BigTv News
May 4, 2025
Breaking News, Crime
ನಗರದ ಅಂಜನಿ ಬಡಾವಣೆಯ ಮನೆಯೊಂದರ ಮೇಲೆ ನಗರಠಾಣೆ ಪೊಲೀಸರು ಶುಕ್ರವಾರ ದಾಳಿ ನಡೆಸಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಮೂವರು ಪುರುಷರು ಮತ್ತು ಇಬ್ಬರು ಮಹಿಳೆಯರು ಸೇರಿ ಒಟ್ಟು 5 ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.ಅಂಜನಿ ಬಡಾವಣೆಯ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಡಿವೈಎಸ್ಪಿ ಪಿ.ಮುರಳೀಧರ್ ನೇತೃತ್ವದಲ್ಲಿ ನಗರಠಾಣೆ ಪೊಲೀಸರು ದಾಳಿ ನಡೆಸಿದರು.ಮಹಿಳಾ ಮತ್ತು ಪುರುಷ ಪೊಲೀಸ್ ಸಿಬ್ಬಂದಿ ದಾಳಿಯಲ್ಲಿ ಭಾಗವಹಿಸಿದ್ದರು.
Read More »
BigTv News
May 4, 2025
Breaking News, Crime
ದೇವನಸ್ಥಾನದ ಒಳಗೆ ನುಗ್ಗಿ ಚಡ್ಡಿ ಬಿಚ್ಚಿ ಮಾಡಬಾರದ್ದು ಮಾಡಿ, ಅನ್ನಪೂರ್ಣ ದೇವಿಯ ವಿಗ್ರಹವನ್ನು ಅಪವಿತ್ರಗೊಳಿಸಿದ್ದಾನೆ.ಆತನ ತಂದೆ ನೌಶಾದ್ ಶೇಖ್ ಸೇರಿ ಇಬ್ಬರನ್ನು ಬಂಧಿಸಿದ್ದನ್ನೂ ಪುಣೆ ಗ್ರಾಮೀಣ ಪೊಲೀಸರ ಹವೇಲಿ ವಿಭಾಗದ ಉಪ ಪೊಲೀಸ್ ವರಿಷ್ಠಾಧಿಕಾರಿ ಸುನಿಲ್ ಪೂಜಾರಿ ದೃಢಪಡಿಸಿದ್ದಾರೆ. ಪ್ರಕರಣದ ತನಿಖೆ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ಸದ್ಯ ಸ್ಥಳದಲ್ಲಿ ಪರಿಸ್ಥಿತಿ ಸಾಮಾನ್ಯವಾಗಿದೆ ಮತ್ತು ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಭದ್ರತಾ ಸಿಬ್ಬಂದಿ ಸ್ಥಳದಲ್ಲಿ ನಿಯೋಜನೆ ಮಾಡಲಾಗಿದೆ. ಅಗತ್ಯ ಎಚ್ಚರಿಕೆ ಕೈಗೊಳ್ಳಲಾಗಿದೆ …
Read More »
BigTv News
May 4, 2025
Breaking News, Crime
ಟ್ರ್ಯಾಕ್ಟರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಅಸುನೀಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಸೋಸಲೆ ಗ್ರಾಮದ ಬಳಿ ನಡೆದಿದೆ. ಘಟನೆ ನಡೆಯುತ್ತಿದ್ದಂತೆ ಸ್ಥಳಕ್ಕೆ ಬನ್ನೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಬನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಗದೀಶ್ ಎಂಬುವವರೇ ಅಪಘಾತದಲ್ಲಿ ಮೃತಪಟ್ಟ ದುರ್ದೈವಿಯಾಗಿದ್ದಾನೆ.
Read More »
BigTv News
May 4, 2025
Breaking News, Crime
ಆಕ್ರಮವಾಗಿ ತಮಿಳುನಾಡಿಗೆ ಸಾಗಿಸುತ್ತಿದ್ದ 30 ಟನ್ ಪಡಿತರ ಅಕ್ಕಿಯನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಪೊಲೀಸರ ಸಹಕಾರದೊಡನೆ ವಶಪಡಿಸಿಕೊಂಡಿದ್ದಾರೆ.ಗ್ರಾಮಾಂತರ ಪ್ರದೇಶಗಳಲ್ಲಿ ಅನ್ನಭಾಗ್ಯ ಫಲಾನುಭವಿಗಳಿಂದ ಕಡಿಮೆ ಬೆಲೆಗೆ ಅಕ್ಕಿ ಖರೀದಿಸಿ ಒಂದೆಡೆ ಸಂಗ್ರಹಿಸಿ ರೈಸ್ ಮಿಲ್‌ಗಳಿಗೆ ಹಾಗೂ ಹೊರ ರಾಜ್ಯಗಳಿಗೆ ಸಾಗಾಟ ಮಾಡುತ್ತಿರುವುದು ನಿರಂತರವಾಗಿದೆ.ದಾಳಿಯಲ್ಲಿ ಪಟ್ಟಣ ಠಾಣೆ ಪ್ರಭಾರ ಆರಕ್ಷಕ ಉಪನಿರೀಕ್ಷಕ ಸುಪ್ರೀತ್, ಎಎಸ್‌ಐ ಮಧುಕುಮಾರ್, ಮುಖ್ಯ ಪೇದೆ ಸೂರ್ಯಪ್ರಕಾಶ್, ಪೇದೆಗಳಾದ ಸಚಿನ್, ಅನಿಲ್, ಚಾಲಕ ನಂಜುಂಡಸ್ವಾಮಿ ಭಾಗವಹಿಸಿದ್ದರು. …
Read More »
BigTv News
May 4, 2025
Breaking News, Crime
ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಿಂದ ವಿಚಾರಣಾಧೀನ ಕೈದಿ ಪರಾರಿಯಾಗಿದ್ದಾನೆ. ವಿಕ್ಟೋರಿಯಾ ಆಸ್ಪತ್ರೆಯ ಟ್ರಾಮಾ ಕೇರ್ ಸೆಂಟರ್ ನಿಂದ ಚಂದ್ರಶೇಖರ್ ಎನ್ನುವ ಕೈದಿ ಪರಾರಿಯಾಗಿದ್ದಾನೆ ಎಂದು ವಿಕ್ಟೋರಿಯಾ ಆಸ್ಪತ್ರೆಯ ಆಡಳಿತ ಮಂಡಳಿ ಮತ್ತು ವೈದಾಧಿಕಾರಿಗಳಿಂದ ಮಾಹಿತಿ ತಿಳಿದು ಬಂದಿದೆ. ಈ ಕುರಿತು ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನ ಅಧಿಕಾರಿಗಳು ಮಾಹಿತಿ ಪಡೆದಿದ್ದಾರೆ. ಮುಂಜಾನೆ 5:30 ರ ಸುಮಾರಿಗೆ ವಿಚಾರಣಾಧೀನ ಕೈದಿ ಚಂದ್ರಶೇಖರ್ ಆಸ್ಪತ್ರೆಯಿಂದ ಪರಾರಿಯಾಗಿದ್ದಾನೆ. ಪರಪ್ಪನ ಅಗ್ರಹಾರನಿಂದ ವಿಚಾರಣಾ ಪೊಲೀಸರು ಆಸ್ಪತ್ರೆಗೆ ಕರೆತಂದಿದ್ದರು. …
Read More »
BigTv News
May 4, 2025
Breaking News, Crime
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಘೋರ ಘಟನೆಯೊಂದು ನಡೆದಿದ್ದು, ಮನೆಯ ಮೂರನೇ ಮಹಡಿಯಿಂದ ಬಿದ್ದು ವೃದ್ಧೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.ರಾಜೀವ್ ಗಾಂಧಿ ನಗರ ಚರ್ಚ್ ರೋಡ್ ನಲ್ಲಿ ಮನೆಯ ಮೂರನೇ ಮಹಡಿಯಿಂದ ಬಿದ್ದು ವೃದ್ಧೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ವೃದ್ಧೆಯನ್ನು ವಿಜಯಲಕ್ಷ್ಮೀ (60) ಎಂದು ಗುರುತಿಸಲಾಗಿದೆ.ಕೋವಿಡ್ ಸಮಯದಲ್ಲಿ ಓರ್ವ ಪುತ್ರನನ್ನು ಕಳೆದುಕೊಂಡಿದ್ದ ವೃದ್ಧೆ. ಸೊಸೆ ಹಾಗೂ ಮೊಮ್ಮಕ್ಕಳ ಜೊತೆಗೆ ವಾಸವಾಗಿದ್ದರು. ಜೀವನದಲ್ಲಿ ಜಿಗುಪ್ಸೆಗೊಂಡು ಬೆಳಗಿನ ಜಾವ 4 ಗಂಟೆ …
Read More »
BigTv News
May 4, 2025
Breaking News, Crime
ಹೆಚ್ ಎಸ್ ಆರ್ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ರಾಜೀವ್ ಗಾಂಧಿ ಲೇ ಔಟ್ 7th ಸೆಕ್ಟರ್ ಬಳಿ ಮೃತದೇಹ ಪತ್ತೆಯಾಗಿದೆ.ವಿಜಯಲಕ್ಷ್ಮೀ (60) ಶವವಾಗಿ ಪತ್ತೆಯಾಗಿರುವ ಮಹಿಳೆ ಎನ್ನಲಾಗಿದೆ.ಇಂದು ಬೆಳಗಿನ ಜಾವ 4:30 ರ ಸುಮಾರಿಗೆ ಮೃತದೇಹ ಪತ್ತೆಯಾಗಿದೆ. ಸ್ಥಳಕ್ಕೆ ಹೆಚ್ ಎಸ್ ಆರ್ ಲೇಔಟ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Read More »
BigTv News
May 4, 2025
Breaking News, Crime
ಜಮೀನು ವಿವಾದಕ್ಕಡ ಸಂಬಂಧಿಸಿದಂತೆ ಮನೆಗೆ ನುಗ್ಗಿ ಎಲೆಕ್ಟ್ರಿಕಲ್ ಕಾಂಟ್ರಾಕ್ಟರ್ 65 ವರ್ಷ ಪ್ರಾಯದ ಲಕ್ಷ್ಮಿ ನರಸಪ್ಪ ಎಂಬುವವರನ್ನು ಹಾಡಹಗಲೇ ಬರ್ಬರವಾಗಿ ಕೊಲೆ ಮಾಡಲಾಗಿದೆ. ಕೊಲೆಯಾದ ಲಕ್ಷ್ಮಿನರಸಪ್ಪನ ಸಂಬಂಧಿಕ ನಂದೀಶ ಎಂಬುವವನೇ ಆರೋಪಿತನಾಗಿದ್ದು, ಘಟನೆಗೆ ಸಂಬಂಧಿಸಿದಂತೆ ನಂದೀಶನನ್ನು ಚಿಕ್ಕಬಳ್ಳಾಪುರ ಗ್ರಾಮದ ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಈ ಕುರಿತು ಚಿಕ್ಕಬಳ್ಳಾಪುರ ಗ್ರಾಮದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »
BigTv News
May 4, 2025
Breaking News, Crime
ಮಂಗಳೂರಲ್ಲಿ ಹಿಂದೂ ಕಾರ್ಯಕರ್ತನ ಕೊಲೆ ಪ್ರಕರಣದ ಬೆನ್ನಲ್ಲೇ ರಾಜ್ಯದಲ್ಲಿ ಮತ್ತೊಂದು ಭೀಕರ ಹತ್ಯೆ ನಡೆದಿದೆ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಂತ ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದ ಹಿಲ್ ಗಾರ್ಡ್ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಗೋಕಾಕ್ ಗೊಂದಳಿ ಗಲ್ಲಿ ನಿವಾಸಿ ಪರಶುರಾಮ್(26) ಎಂಬಾತನನ್ನು ಕಾರಿನಲ್ಲಿ ಹಿಂಬಾಲಿಸಿ ಬಂದ ದುಷ್ಕರ್ಮಿಗಳು ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.ಸ್ಥಳಕ್ಕೆ ಗೋಕಾಕ್ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿ ಪ್ರಕರಣ …
Read More »
BigTv News
May 4, 2025
Breaking News, Crime
ಬೈಕ್‌ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ. ಕಾನ್ಸ್‌ಟೇಬಲ್ ಪ್ರಕಾಶ್ ಅವರು ಹಾಸನ ನಗರದಿಂದ ಸರ್ಕಾರಿ ದ್ವಿಚಕ್ರ ವಾಹನದಲ್ಲಿ ಗಾಡೇನಹಳ್ಳಿಗೆ ಕರ್ತವ್ಯಕ್ಕೆ ತೆರಳುತ್ತಿದ್ದರು. ಈ ವೇಳೆ ಬೈಕ್‌ಗೆ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
Read More »