BigTv News
July 17, 2023
News, ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ನಗರದ ರೇಸ್ ಕೋರ್ಸ್ ರಸ್ತೆಯಲ್ಲಿರುವ ಖಾಸಗಿ ಹೋಟೆಲ್ನಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಕಾಂಗ್ರೆಸ್ ನೇತೃತ್ವದಲ್ಲಿ ರಾಷ್ಟ್ರೀಯ ಪ್ರತಿಪಕ್ಷಗಳ ಎರಡನೇ ಹಂತದ ಸಭೆ ನಡೆಯಲಿದೆ. ಎಐಸಿಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು ಈಗಾಗಲೇ ಸ್ಥಳಕ್ಕೆ ಭೇಟಿ ನೀಡಿ, ಸಿದ್ಧತಾ ಕಾರ್ಯಗಳ ಪರಿಶೀಲನೆ ನಡೆಸಿದ್ದಾರೆ. ಯಾರೆಲ್ಲ ಭಾಗಿ?: ಕಾಂಗ್ರೆಸ್, ಎಎಪಿ, ಟಿಎಂಸಿ, ಡಿಎಂಕೆ, …
Read More »
BigTv News
July 17, 2023
News, ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ರಾಷ್ಟ್ರೀಯ ಮಟ್ಟದ ಮಹಾಘಟ್ ಬಂಧನ್ ನಾಯಕರು ಸೋಮವಾರದಿಂದ ಎರಡು ದಿನ ನಗರದಲ್ಲಿ ಮಹತ್ವದ ಸಭೆ ನಡೆಸಲಿದ್ದು, ಇದಕ್ಕಾಗಿ ಅಳವಡಿಸಿದ್ದ ಸ್ವಾಗತ ಕೋರುವ ಫ್ಲಾಗ್ ಹಾಗೂ ಬ್ಯಾನರ್ಗಳನ್ನ ಕನ್ನಡ ಪರ ಸಂಘಟನೆಗಳು ಹರಿದು ಹಾಕಿವೆ. ದೇಶದ ವಿವಿಧ ರಾಜ್ಯಗಳ ಬಿಜೆಪಿಯೇತರ ಪಕ್ಷಗಳು ನಾಳಿನ ಸಭೆಯಲ್ಲಿ ಭಾಗಿಯಾಗಲಿದ್ದು, ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿರುವ ಕರೆಗೆ ಬೆಂಬಲಿಸಿ ಹಲವು ನಾಯಕರು ಸಭೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ವಿವಿದ ರಾಜ್ಯಗಳ ಹಾಲಿ ಹಾಗೂ ಮಾಜಿ …
Read More »
bigtvnews22
July 17, 2023
News, ಕರ್ನಾಟಕ, ದಕ್ಷಿಣ ಕನ್ನಡ, ಸುದ್ದಿ
ಬೆಳ್ತಂಗಡಿ (ದಕ್ಷಿಣ ಕನ್ನಡ) : ಉಯ್ಯಾಲೆಯಲ್ಲಿ ಆಟವಾಡುವ ವೇಳೆ ಆಕಸ್ಮಿಕವಾಗಿ ಕುತ್ತಿಗೆಗೆ ಸಿಲುಕಿ ಬಿದ್ದ ಪರಿಣಾಮ ಬಾಲಕನೊಬ್ಬ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ದಿಡುಪೆ ಬಳಿ ಭಾನುವಾರ ಸಂಜೆ ನಡೆದಿದೆ. ಮಲವಂತಿಗೆ ಗ್ರಾಮದ ಮಂಟಮೆ ನಿವಾಸಿ ಬಾಲಕೃಷ್ಣ ಎಂಬವರ ಮಗ 8ನೇ ತರಗತಿ ವಿದ್ಯಾರ್ಥಿ ಶ್ರೀಷಾ (14) ಮೃತ ಬಾಲಕ. ಮನೆಯ ಅಂಗಳದಲ್ಲಿ ಉಯ್ಯಾಲೆಯಲ್ಲಿ ಆಡುತ್ತಿದ್ದಾಗ ಆಕಸ್ಮಿಕವಾಗಿ ಕುತ್ತಿಗೆಗೆ ಸಿಲುಕಿ ನೆಲಕ್ಕೆ ಶ್ರೀಷಾ ಬಿದ್ದಿದ್ದು, ಇದನ್ನು ಆತನ ತಂಗಿ ನೋಡಿ …
Read More »
BigTv News
July 17, 2023
News, ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಗೆ ಭಾರಿ ಸ್ಪಂದನೆ ದೊರೆಯುತ್ತಿದ್ದು, ಈ ನಿಟ್ಟಿನಲ್ಲಿ ನಾಲ್ಕು ನಿಗಮದ ಬಸ್ಗಳಲ್ಲಿ ಸಂಚರಿಸುವವರ ಸಂಖ್ಯೆ ಹೆಚ್ಚುತ್ತಿದೆ. ಮಹಿಳೆಯರ ಉಚಿತ ಪ್ರಯಾಣದ ವೇಳೆ ಪ್ರತಿ ಬಾರಿಯ ಕಿರಿಕಿರಿ ತಪ್ಪಿಸುವ ಸಲುವಾಗಿ ಟ್ಯಾಪ್ ಆ್ಯಂಡ್ ಟ್ರಾವೆಲ್ ತಂತ್ರಜ್ಞಾನದ ಸ್ಮಾರ್ಟ್ ಕಾರ್ಡ್ ನೀಡಲು ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಚಿಂತಿಸಿದೆ. ಸದ್ಯ ಬಸ್ಗಳಲ್ಲಿ ಮಹಿಳೆಯರು ಆಧಾರ್ ಕಾರ್ಡ್ ಮತ್ತು ಇತರೆ ದಾಖಲೆಗಳನ್ನು ತೋರಿಸಿ ಉಚಿತವಾಗಿ ಸಂಚರಿಸುತ್ತಿದ್ದಾರೆ. …
Read More »
BigTv News
July 17, 2023
News, ಕರ್ನಾಟಕ, ಚಾಮರಾಜನಗರ, ಸುದ್ದಿ
ಚಾಮರಾಜನಗರ: ಚಿಕನ್ ಊಟ ಸೇವಿಸಿದ ಮಕ್ಕಳು ವಾಂತಿ, ಬೇಧಿಯಾಗಿ ಅಸ್ವಸ್ಥಗೊಂಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಯಡವನಹಳ್ಳಿ ಗ್ರಾಮದ ಮೊರಾರ್ಜಿ ವಸತಿ ಶಾಲೆಯಲ್ಲಿ ಭಾನುವಾರ ರಾತ್ರಿ ನಡೆದಿದೆ. ಒಟ್ಟು 30 ವಿದ್ಯಾರ್ಥಿಗಳು ತೀವ್ರ ಅಸ್ವಸ್ಥರಾಗಿದ್ದು, 15 ಮಂದಿಗೆ ಬೇಗೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಶಿಕ್ಷಣ ಇಲಾಖೆ ಅಧಿಕಾರಿಗಳು, ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ. ಕೆಲ ದಿನಗಳ ಹಿಂದೆ ಬೀದರ್ನ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿದ್ದ 30ಕ್ಕೂ ಹೆಚ್ಚು …
Read More »
BigTv News
July 17, 2023
News, ಕರ್ನಾಟಕ, ಮಂಗಳೂರು, ಸುದ್ದಿ
ಮಂಗಳೂರು: ಆಷಾಢ ಮಾಸವನ್ನು ತುಳುವರು ಆಟಿ ಎನ್ನುವರು. ಈ ಆಟಿ ತಿಂಗಳಲ್ಲಿ ಬರುವ ಅಮವಾಸ್ಯೆಯಂದು ದಕ್ಷಿಣ ಕನ್ನಡ, ಉಡುಪಿ, ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ಆಟಿ ಕಷಾಯ ಸೇವನೆ ಮಾಡುವ ಸಂಪ್ರದಾಯವಿದೆ. ಆಟಿ ಅಮಾವಾಸ್ಯೆಯಂದು ಕುಡಿಯುವ ಆಟಿ ಕಷಾಯದ ಬಗ್ಗೆ ನಿಮಗೆ ಗೊತ್ತೇ? ತುಳುವರು ಆಹಾರದಲ್ಲಿಯೇ ಔಷಧವನ್ನು ಸೇವಿಸುತ್ತಾರೆ. ಯಾವ ವಸ್ತುವಿನಲ್ಲಿ ಯಾವ ರೀತಿಯ ಔಷಧೀಯ ಗುಣವಿದೆ ಎನ್ನುವ ಸಂಗತಿ ಪೂರ್ವಜರಿಂದ ಬಳುವಳಿಯಾಗಿ ಬಂದಿದೆ. ಮರ, ತೊಗಟೆ, ಹುಲ್ಲು, ಪಥ್ಯ ಹಾಗು …
Read More »
BigTv News
July 17, 2023
News, ಕರ್ನಾಟಕ, ರಾಯಚೂರು, ಸುದ್ದಿ
ರಾಯಚೂರು: ಸಿಂಧನೂರು ತಾಲೂಕಿನ ಬೆಂಗಾಲಿ ಕ್ಯಾಂಪ್-2ರಲ್ಲಿ ಭಾನುವಾರ ಸಂಜೆ ಸಾಮಾಜಿಕ ಜಾಲತಾಣದಲ್ಲಿ ಧಾರ್ಮಿಕ ಪೋಸ್ಟ್ ವಿಚಾರವಾಗಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದೆ. ಸಾಮಾಜಿಕ ಜಾಲತಾಣದಲ್ಲಿ ಒಂದು ಗುಂಪು ಧಾರ್ಮಿಕ ವಿಚಾರವಾಗಿ ಪೋಸ್ಟ್ ಮಾಡಿತ್ತು. ಇದನ್ನು ಮತ್ತೊಂದು ಕೋಮಿನವರು ಪ್ರಶ್ನಿಸಿದ್ದಾರೆ. ಈ ವೇಳೆ ಎರಡು ಗುಂಪಿನ ನಡುವೆ ಮಾತಿನ ಚಕಮಕಿ ಉಂಟಾಗಿ ಗಲಾಟೆಯಾಗಿದೆ. ಇದರಿಂದ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಸಿಂಧನೂರು ಗ್ರಾಮೀಣ …
Read More »
bigtvnews22
July 17, 2023
News, ಕರ್ನಾಟಕ, ಜಿಲ್ಲೆ, ಬೆಳಗಾವಿ
ಬೆಳಗಾವಿ: ಪತ್ನಿಯ ಕಣ್ಣೆದುರೇ ಪತಿಯ ಮೇಲೆ ಮಚ್ಚು, ಲಾಂಗುಗಳಿಂದ ಮನಬಂದಂತೆ ಹಲ್ಲೆ ಮಾಡಿ ಕೊಲೆಗೈದ ದುಷ್ಕರ್ಮಿಗಳು ಬಳಿಕ ಸ್ಥಳದಿಂದ ಪರಾರಿಯಾದ ಘಟನೆ ಜಿಲ್ಲೆಯ ಮೂಡಲಗಿ ತಾಲೂಕಿನ ವಡೇರಟ್ಟಿ ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ. ಶಂಕರ್ ಸಿದ್ದಪ್ಪ ಜಗಮುತ್ತಿ (25) ಕೊಲೆಯಾದ ವ್ಯಕ್ತಿ. ಇಂದು ಅಮಾವಾಸ್ಯೆ ಹಿನ್ನೆಲೆಯಲ್ಲಿ ವಡೇರಟ್ಟಿ ಗ್ರಾಮದ ಬನಸಿದ್ದೇಶ್ವರ ದೇವಸ್ಥಾನಕ್ಕೆ ಪತ್ನಿ ಪ್ರಿಯಾಂಕ ಜೊತೆಗೆ ಆಗಮಿಸಿದ್ದ ಸಂದರ್ಭದಲ್ಲಿ ದಾಳಿ ಮಾಡಿ ಹತ್ಯೆ ಮಾಡಲಾಗಿದೆ. ಕಳೆದ ಮುರು ತಿಂಗಳ ಹಿಂದಷ್ಟೇ …
Read More »
bigtvnews22
July 17, 2023
News, ಕರ್ನಾಟಕ, ಜಿಲ್ಲೆ, ಬೆಂಗಳೂರು
ಮಹಾ ನಗರದಲ್ಲಿ 26 ಪ್ರತಿಪಕ್ಷ ನಾಯಕರು ಸೇರುತ್ತಿದ್ದೇವೆ. 2ನೇ ಸಭೆ ಇದಾಗಿದೆ ಎಂದು ಎಐಸಿಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ತಿಳಿಸಿದರು. ನಗರದ ಖಾಸಗಿ ಹೋಟೆಲ್ನಲ್ಲಿ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು “ನಾವು ಲೋಕಸಭೆ ಚುನಾವಣೆ ಬಗ್ಗೆ ಚರ್ಚೆ ಮಾಡುತ್ತೇವೆ. ಇದೊಂದು ಗೇಮ್ ಚೇಂಜರ್ ಸಭೆಯಾಗಲಿದೆ. ಇಲ್ಲಿ ಅಸೆಂಬ್ಲಿ ಸಮಾವೇಶ ನಡೆಯುತ್ತಿದೆ. ರಾಷ್ಟ್ರೀಯ ಪ್ರತಿಪಕ್ಷ ನಾಯಕರೆಲ್ಲ ಭಾಗವಹಿಸುತ್ತಿದ್ದು, ಒಗ್ಗಟ್ಟಿನ ಮಂತ್ರ ಜಪಿಸುತ್ತಿದ್ದೇವೆ” ಎಂದು ತಿಳಿಸಿದರು.ಪಕ್ಷಗಳು ಒಂದೇ ಸಾಮಾನ್ಯ …
Read More »
bigtvnews22
July 17, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಧಾರವಾಡ : ಇಲ್ಲಿನ ರೇಲ್ವೆ ನಿಲ್ದಾಣ ರಸ್ತೆಯಲ್ಲಿನ ಪ್ರಧಾನ ಅಂಚೆ ಕಚೇರಿ ಬಳಿ ವ್ಯಕ್ತಿಯೋರ್ವನ ಶವ ಪತ್ತೆಯಾಗಿದೆ. ದಾವಣಗೆರೆ ಮೂಲದ ದುರ್ಗೆಶ ಹನಮಂತಪ್ಪ ಮಂಗೋಡಿ (40) ಎಂಬುವನ ಶವ ಎಂದು ಗೊತ್ತಾಗಿದೆ. ನಗರದಲ್ಲಿ ದಿನಗೂಲಿ ಮಾಡಿ ಜೀವನ ಸಾಗಿಸುತ್ತಿದ್ದ ಈತನ ಶವ ಇಂದು ಬೆಳಗ್ಗೆ ಪತ್ತೆಯಾಗಿದೆ.ಶವದ ಮೇಲೆ ಕೆಲವು ರಕ್ತದ ಕಲೆಗಳು ಕಂಡು ಬಂದಿವೆ. ಸ್ಥಳಕ್ಕೆ ವಿದ್ಯಾಗಿರಿ ಠಾಣೆಯ ಸಿಪಿಐ ಸಂಗಮೇಶ ದಿಡಿಗಿನಾಳ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಕುರಿತು …
Read More »