BigTv News
August 3, 2023
News, ಕರ್ನಾಟಕ, ಜಿಲ್ಲೆ, ರಾಯಚೂರು
ರಾಯಚೂರು:ಜಿಲ್ಲೆಯಲ್ಲಿ ಗಾಂಜಾ ಮಿಶ್ರಿತ ಚಾಕೊಲೇಟ್ ಪತ್ತೆ ಹಿನ್ನೆಲೆಯಲ್ಲಿ ಅಬಕಾರಿ ಪೊಲೀಸರಿಂದ ಮತ್ತಷ್ಟು ಶೋಧ ಕಾರ್ಯ ನಡೆದಿದ್ದು, ಮೂವರು ಆರೋಪಿಗಳನ್ನು ಅರೆಸ್ಟ್ ಮಾಡಿ ಚಾಕೊಲೇಟ್ ಜಪ್ತಿ ಮಾಡಿಕೊಳ್ಳಲಾಗಿದೆ. ರಾಯಚೂರು ನಗರ, ಇಂಡಸ್ಟ್ರಿಯಲ್ ಏರಿಯಾ, ಯರಮರಸ್, ಚಿಕ್ಕಸೂಗೂರು, ಯರಗೇರಾ ಸೇರಿದಂತೆ ಕಡೆಗಳಲ್ಲಿ ದಾಳಿ ನಡೆಸಿ ಇದರ ಕಿಂಗ್‌ಪಿನ್ ಸೇರಿದಂತೆ ಬುಧವಾರದಂದು ಮೂವರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಇದಕ್ಕೂ ಹಿಂದೆ ಇಬ್ಬರನ್ನು ಅರೆಸ್ಟ್ ಮಾಡಲಾಗಿತ್ತು. ಕಿರಾಣಿ ಅಂಗಡಿ ಮತ್ತು ಹೋಟೆಲ್ಗಳ ಮೇಲೆ …
Read More »
BigTv News
August 3, 2023
News, ದೆಹಲಿ, ರಾಜಕೀಯ ಸುದ್ದಿ
ನವದೆಹಲಿ:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಸತ್ಗೆ ಆಗಮಿಸಿ ಪ್ರಧಾನಿ ಮೋದಿ ಅವರನ್ನ ಭೇಟಿ ಮಾಡಿ ಸೌಹಾರ್ದಯುತವಾಗಿ ಮಾತುಕತೆ ನಡೆಸಿದರು. ಹೈಕಮಾಂಡ್ ಬುಲಾವ್ ಮೇರೆಗೆ ದಿಲ್ಲಿಯಲ್ಲಿರುವ ಸಿಎಂ ರಾಜ್ಯಕ್ಕೆ ಬರಬೇಕಿರುವ ಅನುದಾನ ಬಗ್ಗೆ ಚರ್ಚಿಸಲು ಮೋದಿ ಅವರ ಭೇಟಿಗೆ ಅವಕಾಶ ಕೋರಿದ್ದರು. ಹೀಗಾಗಿ ಇಂದು ಬೆಳಗ್ಗೆ ಮೋದಿ ಅವರ ಭೇಟಿಗೆ ಸಮಯ ಸಿಕ್ಕಿದ್ದು, ಸಂಸತ್ತಿನಲ್ಲಿನ ಪ್ರಧಾನಿ ಕಚೇರಿಯಲ್ಲಿ ಮೋದಿ ಅವರನ್ನು ಭೇಟಿಯಾಗಿ ಸಮಾಲೋಚಿಸಿದರು. ಪ್ರಧಾನಿ ಮೋದಿ ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ: ಅನುದಾನ …
Read More »
BigTv News
August 3, 2023
News, ಕರ್ನಾಟಕ, ಕಲಬುರಗಿ, ಜಿಲ್ಲೆ
ಕಲಬುರಗಿ:ಗ್ರಾಪಂ ಅಧ್ಯಕ್ಷ ಚುನಾವಣೆ ಹಿನ್ನೆಲೆ ಸಿನಿಮಿಯ ರೀತಿಯಲ್ಲಿ ಗ್ರಾಪಂ ಸದಸ್ಯೆಯೊಬ್ಬರನ್ನು ಅಪಹರಣಕ್ಕೆ ಯತ್ನಿಸಿದ ಘಟನೆ ಸಿಂದಗಿ ಬಿ ಗ್ರಾಮದಲ್ಲಿ ನಡೆದಿದೆ. ಏನಿದು ಪ್ರಕರಣ: ಸಾವಳಗಿ ಗ್ರಾಮ ಪಂಚಾಯತ್ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆ ಶುಕ್ರವಾರದಂದು ನಡೆಯಲಿದೆ. ಅಧ್ಯಕ್ಷ ಚುನಾವಣೆಗೆ ಗ್ರಾಮದ ರಮೇಶ ಕಣಗೊಂಡ ಎಂಬುವರು ಸ್ಪರ್ಧಿಸುತ್ತಿದ್ದಾರೆ. ಇವರಿಗೆ 10 ಸದಸ್ಯರ ಬೆಂಬಲವಿದೆ. ಇನ್ನುಳಿದ 10 ಜನ ಸದಸ್ಯರು ತಮ್ಮ ಅಭ್ಯರ್ಥಿ ಪರ ಬೆಂಬಲ ಸೂಚಿಸಿದ್ದಾರೆ. ಇವರಲ್ಲಿ ಒಬ್ಬರು ರಮೇಶ ಕಣಗೊಂಡ …
Read More »
BigTv News
August 3, 2023
News, ಕರ್ನಾಟಕ, ಜಿಲ್ಲೆ
ಅನಂತ್ ನಾಗ್…..ಕನ್ನಡ ಚಿತ್ರರಂಗದ ಮೇರು ನಟ. ಅದ್ಭುತ ಅಭಿನಯದ ಮೂಲಕ ಅಪಾರ ಸಂಖ್ಯೆಯ ಅಭಿಮಾನಿ ಬಳಗವನ್ನು ಕಟ್ಟಿಕೊಂಡ ತಾರೆ. ಪ್ರತಿಭಾನ್ವಿತ ನಟ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟು 50 ವರ್ಷಗಳನ್ನು ಪೂರೈಸಿದ್ದಾರೆ. ಈ ಹಿನ್ನೆಲೆ ಸಿನಿ ತಾರೆಯರೂ ಸೇರಿದಂತೆ ಅಭಿಮಾನಿಗಳು ನಟನಿಗೆ ಅಭಿನಂದನೆ ತಿಳಿಸಿದ್ದಾರೆ. ಎವರ್ ಗ್ರೀನ್ ಹೀರೋ ಅನಂತ್ ನಾಗ್280ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟನೆ…1973ರಲ್ಲಿ ತೆರೆಕಂಡ ‘ಸಂಕಲ್ಪ’ ಅನಂತ್ ನಾಗ್ ಬಣ್ಣ ಹಚ್ಚಿದ ಚೊಚ್ಚಲ ಚಿತ್ರ. 1973ರಲ್ಲಿ ಸ್ಯಾಂಡಲ್ವುಡ್ಗೆ …
Read More »
BigTv News
August 3, 2023
News, ಕರ್ನಾಟಕ, ಚಾಮರಾಜನಗರ
ಚಾಮರಾಜನಗರ:ಗಾರೆ ಕೆಲಸಗಾರರು ತೆರಳುತ್ತಿದ್ದ ಟಾಟಾ ಏಸ್ ವಾಹನ ಪಲ್ಟಿಯಾಗಿ ಒಬ್ಬ ಮೃತಪಟ್ಟು 8 ಮಂದಿ ಗಾಯಗೊಂಡ ಘಟನೆ ಚಾಮರಾಜನಗರ ತಾಲೂಕಿನ ಉಗೇನದಹುಂಡಿ ಬಳಿ ನಡೆದಿದೆ. ಮೂಡಲ ಅಗ್ರಹಾರ ಗ್ರಾಮದ ಕೆಂಪರಾಜು (27) ಅಪಘಾತದಲ್ಲಿ ಮೃತಪಟ್ಟಿದ್ದುರಾಚಪ್ಪ, ಮಹೇಶ, ದರ್ಶನ್, ಮಂಟೇಲಿಂಗ, ಮಹದೇವಸ್ವಾಮಿ, ನಾಗರಾಜು, ಮಹದೇವ ಪ್ರಸಾದ್, ಕುಮಾರ್ ಎಂಬವರು ಗಾಯಗೊಂಡಿದ್ದಾರೆ. ಮನೆಯೊಂದಕ್ಕೆ ತಾರಸಿ ಕೆಲಸ ಮಾಡಲು ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದ್ದು, ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಚಾಮರಾಜನಗರ ಗ್ರಾಮಾಂತರ ಠಾಣಾ …
Read More »
BigTv News
August 3, 2023
News, ಕರ್ನಾಟಕ, ಜಿಲ್ಲೆ, ಶಿವಮೊಗ್ಗ
ಶಿವಮೊಗ್ಗ: ಕಳೆದ 5 ತಿಂಗಳ ಕಾಲ ಸ್ಥಗಿತವಾಗಿದ್ದ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ (ವಿಐಎಸ್ಎಲ್) ಕಾರ್ಖಾನೆ ಆಗಸ್ಟ್ 10 ರಿಂದ ಮತ್ತೆ ಕಾರ್ಯಾರಂಭಿಸಲಿದೆ. ಕೇಂದ್ರ ಸರ್ಕಾರ ನೀತಿ ಆಯೋಗದ ಶಿಫಾರಸಿನಂತೆ ಸೇಲ್ನ ಮೂರು ಕಾರ್ಖಾನೆಗಳಾದ ಭದ್ರಾವತಿಯ ವಿಐಎಸ್ಎಲ್, ತಮಿಳುನಾಡಿನ ಸೇಲಂ ಕಾರ್ಖಾನೆ ಹಾಗೂ ದುರ್ಗಾಪುರನ ಕಾರ್ಖಾನೆಯನ್ನು ಮುಚ್ಚಲು ಸೂಚಿಸುತ್ತು. ಕಳೆದ ಫೆಬ್ರವರಿಯಲ್ಲಿ ಕಾರ್ಖಾನೆಗಳು ಉತ್ಪಾದನೆ ನಿಲ್ಲಿಸಿದ್ದವು. ಸದ್ಯ ಕೇಂದ್ರ ಸರ್ಕಾರ ಕಾರ್ಖಾನೆಯನ್ನು ಪುನಾರಂಭ ಮಾಡಲು ಸೂಚಿಸಿದೆ. ಈ ಕುರಿತು …
Read More »
BigTv News
August 3, 2023
News
ನವದೆಹಲಿ/ಬೆಂಗಳೂರು: ಐದು ಗ್ಯಾರಂಟಿಗಳ ಜಾರಿ ಮೂಲಕ ಕರ್ನಾಟಕ ಮಾದರಿ ಅಭಿವೃದ್ಧಿ ಲೋಕಸಭಾ ಚುನಾವಣೆಯಲ್ಲಿ ಪ್ರತಿಫಲಿಸಲಿದ್ದು, ಕಾಂಗ್ರೆಸ್ 20-24 ಸ್ಥಾನಗಳಲ್ಲಿ ಜಯಗಳಿಸುವ ಭರವಸೆ ವ್ಯಕ್ತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. 2024ರ ಲೋಕಸಭೆ ಚುನಾವಣೆಗೆ ಕಾರ್ಯತಂತ್ರ ರೂಪಿಸುವ ಕುರಿತು ಎಐಸಿಸಿ ಕಚೇರಿಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರೊಂದಿಗೆ ಹೈಕಮಾಂಡ್ ಬುಧವಾರ ಮಹತ್ವದ ಸಭೆ ನಡೆಯಿತು. ಈ ಸಭೆ ಬಳಿಕ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ನಮ್ಮ ವರಿಷ್ಠರಾದ …
Read More »
BigTv News
August 3, 2023
News, ಕರ್ನಾಟಕ, ಜಿಲ್ಲೆ, ಬೆಂಗಳೂರು
ಬೆಂಗಳೂರು :ನಾಲ್ಕು ಅಂತಸ್ತಿನ ಕಟ್ಟಡದ ಮೇಲಿದ್ದ ನೀರಿನ ಟ್ಯಾಂಕ್ ಕುಸಿದು ಬಿದ್ದು ಫಾಸ್ಟ್ ಫುಡ್ ಅಂಗಡಿ ಮಾಲೀಕ ಹಾಗೂ ಗ್ರಾಹಕ ಸಾವನ್ನಪ್ಪಿರುವ ಘಟನೆ ತಡರಾತ್ರಿ ರಾಜಧಾನಿಯ ಶಿವಾಜಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದರೆ, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೃತರಲ್ಲಿ ಒಬ್ಬ ಅರುಳ್ (40) ಹಾಗೂ ಮತ್ತೊಬ್ಬನ ಗುರುತು ಇನ್ನೂ ಪತ್ತೆಯಾಗಿಲ್ಲ. ನಾಲ್ಕು ಅಂತಸ್ತಿನ ಕಟ್ಟಡದ ಮೇಲೆ ವಾಟರ್ ಟ್ಯಾಂಕ್ (ಸಿಂಟ್ಯಾಕ್ಸ್) ಇತ್ತು. ಅದೇ …
Read More »
BigTv News
August 3, 2023
News, ಕರ್ನಾಟಕ, ಜಿಲ್ಲೆ, ಹಾವೇರಿ
ಹಾವೇರಿ :ಮಲೇಶಿಯಾದ ಕ್ವಾಲಾಲಂಪುರದಲ್ಲಿ ಜುಲೈ 29 ಮತ್ತು 30 ರಂದು ನಡೆದ ವಿಕಲಚೇತನರ ಸಿಟ್ಟಿಂಗ್ ಥ್ರೋಬಾಲ್ ಪಂದ್ಯಾವಳಿಯಲ್ಲಿ ಭಾರತ ಮಹಿಳಾ ಮತ್ತು ಪುರುಷ ತಂಡಗಳು ಗೆಲ್ಲುವ ಮೂಲಕ ಚಿನ್ನದ ಪದಕ ಬೇಟೆಯಾಡಿದ್ದಾರೆ. ಈ ಇಬ್ಬರು ಆಟಗಾರರು ಹಾವೇರಿ ಜಿಲ್ಲೆಯವರಾಗಿದ್ದು, ಮಹಿಳಾ ತಂಡವನ್ನು ಹಿರೇಕೆರೂರು ತಾಲೂಕಿನ ಬನ್ನಿಹಟ್ಟಿ ತಾಂಡಾದ ಮಂಜುಳಾ ಲಮಾಣಿ ಹಾಗು ಪುರುಷ ತಂಡವನ್ನು ರಾಣೆಬೆನ್ನೂರು ತಾಲೂಕಿನ ಕಾಕೋಳ ಗ್ರಾಮದ ಹರೀಶ್ ಶಿವಣ್ಣನವರ್ ಮುನ್ನಡಿಸಿದ್ದರು. ಮುಂಬರುವ ಪ್ಯಾರಾ ಏಷ್ಯನ್ ಗೇಮ್ಸ್ …
Read More »
BigTv News
August 3, 2023
News, ಕರ್ನಾಟಕ, ಚಿಕ್ಕಬಳ್ಳಾಪುರ, ಜಿಲ್ಲೆ
ಚಿಕ್ಕಮಗಳೂರು:ರಾಜ್ಯದ ಪ್ರವಾಸಿಗರ ಸ್ವರ್ಗವೆಂದೇ ಹೇಳಲಾಗುವ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರವಾಸ ಬಂದು ಹೋಗಲಷ್ಟೇ ಸ್ವರ್ಗವೆನಿಸುತ್ತದೆ. ಆದರೆ, ಇಲ್ಲಿ ನೆಲೆಗೊಂಡು ಜೀವನ ಮಾಡುವವರಿಗೆ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗತೊಡಗಿದೆ. ಮೂಡಿಗೆರೆಯ ಒಂದೇ ಕಾಫಿ ಎಸ್ಟೇಟ್‌ನಲ್ಲಿ 16 ಕಾಡಾನೆಗಳು ಒಂದು ವಾರದಿಂದ ಬೀಡು ಬಿಟ್ಟಿದ್ದು, ಎಲಿಫ್ಯಾಂಟ್ ಟಾಸ್ಕ್ ಫೋರ್ಸ್‌ನ ಆನೆ ಓಡಿಸುವ ಪ್ರಯತ್ನ ಸಂಪೂರ್ಣ ವ್ಯರ್ಥವಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆಗಳು ಹಾಗೂ ಮಾನವನ ಸಂಘರ್ಷ ದಿನದಿಂದ ದಿನಕ್ಕೆ ಹೆಚ್ಚಾಗ್ತಿದೆ. ಕಾಡಾನೆಗಳು ಪದೇ ಪದೆ ದಾಳಿ …
Read More »