BigTv News
May 5, 2025
Breaking News, Crime
ಸಫಾಯಿ ಕರ್ಮಚಾರಿಗಳ ಸಮುದಾಯದ ಶಿವ, ರಮೇಶ, ಓಂಸಿಂಗ್ ಸೇರಿದಂತೆ ನಾಲ್ಕೈದು ಜನರು ಕ್ಷುಲ್ಲಕ ಕಾರಣಕ್ಕೆ ಜಗಳ ಮಾಡಿಕೊಂಡಿದ್ದರು.ಮಾತಿಗೆ ಮಾತು ಬೆಳದು ಓಂ ಸಿಂಗ್ ಹಾಗೂ ಇನ್ನೊಬ್ಬನ ಮೇಲೆ ಚಾಕುವಿನಿಂದ ಇರಿದಿದ್ದು ತೀವ್ರ ಗಾಯಗೊಂಡ ಓಂಸಿಂಗ್ ಮೃತಪಟ್ಟಿದ್ದು, ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ.ಸದರ್ ಬಜಾರ್ ಠಾಣೆಯ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗಾಯಗೊಂಡವರನ್ನು ಚಿಕಿತ್ಸೆಗಾಗಿ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
Read More »
BigTv News
May 5, 2025
Breaking News, Crime
ಮನೆಗೆ ತಡವಾಗಿ ಬರುತ್ತಿದ್ದ ಕಾರಣ ಪೋಷಕರು ಬೈದು ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು ಈತ ವಿದ್ಯುತ್ ಕಂಬಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಈತ ಖಾಸಗಿ ಫಾರ್ಮಾ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಸುದೀಪ್ ಮದ್ಯದ ಅಮಲಿನಲ್ಲಿ ದುಡುಕಿನ ನಿರ್ಧಾರ ತೆಗೆದುಕೊಂಡು, ಮನೆಯ ಮುಂದಿನ ವಿದ್ಯುತ್ ಕಂಬಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದ್ದು ಈ ಬಗ್ಗೆ ಶಕ್ತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸುದೀಪ್ ಕುಮಾರ್ (21) ಆತ್ಮಹತ್ಯೆಗೆ ಶರಣಾದವ.
Read More »
BigTv News
May 5, 2025
Breaking News, Crime
ಪಹಲ್ಗಾಮ್ ದಾಳಿಕೋರರಿಗಾಗಿ ಕಾಶ್ಮೀರ ಕಣಿವೆಯಲ್ಲಿ ಶೋಧ ಕಾರ್ಯಾಚರಣೆ ತೀವ್ರಗೊಳ್ಳುತ್ತಿದ್ದಂತೆ, ಜಂಟಿ ಕಾರ್ಯಾಚರಣೆ ತಂಡವು ಭಯೋತ್ಪಾದಕರಿಗೆ ಆಹಾರ ಮತ್ತು ವಸತಿಗಾಗಿ ಸಹಾಯ ಮಾಡಿದ ಆರೋಪದ ಮೇಲೆ ಇಮ್ತಿಯಾಜ್ ಎಂಬ ಪ್ರಮುಖ ಶಂಕಿತನನ್ನು ಬಂಧಿಸಿದೆ.ಪಹಲ್ಗಾಮ್ ದಾಳಿಕೋರರನ್ನು ಪತ್ತೆಹಚ್ಚುವಲ್ಲಿ ಜಂಟಿ ಪಡೆಗಳಿಗೆ ಸಹಾಯ ಮಾಡಲು ಒಪ್ಪಿಕೊಂಡ ಇಮ್ತಿಯಾಜ್ ಕಾಡಿನಲ್ಲಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದನು.ಭದ್ರತಾ ಪಡೆಗಳಿಂದ ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ, ಇಮ್ತಿಯಾಜ್ ನದಿಗೆ ಹಾರಿ ಬಲವಾದ ಪ್ರವಾಹಕ್ಕೆ ಸಿಲುಕಿ ಮುಳುಗಿ ಸಾವನ್ನಪ್ಪಿದ್ದಾನೆ.ಜಂಟಿ ಶೋಧ ಕಾರ್ಯಾಚರಣೆಯ ಸಮಯದಲ್ಲಿ, ಮ್ಯಾಗ್ರೆ ತಪ್ಪಿಸಿಕೊಳ್ಳಲು …
Read More »
BigTv News
May 5, 2025
Breaking News, Crime
ಎರಡು ಕಾರುಗಳ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಓರ್ವ ಸ್ಥಳದಲ್ಲಿಯೇ ಮೃತಪಟ್ಟು, ಮೂವರು ಗಾಯಗೊಂಡ ಘಟನೆ ಹುಬ್ಬಳ್ಳಿ-ಧಾರವಾಡ ಬಿಆರ್‌ಟಿಎಸ್ ಕಾರಿಡಾರ್‌ನ ಪಿಬಿ ರಸ್ತೆಯಲ್ಲಿ ರವಿವಾರ ನಡೆದಿದೆ. ಶಿವಾನಂದ ಹಾಗೂ ಮಂಜುನಾಥ ಹುಬ್ಬಳ್ಳಿಯಿಂದ ಧಾರವಾಡದತ್ತ ಕಾರಿನಲ್ಲಿ ಬಿಆರ್‌ಟಿಎಸ್ ಕಾರಿಡಾರ್‌ನಲ್ಲಿ ಪ್ರಯಾಣಿಸುತ್ತಿದ್ದರು. ಧಾರವಾಡದ ಮಾರ್ಡನ್ ಹಾಲ್ ಎದುರು ಬರುತ್ತಿದ್ದಂತೆ ಧಾರವಾಡದಿಂದ ಹುಬ್ಬಳ್ಳಿ ಮಾರ್ಗವಾಗಿ ಗದಗಕ್ಕೆ ಹೊರಟಿದ್ದ ಕಾರು ಏಕಾಏಕಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ನುಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಶಿವಾನಂದ ಸ್ಥಳದಲ್ಲಿಯೇ ಮೃ*ತಪಟ್ಟಿದ್ದಾರೆ. ಕಾರು …
Read More »
BigTv News
May 5, 2025
Breaking News, Crime, ಹುಬ್ಬಳ್ಳಿ-ಧಾರವಾಡ
ಶನಿವಾರ ರಾತ್ರಿ ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆ ಮೂಲಕ ಗೂಡ್ಸ್ ವಾಹನದಲ್ಲಿ ಈ ಗೋಮಾಂಸ ಸಾಗಿಸಲಾಗುತ್ತಿತ್ತು.ಬೆಳಗಾವಿಯಿಂದ ಮಂಗಳೂರಿಗೆ ಅಕ್ರಮವಾಗಿ ಸಾಗಿಸುತ್ತಿದ್ದ 1 ಟನ್ ಗೋಮಾಂಸವನ್ನು ಬಜರಂಗದಳದ ಕಾರ್ಯಕರ್ತರು ಪತ್ತೆ ಮಾಡಿ, ಪೊಲೀಸರಿಗೆ ಒಪ್ಪಿಸಿದ್ದಾರೆ. ಇಡೀ ವಾಹನದಲ್ಲಿ ಅಕ್ರಮ ಗೋಮಾಂಸ ತುಂಬಿಸಲಾಗಿತ್ತು. ತಪಾಸಣೆ ಸಮಯದಲ್ಲಿ ಗೊತ್ತಾಗದಿರಲಿ ಎಂಬ ಕಾರಣಕ್ಕೆ ಮುಂದಿನ ಒಂದೆರಡು ಸಾಲಿನಲ್ಲಿ ಮೀನುಗಳನ್ನು ಇಡಲಾಗಿತ್ತು. ತಕ್ಷಣವೇ ಈ ಬಗ್ಗೆ ಬಜರಂಗದಳದ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ನೀಡಿದರು. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು …
Read More »
BigTv News
May 5, 2025
Breaking News, Crime
ದೆಹಲಿಯಿಂದ ಮಹಾರಾಷ್ಟ್ರದ ಶಿರಡಿಗೆ ತೆರಳುತ್ತಿದ್ದ ವಿಮಾನದಲ್ಲಿ ಗಗನಸಖಿಗೆ ಕುಡಿದ ಮತ್ತಿನಲ್ಲಿ ಪುರುಷ ಪ್ರಯಾಣಿಕನೊಬ್ಬ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಪೊಲೀಸರನ್ನು ಉಲ್ಲೇಖಿಸಿ ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿತ್ತು.ಅವರು ವಿಮಾನವು ಶಿರಡಿ ವಿಮಾನ ನಿಲ್ದಾಣದಲ್ಲಿ ಇಳಿದ ನಂತರ ಭದ್ರತಾ ಸಿಬ್ಬಂದಿಗೆ ಮಾಹಿತಿ ನೀಡಿದ ಮೇರೆಗೆ ಪ್ರಯಾಣಿಕನನ್ನು ಭದ್ರತಾ ಸಿಬ್ಬಂದಿಗಳು ವಶಕ್ಕೆ ಪಡೆದಿದ್ದಾರೆ.ಅವರನ್ನು ರಹತಾ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದ್ದು ಅಲ್ಲಿ ಕಿರುಕುಳ ಪ್ರಕರಣ ದಾಖಲಿಸಲಾಗಿದೆ. ಅವರ ವೈದ್ಯಕೀಯ ಪರೀಕ್ಷೆಯಲ್ಲಿ ಅವರು ಮದ್ಯ …
Read More »
BigTv News
May 5, 2025
Breaking News, Crime
ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಗೃಹಿಣಿಯ ಕೊರಳಿನಿಂದ 45 ಗ್ರಾಂ. ತೂಕದ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿ ನಡೆದಿದೆ. ಪೋಲೋಸರು ಆರೋಪಿ ಯನ್ನು ಹುಡುಕುವ ಕಾರ್ಯಾಚರಣೆಯಲ್ಲಿದ್ದಾರೆ.
Read More »
BigTv News
May 5, 2025
Breaking News, Crime
ನಾಗನಗೌಡ ಗೌಡಪ್ಪ ಪಾಟೀಲ್ ಒಡೆತನದ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಭೀಮಪ್ಪ, ಪಾಟೀಲ್ ಅವರ ಕೃಷಿ ಭೂಮಿಯಲ್ಲಿ ಕೆಲಸ ಮಾಡಿಕೊಂಡು, ಅವರ ಜಾನುವಾರುಗಳನ್ನು ಸಹ ನೋಡಿಕೊಳ್ಳುತ್ತಿದ್ದರು. ಅನಾರೋಗ್ಯದ ಕಾರಣ ಭೀಮಪ್ಪ ಅವರಿಗೆ ದನಗಳನ್ನು ನೋಡಿಕೊಳ್ಳಲು, ತನ್ನ ದೈನಂದಿನ ಕರ್ತವ್ಯಗಳನ್ನು ನಿರ್ವಹಿಸಲು ಸಾಧ್ಯವಾಗಿಲ್ಲ.ಮೇ 1ರ ಗುರುವಾರ ಸಂಜೆ 4 ಗಂಟೆ ಸುಮಾರಿಗೆ ಭೀಮಪ್ಪ ಅವರ ಆರೋಗ್ಯ ಹದಗೆಟ್ಟಿದ್ದು, ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ಈ ವೇಳೆ ಮನೆಗೆ ಬಂದಿರುವ ಮಾಲೀಕ ನಾಗನಗೌಡ, ದನಗಳನ್ನು ಮೇಯಿಸಲು …
Read More »
BigTv News
May 5, 2025
Breaking News, Crime
ಗಂಡನೊಬ್ಬ ಕ್ಷುಲ್ಲಕ ಕಾರಣಕ್ಕೆ ಹೆಂಡತಿಯನ್ನು ಕೊಲೆ ಮಾಡಿದ್ದಾನೆ. ದಂಪತಿಗಳ ನಡುವೆ ಕ್ಷುಲ್ಲಕ ಕಾರಣಕ್ಕೆ ವಾಗ್ಯುದ್ಧ ಆರಂಭವಾಗಿದ್ದು, ಅದು ಗಲಾಟೆಗೆ ತಿರುಗಿದೆ.ಆಗ ಗಂಡ ಸುತ್ತಿಗೆಯಿಂದ ಹೊಡೆದು ಪತ್ನಿಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಹೆಮ್ಮಿಗೆಪುರದ ಗಾಣಪ್ಪ ಲೇಔಟ್‌ನಲ್ಲಿ ನಡೆದಿದೆ.ಕೊಲೆಯಾದ ಮಹಿಳೆಯನ್ನು ಭಾಗ್ಯ ಎಂದು ಗುರುತಿಸಲಾಗಿದ್ದು, ಪತಿ ಶ್ರೀ ರಾಮ ಕೊಲೆ ಆರೋಪಿಯಾಗಿದ್ದಾನೆ. ಭಾಗ್ಯ ಹಾಗು ಶ್ರೀ ರಾಮನ ನಡುವೆ ಯಾವಾಗಲೂ ಜಗಳ ನಡೆಯುತ್ತಿತ್ತು ಎಂದು ತಿಳಿದುಬಂದಿದೆ. ಘಟನೆಯ ಸ್ಥಳಕ್ಕೆ ತಲಘಟ್ಟಪುರ …
Read More »
BigTv News
May 5, 2025
Breaking News, Crime
ಮಾರಕಾಸ್ತ್ರಗಳಿಂದ ಕೊಚ್ಚಿ ಕಾರ್ತಿಕ್ ಎಂಬ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮೈಸೂರಿನ ಕ್ಯಾತಮಾರನಹಳ್ಳಿ ನಿವಾಸಿಯಾದ ಕಾರ್ತಿಕ್ ಕೊಲೆಯಾಗಿದ್ದು, ವೈಯಕ್ತಿಕ ದ್ವೇಷದ ಹಿನ್ನೆಲೆ ಈ ಕೊಲೆ ನಡೆದಿದೆ. ಈ ಸಂಬಂಧ ವರುಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Read More »