Breaking News

News

ಕಾವೇರಿ ಹೊರಾಟ ಬೆಂಬಲಿಸಿ ಧಾರವಾಡದಲ್ಲಿ ರೈತ ಪ್ರತಿಭಟನೆ

ಧಾರವಾಡ: ಕಾವೇರಿ ಹೊರಾಟ ಬೆಂಬಲಿಸಿ ಧಾರವಾಡದಲ್ಲಿ ಕೂಡ ಪ್ರತಿಭಟನೆ ಮಾಡಲಾಗಿದ್ದು ಕರ್ನಾಟಕ‌ ರಾಜ್ಯ ರೈತ ಸೇನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟಿಸಿ ರೈತರು ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಸೋಗಲಾಡಿ ಸರ್ಕಾರ ಹಾಗೂ ಎಂಪಿಗಳು ರಾಜೀನಾಮೆ ನೀಡಬೇಕು ಎಂದು ಒತ್ತಾಯ ಮಾಡಿದರು. ಈ ಕೂಡಲೇ ತಮಿಳುನಾಡಿಗೆ ನೀರು ನಿಲ್ಲಿಸಿ ಇಲ್ಲವಾದರೆ ರಾಜೀನಾಮೆ ನೀಡಿ ಎಂದು ರೈತರು ಆಗ್ರಹಿಸಿದರು ರಾಜ್ಯದ ರೈತರ …

Read More »

ದೇವಪ್ರಿಯ ನಗರ ಹಿತಾಭಿವೃದ್ಧಿ ಸಂಘದಿಂದ ವಾರ್ಷಿಕ ಮಹಾ ಸಭೆ…

ಹುಬ್ಬಳ್ಳಿ: ದೇವಪ್ರಿಯ ನಗರದಲ್ಲಿ,ದೇವಪ್ರಿಯ ನಗರ ಹಿತಾಭಿವೃದ್ಧಿ ಸಂಘದಿಂದ ವಾರ್ಷಿಕ ಮಹಾಸಭೆ ಜರುಗಿತು.ಸಂಘದ ಆಡಳಿತ ಸ್ಥಳೀಯ ಜನತೆ ಸೇರಿ ಕಾರ್ಯಕ್ರಮ ನಡೆಸಿದರು. ವರದಿ ವಾಚನ, ಹಿಂದಿನ ಮಹಾಸಭೆಯ ಠರಾವು ಓದುವುದು ಮತ್ತು ದೃಡಿಕರಿಸುವುದು, ಅಡಿಟ್ ವರದಿ ವಾಚನ, ಅಂದಾಜು ಪತ್ರಿಕೆ ಓದುವುದು, ಸಂಘದ ಸದಸ್ಯರ ಅನಿಸಿಕೆ, ಮಂಡಳಿ ರಚನೆ ಮಾಡಲಾಯಿತು.ಈ ಕಾರ್ಯಕ್ರಮದಲ್ಲಿ ಶಾಸಕ ಮಹೇಶ್ ಟೆಂಗಿನಕಾಯಿ ಬರ್ಬೇಕಾಗಿತ್ತು ಆದರೆ ಕಾರನಾಂತರಗಳಿಂದ ಬಂದಿಲ್ಲ.ಕಾರ್ಯಕ್ರಮ ದ ಅಧ್ಯಕ್ಷತೆಯನ್ನು M A ಆನಿ ಅವರು ವಹಿಸಿದ್ದರು. …

Read More »

ಯಶೋಭೂಮಿ ಮೊದಲ ಭಾಗ ಲೋಕಾರ್ಪಣೆ…

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ಬೆಳಗ್ಗೆ 11 ಗಂಟೆಗೆ ನವದೆಹಲಿಯ ದ್ವಾರಕಾದಲ್ಲಿ ಇಂಡಿಯಾ ಇಂಟರ್ನ್ಯಾಷನಲ್ ಕನ್ವೆನ್ಷನ್ ಮತ್ತು ಎಕ್ಸ್‌ಪೋ ಸೆಂಟರ್ ‘ಯಶೋಭೂಮಿ’ಯ (ಐಐಸಿಸಿ) ಮೊದಲ ಭಾಗ ಲೋಕಾರ್ಪಣೆ ಮಾಡಲಿದ್ದಾರೆ. ಈ ಬೃಹತ್ ಸಮಾವೇಶ ಇತ್ತೀಚೆಗೆ ಜಿ20 ಸಮಾವೇಶ ನಡೆದ ಕೇಂದ್ರ ಭಾರತ್​ ಮಂಟಪಕ್ಕಿಂತಲೂ ದೊಡ್ಡದು. ಇದು ವಿಶ್ವದ ಅತಿದೊಡ್ಡ MICE ಕೇಂದ್ರವಾಗಿದೆ. 1.07 ಲಕ್ಷ ಚದರ ಮೀಟರ್‌ಗಿಂತಲೂ ಹೆಚ್ಚು ಪ್ರದೇಶದಲ್ಲಿ ನಿರ್ಮಿಸಲಾದ ಈ ಪ್ರದರ್ಶನ ಸಭಾಂಗಣವನ್ನು ಪ್ರದರ್ಶನ, ವ್ಯಾಪಾರ …

Read More »

ವಿಶೇಷ ರುದ್ರಾಕ್ಷಿ ಗಣಪತಿ ಕಲಾವಿದನ ಕೈ ಚಳಕ….

ಬೆಳಗಾವಿ:ಅದ್ಧೂರಿಯಾಗಿಗಣೇಶೋತ್ಸವ ಆಚರಿಸಲು ಬೆಳಗಾವಿ ಜಿಲ್ಲೆ ಸಜ್ಜಾಗುತ್ತಿದೆ.‌ ರುದ್ರಾಕ್ಷಿಗಳಿಂದಲೇ ತಯಾರಿಸಿರುವ ಸುಂದರ ಗಣಪನ ಮೂರ್ತಿ ಇದೀಗ ಎಲ್ಲರ ಗಮನ ಸೆಳೆಯುತ್ತಿದೆ. ವಿಶೇಷ ಮೂರ್ತಿಯಲ್ಲಿ ಕಲಾವಿದನ ಕೈಚಳಕವನ್ನು ನೋಡಬಹುದು. ಸಂಪೂರ್ಣವಾಗಿ ರುದ್ರಾಕ್ಷಿಗಳಿಂದಲೇ ಕಂಗೊಳಿಸುತ್ತಿರುವ ಗಣೇಶನನ್ನು ಹಳೆ ಗಾಂಧಿ ನಗರದ ಕಲಾವಿದ ಸುನೀಲ ಸಿದ್ದಪ್ಪ ಆನಂದಾಚೆ ಸಿದ್ಧಪಡಿಸಿದ್ದಾರೆ. ತಮ್ಮ ತಂದೆ ಸಿದ್ದಪ್ಪ ಅವರಿಂದ ಬಳುವಳಿಯಾಗಿ ಪಡೆದಿರುವ ಮೂರ್ತಿ ರಚನೆ ಕಲೆಯನ್ನು ಮುಂದುವರಿಸಿಕೊಂಡು ಹೋಗುತ್ತಿದ್ದಾರೆ. ವೃತ್ತಿಯಲ್ಲಿ ಪ್ಲಂಬರ್​ ಆಗಿರುವ ಸುನೀಲ ಪ್ರವೃತ್ತಿಯಲ್ಲಿ ಪರಿಸರಸ್ನೇಹಿ‌ ಗಣೇಶ ಮೂರ್ತಿ …

Read More »

ಸಚಿವ ಮಧು ಬಂಗಾರಪ್ಪ ವಿರುದ್ಧ ಪ್ರಣವಾನಂದ ಸ್ವಾಮೀಜಿ ಗಂಭೀರ ಆರೋಪ?

ಬೆಂಗಳೂರು: ಸಚಿವ ಮಧು ಬಂಗಾರಪ್ಪ ಬೆಂಬಲಿಗರು ಫೋನ್ ಕರೆ ಮಾಡಿ ಜೀವ ಬೆದರಿಕೆ ಹಾಕುತ್ತಿದ್ದಾರೆ ಎಂದು ಪ್ರಣವಾನಂದ ಸ್ವಾಮೀಜಿ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸ್ವಾಮೀಜಿ, ನನಗೆ ಜೀವ ಬೆದರಿಕೆ ಇದೆ. ಇವತ್ತು ಪೊಲೀಸ್ ‌ಕಮಿಷನರ್ ಭೇಟಿ ಮಾಡುತ್ತಿದ್ದೇನೆ. ಮಧು ಬಂಗಾರಪ್ಪ ವಿರುದ್ಧ ದೂರು ನೀಡುತ್ತಿದ್ದೇನೆ ಎಂದು ತಿಳಿಸಿದ್ದಾರೆ ಬಿ.ಕೆ.ಹರಿಪ್ರಸಾದ್‌ ಅವರು ಹಿಂದುಳಿದ ವರ್ಗದವರು. ಅವರಿಗೆ ಸ್ಥಾನಮಾನ ಕೇಳುವುದರಲ್ಲಿ ಏನು ತಪ್ಪಿದೆ? ಬೇರೆ ಸಮುದಾಯದವರು ಹೋರಾಟ …

Read More »

ಕರ್ನಾಟಕ IPS​ ಅಸೋಸಿಯೇಷನ್ ಅಧ್ಯಕ್ಷರಾಗಿ ಬಿ.ದಯಾನಂದ ನೇಮಕ

ಬೆಂಗಳೂರು: ಕರ್ನಾಟಕ IPS​ ಅಸೋಸಿಯೇಷನ್ ಅಧ್ಯಕ್ಷರಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿರುವ ಬಿ.ದಯಾನಂದ ನೇಮಕವಾಗಿದ್ದಾರೆ. ಅಸೋಸಿಯೇಷನ್ ಅಧ್ಯಕ್ಷರಾಗಿ ಸರ್ವಾನುಮತದಿಂದ ಬಿ.ದಯಾನಂದ ಅವರು ಆಯ್ಕೆಗೊಂಡಿದ್ದಾರೆ. ಹಾಗೆ ಬೆಂಗಳೂರಿನಲ್ಲಿ ಇಂದು ಕೋಟ್ಯಂತರ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಲಾಗಿದೆ. ಮೂವರು ವಿದೇಶಿಯರು ಸೇರಿ 14 ಆರೋಪಿಗಳ ಬಂಧನವಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಕಮಿಷನರ್ ದಯಾನಂದ್ ತಿಳಿಸಿದರು. ಬಂಧಿತರಿಂದ 7.83 ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ

Read More »

ಗ್ರಾಪಂ ಎರಡನೇ ಅವಧಿಯ ಅಧ್ಯಕ್ಷ ಉಪಾಧ್ಯಕ್ಷರಿಗೆ ಸನ್ಮಾನ

ಕುಂದಗೋಳ : ಗುಡೇನಕಟ್ಟಿ ಗ್ರಾಮ ಪಂಚಾಯಿತಿಯ ಎರಡನೇ ಅವಧಿಗೆ ಅಧ್ಯಕ್ಷರಾಗಿ ಆಯ್ಕೆಯಾದ ಶಾಂತವ್ವ ಗು ಹೊಸಳ್ಳಿ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ತಾಯವ್ವ ವಿ ಕೆಂಚನ್ನವರ ಇವರನ್ನು ಸಮಸ್ತ ಗುಡೆನಕಟ್ಟಿ ಗ್ರಾಮ ಪಂಚಾಯಿತಿ ಸರ್ವ ಸದಸ್ಯರುಗಳು ಹಾಗೂ ಗ್ರಾಮ ಪಂಚಾಯಿತಿ ಆಡಳಿತ ಸಿಬ್ಬಂದಿ ಸನ್ಮಾನ ಮಾಡಿ ಗೌರವಿಸಿದರು.

Read More »

ಇಂಜಿನಿಯರ್ಸ್ ದಿನಾಚರಣೆ ಧಾರವಾಡ ನಗರದಲ್ಲಿ ಭವ್ಯ ಮೆರವಣಿಗೆ

ಸರ್ ಎಂ ವಿಶ್ವೇಶ್ವರಯ್ಯನವರ ಜನ್ಮದಿನದ ಅಂಗವಾಗಿ ಇಂಜಿನಿಯರ್‌ಗಳ ದಿನಾಚರಣೆಯಲ್ಲಿ ವಿಶ್ವೇಶ್ವರಯ್ಯನವರ ಭಾವಚಿತ್ರದ ಮೆರವಣಿಯನ್ನು ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಇಂಜಿನಿಯರ್ಸ್, ಧಾರವಾಡ ಲೋಕಲ್ ಸೆಂಟರನವರು ಧಾರವಾಡದ ಪ್ರಮುಖ ರಸ್ತೆಗಳ ಮೂಲಕ ಕಲಾಭವನದಿಂದ ಡಿಸಿ ಕಂಪೌಂಡಿನಲ್ಲಿರುವ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರ್ಸ್ ಆವರಣದಲ್ಲಿಯ ಸರ್ ಎಂ ವಿಶ್ವೇಶ್ವರಯ್ಯ ಅವರ ಮೂರ್ತಿಯವರೆಗೆ ಭವ್ಯ ಮೇರವಣಿಗೆ ಜರುಗಿತು. ವಾಲ್ಮಿಯ ಸೂಪರಿಂಟೆಂಡೆಂಟ್ ಇಂಜಿನಿಯರ .ಬಸವರಾಜ ಬಂಡಿವಡ್ಡರವರು ಜಗ್ಗಲಗಿಯನ್ನು ಬಾರಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು. ಈ ಮೆರವಣಿಗೆಯಲ್ಲಿ ಜಗ್ಗಲಗಿಯ …

Read More »

ಅನುಮತಿ ಕೊಡದಿದ್ದರೂ ಈದ್ಗಾದಲ್ಲಿ ಗಣಪತಿ ಪ್ರತಿಷ್ಟಾಪನೆ ಮಾಡ್ತಿವಿ: ಶಾಸಕ ಬೆಲ್ಲದ ಎಚ್ಚರಿಕೆ..!

ಹುಬ್ಬಳ್ಳಿ: ಈದ್ಗಾದಲ್ಲಿ ಗಣಪತಿ ಪ್ರತಿಷ್ಟಾಪನೆಗೆ ಅನುಮತಿ ಕೊಟ್ಟರೂ ಮಾಡ್ತಿವಿ. ಅನುಮತಿ ಕೊಡದೇ ಇದ್ದರೂ ಗಣಪತಿ ಪ್ರತಿಷ್ಟಾಪನೆ ಮಾಡಿಯೇ ಮಾಡ್ತಿವಿ ಎಂದು ಶಾಸಕ ಅರವಿಂದ ಬೆಲ್ಲದ ಎಚ್ಚರಿಕೆ ಗಂಟೆ ಬಾರಿಸಿ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.ಪ್ರತಿಭಟನೆ ವೇಳೆಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, https://fb.watch/n3EdiUgbaR/?mibextid=RUbZ1f ಬೆಳಿಗ್ಗೆಯಿಂದಲೂ ಹೋರಾಟ ಮಾಡುತ್ತಿದ್ದೇವೆ. ಆದರೆ ಇದುವರೆಗೂ ಕಮೀಷನರ್ ಮಾತ್ರ ಅನುಮತಿ ನೀಡಿಲ್ಲ. ಈ ನಿಟ್ಟಿನಲ್ಲಿ ನಮ್ಮ ಹೋರಾಟ ಶಾಂತಿಯುತವಾಗಿ ಮುಂದುವರೆಯಲಿದೆ ಎಂದರು.ಕೋರ್ಟ್ ಸ್ಪಷ್ಟವಾಗಿಯೇ ಹೇಳಿದ್ದರೂ ಕೂಡ ಅನುಮತಿ …

Read More »

ಹು-ಧಾ ಪಾಲಿಕೆ ಆಯುಕ್ತರ ಕಚೇರಿ ಒಳಗೆ ನುಗ್ಗಿ ಪ್ರತಿಭಟನೆಗೆ ಮುಂದಾದ ಕಾರ್ಯಕರ್ತರು ಹಾಗೂ ಬಿಜೆಪಿ ಶಾಸಕ ಸದಸ್ಯರು….

ಹುಬ್ಬಳ್ಳಿ ಹು-ಧಾ ಪಾಲಿಕೆ ಆಯುಕ್ತರ ಕಚೇರಿ ಒಳಗೆ ನುಗ್ಗಿ ಪ್ರತಿಭಟನೆಗೆ ಮುಂದಾದ ಕಾರ್ಯಕರ್ತರು ಹಾಗೂ ಸದಸ್ಯರುಬಿಜೆಪಿ ಶಾಸಕ ಅರವಿಂದ ಬೆಲ್ಲದ್ ನೇತೃತ್ವದಲ್ಲಿ ತೀವ್ರಗೊಂಡ ಪ್ರತಿಭಟನೆ ಗಣೇಶ ಪ್ರತಿಷ್ಠಾಪನೆಗೆ ಅನುಮತಿ ನೀಡೋವರೆಗೂ ಪ್ರತಿಭಟನೆಯಿಂದ ಹಿಂದೆ ಸರಿಯದಂತೆ ಪಟ್ಟುಪಾಲಿಕೆ ಕಚೇರಿಯಲ್ಲಿರೋ ಆಯುಕ್ತರ ಕೊಠಡಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ಆಯುಕ್ತರ ಕೊಠಡಿ ಒಳಗೆ ನುಗ್ಗಿ ಆಕ್ರೋಶ ವ್ಯಕ್ತಪಡಿಸುತ್ತಿರೋ ಕಾರ್ಯಕರ್ತರು ಅನುಮತಿ ಸಿಗೋವರೆಗೂ ಪಾಲಿಕೆಯಿಂದ ಕದಲದೇ ಪ್ರತಿಭಟನೆ ಅಹೋರಾತ್ರಿ ಪ್ರತಿಭಟನೆ ಮೂಲಕ‌ ಆಕ್ರೋಶಆಯುಕ್ತರ ಒಳಗೆ ಪ್ರತಿಭಟನೆಗೆ …

Read More »