Breaking News

Crime

ಕೊಪ್ಪಳ: ಕೊಲೆ ಪ್ರಕರಣ ಭೇದಿಸಿದ ಮೊಬೈಲ್ ನೆಟ್ವರ್ಕ್!

ಗಂಗಾವತಿ ತಾಲೂಕಿನ ಹಣವಾಳ ಗ್ರಾಮದಲ್ಲಿ ನಡೆದ ಯುವಕನ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಮೊಬೈಲ್ ನೆಟ್ವರ್ಕ್ ಮತ್ತು ಕಾಲ್ ರೆಕಾರ್ಡ್‌ಗಳ ಸಹಾಯದಿಂದ ಆರೋಪಿಗಳನ್ನು ಬಂಧಿಸಲಾಗಿದೆ.ಕೊಲೆಯಾದ ಸುರೇಶ್‌ನ ಮೊಬೈಲ್ ನೆಟ್ವರ್ಕ್ ಮತ್ತು ಕಾಲ್ ರೆಕಾರ್ಡ್‌ಗಳನ್ನು ಪರಿಶೀಲಿಸಿದ ಗಂಗಾವತಿ ಗ್ರಾಮೀಣ ಠಾಣೆ ಪೊಲೀಸರು, ಆರೋಪಿಗಳನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಕೊಲೆ ಆರೋಪಿಗಳಾದ ಶಿವಕುಮಾರ್, ಮಂಜುನಾಥ್, ಮಹೇಶ್ವರಿ ಮತ್ತು ಅಮರೇಶ್‌ರನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರೆದಿದೆ. ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More »

ಹುಣಸಗಿ : ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ ಮಾವನಿಂದಲೇ ಕೊಡಲಿಯಿಂದ ಕೊಚ್ಚಿ ಅಳಿಯನ ಕೊಲೆ!

ಮಾವನಿಂದಲೇ ಅಳಿಯನನ್ನು ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಕೊಲೆ ನಡೆದ ಘಟನೆ ಹುಣಸಗಿ ತಾಲೂಕಿನ ಶಖಾಪುರ ಎಸ್.ಕೆ.ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದಿದೆ.ಆರೋಪಿ ಮಾನಪ್ಪ ಹಳ್ಳೆಪ್ಪ ವಡಗೇರಿ ಅವರನ್ನು ಪೊಲೀಸ್‌ರು ವಶಕ್ಕೆ ತೆಗೆದುಕೊಂಡು ನ್ಯಾಯಾಂಗದ ಬಂಧನಕ್ಕೆ ಒಪ್ಪಿಸಿದ್ದಾರೆ.ಘಟನೆ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್‌ಶಂಕರ್, ಡಿವೈಎಸ್ಪಿ ಜಾವೀದ್ ಇನಾಮದಾರ್, ಹುಣಸಗಿ ಸಿಪಿಐ ರವಿಕುಮಾರ ಎಸ್.ಎನ್, ಪಿಎಸ್‌ಐ ಅಮೋಜ್ ಕಾಂಬಳೆ ಭೇಟಿ ನೀಡಿ ಪರಿಶೀಲನೆ ನಡೆಸಿ ದೂರಿನನ್ವಯ ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಲಕ್ಷ್ಮಣ್ಣ …

Read More »

ನೆಲಮಂಗಲ: ಟ್ಯಾಂಕರ್-ಬೈಕ್ ನಡುವೆ ಭೀಕರ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು!

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಮಾಕಳಿಯ ಎಪಿಎಂಸಿ ರಸ್ತೆ ತಿರುವಿನಲ್ಲಿ ಇಂದು ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈ ಅಪಘಾತದಿಂದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಗಂಟೆಗಟ್ಟಲೆ ಸಂಚಾರ ದಟ್ಟಣೆ ಉಂಟಾಯಿತು, ಇದರಿಂದ ವಾಹನ ಸವಾರರು ಪರದಾಡುವಂತಾಯಿತು. ನೆಲಮಂಗಲ ಸಂಚಾರ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ, ಸಂಚಾರವನ್ನು ಸರಾಗಗೊಳಿಸಲು ಕ್ರಮ ಕೈಗೊಂಡರು. ಘಟನೆಯ ಸಂಬಂಧ ನೆಲಮಂಗಲ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಉಡುಪಿ :ಮಲ್ಪೆ ಬಂದರಿನಲ್ಲಿ ಬಾಂಬ್ ಸ್ಫೋಟ, ಐವರು ಗಂಭೀರ..!

ಮಲ್ಪೆ ಬಂದರಿನಲ್ಲಿ ಮಂಗಳವಾರ ಸಂಜೆ ಬಾಂಬ್ ಸ್ಪೋಟದ ಸದ್ದು ಮೊಳಗಿದೆ. ಸ್ಫೋಟದ ತೀವ್ರತೆಗೆ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.ತಕ್ಷಣ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳ ಬೆಂಕಿಯನ್ನು ನಂದಿಸಿದ್ದಾರೆ. ಗಾಯಗೊಂಡ ಐವರು ಮೀನುಗಾರರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಇದು ನಿಜ ಘಟನೆ ಅಲ್ಲ. ಸಂಭಾವ್ಯ ಆತಂಕದ ಹಿನ್ನೆಲೆಯಲ್ಲಿ ನಡೆದ ಅಣಕು ಪ್ರದರ್ಶನ.ಹೌದು, ಮಲ್ಪೆ ಮೀನುಗಾರರ ಸಂಘ, ಕರಾವಳಿ ಕಾವಲು ಪಡೆ, ಆರೋಗ್ಯ ಇಲಾಖೆ, ಮೀನುಗಾರಿಕಾ ಇಲಾಖೆ, ಅಗ್ನಿಶಾಮಕ ದಳ ಹಾಗೂ ಕಸ್ಟಮ್ಸ್ ವತಿಯಿಂದ ಜಂಟಿಯಾಗಿ …

Read More »

ಮಂಗಳೂರು :ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ, ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳ ಬಂಧನ!

ಮಂಗಳೂರು ನಗರದ ಬಜ್ಪೆ ಬಳಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು ಆರೋಪಿಗಳನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ಕಳವಾರು ನಿವಾಸಿ ಅಜರುದ್ದೀನ್ ಅಲಿಯಾಸ್​ ಅಜರ್ ಅಲಿಯಾಸ್​ ಅಜ್ಜು(29), ಬಜಪೆ ನಿವಾಸಿ ಅಬ್ದುಲ್ ಖಾದರ್ ಅಲಿಯಾಸ್​ ನೌಫಲ್(24), ವಾಮಂಜೂರು ನಿವಾಸಿ ನೌಷದ್ ಅಲಿಯಾಸ್​ ವಾಮಂಜೂರು ನೌಷದ್ ಅಲಿಯಾಸ್​ ಚೊಟ್ಟೆ ನೌಷದ್(39) ಬಂಧಿತರು.

Read More »

ದಾವಣಗೆರೆ :ಬ್ಯಾಂಕಲ್ಲಿ ಚಿನ್ನ ಕದ್ದು ಸಿಕ್ಕಿಬಿದ್ದ ಅಧಿಕಾರಿ!

ಕೆಲಸ ಮಾಡುತ್ತಿದ್ದ ಬ್ಯಾಂಕಿನ ಚಿನ್ನಾಭರಣವನ್ನು ಕದ್ದು ಬೇರೆಡೆ ಅಡವಿಟ್ಟು ₹ 2 ಕೋಟಿಗೂ ಅಧಿಕ ಸಾಲ ಪಡೆದು ‘ಲಕ್ಕಿ ಭಾಸ್ಕರ’ ಸಿನಿಮಾ ನಾಯಕನಂತೆ ದಿಢೀರ್‌ ಶ್ರೀಮಂತನಾಗಲು ಯತ್ನಿಸಿದ ಬ್ಯಾಂಕ್‌ ಅಧಿಕಾರಿಯೊಬ್ಬ ಕೊನೆಗೂ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ.ನಕಲಿ ಚಿನ್ನವನ್ನು ಅಡವಿಟ್ಟುಕೊಂಡು ತಾನೇ ಸಾಲ ಪಡೆದಿದ್ದ ಸಂಗತಿ ತನಿಖೆಯ ವೇಳೆ ಪತ್ತೆಯಾಗಿದೆ.’ಸ್ನೇಹಿತರು ಹಾಗೂ ಸಂಬಂಧಿಕರ ಹೆಸರಿನಲ್ಲಿ ಹಂತ-ಹಂತವಾಗಿ ನಕಲಿ ಚಿನ್ನಾಭರಣಗಳನ್ನು ತನ್ನದೇ ಬ್ಯಾಂಕಿನಲ್ಲಿ ಅಡವಿಟ್ಟುಕೊಂಡಿದ್ದ. ಚಿನ್ನಾರಭರಣ ಪರಿಶೀಲನೆ, ದಾಖಲೆಗಳ ಸೃಷ್ಟಿಯ ಕೆಲಸವನ್ನು ತಾನೇ ನಿರ್ವಹಿಸಿದ್ದ. …

Read More »

ಪುಲ್ವಾಮಾ: ಬೆಳ್ಳಂಬೆಳಗ್ಗೆ ಗುಂಡಿನ ಸದ್ದು – ಸಿಕ್ಕಿಬಿದ್ದ ಮೂರು ಉಗ್ರರು!!

ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಟ್ರಾಲ್ ಪ್ರದೇಶದ ನಾದಿರ್ ಗ್ರಾಮದಲ್ಲಿ ಬೆಳ್ಳಂಬೆಳಗ್ಗೆ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಎರಡರಿಂದ ಮೂರು ಜನ ಸಿಕ್ಕಿಬಿದ್ದಿದ್ದಾರೆ ಎಂದು ವರದಿಯಾಗಿದೆ.ಕಳೆದ 48 ಗಂಟೆಗಳ ಒಳಗೆ ಈ ಪ್ರದೇಶದಲ್ಲಿ ನಡೆದ ಎರಡನೇ ಎನ್‌ಕೌಂಟರ್ ಇದಾಗಿದ್ದು, ಈ ಹಿಂದೆ ಶೋಪಿಯಾನ್ ಜಿಲ್ಲೆಯ ಕೆಲ್ಲರ್ ಪ್ರದೇಶದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಮೂವರು ಲಷ್ಕರ್-ಎ-ತೊಯ್ಬಾ ಭಯೋತ್ಪಾದಕರನ್ನು ಹೊಡೆದುರುಳಿಸಿದ್ದರು.ಇದಕ್ಕೆ ಭದ್ರತಾ ಪಡೆಗಳು ಕೂಡ ಪ್ರತ್ಯುತ್ತರ ನೀಡುತ್ತಿದ್ದಾರೆ …

Read More »

ಮದ್ದೂರು :ವ್ಯಕ್ತಿ ನಾಪತ್ತೆ ದೂರು ದಾಖಲು!

ಭೀಮನಕೆರೆ ಗ್ರಾಮದ ಕೆಂಪಣ್ಣ ನಾಪತ್ತೆಯಾಗಿರುವುದಾಗಿ ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ.ಬೆಂಗಳೂರಿನ ಮಿಂಟೋ ಆಸ್ಪತ್ರೆಗೆ ಹೋಗಿ ಬರುವುದಾಗಿ ಹೇಳಿ ಕಳೆದ ಫೆಬ್ರವರಿ 2ರಂದು ಹೋಗಿದ್ದ ಕೆಂಪಣ್ಣ ಅಂದಿನಿಂದ ನಾಪತ್ತೆಯಾಗಿದ್ದಾರೆ ದೂರು ನೀಡಲಾಗಿದೆ. 47 ವರ್ಷದ ಕೆಂಪಣ್ಣ 5.4 ಅಡಿ ಎತ್ತರ, ಕೋಲು ಮುಖ, ಕಪ್ಪು ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದಾನೆ. ಮನೆಯಿಂದ ಹೊರಡುವಾಗ ನೀಲಿ ಮಿಶ್ರಿತ ಬಣ್ಣದ ಲುಂಗಿ ಮತ್ತು ಶರ್ಟು ಧರಿಸಿದ್ದಾನೆ. ಈತನ ಬಗ್ಗೆ ಮಾಹಿತಿ ಉಳ್ಳವರು ಮದ್ದೂರು ಪೊಲೀಸರು …

Read More »

ಮದ್ದೂರು :ಪತ್ನಿ ಕಿರುಕುಳ ಪತಿ ನಾಪತ್ತೆ, ದೂರು ದಾಖಲು!

ಪತ್ನಿ ಕಿರುಕುಳದಿಂದ ಬೇಸತ್ತ ತಮ್ಮ ಪುತ್ರ ನಾಪತ್ತೆಯಾಗಿರುವುದಾಗಿ ತಾಯಿ ಪಾರ್ವತಮ್ಮ ಪೊಲೀಸರಿಗೆ ದೂರು ನೀಡಿದ್ದಾರೆ. ಪಟ್ಟಣದ ವೈದ್ಯನಾಥಪುರ ರಸ್ತೆ ನಿವಾಸಿ ಮನು (38) ಅವರಿಗೆ ಸೊಸೆ ಜಯಶ್ರೀ ದಿನನಿತ್ಯ ನೀಡುತ್ತಿದ್ದ ಕಿರುಕುಳದಿಂದ ಬೇಸತ್ತ ಮನು ಕಳೆದ ಮೇ 5ರಿಂದ ನಾಪತ್ತೆಯಾಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.ಮನು 5.9 ಅಡಿ ಎತ್ತರ, ಕೋಲು ಮುಖ, ಎಣ್ಣೆಗೆಂಪು ಮೈಬಣ್ಣ, ಸಾಧಾರಣ ಮೈಕಟ್ಟು, ಮನೆಯಿಂದ ಹೊಗುವಾಗ ಈತ ನೀಲಿ ಬಣ್ಣದ ಟಿ-ಶರ್ಟು ಹಾಗೂ ಜೀನ್ಸ್ ಪ್ಯಾಂಟ್ …

Read More »

ಆರಕ್ಷಕರ ಹಣೆಪಟ್ಟಿಯಲ್ಲಿ ಪಾಪದ ಕೆಲಸಕ್ಕೆ ಕೈ ಹಾಕಿದ ಕಡು ಭ್ರಷ್ಟರು..!!!!

ಬಡ್ಡಿದಂಧೆಯ ಮೊದಲ ಬೇರು ಇಲಾಖೆಯಲ್ಲಿ..???? ಸಮಯ ಕೊಡಿ ಅಂದ್ರೆ ನಾವು ಇನ್ನು ಮುವತ್ತು ವರ್ಷ ಸರ್ವಿಸ್ ಮಾಡ್ತೇವಿ ನೋಡು ಅಂತ ಧಮ್ಕಿ… ಸಲಾಂ ಸಲಾಂ ಅಂದ್ರು ಕರುಣೆ ಇಲ್ಲಿದ ಕಟುಕರು!!! ಕರ್ಮ ರಿಟರ್ನಸ್ ..ಮಾಡಿದ್ದ ಉಣ್ಣೋ ಮಾರಯ್ಯ ಅನ್ನೊ ಮಾತು ನೆನಪಿಗೆ ಬರುವ ದಿನ… ಈ ಸುದ್ದಿ ಪ್ರಸಾರ ಆದ ನಂತರ ಎಷ್ಟು ಮಂದಿ ಅಮಾನತ್ತು ಆಗ್ತಾರೆ ಅಂದ್ರೆ ಉಹಿಸಲು ಆಗದ ಸ್ಟೋರಿ……. ಹುಬ್ಬಳ್ಳಿ: ಅವಳಿ ನಗರದಲ್ಲಿ ಬಡವರ ರಕ್ತ …

Read More »