Breaking News

Crime

ವಿಜಯಪುರ: ‘ಲೋಕಾ’ ದಾಳಿ; ರೇಣುಕಾ ಮನೆಯಲ್ಲಿ ಅಪಾರ ನಗದು, ಬೆಳ್ಳಿ, ಬಂಗಾರ ಪತ್ತೆ!

ರೇಣುಕಾ ಸಾತರ್ಲೆ ಅವರ ವಿಜಯಪುರ ಮತ್ತು ಸೋಲಾಪುರ ನಗರದಲ್ಲಿರುವ ಮನೆಗಳ ಮೇಲೆ ಗುರುವಾರ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ₹2 ಕೋಟಿ ಮೊತ್ತದ ಅಕ್ರಮ ಆಸ್ತಿ ಪತ್ತೆ ಹಚ್ಚಿದ್ದಾರೆ.ವಿಜಯಪುರದ ಚಾಣಕ್ಯ ನಗರದಲ್ಲಿರುವ ಮನೆ ಹಾಗೂ ನೆರೆಯ ಮಹಾರಾಷ್ಟ್ರ ರಾಜ್ಯದ ಸೋಲಾಪುರ ನಗರದಲ್ಲಿರುವ ಮನೆ ಮೇಲೆ ದಾಳಿ ನಡೆಸಿ, ತಪಾಸಣೆ ನಡೆಸಿದರು.ದಾಳಿಯ ವೇಳೆ ₹ 10 ಲಕ್ಷ ನಗದು, ಬೆಳ್ಳಿ, ಬಂಗಾರದ ಆಭರಣಗಳು, ವಾಹನಗಳು ಮತ್ತು ಇತರೆ ಆಸ್ತಿಗಳಿಗೆ ಸಂಬಂಧಿಸಿದ ದಾಖಲೆ …

Read More »

ಕಲಬುರಗಿ: ಕೇಂದ್ರ ಕಾರಾಗೃಹದ ಕೈದಿಗಳಿಬ್ಬರ ನಡುವೆ ಗಲಾಟೆ, ಪ್ರಕರಣ ದಾಖಲು!

ನಗರದ ಹೊರವಲಯದಲ್ಲಿರುವ ಕೇಂದ್ರ ಕಾರಾಗೃಹದಲ್ಲಿ ಕೈದಿಗಳಿಬ್ಬರ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದು ಕೈದಿಯೋರ್ವನ ಮೇಲೆ ಫರಹತಾಬಾದ್ ಪೊಲೀಸ್ ಠಾಣೆಯಲ್ಲಿ ಬುಧವಾರ ಪ್ರಕರಣ ದಾಖಲಾಗಿದೆ.ಅಲ್ಲದೇ, ಕಾರಾಗೃಹದ ನಿಯಮಗಳನ್ನು ಉಲ್ಲಂಘನೆ ಮಾಡಿರುವ ಕಾರಣಕ್ಕಾಗಿ ತುಳಸಿರಾಮ್ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.ಕೈದಿ ತುಳಸಿರಾಮ್ ಇನ್ನೋರ್ವ ವಿಚಾರಣಾ ಕೈದಿಯಾಗಿರುವ ಕಿರಣ್ ರಮೇಶ್ ಶೆಟ್ಟಿ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿ, ಗಾಯಗೊಳಿಸಿದ್ದಾನೆ. ತುಳಸಿರಾಮ್ ಮತ್ತು ಕಿರಣ್ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು …

Read More »

ಬಾಗಲಕೋಟ :ಭೀಕರ ಅಪಘಾತಕ್ಕೆ ಇಬ್ಬರು ಬಲಿ!

ಎರಡು ಕಾರುಗಳು ಮುಖಾಮುಖಿಯಾದ ಪರಿಣಾಮ ಸ್ಥಳದಲ್ಲೆ ಇಬ್ಬರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆ ರಕ್ಕಸಗಿ ಗ್ರಾಮದ ಬಳಿಯ ರಾಯಚೂರು-ಬೆಳಗಾವಿ ಹೆದ್ದಾರಿಯಲ್ಲಿ ನಡೆದಿದೆ.ಇನ್ನು ಗಾಯಾಗೊಂಡಿರುವ ವಿರೇಶ ಅಂಗಡಿ(55) ಹಾಗೂ ಸತೀಶ ಅಂಗಡಿ (28) ಬಾಗಲಕೋಟೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಮಹಾರಾಷ್ಟ್ರ ಮೂಲದ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸ್ಥಳಕ್ಕೆ ಅಮೀನಗಡ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆಯನ್ನು ನಡೆಸಿದ್ದಾರೆ. ಗಂಗಮ್ಮ ವಿರೇಶ ಅಂಗಡಿ (50), ಸಂದೇಶ ಅಂಗಡಿ (20) ಮೃತ …

Read More »

ಬೆಂಗಳೂರು: ಕೆಲಸ ಕೊಡಿಸುವುದಾಗಿ ನಂಬಿಸಿ ವಂಚನೆ; 12 ಜನರ ಗ್ಯಾಂಗ್ ಬಂಧನ!

ಮನೆಯಿಂದ ಕೆಲಸ ಮಾಡುವ ಅವಕಾಶಗಳ ಆಮಿಷವೊಡ್ಡಿ ಜನರನ್ನು ವಂಚಿಸುತ್ತಿದ್ದ ಹನ್ನೆರಡು ಜನರನ್ನು ಬಂಧಿಸಲಾಗಿದೆ. ಆರೋಪಿಗಳು ಬಿಹಾರ ಮತ್ತು ಉತ್ತರ ಪ್ರದೇಶದಿಂದ ಬಂದ ಗ್ಯಾಂಗ್‌ನ ಭಾಗವಾಗಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ದೂರಿನಲ್ಲಿ, ಮನೆಯಿಂದ ಕೆಲಸ ಮಾಡುವ ಅವಕಾಶದ ಆಮಿಷ ಒಡ್ಡಿ ತನ್ನ ‘ಕಡಿಮೆ ಕ್ರೆಡಿಟ್ ಸ್ಕೋರ್ ಸರಿಪಡಿಸಲು’ ಹಣವನ್ನು ವರ್ಗಾಯಿಸಲು ಕೇಳಲಾಗಿದೆ. ಅವರನ್ನು ನಂಬಿ, ಹಣವನ್ನು ಹಲವು ಬಾರಿ ಖಾತೆಯೊಂದಕ್ಕೆ ವರ್ಗಾಯಿಸಿರುವುದಾಗಿ ಆರೋಪಿಸಿದ್ದಾರೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ 10 ಸಹಚರರು ಮುಖ್ಯವಾಗಿ …

Read More »

ಕುಂದಾಪುರ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ; ರಕ್ಷಿಸಲು ಜಿಗಿದ ಮಗನೂ ಸಾವು!!

ಕುಂದಾಪುರ ತಾಲ್ಲೂಕಿನ ತೆಕ್ಕಟ್ಟೆಯಲ್ಲಿ ವ್ಯಕ್ತಿಯೊಬ್ಬರು ಗುರುವಾರ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಅವರನ್ನು ರಕ್ಷಿಸಲು ಬಾವಿಗೆ ಜಿಗಿದ ಮಗನೂ ಮೃತಪಟ್ಟಿದ್ದಾರೆ.ಮಾಧವ ದೇವಾಡಿಗ ಅವರ ಪತ್ನಿಯೂ ಬಾವಿಗೆ ಹಾರಿದ್ದು, ಅವರನ್ನು ಸ್ಥಳೀಯರು ರಕ್ಷಿಸಿದ್ದಾರೆ.ಕುಂದಾಪುರದವರಾದ ಮಾಧವ ದೇವಾಡಿಗ ಅವರ ಕುಟುಂಬವು ತೆಕ್ಕಟ್ಟೆ ಮೀನು ಮಾರುಕಟ್ಟೆ ಸಮೀಪ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು ಎಂದು ಮೂಲಗಳು ತಿಳಿಸಿವೆ.ಮಾಧವ ದೇವಾಡಿಗ (55), ಪುತ್ರ ಪ್ರಸಾದ್ ದೇವಾಡಿಗ (22) ಮೃತಪಟ್ಟವರು.

Read More »

ವಿಜಯನಗರ :ಜೆಸಿಬಿ ವಾಹನ ಹಾಗೂ ಬಸ್ ನಡುವೆ ಭೀಕರ ಅಪಘಾತ, 8 ಜನರಿಗೆ ಗಂಭೀರ ಗಾಯ!

ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಗುರುವಾರ ಬೆಳಗಿನ ಜಾವ ಚಲಿಸುತ್ತಿದ್ದ ಜೆಸಿಬಿ ವಾಹನಕ್ಕೆ ಹಿಂದಿನಿಂದ ವಿ ಆರ್ ಎಲ್ ಬಸ್ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಒಟ್ಟು ಎಂಟು ಜನ ತೀವ್ರವಾಗಿ ಗಾಯಗೊಂಡಿದ್ದಾರೆ.ಜೆಸಿಬಿ ವಾಹನದ ಚಾಲಕ ಗಂಗಾವತಿ ತಾಲ್ಲೂಕಿನ ವಡ್ಡರಹಟ್ಟಿಯ ಶರಣಪ್ಪ,ಬಸ್ ಚಾಲಕ ಮಲ್ಲಿಕಾರ್ಜುನ ಸೇರಿದಂತೆ ಬಸ್ ನಲ್ಲಿದ್ದ ಇತರೆ ಆರು ಜನ ಪ್ರಯಾಣಿಕರು ಗಾಯಗೊಂಡಿದ್ದು, ಹೊಸಪೇಟೆ ಸರ್ಕಾರಿ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಸುಮಾರು 32 ಜನ ಪ್ರಯಾಣಿಕರನ್ನು ಹೊತ್ತು ಬೆಂಗಳೂರಿನಿಂದ ಯಾದಗಿರಿಗೆ …

Read More »

ಬಳ್ಳಾರಿ :ಅಂತರಾಜ್ಯ ದರೋಡೆಕೋರನ ಮೇಲೆ ಪೊಲೀಸರಿಂದ ಫೈರಿಂಗ್!

13 ಎಟಿಎಂ ಕಳ್ಳತನ ಪ್ರಕರಣದಲ್ಲಿ ಹಾಗೂ ಎರಡು ಕೊಲೆ ಪ್ರಕರಣದಲ್ಲಿ ಬೇಕಾಗಿದ್ದ ಕುಖ್ಯಾತ ಡಕಾಯಿತ ಅಮರೇಶ್ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ.ಗುಂಡೇಟು ತಗುಲಿ ಗಾಯಗೊಂಡಿರುವ ಆರೋಪಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದನೆ.ಆರೋಪಿ ಅಮರೇಶ್ ವಿರುದ್ಧ ಒಟ್ಟು 30 ಪ್ರಕರಣಗಳಿವೆ ಎಂದು ತಿಳಿದುಬಂದಿದೆ. ಕರ್ನಾಟಕ ಹಾಗೂ ಆಂಧ್ರ ಎರಡೂ ರಾಜ್ಯಗಳಲ್ಲಿಯೂ ದರೋಡೆ, ಕೊಲೆ ಸುಲಿಗೆ ಪ್ರಕರಣಗಳಲ್ಲಿ ಭಾಗಿಯಾಗಿದ್ದಲ್ಲದೇ 13 ಎಟಿಎಂ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ. ಪ್ರಕರಣವೊಂದರಲ್ಲಿ ಬಂಧಿಸಿ ಸ್ಥಳ ಮಹಜರಿಗೆ ಕರೆತಂದಿದ್ದ ವೇಳೆ …

Read More »

ದಾವಣಗೆರೆ: ರೌಡಿಶೀಟರ್ ಗಳ ಮನೆ ಮೇಲೆ ದಾಳಿ ನಡೆಸಿ ಪೊಲೀಸರಿಂದ ತಪಾಸಣೆ!

ದಾವಣಗೆರೆ ನಗರದಲ್ಲಿರುವ 46 ರೌಡಿಶೀಟರ್ ಮನೆಗಳ ಮೇಲೆ ಇಂದು ಬೆಳ್ಳಂಬೆಳಗ್ಗೆಯೇ ನಗರದ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದರು. ಡೆಪ್ಯೂಟಿ ಪೊಲೀಸ್ ವರಿಷ್ಠಾಧಿಕಾರಿ ಶರಣಬಸವೇಶ್ವರ ಮತ್ತು ಪೊಲೀಸ್ ಇನ್ಸ್​ಪೆಕ್ಟರ್ ರವಿನಾಯ್ಕ್ ನೇತೃತ್ವದಲ್ಲಿ ಪೊಲೀಸ್ ದಾಳಿ ನಡೆಯಿತು ಎಂದು ನಮ್ಮ ದಾವಣಗೆರೆ ವರದಿಗಾರ ಮಾಹಿತಿ ನೀಡುತ್ತಾರೆ. ಗಾರೆ ಮಂಜನ ವಿರುದ್ಧ ಕೊಲೆ ದರೋಡೆ, ಜೀವ ಬೆದರಿಕೆ ಸೇರಿದಂತೆ ಒಟ್ಟು 12 ಕೇಸ್​ಗಳಿವೆಯಂತೆ.

Read More »

ಬೆಂಗಳೂರು: ಪೇಂಟರ್ ಕೊಲೆ, ಆರೋಪಿಗಳು ಪರಾರಿ!

ಪಾರ್ಟಿ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವೇಳೆ ನಡೆದ ಗಲಾಟೆಯಲ್ಲಿ ಸ್ನೇಹಿತನನ್ನು ಕೊಲೆ ಮಾಡಿದ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ. ಅಮೃತಹಳ್ಳಿ ಪೊಲೀಸರು ಆರೋಪಿಗಳಿಗೆ ಹುಡುಕಾಟ ನಡೆಸುತ್ತಿದ್ದಾರೆ.ತಡರಾತ್ರಿವರೆಗೂ ಅಹಮದ್‌ ಅಜೀಜ್‌ ಹಾಗೂ ಅವರ ಇಬ್ಬರು ಸ್ನೇಹಿತರು ಪಾರ್ಟಿ ಮಾಡಿದ್ದರು. ಪಾರ್ಟಿ ವೇಳೆ ಮೂವರ ಮಧ್ಯೆ ಗಲಾಟೆ ನಡೆದಿತ್ತು. ಅದಾದ ಮೇಲೆ ರಸ್ತೆಯಲ್ಲಿ ನಡೆದು ಹೋಗುವಾಗ ಇಬ್ಬರು ಆರೋಪಿಗಳು ಸೇರಿಕೊಂಡು, ಅಜೀಜ್‌ ಹಲ್ಲೆ ನಡೆಸಿದ್ದರು. ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಜೀಜ್ ಅವರನ್ನು ಸ್ಥಳೀಯರು ಆಸ್ಪತ್ರೆಗೆ …

Read More »

ಕುಂದಗೋಳ : ಪತಿಯ ಅಕ್ರಮ ಸಂಭದಕ್ಕೆ ಪತ್ನಿ ಬಲಿ!

ಪತಿಯ ಅಕ್ರಮ ಸಂಭದಕ್ಕೆ ಮನನೊಂದ ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪಶುಪತಿಹಾಳ ಗ್ರಾಮದಲ್ಲಿ ನಡೆದಿದೆ. ಶೃತಿ ವೀರಬಸಪ್ಪ ರವತ್ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ವೀರಬಸಪ್ಪ ರಾವುತ್ ಅವರು ಪುಷ್ಪ ಎಂಬುವವರೊಂದಿಗೆ ಅಕ್ರಮ ಸಂಭಂದ ಹೊಂದಿದ್ದರು. ಈ ವಿಷಯ ತಿಳಿದ ಶೃತಿ ಮಾನಸಿಕ ಹಿಂಸೆಗೋಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶ್ರುತಿಯ ತಂದೆ ಆರೋಪಿಸಿದ್ದಾರೆ. ಈ ಕುರಿತು ಗಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »