Shaikh BigTv
July 28, 2026
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಫೋಟೋ ಪಾಲಿಟಿಕ್ಸ್‌ಗೆ ಮಣೆ ಬೇಡ, ಸಂಘಟನೆಯ ನಾಯಕರಿಗೆ ಮನ್ನಣೆ ಕೊಡಿ! ಡಿಸಿಸಿ ಆಯ್ಕೆ ಕಾಂಗ್ರೆಸ್‌ಗೆ ಅಗ್ನಿಪರೀಕ್ಷೆ… ಡಿಸಿಸಿ ಅಧ್ಯಕ್ಷ ಸ್ಥಾನ: ಹೈಕಮಾಂಡ್ ಎಚ್ಚರ! ತಪ್ಪು ಆಯ್ಕೆ ಕಾಂಗ್ರೆಸ್‌ಗೆ ದುಬಾರಿಯಾಗಬಹುದು.. ಹುಬ್ಬಳ್ಳಿ–ಧಾರವಾಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಇದೀಗ ಜಿಲ್ಲೆಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಡಿಸಿಸಿ ಅಧ್ಯಕ್ಷ ಸ್ಥಾನವು ಕೇವಲ ಒಂದು ಹುದ್ದೆಯಲ್ಲ; ಅದು ಪಕ್ಷದ ಸಂಘಟನೆ, ಕಾರ್ಯಕರ್ತರ ವಿಶ್ವಾಸ ಮತ್ತು ಮುಂದಿನ ರಾಜಕೀಯ ದಿಕ್ಕನ್ನು ನಿರ್ಧರಿಸುವ ಜವಾಬ್ದಾರಿಯಾಗಿದೆ… ಡಿಸಿಸಿ …
Read More »
BigTv News
July 28, 2026
Breaking News, Crime
ಬೆಂಗಳೂರು ನಗರದ ರಾಮಮೂರ್ತಿ ನಗರದಲ್ಲಿ ಕ್ಯಾಬ್‌ಗಾಗಿ ಕಾಯುತ್ತಿದ್ದ ಮಹಿಳೆಗೆ ಸ್ಕೂಟರ್‌ನಲ್ಲಿ ಬಂದ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಮಹಿಳೆಯ ದೂರಿನ ಪ್ರಕಾರ, ಆರೋಪಿ “ನಿನ್ನ ರೇಟ್ ಎಷ್ಟು?” ಎಂದು ಅಸಭ್ಯವಾಗಿ ಪ್ರಶ್ನಿಸಿದ್ದಾನೆ. ಘಟನೆಯನ್ನು ಮಹಿಳೆ ತನ್ನ ಮೊಬೈಲ್‌ನಲ್ಲಿ ವಿಡಿಯೋವಾಗಿ ದಾಖಲಿಸಿಕೊಂಡಿದ್ದಾರೆ. ಪೊಲೀಸರಿಗೆ ದೂರು ನೀಡುವುದಾಗಿ ಹೇಳುತ್ತಿದ್ದಂತೆ ಆರೋಪಿ ನಿಂದಿಸಿ, ಬಳಿಕ ಸ್ಥಳದಿಂದ ಸ್ಕೂಟರ್‌ನಲ್ಲಿ ಪರಾರಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ. ನಂತರ ಮಹಿಳೆ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು, …
Read More »
Shaikh BigTv
July 25, 2026
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಡಿಸಿಸಿ ಕುರ್ಚಿ ಕದನ: ಅಲ್ತಾಫ್ ಹಳ್ಳೂರುಗೆ ಮತ್ತೊಮ್ಮೆ ಪಟ್ಟಾಭಿಷೇಕವೇ..? ಸೂಕ್ತ ಆಕಾಂಕ್ಷಿಗಳ ಕೊರತೆ…? ಹಾಲಿ ಅಧ್ಯಕ್ಷರ ಮುಂದುವರಿಕೆಗೆ ಹೈಕಮಾಂಡ್ ಮತ್ತೊಮ್ಮೆ ಅವಕಾಶವೇ..? ಧಾರವಾಡ: ಧಾರವಾಡ ಜಿಲ್ಲಾ ಕಾಂಗ್ರೆಸ್ ಸಮಿತಿ (ಡಿಸಿಸಿ) ಅಧ್ಯಕ್ಷರ ಆಯ್ಕೆ ಮತ್ತೆ ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಹಾಲಿ ಅಧ್ಯಕ್ಷ ಅಲ್ತಾಫ್ ಹಳ್ಳೂರನ್ನು ಮತ್ತೊಮ್ಮೆ ಮುಂದುವರಿಸಬೇಕೇ ಎಂಬ ಪ್ರಶ್ನೆ ಪಕ್ಷದ ಕಾರ್ಯಕರ್ತರು ಹಾಗೂ ನಾಯಕರ ನಡುವೆ ಕೇಳಿಬರುತ್ತಿದೆ… ಒಂದೆಡೆ ಅಲ್ತಾಫ್ ಹಳ್ಳೂರು ಅವರನ್ನು ಮತ್ತೆ ಡಿಸಿಸಿ ಅಧ್ಯಕ್ಷರನ್ನಾಗಿ ಮುಂದುವರಿಸಬೇಕು …
Read More »
BigTv News
July 24, 2026
Breaking News, Crime
ಕರ್ನಾಟಕದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ನಕಲಿ ಅಥವಾ ಅಮಾನ್ಯ ಪಿಎಚ್‌ಡಿ ಪ್ರಮಾಣಪತ್ರ ಸಲ್ಲಿಸಿ ಉದ್ಯೋಗ ಪಡೆದಿದ್ದ 249 ಅತಿಥಿ ಉಪನ್ಯಾಸಕರನ್ನು ಸೇವೆಯಿಂದ ವಜಾಗೊಳಿಸಲು ಕಾಲೇಜು ಶಿಕ್ಷಣ ಇಲಾಖೆ ಆದೇಶಿಸಿದೆ. ಜೊತೆಗೆ ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ, ಭವಿಷ್ಯದ ನೇಮಕಾತಿಗಳಿಂದ ಶಾಶ್ವತವಾಗಿ ಕಪ್ಪುಪಟ್ಟಿಗೆ ಸೇರಿಸಲು ಸೂಚಿಸಲಾಗಿದೆ. 2025-26ನೇ ಸಾಲಿನ ನೇಮಕಾತಿ ವೇಳೆ ದಾಖಲೆಗಳ ಪರಿಶೀಲನೆಯಲ್ಲಿ ವಿಶ್ವವಿದ್ಯಾಲಯಗಳು 249 ಪಿಎಚ್‌ಡಿ ಪ್ರಮಾಣಪತ್ರಗಳು ನಕಲಿ ಅಥವಾ ಅಮಾನ್ಯವಾಗಿವೆ ಎಂದು ದೃಢಪಡಿಸಿವೆ. ಇದನ್ನು …
Read More »
Shaikh BigTv
July 24, 2026
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಖಾಕಿಯೊಳಗಿನ ಸ್ಫೋಟಕ ಆರೋಪ..! ಈ-ಬೀಟ್ ವಿರುದ್ಧ ಕಾನ್ಸ್‌ಟೇಬಲ್ ದೂರು – ಡಿಜಿಪಿಗೆ ವರದಿ ಕೇಳಿದ ಸರ್ಕಾರ..! ಹುಬ್ಬಳ್ಳಿ–ಧಾರವಾಡ ಪೊಲೀಸ್ ಕಮಿಷನರೇಟ್‌ನಲ್ಲಿ ಜಾರಿಯಲ್ಲಿರುವ ಈ-ಬೀಟ್ ವ್ಯವಸ್ಥೆ ಕುರಿತು ಗಂಭೀರ ಆರೋಪಗಳು ಕೇಳಿಬಂದಿವೆ. ಪೊಲೀಸ್ ಸಿಬ್ಬಂದಿಯೊಬ್ಬರು ಮುಖ್ಯಮಂತ್ರಿ ಅವರಿಗೆ ಬರೆದಿರುವ ಪತ್ರದಲ್ಲಿ, ಕಿರಿಯ ಸಿಬ್ಬಂದಿಗೆ ಅತಿಯಾದ ಕೆಲಸದ ಒತ್ತಡ, ಮಾನಸಿಕ ಕಿರುಕುಳ, ಅನ್ಯಾಯ ಹಾಗೂ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ…. ಪತ್ರದಲ್ಲಿ ಹಿರಿಯ ಅಧಿಕಾರಿಗಳು ಜವಾಬ್ದಾರಿಯಿಂದ ತಪ್ಪಿಸಿಕೊಳ್ಳುತ್ತಿದ್ದು, ಸಣ್ಣಪುಟ್ಟ ತಪ್ಪುಗಳಿಗೂ ಬೀಟ್ ಸಿಬ್ಬಂದಿಯನ್ನೇ …
Read More »
Shaikh BigTv
July 21, 2026
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಟ್ರಾಫಿಕ್ ಪೊಲೀಸರು ಜಾಕೆಟ್ ಹಿಂದೆ ಹುದ್ದೆ ಮರೆಮಾಚುತ್ತಿದ್ದಾರಾ..? ವಾಹನ ತಪಾಸಣೆ ವೇಳೆ ಗುರುತು ಕಾಣದಿದ್ದರೆ ಜನ ಪ್ರಶ್ನಿಸೋದು ತಪ್ಪಾ..? ಜಾಕೆಟ್ ಹಿಂದೆ ಮರೆಮಾಚಿದ ಹುದ್ದೆ..! ವಾಹನ ತಪಾಸಣೆ ವೇಳೆ ಪೊಲೀಸ್ ಯಾರೆಂದು ಜನರಿಗೆ ತಿಳಿಯಬಾರದಾ..? ಹುಬ್ಬಳ್ಳಿ-ಧಾರವಾಡದಲ್ಲಿ ವಾಹನ ತಪಾಸಣೆ ವೇಳೆ ಹಲವು ಟ್ರಾಫಿಕ್ ಪೊಲೀಸರು ಸಮವಸ್ತ್ರದ ಮೇಲೆಯೇ ಜಾಕೆಟ್ ಧರಿಸಿ ಕರ್ತವ್ಯ ನಿರ್ವಹಿಸುತ್ತಿರುವುದು ಸಾರ್ವಜನಿಕರ ಪ್ರಶ್ನೆಗೆ ಕಾರಣವಾಗಿದೆ. ಜಾಕೆಟ್‌ನಿಂದ ಹೆಸರು, ಹುದ್ದೆ ಹಾಗೂ ಗುರುತು ಕಾಣದಿರುವುದರಿಂದ ಪಾರದರ್ಶಕತೆ ಬಗ್ಗೆ ಅನುಮಾನ …
Read More »
Shaikh BigTv
July 20, 2026
Breaking News, Crime, ಕರ್ನಾಟಕ, ಬೆಂಗಳೂರು
ಪೊಲೀಸ್ ಸಮವಸ್ತ್ರದಲ್ಲಿ ರೀಲ್ಸ್ ಬೇಡ..! ಖಾಕಿಯ ಘನತೆ ಉಳಿಸಲು ಕಠಿಣ ನಿಯಮಕ್ಕೆ ಶಿಫಾರಸು… ಬೆಂಗಳೂರು: ಪೊಲೀಸ್ ಸಮವಸ್ತ್ರ ಧರಿಸಿ ರೀಲ್ಸ್, ಫೋಟೋಶೂಟ್, ಪ್ರಿ-ವೆಡ್ಡಿಂಗ್ ಶೂಟ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುವ ಪ್ರವೃತ್ತಿಗೆ ಬ್ರೇಕ್ ಬೀಳುವ ಸಾಧ್ಯತೆ ಇದೆ. ಈ ಕುರಿತು ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರವು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ (ಡಿಜಿಪಿ) ಶಿಫಾರಸು ಪತ್ರ ಬರೆದಿದೆ… ಪತ್ರದಲ್ಲಿ, ಕೆಲವು ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಕರ್ತವ್ಯದ ವೇಳೆ …
Read More »
BigTv News
July 16, 2026
Breaking News, Crime
ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯ ಅಂಡಿಂಜೆ ಗ್ರಾಮದಲ್ಲಿ ನಕಲಿ ₹500 ನೋಟುಗಳನ್ನು ತಯಾರಿಸುತ್ತಿದ್ದ ಜಾಲವನ್ನು ಪೊಲೀಸರು ಭೇದಿಸಿ ಏಳು ಮಂದಿಯನ್ನು ಬಂಧಿಸಿದ್ದಾರೆ. ಬಾಡಿಗೆ ಮನೆಯಲ್ಲಿ ನೋಟು ಮುದ್ರಿಸುತ್ತಿದ್ದ ಆರೋಪಿಗಳಿಂದ ನಕಲಿ ನೋಟುಗಳು, ಪ್ರಿಂಟರ್, ಕಂಪ್ಯೂಟರ್, ಕಟಿಂಗ್ ಬ್ಲೇಡ್, ಗಾಂಧೀಜಿ ಚಿತ್ರದ ಸೀಲ್ ಹಾಗೂ ಆರ್‌ಬಿಐ ಸೆಕ್ಯುರಿಟಿ ಥ್ರೆಡ್ ಸೇರಿದಂತೆ ಹಲವು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತರಿಂದ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದು, ಈ ಜಾಲದ ಹಿಂದೆ ಇನ್ನೂ …
Read More »
BigTv News
July 16, 2026
Breaking News, Crime
ಧಾರವಾಡದಲ್ಲಿ ವೈದ್ಯ ಡಾ. ಕಿರಣ್ ಹೊನ್ನಣ್ಣನವರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ನಿ ಡಾ. ಪ್ರಿಯಾಂಕಾ ಅವರನ್ನು ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ವೇಳೆ ತಾನೇ ಪತಿಯನ್ನು ಚಾಕುವಿನಿಂದ ಹತ್ಯೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇಬ್ಬರಿಗೂ ಇದು ಎರಡನೇ ಮದುವೆಯಾಗಿದ್ದು, ಸುಮಾರು 9 ವರ್ಷಗಳ ಹಿಂದೆ ಮದುವೆಯಾಗಿದ್ದರು. ಪ್ರಾಥಮಿಕ ತನಿಖೆಯ ಪ್ರಕಾರ, ಪತಿ ಬೇರೊಬ್ಬರೊಂದಿಗೆ ಸಂಬಂಧ ಹೊಂದಿದ್ದಾರೆ ಎಂಬ ಅನುಮಾನದಿಂದ ದಂಪತಿ ನಡುವೆ ಆಗಾಗ ಜಗಳವಾಗುತ್ತಿತ್ತು ಎನ್ನಲಾಗಿದೆ. ಆಸ್ಪತ್ರೆಯಿಂದ ಮನೆಗೆ …
Read More »
BigTv News
July 15, 2026
Breaking News, Crime
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಿಡಕಲ್ ಡ್ಯಾಂ ಸಮೀಪ ಗಡಿಪಾರು ಆದೇಶದಡಿ ಧಾರವಾಡ ಜೈಲಿನಲ್ಲಿದ್ದ ರೌಡಿಶೀಟರ್ ಮುತ್ತುಸ್ವಾಮಿ ಹೃದಯರಾಜ ಪಾಸ್ಕಲ್ (30) ಜಾಮೀನಿನ ಮೇಲೆ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆಗೀಡಾಗಿದ್ದಾನೆ. ಹಳೆ ವೈಷಮ್ಯವೇ ಕೊಲೆಗೆ ಕಾರಣ ಎಂದು ಶಂಕಿಸಲಾಗಿದೆ. ಜೈಲಿನಿಂದ ಬಿಡುಗಡೆಯಾದ ಬಳಿಕ ಸ್ನೇಹಿತರೊಂದಿಗೆ ಹಿಡಕಲ್ ಡ್ಯಾಂ ಪ್ರದೇಶಕ್ಕೆ ತೆರಳಿದ್ದ ವೇಳೆ, ಮೊದಲೇ ಹೊಂಚುಹಾಕಿದ್ದ ದುಷ್ಕರ್ಮಿಗಳ ತಂಡ ಏಕಾಏಕಿ ದಾಳಿ ನಡೆಸಿದೆ. ಮಾರಕಾಸ್ತ್ರಗಳಿಂದ ಮನಬಂದಂತೆ ಹಲ್ಲೆ ನಡೆಸಿ …
Read More »