Breaking News

News

ಜೆಡಿಎಸ್​ ಪಕ್ಷದ ಮತ್ತೊಂದು ವಿಕೆಟ್ ಪತನ

ಬೆಂಗಳೂರು : ಕಾಂಗ್ರೆಸ್​ನ ಆಪರೇಷನ್​ ಹಸ್ತಕ್ಕೆ ಜೆಡಿಎಸ್​ ಪಕ್ಷದ ಮತ್ತೊಂದು ವಿಕೆಟ್ ಪತನವಾಗಿದೆ. ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಮಾಜಿ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿ ಅವರಿಗೆ ತವರು ಜಿಲ್ಲೆಯಲ್ಲಿಯೇ ದೊಡ್ಡ ಶಾಕ್ ನೀಡಿದ್ದಾರೆ. ರಾಮನಗರ ಜಿಲ್ಲೆಯ ಚನ್ನಪಟ್ಟಣದ ಜೆಡಿಎಸ್​ನ ಮಾಜಿ ಶಾಸಕ ಎಂ.ಸಿ. ಅಶ್ವತ್ಥ್ ಅವರು ಜೆಡಿಎಸ್​ ತ್ಯಜಿಸಿ ಇಂದು ಅಧಿಕೃತವಾಗಿ ಕಾಂಗ್ರೆಸ್​ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಬೆಂಗಳೂರಿನಲ್ಲಿ ಅಶ್ವತ್ಥ್ ಹಾಗೂ …

Read More »

ಶಿವಮೊಗ್ಗ ಕೋಮು ಗಲಭೆ: ಯಾರೋ ಮಾನಸಿಕ ಸ್ಥಿಮಿತ ಕಳೆದುಕೊಂಡವರು ಈ ರೀತಿ ಮಾಡಿರೋದು: ಮಧು ಬಂಗಾರಪ್ಪ

ಬೆಂಗಳೂರು: ಶಿವಮೊಗ್ಗದಲ್ಲಿ ನಡೆದಿರುವುದು ಕೋಮುಗಲಭೆಯಲ್ಲ (Communal Violence), ಯಾರೋ ಮಾನಸಿಕ ಸ್ಥಿಮಿತ ಕಳೆದುಕೊಂಡವರು ಈ ರೀತಿ ಮಾಡಿದ್ದಾರೆ. ಉಳಿದ ಎಲ್ಲಾ ಕಡೆ ಹಬ್ಬ ಚೆನ್ನಾಗಿಯೇ ಆಗಿದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಣೇಶ ವಿಸರ್ಜನೆ ಹಾಗೂ ಈದ್ ಮಿಲಾದ್ ಎರಡು ಒಂದೇ ದಿನ ಇತ್ತು. ಈ ಬಗ್ಗೆ ಸಭೆ ಮಾಡಿದ್ದೆವು. ಈ ವೇಳೆ ಮುಸ್ಲಿಂ ಬಾಂಧವರು ಭಾನುವಾರ ಮೆರವಣಿಗೆ ಮಾಡುವುದಾಗಿ ಹೇಳಿದ್ದರು. ಇಲ್ಲಿ …

Read More »

ಧಾರ್ಮಿಕ ಹಬ್ಬಗಳು ಇರುವಾಗ ಅಗತ್ಯ ಕ್ರಮವನ್ನು ಸರ್ಕಾರ ಕೈಗೊಂಡಿಲ್ಲ: ಬೊಮ್ಮಾಯಿ ಕಿಡಿ!

ಬೆಂಗಳೂರು: ಶಿವಮೊಗ್ಗ ಸೂಕ್ಷ್ಮ ಪ್ರದೇಶ ಎಂದು ಎಲ್ಲರಿಗೂ ಗೊತ್ತಿದೆ. ಆದರೂ ಧಾರ್ಮಿಕ ಹಬ್ಬಗಳು ಇರುವಾಗ ಅಗತ್ಯ ಕ್ರಮವನ್ನು ಸರ್ಕಾರ ಕೈಗೊಂಡಿಲ್ಲ. ಈ ಸರ್ಕಾರದ್ದು ಗಾಂಧಿ ವಿರೋಧಿ ನೀತಿ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ನಡೆದ ಗಲಾಟೆ (Communal Violence) ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಶಿವಮೊಗ್ಗ ಪ್ರಕ್ಷುಬ್ಧ ನಗರ ಎಂದು ಎಲ್ಲರಿಗೂ ಗೊತ್ತಿದೆ. ಈ ಹಿಂದೆ ಸಹ ಹಲವು ಅಹಿತಕರ ಘಟನೆಗಳು …

Read More »

ಬೆಂಗಳೂರಿನಲ್ಲಿ ಕಂಬಳಕ್ಕೆ ದಿನಾಂಕ ಫಿಕ್ಸ್

ಬೆಂಗಳೂರು: ರಾಜ್ಯದ ಪ್ರಸಿದ್ದ ಜನಪದ ಕ್ರೀಡೆ ಅಂದ್ರೆ ಅದು ಕಂಬಳ.ಇದು ಒಂದು ಕ್ರೀಡೆ ಮಾತ್ರವಲ್ಲ ಕರಾವಳಿ ಜನರ ಸಂಸ್ಕೃತಿಯ ಪ್ರತೀಕ. ಇದುವರೆಗೆ ಕಂಬಳ‌ ಆಯೋಜನೆ ಆಗೋದನ್ನು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಾತ್ರ ನೋಡಲು ಸಾಧ್ಯವಾಗುತ್ತಿತ್ತು. ಆದರೆ ಇದೀಗ ಉದ್ಯಾನನಗರಿ ಬೆಂಗಳೂರು ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗ್ತದೆ. ನವೆಂಬರ್ 25,26 ರಂದು ಬೆಂಗಳೂರಿನಲ್ಲಿ ಅದ್ದೂರಿ ಕಂಬಳಕ್ಕೆ ಪ್ಲಾನ್ ರೂಪಿಸಲಾಗಿದೆ.. ಜೋಡಿ ಕೋಣಗಳೊಂದಿಗೆ ನಡೆಯುವ ಕಂಬಳ ಕರಾವಳಿ ಕರ್ನಾಟಕದ ಒಂದು ಜಾನಪದ …

Read More »

ವೃಧ್ಧರಿಗೆ 2 ಸಾವಿರ ರೂಪಾಯಿ ಮಾಶಾಸನ, ಮುಂದಿನ ಬಜೆಟ್ ನಲ್ಲಿ ಕ್ರಮ – ಸಿದ್ದರಾಮಯ್ಯ

ಬೆಂಗಳೂರು;- ಮುಂದಿನ ಬಜೆಟ್‍ನಲ್ಲಿ ಹಿರಿಯ ನಾಗರಿಕರ ಮಾಶಾಸನ ಹೆಚ್ಚಳಕ್ಕೆ ಕ್ರಮ ವಹಿಸಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ʼʼವೃಧ್ಧರಿಗೆ 2 ಸಾವಿರ ರೂಪಾಯಿ ಮಾಶಾಸನ ನೀಡುವಂತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಡಿರುವ ಮನವಿಯನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಮುಂದಿನ ಬಜೆಟ್‍ನಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗುವುದು. ವಿವಿಧ ಕ್ಷೇತ್ರಗಳ ರಾಜ್ಯ ಪ್ರಶಸ್ತಿ ಪುರಸ್ಕೃತ ಹಿರಿಯರನ್ನು ಸನ್ಮಾನಿಸಿ ಮಾತನಾಡಿದ ಅವರು, ಪ್ರತಿಯೊಬ್ಬರೂ ವಿಶ್ವ ಮಾನವರಾಗಿ ಬದುಕಿ, ವಿಶ್ವ ಮಾನವರಾಗಿಯೆ …

Read More »

ಕಾಂಗ್ರೆಸ್ ಗೆ ಲೋಕಸಭಾ ಚುನಾವಣೆಯಲ್ಲಿ ಗೆಲುವು ಅಸಾಧ್ಯ -ಚಕ್ರವರ್ತಿ ಸೂಲಿಬೆಲೆ

ಬೆಂಗಳೂರು;- ಕಾಂಗ್ರೆಸ್ ನ ಗ್ಯಾರಂಟಿಯಿಂದ ಲೋಕಸಭೆ ಚುನಾವಣೆ ಗೆಲವು ಅಸಾಧ್ಯ ಎಂದು ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳ ಮೂಲಕ ಅಧಿಕಾರ ಪಡೆದ ಕಾಂಗ್ರೆಸ್ ಸರ್ಕಾರ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸುವುದು ಅಸಾಧ್ಯ. ಸುಭದ್ರ ಭಾರತ ನಿರ್ಮಾಣಕ್ಕೆ ಪ್ರಧಾನಿ ಮೋದಿ ಮತ್ತೊಮ್ಮೆ ದೇಶದ ಪ್ರಧಾನಿಯಾಗಿ ಆಯ್ಕೆ ಮಾಡಲು ಎಲ್ಲರೂ ಮುಂದಾಗಬೇಕು ಎಂದರು. ರಾಜ್ಯದ ಮತದಾರರು ಪ್ರಜ್ಞಾವಂತರಾಗಿದ್ದು, ಗ್ಯಾರಂಟಿ ಯೋಜನೆ ನೀಡಿದ ಮಾತ್ರಕ್ಕೆ ಕಾಂಗ್ರೆಸ್‌ಗೆ …

Read More »

ಅಬಕಾರಿ ಇಲಾಖೆ ಮಹತ್ವದ ಮಾಹಿತಿ ಹೊಸದಾಗಿ ಮದ್ಯದ ಅಂಗಡಿಗಳಿಗೆ ಪರವಾನಿಗೆ

ಬೆಂಗಳೂರು;- ಹೊಸದಾಗಿ ಮದ್ಯದ ಅಂಗಡಿಗಳಿಗೆ ಪರವಾನಿಗೆ ನೀಡುವ ಸಂಬಂಧ ಯಾವುದೇ ಪ್ರಸ್ತಾವ ಸಲ್ಲಿಕೆಯಾಗಿಲ್ಲ ಎಂದು ಅಬಕಾರಿ ಇಲಾಖೆ ಸ್ಪಷ್ಟನೆ ನೀಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಹೊಸದಾಗಿ ಮದ್ಯದಂಗಡಿಗಳನ್ನು ತೆರೆಯಲು ಪರವಾನಿಗೆ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅಧ್ಯಕ್ಷತೆಯಲ್ಲಿ ಅಬಕಾರಿ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಚಿಂತಿಸಲಾಗಿದೆ ಮತ್ತು ಈ ಸಂಬಂಧ ಪ್ರಸ್ತಾವನೆ ಸಲ್ಲಿಸಲು ಸೂಚಿಸಲಾಗಿದೆ ಎಂಬ ಮಾತುಗಳು ಕೇಳಿ ಬಂದಿರುವ ಬೆನ್ನಲ್ಲೇ ಅಬಕಾರಿ …

Read More »

ಭಾರತಕ್ಕೆ ಬೇಕಾಗಿದ್ದ ಮೋಸ್ಟ್‌ ವಾಟೆಂಡ್‌ ಉಗ್ರ ಕರಾಚಿಯಲ್ಲಿ ಗುಂಡೇಟಿಗೆ ಬಲಿ!

ಇಸ್ಲಾಮಾಬಾದ್‌: ಭಾರತಕ್ಕೆ ಬೇಕಾಗಿದ್ದ ಮೋಸ್ಟ್‌ ವಾಟೆಂಡ್‌ ಉಗ್ರ ಪಾಕಿಸ್ತಾನದ (Pakistan) ಕರಾಚಿಯಲ್ಲಿ ಗುಂಡೇಟಿಗೆ ಬಲಿಯಾಗಿದ್ದಾನೆ. ನಿಷೇಧಿತ ಲಷ್ಕರ್‌-ಇ-ತೊಯ್ಬಾ (Lashkar-e-Taiba) ಸಂಘಟನೆಯ ಸ್ಥಾಪಕ ಸದಸ್ಯ ಉಗ್ರ ಖೈಸರ್ ಫಾರೂಕ್ (Qaiser Farooq) ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದಾನೆ. ಕರಾಚಿಯ ಬೀದಿಯಲ್ಲಿ ಇತರ ವ್ಯಕ್ತಿಗಳ ಜೊತೆ ನಡೆದುಕೊಂಡು ಹೋಗುತ್ತಿದ್ದಾಗ ಫಾರೂಕ್‌ ಮೇಲೆ ದಾಳಿ ನಡೆದಿದೆ. ಈತ ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಹಫೀಜ್‌ ಸಯೀದ್‌ನ (Hafiz Saeed) …

Read More »

ಕಾಂಗ್ರೆಸ್ ಗೆ ಸಿದ್ದರಾಮಯ್ಯ ಆಡಳಿತ ತೃಪ್ತಿ ತಂದಿಲ್ಲ…

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಪೂರ್ಣ ಬಹುಮತ ಪಡೆದು ಅಧಿಕಾರಕ್ಕೆ ಬಂದಿದೆ. ಸಿದ್ದರಾಮಯ್ಯ 2ನೇ ಬಾರಿಗೆ ಮುಖ್ಯಮಂತ್ರಿಯಾಗಿ ಸರ್ಕಾರವನ್ನು ನಡೆಸುತ್ತಿದ್ದಾರೆ. ಸಿದ್ದರಾಮಯ್ಯ ಆಡಳಿತ ಹೇಗಿದೆ?.ರಾಜ್ಯದ ಪ್ರತಿಪಕ್ಷ ಬಿಜೆಪಿ ಪ್ರಕಾರ ರಾಜ್ಯದ ಜನರು ಮಾತ್ರವಲ್ಲ, ಸ್ವತಃ ಕಾಂಗ್ರೆಸ್ ಪಕ್ಷದ ನಾಯಕರೇ ಸಿದ್ದರಾಮಯ್ಯ ಆಡಳಿತದ ಬಗ್ಗೆ ತೃಪ್ತಿ ಹೊಂದಿಲ್ಲ. ಬಿಜೆಪಿ ಈ ಕುರಿತು ಭಾನುವಾರ ಫೇಸ್‌ಬುಕ್ ಪೋಸ್ಟ್‌ ಹಾಕಿದೆ.

Read More »

ಅಗ್ನಿಸಾಕ್ಷಿ’ ನಟಿಯ ಬೋಲ್ಡ್ ಫೋಟೋಗೆ ನೆಟ್ಟಿಗರು ಫುಲ್ ಫಿದಾ!

ಕಿರುತೆರೆಯ ಜನಪ್ರಿಯ ಸೀರಿಯಲ್ ‘ಅಗ್ನಿಸಾಕ್ಷಿ’ ಮೂಲಕ ಗಮನ ಸೆಳೆದ ಇಶಿತಾ ವರ್ಷ (Ishitha Varsha) ಇದೀಗ ಸಖತ್ ಹಾಟ್ ಆಗಿ ಫೋಟೋಶೂಟ್ ಮಾಡಿಸಿದ್ದಾರೆ. ಈ ಮೂಲಕ ಪಡ್ಡೆಹುಡುಗರ ನಿದ್ದೆಗೆಡಿಸಿದ್ದಾರೆ. ಅಗ್ನಿಸಾಕ್ಷಿ, ‘ರಾಜ ರಾಣಿ’ (Raja Rani) ಶೋ ಮೂಲಕ ಮೋಡಿ ಮಾಡಿರುವ ಚೆಲುವೆ ಇಶಿತಾ ವರ್ಷ, ಸಖತ್ ಗ್ಲ್ಯಾಮರಸ್‌ ಆಗಿ ಕ್ಯಾಮೆರಾ ಕಣ್ಣಿಗೆ ಪೋಸ್ ನೀಡಿದ್ದಾರೆ. ಮಾಡ್ರನ್ ಉಡುಗೆಯಲ್ಲಿ ಮಸ್ತ್ ಆಗಿ ನಟಿ ಪೋಸ್ ನೀಡಿದ್ದಾರೆ. ಇಶಿತಾ ಲುಕ್‌ಗೆ ಫೈರ್ …

Read More »