Breaking News

News

ಕಾಂಗ್ರೆಸ್ ಸರ್ಕಾರ ಜವಾಬ್ದಾರಿ ಇಲ್ಲದ ಸರ್ಕಾರ: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌

ಹುಬ್ಬಳ್ಳಿ: ರಾಜ್ಯದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್  ಸರ್ಕಾರ ಜವಾಬ್ದಾರಿ ಇಲ್ಲದ ಸರ್ಕಾರ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅಸಮಾಧಾನ ವ್ಯಕ್ತಪಡಿಸಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.ಕಾಂಗ್ರೆಸ್ ಅಧಿಕಾರಕ್ಕೆ ಬಂದು ಒಂದು ತಿಂಗಳು ಹತ್ತಿರ ಬಂದಿದೆ. ರಾಜ್ಯಕ್ಕೆ ನೈಸರ್ಗಿಕ ಆಪತ್ತು ಬರುತ್ತಿವೆ. ಮಾನ್ಸೂನ್ ಮಳೆ ತಡವಾಗಿದ್ದರಿಂದ ಬಿತ್ತನೆ ಕೂಡ ತಡವಾಗಿ ಆಗುತ್ತಿದೆ. ಮಾನ್ಸೂನ್ ಮಳೆ ಸಕಾಲಕ್ಕೆ ಬಾರದಿದ್ದರೆ ರೈತರಿಗೆ ಬಹಳಷ್ಟು ಕಷ್ಟವಾಗುತ್ತದೆ. ಮತ್ತೊಂದು ಕಡೆ ಭೀಕರ ಚಂಡಮಾರುತದ ಸೂಚನೆ ಸಹ ಬರುತ್ತಿವೆ. …

Read More »

ಧಾರವಾಡ: ಗೋವನಕೊಪ್ಪ ಹೊರವಲಯದಲ್ಲಿ ರೂಪಾ ಸವದತ್ತಿ ಕೊಲೆ ಪ್ರಕರಣ, ಓರ್ವ ಕೊಲೆ ಆರೋಪಿ ಬಂಧನ.

ಧಾರವಾಡ ಕಳೆದ ಶುಕ್ರವಾರದಂದು ಧಾರವಾಡ ತಾಲೂಕಿನ ಗೋವನಕೊಪ್ಪ ಗ್ರಾಮದ ಹೊರವಲಯದಲ್ಲಿ ರೂಪಾ ಸವದತ್ತಿಯ ಮಹಿಳೆಯ ಹತ್ಯೆಗೆ ಸಂಬಂಧಿಸಿದಂತೆ ಓರ್ವ ಆರೋಒಇಯನ್ನು ಬಂಧನ ಮಾಡುವಲ್ಲಿ ಧಾರವಾಡ ಗ್ರಾಮೀಣ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಹತ್ಯೆಯಾದ ರೂಪಾ ಮೈದುನ ರಾಕೇಶ ಬಂಧಿತ ಆರೋಪಿಯಾಗಿದ್ದಾನೆ. ಇನ್ನೂ ಹತ್ಯೆಯಾದ ರೂಪಾ ಸವದತ್ತಿ ಆರೋಪಿ ರಾಕೇಶಗೆ ಸರಿಯಾಗಿ ಸ್ಪಂದನೆ ಮಾಡುತ್ತಿಲ್ಲ ಹಾಗೂ ನನಗೆ ಸಮಯ ನೀಡುತ್ತಿಲ್ಲ ಎಂಬ ಬೇಸರಗೊಂಡು ಮಹಿಳೆಯನ್ನು ಹತ್ಯೆ ಮಾಡಿರುವುದಾಗಿ ಪೊಲೀಸರ ತನಿಖೆಯಲ್ಲಿ ತಿಳಿದು ಬಂದಿದೆ …

Read More »

ಉತ್ತರ ಕರ್ನಾಟಕದ ಅಭಿವೃದ್ಧಿ ಹಾಗೂ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಮುಂದಾದ ಸಚಿವರು

ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಸೋದ್ಯಮದ ಬೆಳವಣಿಗೆಗೆ ವಿಶೇಷ ಒತ್ತು ನೀಡಲಾಗುವುದು ಎಂದು ಪ್ರವಾಸೋದ್ಯಮ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌.ಕೆ.ಪಾಟೀಲ ಹೇಳಿದರು.ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಮ್ಮನ ಗುಡ್ಡ, ಬನಶಂಕರಿ ಮತ್ತು ದುರ್ಗಮ್ಮ ದೇವಸ್ಥಾನಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು, ಪ್ರವಾಸಿಗರು ಬರುತ್ತಾರೆ. ಇಂತಹ ಜನಸಾಮಾನ್ಯರ ಶ್ರದ್ಧಾ ಕೇಂದ್ರಗಳು ಪ್ರವಾಸಿ ತಾಣಗಳ ರೀತಿಯಲ್ಲೇ ಇವೆ. ಅವುಗಳ ಅಭಿವೃದ್ಧಿಗೆ ಗಮನ ಹರಿಸಲಾಗುವುದು ಎಂದರು.ಈ ಭಾಗದಲ್ಲಿರುವ ಪ್ರಸಿದ್ಧ ಪ್ರವಾಸಿ ತಾಣಗಳ ಬೆಳವಣಿಗೆಗೆ ನಿರೀಕ್ಷ …

Read More »

ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕಸಂತೋಷ ಲಾಡ್

ಹುಬ್ಬಳ್ಳಿ: ಕಾರ್ಮಿಕ ಸಚಿವ ಸಂತೋಷ ಲಾಡ್ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕಗೊಂಡಿದ್ದಾರೆ. ತೀವ್ರ ಪೈಪೋಟಿ ನಡುವೆ ಕಲಘಟಗಿ ಶಾಸಕ ಸಂತೋಷ್ ಲಾಡ್ ಸಚಿವರಾಗಿದ್ದಾರೆ. ಆದರೆ, ಇದೀಗ ಜಿಲ್ಲಾ ಉಸ್ತುವಾರಿ ಸಚಿವರು ಯಾರಾಗುತ್ತಾರೆ ಎಂಬ ಕುತೂಹಲ, ಚರ್ಚೆ ಜಿಲ್ಲೆಯಲ್ಲಿ ಜೋರಾಗಿತ್ತು. ಧಾರವಾಡ ಜಿಲ್ಲೆಯ ಉಸ್ತುವಾರಿ ಆಗಲು ಪ್ರಥಮ ಬಾರಿಗೆ ಸಚಿವೆಯಾಗಿರುವ ಬೆಳಗಾವಿ ಜಿಲ್ಲೆಯ ಲಕ್ಷ್ಮೀ ಹೆಬ್ಬಾಳ‌ ಆಸಕ್ತಿ ವಹಿಸಿದ್ದರು. ಆದರೆ ಈಗ ಸಂತೋಷ ಲಾಡ್ ಅವರಿಗೆ ಧಾರವಾಡ ಫೇಡಾ ಬಿದ್ದಿರುವುದು …

Read More »

ಗೋವನಕೊಪ್ಪದಲ್ಲಿ ಒಂಟಿ ಮಹಿಳೆಯ ಬರ್ಬರ ಕೊಲೆ

ಧಾರವಾಡ: ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಮಹಿಳೆಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಧಾರವಾಡ ತಾಲೂಕಿನ ಗೋವನಕೊಪ್ಪ ಗ್ರಾಮದ ಹೊರವಲಯದಲ್ಲಿ ನಡೆದಿದೆ. ರೂಪಾ ಸವದತ್ತಿ ಎಂಬುವವರೇ ಹತ್ಯೆಗೀಡಾದ ಮಹಿಳೆ ನಿನ್ನೆ ಮನೆಯಿಂದ ಹೊರಗಡೆ ಹೋಗಿದ್ದ ರೂಪಾ ರಾತ್ರಿಯಾದರೂ ಮನೆಗೆ ಮರಳಿ ಬಂದಿರಲಿಲ್ಲ. ಅವರಿಗಾಗಿ ಮನೆಯವರು ಶೋಧ ಕೂಡ ನಡೆಸಿದ್ದರು. ಆದರೆ, ಇಂದು ಬೆಳಿಗ್ಗೆ ರೂಪಾ ಅವರ ಶವ ಗೋವನಕೊಪ್ಪ ಗ್ರಾಮದ ಹೊರವಲಯದಲ್ಲಿ ಪತ್ತೆಯಾಗಿದೆ.ಯಾರು ಕೊಲೆ ಮಾಡಿದವರು ಹಾಗೂ ಏತಕ್ಕಾಗಿ …

Read More »

ಸರ್ಕಾರಿ ಶಾಲೆಗಳಿಗೆ ಅತಿಥಿ ಶಿಕ್ಷಕರ ನೇಮಕಕ್ಕೆ ಒತ್ತಾಯ

ಧಾರವಾಡ ನವಲಗುಂದ: ನವಲಗುಂದ ತಾಲೂಕಿನ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇದ್ದು ಈ ಕೂಡಲೇ ಶಾಲಾವಾರು ಖಾಲಿ ಇರುವಂತಹ ಶಿಕ್ಷಕರ ಹುದ್ದೆಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಬೇಕೆಂದು ಸಮಾಜ ಸೇವಕ ಮಾಬುಸಾಬ್ ಯರಗುಪ್ಪಿ ಒತ್ತಾಯಿಸಿದ್ದಾರೆ. ಈ ಕುರಿತು ತಹಶೀಲ್ದಾರ್ ಪ್ರಕಾಶ ಹೊಳೆಪ್ಪಗೋಳ ಮೂಲಕ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಿಗೆ ಮನವಿ ನೀಡಿ ಮಾತನಾಡಿದ ಮಾಬುಸಾಬ್ ಯರಗುಪ್ಪಿ ಅವರು, ಇವತ್ತು ತಾಲೂಕಿನಾದ್ಯಾಂತ 124 ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿದ್ದು …

Read More »

ಕೆಲಗೇರಿ ಭಾಗದ ವಿವಿಧ ಬಡಾವಣೆಗಳಿಗೆ ಮೇಯರ್ ಬೇಟಿ–ಪರಿಶೀಲನೆ

-ಧಾರವಾಡ ಮಹಾನಗರ ಪಾಲಿಕೆಯ ಮಹಾಪೌರರಾದಈರೇಶ ಅಂಚಟಗೇರಿ ಕೆಲಗೇರಿ ಬಡಾವಣೆಗಳಿಗೆ ಭೇಟಿ ನೀಡಿ, ಕೆಲಗೇರಿ ಕೆರೆಗೆ ಸರೋವರ ನಗರ ಹಾಗೂ ಇನ್ನಿತರ ಕಡೆಯಿಂದ ಕೊಳಚೆ ನೀರು ಬಂದು ಸಂಗ್ರಹವಾಗುತ್ತಿರುವ ಹಿನ್ನೆಲೆಯಲ್ಲಿ ಸರೋವರ ನಗರ ಹಾಗೂ ಇನ್ನಿತರ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಲ್ಲಿನ ಸಮಸ್ಯೆಗಳನ್ನು ಅರಿತು, ಕೂಡಲೇ ಕೆಲಗೇರಿ ಕೆರೆಯ ಮುಖಾಂತರ ಹೊರಹೋಗುವ ನಾಲಾ ನೀರನ್ನು ಸ್ವಚ್ಛಗೊಳಿಸಬೇಕು. ಹಾಗೂ ಕೂಡಲೇ ಉನ್ನತ ಗುಣಮಟ್ಟದ ಕಾಮಗಾರಿಯನ್ನು ಕೈಗೊಳ್ಳುವ ಮೂಲಕ ಸಂಪೂರ್ಣ ಕೆಲಗೇರಿ …

Read More »

ಅಂತೂ ಬೋನಿಗೆ ಬಿತ್ತು ಚಿರತೆ: ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಹುಬ್ಬಳ್ಳಿ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಸಿಂಗನಳ್ಳಿ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಹಲವು ಬಾರಿ ಗ್ರಾಮಸ್ಥರಿಗೆ ಕಾಣಿಸಿಕೊಂಡಿದ್ದ ಚಿರತೆಯಿಂದ ಜನರು ಭಯಭೀತರಾಗಿದ್ದರು. ಅಲ್ಲದೆ ಚಿರತೆ ಕಂಡು ಜಮೀನಿಗೆ ತೆರಳುವುದಕ್ಕೂ ಆತಂಕಗೊಂಡಿದ್ದ ರೈತರು, ಈ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು ‌ . ಇನ್ನೂ ಅರಣ್ಯ ಇಲಾಖೆಯಿಂದ ಚಿರತೆ ಸೆರೆ ಹಿಡಿಯಲು ಎರಡೂ ದಿನಗಳಿಂದ ಕಾರ್ಯಾಚರಣೆ …

Read More »

ತೇಗೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ

ಧಾರವಾಡ: ಖಾಸಗಿ ಬಸ್ ಹಾಗೂ ಕ್ರೂಸರ್ ಮಧ್ಯೆ ಭೀಕರ ರಸ್ತೆ ಅಪಘಾತ ಸಂಭವಿಸಿ ಕ್ರೂಸರ್‌ನಲ್ಲಿದ್ದ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಿನ್ನೆ ತಡರಾತ್ರಿ ನಡೆದಿದೆ. ಗರಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಗಾಯಾಳುಗಳು ಎಲ್ಲಿಯವರು ಹಾಗೂ ಎಲ್ಲಿಂದ ಎಲ್ಲಿಗೆ ಹೊರಟಿದ್ದರು ಎಂಬುದರ ಸಂಪೂರ್ಣ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ.

Read More »

ಟವೇರಾ, ಬೈಕ್ ನಡುವೆ ಮುಖಾಮುಖಿ ಡಿಕ್ಕಿ

ನವಲಗುಂದ:ಗುಡಿಸಾಗರ-ನವಲಗುಂದ ರಸ್ತೆಯಲ್ಲಿ ಟವೇರಾ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಗುಡಿಸಾಗರ ಗ್ರಾಮದ ಮಡಿವಾಳಪ್ಪ ಬಸಪ್ಪ ಕಡೆಮನಿ ನವಲಗು೦ದದಿಂದ ಗುಡಿಸಾಗರಕ್ಕೆ ಹೋಗುವಾಗ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಗಂಭೀರ ಗಾಯವಾದ ಮಡಿವಾಳಪ್ಪ ಅವರಿಗೆ ಹುಬ್ಬಳ್ಳಿ ಕಿಮ್ಸ್‌ಗೆ ರವಾನಿಸಲಾಗಿದೆ. ಸವಾರನ ಸ್ಥಿತಿ ಚಿಂತಾಜನಕವಾಗಿದೆ. ಟವೇರಾ ರೋಣದಿಂದ ಕಿರೇಸೂರ ಗ್ರಾಮಕ್ಕೆ ಹೋಗುತ್ತಿತ್ತು ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.

Read More »