BigTv News
July 22, 2023
News, ಕರ್ನಾಟಕ, ಜಿಲ್ಲೆ, ಬೆಂಗಳೂರು
ಬೆಂಗಳೂರು: ಕರೆಂಟ್ ಫ್ರೀ, ಬಸ್ ಫ್ರೀ ಎಂದು ಯೋಚಿಸುತ್ತಿರುವ ಜನರಿಗೆ ಸರ್ಕಾರ ದೊಡ್ಡ ಶಾಕ್ ಕೊಟ್ಟಿದೆ. ಹೌದು ನಂದಿನಿ ಹಾಲು ದರ ಪ್ರತಿ ಲೀಟರ್‌ಗೆ 3 ರೂಪಾಯಿ ಏರಿಕೆಯಾಗಿದೆ. ಹೀಗ ಹೆಚ್ಚುವರಿ ಹಣವನ್ನ ರೈತರಿಗೆ ವರ್ಗಾವಣೆ ಮಾಡಲಿ ಮಂಡಳಿ ನಿರ್ಧಾರ ಮಾಡಿದೆ. ಆರ್ಥಿಕ ನಷ್ಟದ ಕಾರಣ ಹೇಳಿ ಕೆಎಂಎಫ್ ಹಾಲಿನ ದರವನ್ನ 5 ರೂಪಾಯಿ ಹೆಚ್ಚಳಕ್ಕೆ ಬೇಡಿಕೆ ಇಟ್ಟಿತ್ತು. ಆದ್ರೆ, ಸರ್ಕಾರ 3 ರೂಪಾಯಿ ಹೆಚ್ಚಳಕ್ಕೆ ಅನುಮತಿ ನೀಡಿದೆ. ಮತ್ತು …
Read More »
BigTv News
July 22, 2023
News, ಕರ್ನಾಟಕ, ಜಿಲ್ಲೆ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ : ಕಾಂಗ್ರೆಸ್ ಪಕ್ಷದಲ್ಲಿ ಎಲ್ಲಿ ಅಸಮಾಧಾನ ಇದೆ ಯಾರ ಅಸಮಾಧಾನಗೊಂಡಿದ್ದಾರೆ. ಅದರ ಬಗ್ಗೆ ಏನು ಗೊತ್ತಿಲ್ಲ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆಶಿ ನಾಯಕತ್ವದಲ್ಲಿ ಒಳ್ಳೆಯ ಸರ್ಕಾರ ನಡೆಯುತ್ತಿದೆ. ಸದ್ಯ ಕಾಂಗ್ರೆಸ್ ಸರ್ಕಾರ ಬಹಳಷ್ಟು ಉತ್ತಮವಾಗಿ ಆಡಳಿತ ಮಾಡುತ್ತಿದೆ ಎಂದು ಮಾಜಿ ಸಿಎಂ ಹಾಗೂ ವಿಧಾನ ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ಹೇಳಿದರು. ನಗರದಲ್ಲಿಂದು ಮಾತನಾಡಿ, ಎಲ್ಲಾ ಆಕಾಂಕ್ಷಿಗಳನ್ನು ಸಮಾಧಾನ ಮಾಡಲು ಎಲ್ಲಾ ಸಮಯದಲ್ಲಿ ಸಾಧ್ಯವಿಲ್ಲ. ಸಣ್ಣ ಪುಟ್ಟ …
Read More »
BigTv News
July 22, 2023
News, ಕರ್ನಾಟಕ, ಸುದ್ದಿ, ಹಾವೇರಿ
ಹಾವೇರಿ:ಜಿಲ್ಲೆಯ ಬ್ಯಾಡಗಿ ಪಟ್ಟಣದಲ್ಲಿರುವ ಎಸ್ಜೆಜೆಎಂ ಪಬ್ಲಿಕ್ ಶಾಲೆ ಹಲವು ದಶಕಗಳನ್ನು ಕಂಡ ಶಾಲೆ. ಈ ಸರ್ಕಾರಿ ಶಾಲೆಯಲ್ಲಿ ಓದಿದ ವಿದ್ಯಾರ್ಥಿಗಳು ದೇಶ ವಿದೇಶಗಳಲ್ಲಿ ವಿವಿಧ ವೃತ್ತಿಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಒಂದು ಕಾಲದಲ್ಲಿ ಬ್ಯಾಡಗಿ ಪಟ್ಟಣದ ಪ್ರತಿಷ್ಠಿತ ಶಾಲೆಯಾಗಿದ್ದಎಸ್ಜೆಜೆಎಂ ಪಬ್ಲಿಕ್ ಶಾಲೆ ಈಗ ಹಲವು ಇಲ್ಲಗಳ ನಡುವೆ ಕಾರ್ಯನಿರ್ವಹಿಸುತ್ತಿದೆ ಎಂದು ಪೋಷಕರು ಆರೋಪಿಸಿದ್ದಾರೆ.ಅಜ್ಞಾನದ ಕತ್ತಲೆ ಓಡಿಸಿ ಬೆಳಕು ನೀಡಬೇಕಾದ ಶಾಲೆಯಲ್ಲಿ ವಿದ್ಯುತ್ ಇಲ್ಲ. ಇಲ್ಲಿಯ ಮಕ್ಕಳು ಕತ್ತಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಶಾಲೆಯ ಮೂಲೆ …
Read More »
BigTv News
July 22, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಧಾರವಾಡ: ಕಾಶಿ ವಿಶ್ವನಾಥನ ಮಸೀದಿ ವಿವಾದ, ಜ್ಞಾನವ್ಯಾಪಿ ಮಸೀದಿ ಸಮೀಕ್ಷೆಗೆ ಕೋರ್ಟ್ ಅವಕಾಶ ನೀಡಿರುವುದು ಸ್ವಾಗತಾರ್ಹ ಎಂದು ಶ್ರೀ ರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ತಿಳಿಸಿದರು. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಲವಾರು ವರ್ಷಗಳಿಂದ ಈ ಪ್ರಕರಣ ನಡೆಯುತ್ತಿದ್ದು, ಅಲ್ಲಿನ ಮಹಿಳಾ ಮಂಡಳಿಯ ಸದಸ್ಯರು ಮೂರ್ತಿಗಳಿಗೆ ಪೂಜೆ ಸಲ್ಲಿಸಲು ಅನುಮತಿ ನೀಡಬೇಕೆಂದು ಅರ್ಜಿ ಜಿಲ್ಲಾಧಿಕಾರಿಗಳಿಗೆ ಬರೆದರು, ಆಗ ಜಿಲ್ಲಾಧಿಕಾರಿಗಳು ಅನುಮತಿ ನೀಡಿದ ನಂತರ ಮುಸ್ಲಿಂ ಮುಖಂಡರು ಕೋರ್ಟ್‌ಗೆ ಹೋದರು, …
Read More »
BigTv News
July 22, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಧಾರವಾಡ ಕರ್ನಾಟಕ ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದೆಗೆಟ್ಟಿರುವ, ಪ್ರಜಾತಂತ್ರ ವ್ಯವಸ್ಥೆಯ ಧಮನ ನೀತಿ ಅನುಸರಿಸುತ್ತಿರುವ, ರಾಜ್ಯ ಸರ್ಕಾರದ ಧೋರಣೆ, ರಾಜ್ಯದ ಗೃಹ ಇಲಾಖೆಯ ವೈಫಲ್ಯದಿಂದಾಗಿ ಉಗ್ರರ ಅಡಗು ತಾಣವಾಗುತ್ತಿರುವ ಹಿನ್ನೆಲೆಯಲ್ಲಿ, ದಿನನಿತ್ಯ ಉಪಯೋಗಿ ವಸ್ತುಗಳ ಬೇಲೆ ಏರಿಕೆ, ಹಿಂದೂ ವಿರೋಧಿ ನೀತಿ ಖಂಡಿಸಿ ಬಿಜೆಪಿ ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ವತಿಯಿಂದ ಬ್ರಹತ್ ಪ್ರತಿಭಟನೆಯನ್ನು ಧಾರವಾಡ ಜಿಲ್ಲಾಧಿಕಾರಿ ಕಛೇರಿ ಎದುರು ಮಾಡಲಾಯಿತು ಈ ಸಂದರ್ಭದಲ್ಲಿ ಶಾಸಕರಾದ ಮಹೇಶ …
Read More »
BigTv News
July 22, 2023
News, ಕರ್ನಾಟಕ, ಬೆಂಗಳೂರು, ಸುದ್ದಿ
ಗ್ರಾಮೀಣ ಬ್ಯಾಂಕ್ವೊಂದರಲ್ಲಿ ಗ್ರಾಹಕರು ಕೋಟ್ಯಂತರ ಹಣ ಹೂಡಿಕೆ ಮಾಡಿದ್ದರು. ತಮ್ಮ ಜಮೀನು ಮಾರಿ ಅದರಿಂದ ಬಂದ ಹಣವನ್ನ ಬ್ಯಾಂಕ್ನಲ್ಲಿ ಫಿಕ್ಸೆಡ್ ಡೆಪಾಸಿಟ್ ಮಾಡಿದ್ದರು. ನಮ್ಮ ಹಣ ಸೇಫ್ ಎಂದುಕೊಂಡಿದ್ದ ಗ್ರಾಹಕರಿಗೆ ಇದೀಗ ಬಿಗ್ ಶಾಕ್ ಎದುರಾಗಿದೆ. ಬೇಲಿಯೇ ಎದ್ದು ಹೊಲ ಮೇಯ್ದಂತೆ, ಬ್ಯಾಂಕ್ ಮ್ಯಾನೇಜರ್ ಬ್ಯಾಂಕ್ಗೆ ಕನ್ನ ಹಾಕಿ ಪರಾರಿಯಾಗಿದ್ದಾರೆ. ಗಣೇಶ್ ಬಾಬು ಹೀಗೆ ಹಣ ಆರ್ಟಿಜಿಎಸ್ ಮಾಡಿ ಪರಾರಿಯಾದ ಆರೋಪಿ. ಈ ಸಂಬಂಧ ಚನ್ನರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು …
Read More »
BigTv News
July 22, 2023
News, ಕರ್ನಾಟಕ, ಬೆಳಗಾವಿ, ಸುದ್ದಿ
ಬೆಳಗಾವಿ : ರಾಜ್ಯದ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ. ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಹಲವು ಅವಾಂತರಗಳನ್ನು ಸೃಷ್ಟಿಸಿದೆ. ಭಾರಿ ಮಳೆಗೆ ಮನೆ ಕುಸಿದು ಬಿದ್ದು ಒಂದೇ ಕುಟುಂಬದ 13 ಮಂದಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನ ಬುಡರಕಟ್ಟಿ ಗ್ರಾಮದಲ್ಲಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಶುಕ್ರವಾರ ಮನೆಯ ಸದಸ್ಯರೆಲ್ಲ ಮನೆಯಲ್ಲಿ ಟಿವಿ ನೋಡುತ್ತ ಕುಳಿತಿದ್ದರು. ಈ ವೇಳೆ ಏಕಾಏಕಿ ಮನೆಯ ಮೇಲ್ಛಾವಣಿ ಕುಸಿದು ಬಿದ್ದಿದೆ. ಸದ್ದು …
Read More »
BigTv News
July 22, 2023
News, ಕರ್ನಾಟಕ, ಧಾರವಾಡ, ಸುದ್ದಿ
ಧಾರವಾಡ: 43ನೇ ರೈತ ಹುತಾತ್ಮ ದಿನಾಚರಣೆ ಅಂಗವಾಗಿ ಧಾರವಾಡದ ರಪಾಟಿ ಕಲ್ಯಾಣ ಮಂಟಪದಲ್ಲಿ ರೈತರ ಮುಂದಿನ ಘೋಷಣಾ ಸಮಾವೇಶ ಶುಕ್ರವಾರ ಜರುಗಿತು. ನವಲಗುಂದದಲ್ಲಿನ ಬಸಪ್ಪ ಲಕ್ಕುಂಡಿ ಸ್ಮಾರಕಕ್ಕೆ ಮಾಲಾರ್ಪಣೆ ಮಾಡಿದ ಬಳಿಕ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಸಭೆಯ ನಿರ್ಣಯ ಮಂಡನೆ ಬಳಿಕ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಮಾಧ್ಯಮದೊಂದಿಗೆ ಮಾತನಾಡಿ, ಸಮಾವೇಶದಲ್ಲಿ ಒಟ್ಟು 16 ನಿರ್ಣಯ ಮಂಡನೆ ಮಾಡಲಾಗಿದೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿಸುವ ಸಂಕಲ್ಪ ಮಾಡಲಾಗಿದೆ. ರಾಜ್ಯ …
Read More »
BigTv News
July 22, 2023
News, ಕರ್ನಾಟಕ, ಮೈಸೂರು, ಸುದ್ದಿ
ಮೈಸೂರು:ನಾಗರಹೊಳೆ ಉದ್ಯಾನದಲ್ಲಿ ಜಿಂಕೆ ಬೇಟೆಯಾಡಿ, ಆರೋಪಿಗಳು ಜೋಳದ ಹೊಲದಲ್ಲಿ ಮಾಂಸವನ್ನು ಬಚ್ಚಿಟ್ಟಿದ್ದರು. ಈ ಸಂಬಂಧ ಇಬ್ಬರು ಆರೋಪಿಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ್ದ ಪರಿಕರವನ್ನು ವಶಪಡಿಸಿಕೊಂಡಿರುವ ಅರಣ್ಯ ಇಲಾಖೆ ಅಧಿಕಾರಿಗಳು ತಪ್ಪಿಸಿಕೊಂಡ ನಾಲ್ವರ ಬಂಧನಕ್ಕೆ ಬಲೆ ಬೀಸಿದ್ದಾರೆ. ನಾಗರಹೊಳೆ ಅಭಯಾರಣ್ಯ ವ್ಯಾಪ್ತಿಯ, ಹಾಗು ಹುಣಸೂರು ವನ್ಯಜೀವಿ ವಲಯ ವ್ಯಾಪ್ತಿಯ ನೇಗತ್ತೂರಿನ ಜೋಳದ ಹೊಲದಲ್ಲಿ, ಅಕ್ರಮವಾಗಿ ಕಾಡು ಪ್ರಾಣಿ ಮಾಂಸ ಸಂಗ್ರಹಿಸಿಟ್ಟಿದ್ದಾರೆಂದು ಖಚಿತ ಮಾಹಿತಿ ಬಂದಿತ್ತು. ಈ ಮೇರೆಗೆ ಅರಣ್ಯ ಇಲಾಖೆಯ ಅಧಿಕಾರಿಗಳು …
Read More »
BigTv News
July 22, 2023
News, ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟು, 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಯಲ್ಲಾಪುರದ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 52ರ ಹುಬ್ಬಳ್ಳಿ ರಸ್ತೆಯ ಮಿಲನ್ ಹೋಟೆಲ್ ಬಳಿ ಶನಿವಾರ ಬೆಳಗಿನ ಜಾವ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕಕ್ಕೆ ಬಸ್ ಊರುಳಿ ಬಿದ್ದಿದೆ. ಅವಘಡದಲ್ಲಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ 25 ಜನ ಗಾಯಗೊಂಡಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಕೂಡಲೇ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಆಸ್ಪತ್ರೆಗೆ …
Read More »