಾಗಿದ್ದಾರೆ.ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಲಂಧರ್ ಪೊಲೀಸರು ಪೋಷಕರಿಗೆ ಮಾಹಿತಿ ನೀಡಿದ್ದು, …
Read More »
BigTv News
May 19, 2025
Breaking News, Crime
ಆಂಧ್ರಪ್ರದೇಶದ ವಿಜಯನಗರಂ ಗ್ರಾಮೀಣ ಮಂಡಲದ ದ್ವಾರಪುಡಿ ಗ್ರಾಮದಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಸಿಲುಕಿ ಮೂವರು ಬಾಲಕಿಯರು ಸೇರಿದಂತೆ ನಾಲ್ವರು ಮಕ್ಕಳು ಉಸಿರುಗಟ್ಟಿ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ನಡೆದಿದೆ.ಎಷ್ಟು ಹೊತ್ತಾದರೂ ಮಕ್ಕಳು ಬಾರದ ಕಾರಣ ಪೋಷಕರು ಗ್ರಾಮ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೂರು ಗಂಟೆಗಳಿಗೂ ಹೆಚ್ಚು ಕಾಲ ಹುಡುಕಿದ ನಂತರ ಕಾರಿನಲ್ಲಿ ಸಿಲುಕಿರುವುದು ಪತ್ತೆಯಾಗಿದೆ.ಬಳಿಕ ಕಾರಿನ ಕಿಟಕಿಗಳನ್ನು ಒಡೆದು ಮಕ್ಕಳನ್ನು ಹೊರಗೆ ತಂದಿದ್ದಾರೆ. ಕೂಡಲೇ ವಿಜಯನಗರದ ಸರ್ಕಾರಿ ಜನರಲ್ ಆಸ್ಪತ್ರೆಗೆ …
Read More »
BigTv News
May 19, 2025
Breaking News, Crime
ಮದುವೆಯಾದ ಒಂದೇ ವಾರದಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕೊಲೆ ಮಾಡಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ವಾರಣಾಸಿ ಜಿಲ್ಲೆಯ ಅಮೌಲಿ ಗ್ರಾಮದಲ್ಲಿ ನಡೆದಿದೆ.ಮದುವೆಯಾದ ಕೂಡಲೇ ಇಬ್ಬರ ನಡುವೆ ಜಗಳ ಆರಂಭವಾಯಿತು. ಒಂದು ದಿನ ರಾತ್ರಿ ಆರತಿ, ಆತನೊಂದಿಗೆ ಲೈಂಗಿಕ ಸಂಬಂಧ ಹೊಂದಲು ನಿರಾಕರಿಸಿದ್ದಕ್ಕೆ ಆಕೆಯ ಮೇಲೆ ಮನಬಂದಂತೆ ಹಲ್ಲೆ ಮಾಡಿದ್ದಾನೆ. ಈ ವಿಚಾರವನ್ನು ನರೆಹೊರೆಯವರು ತಿಳಿಸಿದ್ದಾರೆಂದು ಪೊಲೀಸರು ಮಾಹಿತಿ ನೀಡಿದ್ದಾರೆ.ಕುಟುಂಬ ಸದಸ್ಯರ ದೂರಿನ ಆಧಾರದ ಮೇಲೆ, ಪೊಲೀಸರು ಆರೋಪಿ ಪತಿಯ …
Read More »
BigTv News
May 19, 2025
Breaking News, Crime
ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ಕಾಸರಗೋಡು ಕಡಲ ಕಿನಾರೆಯಲ್ಲಿ ಪತ್ತೆಯಾದ ಅಸ್ಥಿಪಂಜರ ಮತ್ತು ಕಾಲುಂಗುರವು ನಾಪತ್ತೆಯಾದ ಬಾಲಕಿಗೆ ಸೇರಿದ್ದು ಎಂದು ದೃಢಪಟ್ಟ ನಂತರ, ಈ ಪ್ರಕರಣದ ಪ್ರೇರಕ ಎಂದು ಶಂಕಿಸಲಾಗಿದ್ದ ಬಿಜು ಪೌಲೋಸ್ (52) ಎಂಬಾತನನ್ನು ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದಾರೆ.ಪ್ರಕರಣವು ಅಂಬಲತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿತ್ತು.ಆರೋಪಿಯು ಬಾಲಕಿಯ ದೇಹವನ್ನು ಪನತ್ತೂರು ಪವಿತ್ರಂ ಕಯಂ ಎಂಬ ಚಂದ್ರಗಿರಿಪುಳದ ಭಾಗದಲ್ಲಿ ತುಳಿದು ಹಾಕಿದ್ದಾಗಿ …
Read More »
BigTv News
May 19, 2025
Breaking News, Crime
ಸೋಮವಾರಪೇಟೆ ತಾಲೂಕಿನ ಚೌಡ್ಲು ಗ್ರಾಮದ ನಿವಾಸಿ ಗುತ್ತಿಗೆದಾರ ಸಂಪತ್ ಶಂಭು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಕೊಡಗು ಪೊಲೀಸರು ಬಂಧಿಸಿದ್ದಾರೆ.ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ಮಾಡುವ ಉದ್ದೇಶದಿಂದ ಸಂಚು ರೂಪಿಸಿ ಆರೋಪಿ ಸಂಗೀತಾ ಸಂಪತ್ ನನ್ನು ಸೋಮವಾರಪೇಟೆಯ ಹಾನಗಲ್ ಗ್ರಾಮಕ್ಕೆ ಮೇ 9ರಂದು ಬರಲು ಹೇಳುತ್ತಾಳೆ. ಇತರೆ ಆರೋಪಿಗಳಾದ ಗಣಪತಿ ಹಾಗೂ ಕಿರಣ್ ಅವರೊಂದಿಗೆ ಸೇರಿ ಕೋವಿಯಿಂದ ಬೆದರಿಸಿ, ದೊಣ್ಣೆಯಿಂದ ಹೊಡೆದು, ಕತ್ತಿಯಿಂದ ಕಡಿದು ಕೊಲೆ ಮಾಡುತ್ತಾರೆ. ಸಂಪತ್ …
Read More »
BigTv News
May 17, 2025
Breaking News, Crime
ಮೈಸೂರಲ್ಲಿ ಭಾರಿ ಅನಾಹುತ ಒಂದು ತಪ್ಪಿದ್ದು, ಆಕಸ್ಮಿಕ ಬೆಂಕಿಯಿಂದ ಮೂರು ಮನೆಗಳು ಸುಟ್ಟು ಕರಕಲಾಗಿರುವ ಘಟನೆ ಮೈಸೂರು ತಾಲೂಕಿನ ಬೋರೆ ಆನಂದೂರಿನಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಅದೃಷ್ಟವಶಾತ್ ,ಮನೆಯಲ್ಲಿ ಯಾರು ಇಲ್ಲದಿದ್ದ ರಿಂದ ಭಾರಿ ಅನಾಹುತ ಒಂದು ತಪ್ಪಿದೆ.ಶನಿವಾರೆಗೌಡ, ವೆಂಕಟೇಶ್ ಗೌಡ ಹಾಗು ಶ್ರೀನಿವಾಸಗೌಡ ಎಂಬುವವರ ಮನೆಗಳು ಬೆಂಕಿಗೆ ಆಹುತಿಯಾಗಿವೆ. ಮೂರು ಮನೆಗಳಲ್ಲಿ ಇದ್ದಂತಹ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿವೆ. ಸ್ಥಳಕ್ಕೆ ಆಗಮಿಸಿ ಅಭಿಷಾಮಕದಳ ಸಿಬ್ಬಂದಿಗಳು …
Read More »
BigTv News
May 17, 2025
Breaking News, Crime
ಬ್ಯಾಂಕ್ ಲಾಕರ್‌ನಲ್ಲಿದ್ದ ಚಿನ್ನಾಭರಣವನ್ನು ಕದ್ದಿದ್ದ ಇಬ್ಬರು ಬ್ಯಾಂಕ್ ನೌಕರರನ್ನು ಬಸವೇಶ್ವರ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.ಬಸವೇಶ್ವರನಗರದ ಬ್ಯಾಂಕ್‌ವೊಂದರಲ್ಲಿ ವ್ಯವಸ್ಥಾಪಕರಾಗಿದ್ದ ಸಿರಿಶಾ ಅವರು ₹16 ಲಕ್ಷ ಮೌಲ್ಯದ ಚಿನ್ನಾಭರಣವನ್ನು ಅದೇ ಬ್ಯಾಂಕ್ ಲಾಕರ್‌ನಲ್ಲಿ ಇಟ್ಟಿದ್ದರು. ಜೊತೆಗೆ ಬ್ಯಾಂಕ್ ಚೆಕ್‌ಬುಕ್, ಪದವಿ ಪ್ರಮಾಣಪತ್ರ, ಅಂಕಪಟ್ಟಿ ಸೇರಿ ಇತರೆ ದಾಖಲೆಗಳನ್ನೂ ಅದೇ ಲಾಕರ್‌ನಲ್ಲಿ ಇಟ್ಟಿದ್ದರು. ಆರೋಪಿಗಳಿಬ್ಬರು ಸಂಚು ರೂಪಿಸಿ 2024ರ ಡಿಸೆಂಬರ್‌ನಲ್ಲಿ ಈ ಚಿನ್ನಾಭರಣ ಕಳ್ಳತನ ಮಾಡಿದ್ದರು. ಕಳವು ಮಾಡಿದ ಚಿನ್ನಾಭರಣಗಳನ್ನು ಅಗ್ರಹಾರ ದಾಸರಹಳ್ಳಿಯಲ್ಲಿ …
Read More »