Breaking News

News

ಸಕ್ಕರೆ ಕಾರ್ಖಾನೆ ಮಾಲೀಕರ ವಿರುದ್ಧ ಆಕ್ರೋಶ : ಲಕ್ಷ್ಮಣ್ ಸವದಿ

ಬೆಂಗಳೂರು: ಸಕ್ಕರೆ ಕಾರ್ಖಾನೆ ಮಾಲೀಕರು ಕಬ್ಬು ತೂಕ ಮಾಡುವಾಗ ರೈತರನ್ನು ವಂಚಿಸುತ್ತಿದ್ದಾರೆ ಎಂದು ಆಡಳಿತ ಪಕ್ಷದ ಶಾಸಕ ಲಕ್ಷ್ಮಣ ಸವದಿ ವಿಧಾನಸಭೆಯಲ್ಲಿ ಆರೋಪಿಸಿದ್ದಾರೆ. ನಿಯಮ 69ರರಡಿ ವಿಷಯ ಪ್ರಸ್ತಾಪಿಸಿದ ಅವರು, ಕಬ್ಬು ಬೆಳೆಗಾರರಿಗೆ, ಸಾಗಣೆದಾರರಿಗೆ, ಕಟಾವು ಮಾಡುವವರಿಗೆ ಕೆಲವು ಸಕ್ಕರೆ ಕಾರ್ಖಾನೆಗಳಿಂದ ವಂಚನೆಯಾಗುತ್ತಿದೆ. ಇದನ್ನು ತಪ್ಪಿಸಬೇಕು ಎಂದು ಸರ್ಕಾರವನ್ನು ಆಗ್ರಹಿಸಿದರು. ಹಿಂದಿನ ಸಕ್ಕರೆ ಸಚಿವರು ಏಕಕಾಲದಲ್ಲಿ 21 ಸಕ್ಕರೆ ಕಾರ್ಖಾನೆಗಳ ಮೇಲೆ ದಾಳಿ ಮಾಡಿದ್ದರು. ಆದರೆ, ಏನು ಪ್ರಯೋಜನ ಆಗಿಲ್ಲ. …

Read More »

ರಾಜ್ಯ ರಾಜಧಾನಿಯಲ್ಲಿ ದರೋಡೆ ಮಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿ…

ರಾಜ್ಯ ರಾಜಧಾನಿಯಲ್ಲಿ ಸರಗಳ್ಳತನ, ಮೊಬೈಲ್ ಕಳ್ಳತನ, ದರೋಡೆ ಸೇರಿದಂತೆ 40ಕ್ಕೂ ಅಧಿಕ ಪ್ರಕರಣಗಳಲ್ಲಿ‌ ಭಾಗಿಯಾಗಿದ್ದ ಇಬ್ಬರು ಆರೋಪಿಗಳನ್ನು ಮಲ್ಲೇಶ್ವರಂ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮೊಹಮ್ಮದ್ ರಫೀಕ್ ಹಾಗೂ ತೌಫೀಕ್ ಸಾಧಿಕ್ ಬಂಧಿತ ಆರೋಪಿಗಳು. ಮೇ 27ರಂದು ಬೈಕಿನಲ್ಲಿ ಬಂದ ಆರೋಪಿಗಳು ಮಲ್ಲೇಶ್ವರಂ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಶಾಂತಮ್ಮ ಎಂಬ 70 ವರ್ಷದ ವೃದ್ದೆಯ ಚಿನ್ನದ ಮಾಂಗಲ್ಯ ಸರ ಕಸಿದುಕೊಂಡು ಪರಾರಿಯಾಗಿದ್ದರು. ಇನ್ನು ಈ ಬಗ್ಗೆ ಕುರಿತು ಮಾತನಾಡಿದ ಉತ್ತರ …

Read More »

ಮೈಸೂರು ವಿಶ್ವವಿದ್ಯಾನಿಲಯದ ಪ್ರದವಿ ಪರೀಕ್ಷೆಗಳನ್ನು ಮುಂದೂಡುವಂತೆ ವಿದ್ಯಾರ್ಥಿಗಳ ಪ್ರತಿಭಟನೆ

ಮೈಸೂರು:ಮೈಸೂರು ವಿಶ್ವವಿದ್ಯಾನಿಲಯ ಪದವಿ ಪರೀಕ್ಷೆಗಳನ್ನ ಮುಂದೂಡಿಕೆ ಮಾಡಿ ಆದೇಶ ಹೊರಡಿಸಿದೆ. ಸರಿಯಾಗಿ ಪಾಠ ಪ್ರವಚನ ನಡೆಯದ ಕಾರಣ ಪದವಿ ಪರೀಕ್ಷೆಯನ್ನು ಮುಂದೂಡಬೇಕು ಎಂದು ಆಗ್ರಹಿಸಿ ವಿದ್ಯಾರ್ಥಿಗಳು ಹಾಗೂ ಎಐಡಿಎಸ್​ಒ ಸಂಘಟನೆ, ಮೈಸೂರಿನ ಕ್ರಾಫರ್ಡ್ ಹಾಲ್ ಬಳಿ ಪ್ರತಿಭಟನೆ ನಡೆಸಿದ್ದರು. ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದಿರುವ ಮೈಸೂರು ವಿಶ್ವವಿದ್ಯಾಲಯದ ಕುಲಸಚಿವೆ ವಿ.ಶೈಲಜಾ ಪದವಿ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಿ ಆದೇಶ ಹೊರಡಿಸಿದ್ದಾರೆ. ಆದೇಶಮೈಸೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯಲ್ಲಿ ಬರುವ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪದವಿ ವಿದ್ಯಾರ್ಥಿಗಳಿಗೆ …

Read More »

ತಾಪಮಾನ ಹೆಚ್ಚಿದಂತೆ ಮಲೇರಿಯಾ ಪಸರಿಸುವ ಸೊಳ್ಳೆಗಳ ಉಗಮ

ಗ್ರಹಗಳು ಬೆಚ್ಚಗೆ ಆಗುತ್ತಿದ್ದಂತೆ ಸೊಳ್ಳೆಗಳು ಮೇಲಿನ ಪ್ರದೇಶಗಳಿಗೆ ವಲಸೆ ಹೋಗುತ್ತದೆ. ತಾಪಮಾನ ಹೆಚ್ಚಿದಂತೆ ಮಲೇರಿಯಾ ಪಸರಿಸುವ ಸೊಳ್ಳೆಗಳು ಎತ್ತರಕ್ಕೆ ಹೋಗುತ್ತಿದೆ ಎಂದು ಸಂಶೋಧನೆ ತಿಳಿಸಿದೆ. ಇದಕ್ಕೆ ಸಂಬಂಧಿಸಿದಂತೆ ತಂಡ ದಕ್ಷಿಣ ಅಮೆರಿಕದ ಉಷ್ಣವಲಯದ ಎತ್ತರದ ಪ್ರದೇಶಗಳಿಂದ ಪರ್ವತಗಳವರೆಗೆ ವಿದ್ಯಮಾನ ಹೆಚ್ಚಿರುವ ಸಾಕ್ಷಿ ಮುಂದಿಟ್ಟಿದೆ. ಸದ್ಯ ಇದೀಗ ವಿಜ್ಞಾನಿಗಳು ಈ ಪ್ರದೇಶದಲ್ಲಿ ವಾಸಿಸುತ್ತಿರುವ​ ಬಗ್ಗೆ ಚಿಂತಿತರಾಗಿದ್ದಾರೆ. ಪೂರ್ವ ಇಥಿಯೋಪಿಯಾ ಸೇರಿದಂತೆ ಮೌಂಟ್​ ಕಿಲಿಮಜರೊ ದಂತಹ ಕೀಟಗಳಿಗೆ ಆಶ್ರಯವೇ ಇಲ್ಲದಿರುವ ದೇಶಗಳು ಇದೀಗ …

Read More »

ಮೊರಂ ಹಬ್ಬದ ಪ್ರಯುಕ್ತ ಜನಸ್ನೇಹಿ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ

ಅಣ್ಣಿಗೇರಿ : ಪಟ್ಟಣದ ಜನಸ್ನೇಹಿ ಪೊಲೀಸ್ ಠಾಣೆಯಲ್ಲಿ ಮೋರಂ ಹಬ್ಬದ ಪ್ರಯುಕ್ತ ಶಾಂತಿ ಸಭೆಯನ್ನು ಏರ್ಪಡಿಸಲಾಗಿತ್ತು. ಡಿವೈಎಸ್ಪಿ ಗೌರವ ಅವರು ಮಾತನಾಡಿ ಎಲ್ಲರೂ ಹಬ್ಬವನ್ನು ಶಾಂತಿ ರೀತಿಯಿಂದ ಆಚರಿಸಬೇಕೆಂದು ಹೇಳಿದರು. ಠಾಣಾಧಿಕಾರಿ ಸಿದ್ಧಾರೂಢ ಹಾಲದಕಟ್ಟಿ ಮಾತನಾಡಿ ಪಟ್ಟಣದ ಸಾರ್ವಜನಿಕರು ಮೊಹರಂ ಹಬ್ಬವನ್ನು ಶಾಂತಿ ರೀತಿಯಿಂದ ಆಚರಿಸಬೇಕೆಂದು ಹೇಳಿದರು. ಈ ವೇಳೆ ಷಣ್ಮುಖ ಗುರಿಕಾರ, ನಿಂಗಪ್ಪ ಬಟ್ಟೆಪ್ಪನವರ, ಮೆಹಬೂಬ್ ಸಾಬ್ ಸಂಗಟಿ, ಶೋಖತ್ತಲಿ ಸದರಬಾವಿ ಸೇರಿದಂತೆ ಹಿಂದೂ ಮುಸ್ಲಿಂ ಬಾಂಧವರು ಉಪಸ್ಥಿತರಿದ್ದರು.

Read More »

ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಕರ್ನಾಟಕದ ಜನರ ಬದುಕು ದುಸ್ತರ: ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯ ಸರ್ಕಾರ ಗ್ಯಾರೆಂಟಿ ಯೋಜನೆಗಳ ಜಾರಿಗೆ ಹಣಕಾಸು ಹೊಂದಿಸಲು ಎಸ್ಸಿ ಎಸ್ಟಿ ಸಮುದಾಯದ ಕಲ್ಯಾಣಕ್ಕೆ ಮೀಸಲಿಟ್ಟ ಎಸ್ಸಿಪಿ, ಟಿಎಸ್ಪಿ ಅನುದಾನವನ್ನು ದುರ್ಬಳಕೆ ಮಾಡಿ, ಎಸ್ಸಿ ಎಸ್ಟಿ ಸಮುದಾಯಕ್ಕೆ ದ್ರೋಹ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದರು.ಬಿಜಿಪಿ ಸದಸ್ಯರನ್ನು ವಿಧಾನಸಭೆ ಕಲಾಪದಿಂದ ಹೊರಹಾಕಿರುವುದನ್ನು ಖಂಡಿಸಿ ವಿಧಾನಸೌಧದ ಬಳಿ ಇರುವ ಗಾಂಧಿ ಪ್ರತಿಮೆ ಬಳಿ ಪಕ್ಷದ ವತಿಯಿಂದ ನಡೆಸಿದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಈ ಸರ್ಕಾರ ಬಂದ …

Read More »

ದೇಶವನ್ನು ದಿವಾಳಿಯತ್ತ ತಂದಿದ್ದು ಮೋದಿ: ಸಿದ್ದರಾಮಯ್ಯ

ಬೆಂಗಳೂರು:ದೇಶದಲ್ಲಿನ ಬೆಲೆ ಏರಿಕೆಗೆ ಮಿಸ್ಟರ್ ನರೇಂದ್ರ ಮೋದಿ ಕಾರಣ. ದೇಶವನ್ನು ದಿವಾಳಿಯತ್ತ ತಂದಿದ್ದು ಮೋದಿ ಸಾಧನೆ. ಇಂತಹ ಮೋದಿಯನ್ನು ಬಿಜೆಪಿಯವರು ವಿಶ್ವಗುರು ಎನ್ನುತ್ತಾರೆ. ಇವರ ಯೋಗ್ಯತೆಗೆ ಪ್ರತಿಪಕ್ಷ ನಾಯಕನ ಆಯ್ಕೆ ಮಾಡಿಕೊಳ್ಳಲೂ ಆಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ವಿಧಾನ ಪರಿಷತ್​ನಲ್ಲಿ ಇಂದು ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡಿದ ಸಿದ್ದರಾಮಯ್ಯ, ತಮ್ಮ ಇಡೀ ಭಾಷಣದುದ್ದಕ್ಕೂ ಪ್ರಧಾನಿ ಮೋದಿಯನ್ನು ಟೀಕಿಸಿದರು. ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು. ಕೇಂದ್ರ …

Read More »

ಧರೆಗುರುಳಿದ ಮನೆ ಪವಾಡ ರೀತಿಯಲ್ಲಿ ಪಾರಾದ ಕುಟುಂಬ

ಧಾರವಾಡ : ಜಿಲ್ಲೆಯ ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಅಳ್ಳಾವರ ತಾಲೂಕಿನ ಕುಂಬಾರಕೊಪ್ಪ ಗ್ರಾಮದ ಗಂಗಾರಾಮ ವಡ್ಡರ ಎಂಬುವವರ ಮನೆ ಕುಸಿದು ಬಿದ್ದಿದ್ದು. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಅತಿಯಾದ ಮಳೆಗೆ ಅರವಟಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಕುಂಬಾರಕೊಪ್ಪ ಗ್ರಾಮದ ನಿವಾಸಿ ಗಂಗಾರಾಮ ವಡ್ಡರ ಎಂಬುವವರ ಮನೆಯ ಮೇಲ್ಬಾವಣಿಯಲ್ಲಿ ನೀರು ಸೋರಿ ರಾತ್ರಿ ವೇಳೆ ಮನೆಯ ಗೋಡೆಗಳು ಕುಸಿದಿವೆ ಮನೆಯಲ್ಲಿ ಇದ್ದವರು …

Read More »

ಸಂಗೀತ, ನೃತ್ಯ ಮತ್ತು ಪ್ರದರ್ಶಕ ಕಲೆಗಳ ಕೋರ್ಸ್ ನಡೆಸಲು ನೋಂದಾಯಿತ ಶಿಕ್ಷಣ ಸಂಸ್ಥೆಗಳು ವಿವಿಯ ಜೊತೆ ಒಡಂಬಡಿಕೆಗೆ ಅವಕಾಶ

ಹುಬ್ಬಳ್ಳಿ ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್‌ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ ಕೇಂದ್ರ ಸ್ಥಾನದಲ್ಲಿ ಮಾತ್ರ ನಡೆಸುತ್ತಿದ್ದ ಕೋರ್ಸುಗಳನ್ನು ರಾಜ್ಯವ್ಯಾಪಿ ನಡೆಸಲು ಸಂಸ್ಥೆಗಳಿಗೆ ಅವಕಾಶವಿದೆ. ವಿಶ್ವವಿದ್ಯಾಲಯದೊಡನೆ ರಾಜ್ಯದ ಯಾವುದೇ ನೋಂದಾಯಿತ ಶಿಕ್ಷಣ ಸಂಸ್ಥೆಗಳು ಒಡಂಬಡಿಕೆ ಮಾಡಿಕೊಂಡು ಸಂಗೀತ, ನೃತ್ಯ ಮತ್ತು ಮತ್ತು ಪ್ರದರ್ಶಕ ಕಲೆಗಳ ಕೋರ್ಸುಗಳನ್ನು ನಡೆಸಲು ಅನುವಾಗುವ ಪರಿನಿಯಮಗಳಿಗೆ ರಾಜ್ಯಪಾಲರ ಅಂಕಿತ ದೊರಕಿದೆ. ಈಗಾಗಲೇ ರಾಜ್ಯದ ಏಳು ಶಿಕ್ಷಣ ಸಂಸ್ಥೆಗಳು ವಿಶ್ವವಿದ್ಯಾಲಯದೊಡನೆ ಒಡಂಬಡಿಕೆ ಮಾಡಿಕೊಂಡು ಕೋರ್ಸುಗಳನ್ನು ನಡೆಸುತ್ತಿವೆ …

Read More »

ಕೇಂದ್ರ– ರಾಜ್ಯ ಸರ್ಕಾರದ ಹೆಸರಿನಲ್ಲಿ ವಂಚನೆ ಪ್ರಕರಣ ಸಿಐಡಿ ತನಿಖೆಗೆ ವಹಿಸಲು ಆಗ್ರಹ

ಧಾರವಾಡ :–ರಾಜ್ಯ ಹಾಗೂ ಕೇಂದ್ರ ಸರ್ಕಾರದ ನೌಕರಿ ಕೊಡಿಸುವುದಾಗಿ ನಂಬಿಸಿ, ಸಾವಿರಾರು ಯುವಕರಿಂದ ಲಕ್ಷಗಟ್ಟಲೆ ಹಣ ಪಡೆದು ಇದೀಗ ಹಣವನ್ನು ಮರಳಿಸದೆ, ವಂಚನೆ ಮಾಡಿರುವ ಧಾರವಾಡದ ಎಸ್ ಜಿ ಎಸ್ ಎಸ್ ಹೆಚ್ ಆರ್ ಕನ್ಸಲ್ಟನ್ಸಿಯ ರಾಘವೇಂದ್ರ ಕಟ್ಟಿ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ ತಕ್ಷಣ ಸಿ ಐ ಡಿ ತನಿಖೆಗೆ ನೀಡಬೇಕು ಎಂದು ಜನಜಾಗೃತಿ ಸಂಘದ ಅಧ್ಯಕ್ಷರಾದ ಬಸವರಾಜ ಕೊರವರ ಆಗ್ರಹಿಸಿದರು. ನಗರದಲ್ಲಿಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ …

Read More »