BigTv News
May 16, 2025
Breaking News, Crime
ವರ್ಕ್ ಫ್ರಮ್ ಹೋಂನಲ್ಲಿ ಪ್ರಾಜೆಕ್ಟ್ ಇರುವುದಾಗಿ ಹೇಳಿ ವಂಚನೆ ಮಾಡುತ್ತಿದ್ದ 12 ಸೈಬರ್ ಕಳ್ಳರ ಗ್ಯಾಂಗ್ ಅನ್ನು ಆಡುಗೋಡಿ ಪೊಲೀಸರು ಬಂಧಿಸಿದ್ದಾರೆ.ಮಹಿಳೆಗೆ ನಂಬಿಸಿ ಸ್ಕೋರ್ ಬ್ಯಾಲೆನ್ಸ್‌ಶೀಟ್‌ನಲ್ಲಿ 10,82,502 ರೂ. ತೋರಿಸಿದ್ದು, ವಿತ್‌ಡ್ರಾಗೆ 5 ಲಕ್ಷ ರೂ. ಪಾವತಿಸುವಂತೆ ಸೂಚಿಸಿದ್ದ.ದುರಾಸೆಗೆ ಬಿದ್ದ ಮಹಿಳೆ, ಹಂತ ಹಂತವಾಗಿ ಅಪರಿಚಿತ ಹೇಳಿದ ಬ್ಯಾಂಕ್ ಖಾತೆಗಳಿಗೆ 5 ಲಕ್ಷ ರೂ. ಜಮೆ ಮಾಡಿದ್ದರು. ಇನ್ನೂ 3.24 ಲಕ್ಷ ರೂ. ಜಮಾ ಮಾಡಿದಾಗ ಮಾತ್ರ 10 ಲಕ್ಷ …
Read More »
BigTv News
May 16, 2025
Breaking News, Crime
ಮೂರು ದಿನಗಳ ಹಿಂದೆ ಚೀನಾ ಪ್ರವಾಸಕ್ಕೆ ತೆರಳಿರುವ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಡಿ.ರಾಜಶೇಖರ್ ಮನೆ, ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ಗುರುವಾರ ದಾಳಿ ನಡೆಸಿದ್ದಾರೆ. ಅಕ್ರಮವಾಗಿ ಕೋಟ್ಯಂತರ ರೂಪಾಯಿ ಆಸ್ತಿ ಸಂಪಾದಿಸಿರುವುದು ದಾಳಿ ಸಮಯದಲ್ಲಿ ಬೆಳಕಿಗೆ ಬಂದಿದೆ.ಹಳೆ ಕಾಮಗಾರಿ ಹೆಸರಿನಲ್ಲಿ ನಕಲಿ ಬಿಲ್ ಸೃಷ್ಟಿಸಿ ₹2 ಕೋಟಿಗೂ ಅಧಿಕ ಮೊತ್ತ ಪಡೆದುಕೊಂಡಿರುವುದು, 2024-25ರಲ್ಲೂ ಹಳೆ ಕಾಮಗಾರಿಗಳಿಗೆ ನಕಲಿ ಬಿಲ್ ಸೃಷ್ಟಿಸಿ ₹3 ಕೋಟಿಗೂ ಅಧಿಕ ಮೊತ್ತ ಡ್ರಾ ಮಾಡಿಕೊಂಡಿದ್ದಾರೆ. …
Read More »
BigTv News
May 16, 2025
Breaking News, Crime
ಸಾಲ ನೀಡಿದ್ದ ಹಣವನ್ನು ವಾಪಸ್ ನೀಡುವಂತೆ ಕೇಳಿದ್ದ ಮಹಿಳೆಯನ್ನು ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ್ದ ಆರೋಪಿಯನ್ನು ಕೆಂಗೇರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.ಹಣ ನೀಡುವಂತೆ ಆರೋಪಿಯನ್ನು ಕೇಳಿದ್ದು, ಈ ವಿಚಾರಕ್ಕೆ ಇಬ್ಬರ ಮಧ್ಯೆ ಜಗಳವಾಗಿದೆ. ಜಗಳ ವಿಕೋಪಕ್ಕೆ ತಿರುಗಿದ್ದಾಗ ಆರೋಪಿ ಚಾಕುವಿನಿಂದ ಇರಿದು ಪರಾರಿಯಾಗಿದ್ದ. ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಸಂಬಂಧ ಆರೋಪಿ ವಿರುದ್ಧ ದೂರು ನೀಡಿದ್ದರು. ದೂರನ್ನು ಆಧರಿಸಿ ಆರೋಪಿಯನ್ನು ಬಂಧಿಸಲಾಗಿದೆ …
Read More »
BigTv News
May 16, 2025
Breaking News, Crime
ಹಿಂದೂ ಸಂಘಟನೆಯಲ್ಲಿ ಸಕ್ರಿಯವಾಗಿ ತಮ್ಮನ್ನು ತಾವು ತೊಡಗಿಸಿಕೊಂಡಿರುವ ಪುನೀತ್ ಕೆರೆಹಳ್ಳಿಗೆ ಜೀವ ಬೆದರಿಕೆ ಕರೆಯೊಂದು ಬಂದಿರುವ ಘಟನೆ ಬೆಳಕಿಗೆ ಬಂದಿದ್ದು, ಇದೀಗ ಆರೋಪಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ.ಇದೀಗ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಉದಯಗಿರಿ ನಿವಾಸಿ ಅಕ್ರಮ್ ಖಾನ್ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಆರೋಪಿಯ ಬಂಧನಕ್ಕೆ ಬಲೆಬೀಸಿದ್ದಾರೆ.
Read More »
BigTv News
May 16, 2025
Breaking News, Crime
ಕೊಡಗು ಜಿಲ್ಲೆ ಸುಂಟಿಕೊಪ್ಪದಲ್ಲಿ ಮಫ್ತಿಯಲ್ಲಿ ಬಂದು ಲಾಂಗ್ ತೋರಿಸಿ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐ ಮತ್ತು ಎಎಸ್‌ಐ ಅವರನ್ನು ಅಮಾನತು ಮಾಡಲಾಗಿದೆ.ತಪ್ಪು ಮಾಡದೆ ಇದ್ದರೂ ಖಾಲಿ ಪತ್ರಕ್ಕೆ ಸಹಿ ಹಾಕಿಸಿಕೊಂಡಿದ್ದು ಶಂಕಾಸ್ಪದವಾಗಿದ್ದ ಕಾರಣ ಯುವಕರು ನೇರವಾಗಿ ಜಿಲ್ಲಾ ಪೊಲೀಸ್ ಅಧಿಕಾರಿನ್ನು ಭೇಟಿಯಾಗಿ ದೂರು ನೀಡಿದ್ದಾರೆ. ಈ ಬಗ್ಗೆ ಎಸ್ಪಿ ತನಿಖೆಗೆ ಆದೇಶಿಸಿದ್ದು, ತೀರ್ಥಕುಮಾರ್ ದೂರವಾಣಿ ಮೂಲಕ ನಡೆದ ಘಟನೆ ಹಾಗೂ ಪಡೆದುಕೊಂಡ ಹಣದ ಬಗ್ಗೆ ಮಾತನಾಡಿರುವ ಆಡಿಯೋ ಇದ್ದು, …
Read More »
BigTv News
May 16, 2025
Breaking News, Crime
ಶವವನ್ನು ಅವರ ಪುತ್ರರು ಮತ್ತು ಸಂಬಂಧಿಕರು ಅಂತಿಮ ವಿಧಿಗಳಿಗಾಗಿ ಹತ್ತಿರದ ಸ್ಮಶಾನಕ್ಕೆ ಕರೆದೊಯ್ದರು. ಚಿತೆಯ ಅಂತ್ಯಕ್ರಿಯೆಗೆ ಸಿದ್ಧತೆಗಳು ನಡೆಯುತ್ತಿರುವಾಗ, ವಿವಾದ ಭುಗಿಲೆದ್ದಿತು.ಮೃತರನ್ನು ಚಿತೆಯ ಮೇಲೆ ಇಡುವ ಮೊದಲು, ಕುಟುಂಬದ ಹಿರಿಯರು ಅವಳ ಬೆಳ್ಳಿಯ ಬಳೆಗಳು ಮತ್ತು ಇತರ ಆಭರಣಗಳನ್ನು ಅವಳ ಹಿರಿಯ ಮಗ ಗಿರ್ಧಾರಿ ಲಾಲ್ಗೆ ಹಸ್ತಾಂತರಿಸಿದರು, ಅವರು ಜೀವಂತವಾಗಿದ್ದಾಗ ಅವಳನ್ನು ನೋಡಿಕೊಂಡರು. ಕಿರಿಯ ಮಗ ಓಂಪ್ರಕಾಶ್ ಕೋಪದಿಂದ ಪ್ರತಿಕ್ರಿಯಿಸಿದರು. ಆಘಾತಕಾರಿ ಕ್ರಮವೊಂದರಲ್ಲಿ, ಅವರು ಚಿತೆಯ ಮೇಲೆ ಮಲಗಿದರು ಮತ್ತು …
Read More »
BigTv News
May 16, 2025
Breaking News, Crime
ಕುರಾನ್ ಪುಸ್ತಕ ಕಳ್ಳತನ ಮಾಡಿ ಬೆಂಕಿ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಗ್ರಾಮೀಣ ಠಾಣೆಯ ಸಿಪಿಐ ಮಂಜುನಾಥ್ ಅವರನ್ನು ಕರ್ತವ್ಯಲೋಪದ ಆರೋಪದಡಿಯಲ್ಲಿ ಅಮಾನತುಗೊಳಿಸಲಾಗಿದೆ. ಈ ಕುರಿತು ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಶುಕ್ರವಾರ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಸಿಪಿಐ ಮಂಜುನಾಥ ಹಿರೇಮಠ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಕರ್ತವ್ಯ ಲೋಪ ಆರೋಪದಲ್ಲಿ ಮಂಜುನಾಥ್ ಅವರನ್ನು ಅಮಾನತು ಮಾಡಲಾಗಿದೆ.ಈ ಬಗ್ಗೆ ಬೆಳಗಾವಿ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ …
Read More »
BigTv News
May 16, 2025
Breaking News, Crime
ಬುಧವಾರ ರಾತ್ರಿ ಊಟ ಮುಗಿಸಿಕೊಂಡು ಬಸ್‌ನಲ್ಲಿ ಪುರಿಗೆ ತೆರಳುತ್ತಿದ್ದಾರೆ ಬಾಲೇಶ್ವರ ಜಿಲ್ಲೆಯ ಸೊರೊ ಎಂಬಲ್ಲಿ ಈ ಘಟನೆ ನಡೆದಿದೆ.ಪ್ರವಾಸಿಗರು ಮಾರ್ಗಮಧ್ಯೆ ಅಸ್ವಸ್ಥಗೊಂಡಿದ್ದಾರೆ.ಪ್ರವಾಸಿಗರನ್ನು ಸೊರೊ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸೊರೊ ಎಂಬಲ್ಲಿ ತಾವೇ ತಯಾರಿಸಿದ್ದ ಅನ್ನ ಮತ್ತು ಸಾಂಬರ್ ಸೇವಿಸಿದ್ದರು. ಬಸ್ ಸೊರೊ ನಗರ ತಲುಪುವಷ್ಟರಲ್ಲಿ 20 ಪ್ರವಾಸಿಗರು ವಾಂತಿ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಪ್ರವಾಸಿಗರ ಅಸ್ವಸ್ಥತೆಗೆ ಬಿಸಿಗಾಳಿ ಕಾರಣವಿರಬಹುದು ಎಂದು ವೈದ್ಯರು ಶಂಕೆ ವ್ಯಕ್ತಪಡಿಸಿದ್ದಾರೆ.
Read More »
BigTv News
May 16, 2025
Breaking News, Crime
ಬಾಂಬ್ ಸ್ಫೋಟಗೊಂಡ ಕೂಡಲೇ ಸಾರ್ವಜನಿಕರು ಓಡಲಾರಂಭಿಸಿದರು, ಗಾಯಾಳುಗಳು ಕೆಳಕ್ಕೆ ಬಿದ್ದು ನರಳಾಡುತ್ತಿದ್ದರು. ಬಾಂಬ್ ಸ್ಫೋಟದ ಶಬ್ದ ಕೇಳಿದ ತಕ್ಷಣ ತುರ್ತು ಸಂದರ್ಭದ ಸೈರನ್ ಮೊಳಗಿತು. ಕಂಟ್ರೋಲ್ ರೂಂಗೆ ಮಾಹಿತಿ ರವಾನಿಸಲಾಯಿತು.ಅಗ್ನಿಶಾಮಕ ದಳ, ಆರೋಗ್ಯ ಇಲಾಖೆ, ರೆಡ್‍ಕ್ರಾಸ್ ಸಂಸ್ಥೆಯ ತಂಡದ ಸದಸ್ಯರು ಗಾಯಾಳುಗಳ ರಕ್ಷಣಾ ಕಾರ್ಯಕ್ಕೆ ಧಾವಿಸಿದರು. ವೈದ್ಯಕೀಯ ತಂಡ ಸ್ಥಳದಲ್ಲಿಯೇ ತುರ್ತು ಚಿಕಿತ್ಸೆ ಆರಂಭಿಸಿತು.ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪೊಲೀಸ್, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ …
Read More »
BigTv News
May 16, 2025
Breaking News, Crime
ಯುವಕನೊಬ್ಬ ಶಿಕ್ಷಕನಿಗೆ ಬಿಯರ್ ಬಾಟಲಿಯಿಂದ ಹಲ್ಲೆ ನಡೆಸಿ ನಂತರ ಚಾಕುವಿನಿಂದ ಇರಿದ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನಲ್ಲಿ ನಡೆದಿದೆ.ಶಿಕ್ಷಕನ ಮನೆಯ ಒಳಗೆ ಕ್ರಿಕೆಟ್ ಚೆಂಡು ಬಿದ್ದಿದೆ ಕೊಡು ಎಂದು ಯುವಕ ಪ್ರಶ್ನಿಸಿದ್ದಾನೆ. ಆದರೆ ಚೆಂಡು ಮನೆಯಲ್ಲಿ ಬಿದ್ದಿಲ್ಲ ಎಂದು ಶಿಕ್ಷಕ ಉತ್ತರಿಸಿದ್ದಾನೆ. ಇದರಿಂದ ಅಸಮಾಧಾನಗೊಂಡ ಪವನ್ ಜಾಧವ್ ಹಲ್ಲೆ ನಡೆಸಿ ನಂತರ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ. ರಾಮು ಪೂಜಾರಿ ಅವರ ತಲೆಗೆ ಬಲವಾದ ಪೆಟ್ಟು ಬಿದ್ದಿದ್ದು, ಅಪಾಯದಿಂದ ಪಾರಾಗಿದ್ದಾರೆ.ಈ …
Read More »