Breaking News
Hiring Reporter’s For more Information Contact Above Number 876 225 4007 . Program producer
Home / District

District

ಯೋಜನೆ ಮನೆಗಳು ಶೀಘ್ರವೇ ಫಲನುಭವಿಗಳ ಕೈ ಸೇರಲಿವೆ! ಶಾಸಕ ಅರವಿಂದ್ ಬೆಲ್ಲದ ವಿಶ್ವಾಸ

ಹುಬ್ಬಳ್ಳಿ: ಆಶ್ರಯ ಯೋಜನೆ ಮನೆಗಳ ಕಾಮಗಾರಿ ಸಂಪೂರ್ಣ ಮುಕ್ತಾಯ ಹಂತಕ್ಕೆ ಬಂದಿದ್ದು ಇನ್ನೇನು ಕೆಲವೇ ದಿನಗಳಲ್ಲಿ ಫಲಾನುಭವಿಗಳಿಗೆ ಲಭ್ಯವಾಗಲಿವೆ ಎಂದು ಹುಬ್ಬಳ್ಳಿ ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ್ ಬೆಲ್ಲದ ವಿಶ್ವಾಸ ವ್ಯಕ್ತ ಪಡಿಸಿದರು. ನಗರದಲ್ಲಿದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಸತಿ ರಹಿತ ಸ್ಲಮ್ ನಿವಾಸಿಗಳಿಗೆ ಆಶ್ರಯ ಯೋಜನೆಯಡಿ ಮನೆ ನಿರ್ಮಾಣ ಕಾಮಗಾರಿಯನ್ನು ಕಳೆದ ಎರಡಮೂರು ವರ್ಷಗಳ ಹಿಂದೆಯೇ ಭೂಮಿ ಪೂಜೆ ಮಾಡಲಾಗಿತ್ತು. ಆದರೆ ಆ ಸಮಯದಲ್ಲಿ ಸಮ್ಮಿಶ್ರ ಸರ್ಕಾರ …

Read More »

ರೈತನಿಗೆ ಕಾರವಾದ ಮೆಣಸಿನಕಾಯಿ

ಧಾರವಾಡ: ಲಾಕಡೌನ್ ಹಿನ್ನೆಲೆಯಲ್ಲಿ ಮೆಣಸಿನಕಾಯಿ ದರ ಕುಸಿತಗೊಂಡಿದ್ದು, ಅದನ್ನು ಬೆಳೆದ ರೈತ ಇದೀಗ ಕಣ್ಣೀರು ಹಾಕುವಂತಾಗಿದೆ. ಮೆಣಸಿನಕಾಯಿಗೆ ಬೆಲೆ ಇಲ್ಲದ ಕಾರಣ ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮದ ರೈತನೋರ್ವ ತಾನು ಬೆಳೆದ ಮೆಣಸಿನಕಾಯಿ ಬೆಳೆಯನ್ನೇ ನಾಶಪಡಿಸಿದ್ದಾನೆ. ಹೀಗೆ ಮೆಣಸಿನಕಾಯಿ ಬೆಳೆಯನ್ನು ರೋಟರ್ ನಿಂದ ನಾಶಪಡಿಸುತ್ತಿರುವ ರೈತನ ಹೆಸರು ಅಜ್ಜಪ್ಪ. ತನ್ನ 3 ಎಕರೆ ಪ್ರದೇಶದಲ್ಲಿ ಮೆಣಸಿನಕಾಯಿ ಬೆಳೆ ಬೆಳೆದಿದ್ದರು. ಆದರೆ, ಪ್ರಸಕ್ತ ಕೊರೊನಾದಿಂದಾಗಿ ಲಾಕಡೌನ್ ಆಗಿದ್ದು, ಪ್ರತಿ ಕೆಜಿ ಮೆಣಸಿನಕಾಯಿಗೆ …

Read More »

ಜೂನ್ 7ರ ನಂತರ ಲಾಕ್ ಡೌನ್ ಅನ್ನು ಅನ್ ಲಾಕ್ ಮಾಡೋದು….?

ಬೆಂಗಳೂರು, ಜೂನ್ 1: ರಾಜ್ಯದಲ್ಲಿ ಕೊರೊನಾ ಸೋಂಕಿನ ನಿಯಂತ್ರಣಕ್ಕೆ ಜೂನ್ 7ರವರೆಗೂ ವಿಸ್ತರಿಸಲಾಗಿರುವ ಲಾಕ್‌ಡೌನ್ ಅನ್ನು ಇನ್ನಷ್ಟು ದಿನ ಮುಂದುವರೆಸುವ ಕುರಿತು ಚರ್ಚೆಗಳು ನಡೆಯುತ್ತಿವೆ. ವಿಪಕ್ಷಗಳು ಲಾಕ್‌ಡೌನ್ ಮುಂದುವರೆಸಬೇಕೆಂದು ರಾಜ್ಯ ಸರ್ಕಾರಕ್ಕೆ ಸಲಹೆ ನೀಡುತ್ತಿವೆ. ತಜ್ಞರು ಕೂಡ ಲಾಕ್‌ಡೌನ್ ಕುರಿತು ಸರ್ಕಾರಕ್ಕೆ ಕೆಲವು ಅಂಕಿ ಅಂಶಗಳ ಸಮೇತ ಮಾಹಿತಿ ನೀಡಿದ್ದಾರೆ. ಈ ನಡುವೆ ಲಾಕ್‌ಡೌನ್ ಕುರಿತು ಜೂನ್ 5 ಅಥವಾ 6ರಂದು ಪರಿಸ್ಥಿತಿ ಪರಿಶೀಲಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ …

Read More »

ಮದ್ಯ ಮಾರಾಟ , ಹೋಟೆಲ್‌ಗಳಲ್ಲಿ ಪಾರ್ಸೆಲ್‌ಗೆ ಗ್ರೀನ್ ಸಿಗ್ನಲ್ ಜಿಲ್ಲಾಧಿಕಾರಿ

ಧಾರವಾಡ: ಕೊರೊನಾ ಹತೋಟಿಗೆ ತರುವ ದೃಷ್ಟಿಯಿಂದ ಧಾರವಾಡ ಜಿಲ್ಲೆಯಾದ್ಯಂತ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಕೆಲವೊಂದಿಷ್ಟು ಕಟ್ಟುನಿಟ್ಟಿನ ನಿರ್ಬಂಧಗಳನ್ನು ಹೇರಿ ಲಾಕ್‌ಡೌನ್ ಜಾರಿ ಮಾಡಿದ್ದಾರೆ. ಆದರೆ ಈಗ ಅದರಲ್ಲಿ ಕೆಲವೊಂದಿಷ್ಟು ಬದಲಾವಣೆಗಳನ್ನು ತಂದಿದ್ದಾರೆ. ಧಾರವಾಡ ಜಿಲ್ಲೆಯಲ್ಲಿ ಮದ್ಯ ಮಾರಾಟ ಹಾಗೂ ಹೋಟೆಲ್‌ಗಳಲ್ಲಿ ಪಾರ್ಸೆಲ್ ಸೇವೆಯನ್ನೂ ರದ್ದುಗೊಳಿಸಿದ್ದ ಜಿಲ್ಲಾಧಿಕಾರಿಗಳು, ಜೂ.1ರಿಂದ 6 ರವರೆಗೆ ಮದ್ಯ ಮಾರಾಟ ಹಾಗೂ ಹೋಟೆಲ್‌ಗಳಲ್ಲಿ ಪಾರ್ಸೆಲ್ ಸೇವೆಗೆ ಅನುಮತಿ ನೀಡಿದ್ದಾರೆ. ಜೂ.1ರಿಂದ 6 ರವರೆಗೆ ಬೆಳಿಗ್ಗೆ 6 …

Read More »

ಬ್ಲ್ಯಾಕ್ ಫಂಗಸ್​ಗೆ ಎಸ್​ಪಿ ಬಲಿ

ಕಲಬುರಗಿ: ಬ್ಲ್ಯಾಕ್ ಫಂಗಸ್​ಗೆ ವಿಜಯಪುರ ಜಿಲ್ಲೆಯ ಸಿಂದಗಿ ಮೂಲದರಾದ ನಿವೃತ್ತ ಹೆಚ್ಚುವರಿ ಎಸ್​ಪಿ ಬಿ.ಮಹಾಂತೇಶ್ ಮೃತಪಟ್ಟಿದ್ದಾರೆ. 65 ವರ್ಷದ ನಿವೃತ್ತ ಹೆಚ್ಚುವರಿ ಎಸ್​ಪಿ ಇತ್ತೀಚೆಗಷ್ಟೇ ಕೊವಿಡ್ ಸೋಂಕಿನಿಂದ ಗುಣಮುಖರಾಗಿದ್ದರು. ಬಳಿಕ ಬ್ಲ್ಯಾಕ್ ಫಂಗಸ್ ಲಕ್ಷಣಗಳು ಕಾಣಿಸಿಕೊಂಡಿತ್ತು. ಚಿಕಿತ್ಸೆ ಫಲಿಸದೆ ವಿಜಯಪುರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬಿ.ಮಹಾಂತೇಶ್ ಪೊಲೀಸ್ ಮತ್ತು ಲೋಕಾಯುಕ್ತ ಇಲಾಖೆಯಲ್ಲಿ ಹಲವು ವರ್ಷಗಳು ಸೇವೆ ಸಲ್ಲಿಸಿದ್ದರು. 21 ಜನರಿಗೆ ಬ್ಲ್ಯಾಕ್ ಫಂಗಸ್ ದೃಢ ದಾವಣಗೆರೆ: ಜಿಲ್ಲೆಯಲ್ಲಿ ಸುಮಾರು 21 …

Read More »

ಲಾಕ್ ಡೌನ್ ಮುಂದುವರೆಸುವ ಕುರಿತು ಸಿಎಂ

ಬೆಂಗಳೂರು: ಲಾಕ್ಡೌನ್ ಜಾರಿ ಮಾಡುವ ಬಗ್ಗೆ ಮೂರರಿಂದ ನಾಲ್ಕು ದಿನಗಳಲ್ಲಿ ತಜ್ಞರು, ಸಚಿವರೊಂದಿಗೆ ಚರ್ಚಿಸಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಿರ್ಧರಿಸಲಿದ್ದಾರೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಲಾಕ್ಡೌನ್ ಕುರಿತಾಗಿ ಮುಖ್ಯಮಂತ್ರಿಯವರು ಸೂಕ್ಷ್ಮವಾಗಿ ತಿಳಿಸಿದ್ದಾರೆ. ಕಟ್ಟುನಿಟ್ಟಿನ ಕ್ರಮ ಮುಂದುವರಿಸುವಂತೆ ಸೂಚನೆ ನೀಡಲಾಗಿದೆ. ಜೂನ್ 30ರವರೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಕೇಂದ್ರ ಗೃಹ ಸಚಿವಾಲಯದಿಂದ ರಾಜ್ಯ ಸರ್ಕಾರಗಳಿಗೆ ಸೂಚನೆ ಬಂದಿದೆ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಜೂನ್ …

Read More »

ಯುವತಿ ಮೇಲೆ ಗ್ಯಾಂಗ್ ರೇಪ್

ಬೆಂಗಳೂರು: ನಿರ್ಭಯಾ ಪ್ರಕರಣವನ್ನ ನೆನಪಿಸುವ ಘಟನೆಯೊಂದು ರಾಜಧಾನಿ ಬೆಂಗಳೂರಿನಲ್ಲಿ ನಡೆದಿದ್ದು, ಮಹಿಳೆ ಸಹಾಯದಿಂದ ಆರು ಮಂದಿ ಆರೋಪಿಗಳು ಬಾಂಗ್ಲಾದೇಶದ 23 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಆರೋಪಿಗಳು ತಮ್ಮ ಕೌರ್ಯವನ್ನು ಚಿತ್ರೀಕರಿಸಿಕೊಂಡು ವೈರಲ್‌ ಮಾಡಿದ್ದಾರೆ. ಈ ಸಂಬಂಧ ಬಾಂಗ್ಲಾದೇಶದ ಸಾಗರ್‌, ಮೊಹಮ್ಮದ್‌ ಬಾಬಾ ಶೇಖ್‌, ರಿದಾಯ್‌ ಬಾಬು ಹಾಗೂ ಹೈದರಾಬಾದ್‌ನ ಹಕೀಲ್‌ ಎಂಬವರನ್ನು ಬಂಧಿಸಲಾಗಿದೆ. ಆರೋಪಿಗಳು ಅಂತಾರಾಜ್ಯ ವೇಶ್ಯಾವಾಟಿಕೆ ದಂಧೆಕೋರರು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣದ ವಿವರ: …

Read More »
Featured Video Play Icon

ಕುಟುಂಬದ 16 ಜನರು ಪಾಸಿಟಿವ್

ದಿನದಿಂದ ದಿನಕ್ಕೆ ಮಹಾಮಾರಿ ಕೋವಿಡ್ ನ ಆರ್ಭಟ ಹೆಚ್ಚಾಗುತ್ತಿದೆ ಇದನ್ನು ಕಟ್ಟಿ ಹಾಕಲು ರಾಜ್ಯದಲ್ಲಿ ಈಗಾಗಲೇ ಲಾಕ್ ಡೌನ್ ಜಾರಿ ಮಾಡಲಾಗಿದ್ದು ಒಂದನೆಯ ಅಲೆಗಿಂತ ಎರಡನೇ ಅಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.ಇದರೊಂದಿಗೆ ಸಾವು ನೋವಿನ ಪ್ರಮಾಣವು ಹೆಚ್ಚಾಗಿದ್ದು ಇವೆಲ್ಲ ದರ ನಡುವೆ ಇಲ್ಲೊಂದು ಕುಟುಂಬದ 16 ಜನರು ಪಾಸಿಟಿವ್ ಬಂದು ಚಿಕಿತ್ಸೆ ಯನ್ನು ಪಡೆದುಕೊಂಡು ಯಶಸ್ವಿಯಾಗಿ ಗೆದ್ದಿದ್ದಾರೆ. ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಸುಳ್ಳ ಗ್ರಾಮದ ಶಿವಳ್ಳಿಮಠ ಕುಟುಂಬದವರೇ ಇದಕ್ಕೆ …

Read More »

ಜಿಲ್ಲೆಯಲ್ಲಿ 5 ದಿನ ಕಠಿಣ ಲಾಕ್‌ಡೌನ್ ಜಾರಿಗೆ ಪೈನಲ್

ಹುಬ್ಬಳ್ಳಿ; ಧಾರವಾಡ ಜಿಲ್ಲೆಯಲ್ಲಿ ಕಠಿಣ‌ ಲಾಕ್‌ಡೌನ್ ಮಾಡುವ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತವಾರಿ ಸಚಿವ ಜಗದೀಶ್ ಶೆಟ್ಟರ್, ಇಂದು ಹುಬ್ಬಳ್ಳಿ ಸರ್ಕ್ಯೂಟ್ ಹೌಸ್‌ನಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿದರು. ವಾರಂತ್ಯದ ಲಾಕ್‌ಡೌನ್ ಮಾದರಿಯಲ್ಲಿ ವಾರದ 5 ದಿನ ಕಠಿಣ ಲಾಕ್‌ಡೌನ್ ಮಾಡಿ ಗುರುವಾರ ಮತ್ತು ಶುಕ್ರವಾರ ಸಾರ್ವಜನಿಕರಿಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಿವ ಕುರಿತು ಸಚಿವರು ಸಲಹೆ ನೀಡಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ನಿತೀಶ್ …

Read More »

ಮ್ಯೂಕಸ್ ಮೈಕ್ರೋಸಿಸ್ ಬ್ಲಾಕ್ ಫಂಗಸ್ ಸೊಂಕು ತಡೆಗೆ ಮುಂಜಾಗೃತ ಕ್ರಮ

ಹುಬ್ಬಳ್ಳಿ: ರಾಜ್ಯದಲ್ಲಿ ಮ್ಯೂಕಸ್ ಮೈಕ್ರೋಸಿಸ್ (ಬ್ಲಾಕ್ ಫಂಗಸ್) ಸೊಂಕು ಹೆಚ್ಚಾಗಿ ಹರಡುತ್ತಿದೆ. ಇದರ ಕಾರಣ ತಿಳಿಯಲು ಸರ್ಕಾರದಿಂದ ಮೈಕೋಲಾಜಿಸ್ಟ್ (ಶಿಲೀಂದ್ರ ತಜ್ಞರ) ಸಮಿತಿ ನೇಮಿಸಲಾಗಿದೆ. ತಜ್ಞರ ಸಮಿತಿ ಪ್ರಾಥಮಿಕ ವರದಿಯನ್ನು ನೀಡಿದೆ. ಆಸ್ಪತ್ರೆಗಳಲ್ಲಿ ಬಳಸುವ ಹ್ಯುಮಿಡಿಫೈಡ್‌ಗಳಲ್ಲಿ ಡಿಸ್ಟಿಲ್ ವಾಟರ್‌ ಬಳಸಬೇಕು, ಆದರೆ ಹಲವು ಕಡೆ ನಳದ ನೀರನ್ನು ಹಾಕಿದ್ದಾರೆ. ಇದರಿಂದ ಫಂಗಸ್ ಬೆಳವಣಿಗೆಯಾಗಿದೆ. ಕ್ಯಾನುಲಾಗಳು ಸೇರಿದಂತೆ ಐ.ಸಿ.ಯುನಲ್ಲಿ ಬಳಸುವ ವೈದ್ಯಕೀಯ ಪರಿಕರಗಳಲ್ಲಿ ಕೂಡ ಫಂಗಸ್ ಬೆಳೆಯತ್ತಿದೆ. ಇವುಗಳನ್ನು ಮತ್ತೊಬ್ಬ ರೋಗಿ …

Read More »

ರಾಜ್ಯದಲ್ಲಿ ಮತ್ತೆ ಜೂನ್ 7 ರವರೆಗೆ ಲಾಕ್ ಡೌನ್ ಮುಂದುವರಿಕೆ- ಬಿ ಎಸ್ ವ್ವೆ..

ಬೆಂಗಳೂರು: ರಾಜ್ಯದಲ್ಲಿ ಮತ್ತೆ 14 ದಿನಗಳ ಕಾಲ ಲಾಕ್ ಡೌನ್ ಮುಂದುವರೆಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಹಿರಿಯ ಸಚಿವರು, ಅಧಿಕಾರಿಗಳೊಂದಿಗೆ ಚರ್ಚಿಸಿ ಲಾಕ್ ಡೌನ್ ವಿಸ್ತರಣೆ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ. ಹಳ್ಳಿ ಹಳ್ಳಿಗಳಲ್ಲೂ ಕೊರೊನಾ ಸೋಂಕು ಹರಡುತ್ತಿದ್ದು, ರಾಜ್ಯದ ಜನರ ಹಿತದೃಷ್ಟಿಯಿಂದ ಲಾಕ್ಡೌನ್ ಮುಂದುವರೆಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ರಾಜ್ಯದಲ್ಲಿ ಸಾವಿನ ಸಂಖ್ಯೆ, ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು, ಇದನ್ನು ತಡೆಯುವ …

Read More »

500 ಪಡೆದು ಲಸಿಕೆ ಹಾಕುತ್ತಿದ್ದೆ ಸರ್ಕಾರಿ ವೈದ್ಯ ಬಂಧನ…

ದೇವರು ಕೊಟ್ಟರೂ ಪೂಜಾರಿ ಕೊಡ ಎಂಬಂತೆ ಸರಕಾರ ಉಚಿತವಾಗಿ ಲಸಿಕೆ ನೀಡುತ್ತಿದ್ದರೂ ಅಕ್ರಮವಾಗಿ ಹಣ ಪಡೆಯುತ್ತಿದ್ದ ವೈದ್ಯೆ ಸೇರಿದಂತೆ ಇಬ್ಬರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು: ಕೋವಿಡ್ ವ್ಯಾಕ್ಸಿನೇಷನ್‌ ಅಕ್ರಮವಾಗಿ ಮಾರುತ್ತಿದ್ದ ಮಂಜುನಾಥನಗರದ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯೆ ಪುಷ್ಪಿತಾ (25) ಹಾಗೂ ಪ್ರೇಮಾ (34) ಬಂಧಿತ ಆರೋಪಿಗಳು. ಅನ್ನಪೂರ್ಣೇಶ್ವರಿ ನಗರ ಠಾಣಾ ಪೊಲೀಸರು ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಪುಷ್ಪಿತಾ ಮತ್ತು ಸಹಾಯಕಿ ವ್ಯಾಕ್ಸಿನೇಷನ್‌ ಕದ್ದು ಅನ್ನಪೂರ್ಣೇಶ್ವರಿ ನಗರದ …

Read More »

ಕರುನಾ ನಿಯಮ ಗಾಳಿಗೆ ತೂರಿ ಅಂದರ್-ಬಾಹರ್ ಪೊಲೀಸರ ವಶಕ್ಕೆ

ಬೆಂಗಳೂರು : ಕರೊನಾ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಲಾಕ್​ಡೌನ್ ಜಾರಿಯಲ್ಲಿದ್ದರೂ ಸಾಮಾಜಿಕ ಅಂತರವನ್ನೂ ಗಾಳಿಗೆ ತೂರಿ, ಹೋಟೆಲ್​ ಒಂದರಲ್ಲಿ ಅಂದರ್​ ಬಾಹರ್​ ಜೂಜಾಟ ಆಡುತ್ತಿದ್ದ 27 ಜನರನ್ನು ಬೆಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಓಲ್ಡ್​ ಮದ್ರಾಸ್ ರೋಡ್​ನಲ್ಲಿರುವ ಪಾಮ್​ಟ್ರೀ ಹೋಟೆಲ್​ನ 5ನೇ ಮಹಡಿಯಲ್ಲಿ ಇಸ್ಪೀಟ್​ ಎಲೆಗಳಿಂದ ಜೂಜಾಡುತ್ತಿರುವ ಬಗ್ಗೆ ಪಡೆದ ಮಾಹಿತಿಯ ಮೇರೆಗೆ ನಿನ್ನೆ ನಗರ ಅಪರಾಧ ವಿಭಾಗ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಅಂದರ್​ ಬಾಹರ್​ ಆಟದಲ್ಲಿ ತೊಡಗಿದ್ದ 27 ಜನರನ್ನು …

Read More »
Featured Video Play Icon

ತಪ್ಪು ಮಾಡಿದ್ರೆ ಲಾಟಿ ಹಸಿವಾದ್ರೇ ಊಟ ಕೊಡ್ತಾರೆ ಈ ಆರಕ್ಷಕರು

ಶಿರಹಟ್ಟಿ : ಅಬ್ಬಾ.. ಕೊರೊನಾ ವೈರಸ್ ಲಾಕ್ ಡೌನ್ ಘೋಷಣೆ ಆದಾಗಿನಿಂದ ತಮ್ಮ ಕುಟುಂಬವನ್ನು ಮರೆತು ಬಿಸಿಲು ಮಳೆ ಲೆಕ್ಕಿಸದೆ ಕರ್ತವ್ಯದಲ್ಲಿರೋ ಈ ಪೊಲೀಸ್ ಅಧಿಕಾರಿಗಳನ್ನ ಮಾಸ್ಕ್ ಇಲ್ಲಾ ಅಂತಾ ದಂಡಾ ಹಾಕಿದ್ರೂ, ವಾಹನದ ಡಾಕುಮೆಂಟ್ಸ್ ಚೆಕ್ ಮಾಡಿದ್ರೂ, ನನಗೆ ಹೊರಗಡೆ ಓಡಾಡೋಕೆ ಅವಕಾಶ ಕೊಡಲಿಲ್ಲಾ ಎಂದು ದ್ವೇಷ ಮಾಡೋ ನಾವು ಅವರ ಅಸಲಿ ಮುಖ ಗಮನಿಸುವುದೇ ಇಲ್ಲಾ. ಹೌದು! ಸರ್ಕಾರದ ನಿರ್ದೇಶನಕ್ಕೆ ತಕ್ಕಂತೆ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸರ ಪೈಕಿ …

Read More »

5 ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಅಬ್ಬರ ಹೆಚ್ಚಳವಾಗುತ್ತಿದ್ದು, ಈ ನಡುವೆ ರಾಯಚೂರು, ಕೊಪ್ಪಳ, ಯಾದಗಿರಿ ಇಂದಿನಿಂದ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡಲಾಗಿದೆ. ಕೊರೊನಾ ವೈರಸ್ ಸೋಂಕಿನ ನಿಯಂತ್ರಣಕ್ಕೆ ರಾಯಚೂರು ಜಿಲ್ಲಾಡಳಿತ ಕಠಿಣ ಕ್ರಮ ಕೈಗೊಂಡಿದ್ದು, ವಾರದಲ್ಲಿ 3 ದಿನಗಳ ಲಾಕ್ ಡೌನ್ ಭಾನುವಾರವೇ ಪ್ರಾರಂಭವಾಗಿದೆ. ಬುಧವಾರದವರೆಗೂ ಅಗತ್ಯ ವಸ್ತುಗಳ ಖರೀದಿಗೂ ಅವಕಾಶವಿರುವುದಿಲ್ಲ ಎಂದು ಜಿಲ್ಲಾಡಳಿತ ತಿಳಿಸಿದೆ. ಕೊಪ್ಪಳ ಜಿಲ್ಲೆಯಲ್ಲಿ ಮೇ. 17 ರಿಂದ …

Read More »
error: Content is protected !!