BigTv News
November 6, 2023
News, ಕರ್ನಾಟಕ, ಜಿಲ್ಲೆ, ಬೆಂಗಳೂರು, ರಾಜಕೀಯ, ರಾಜಕೀಯ ಸುದ್ದಿ
ಹಾಸನ: ವರ್ಷಕ್ಕೊಮ್ಮೆ ದರ್ಶನ ಕರುಣಿಸುವ ಹಾಸನಾಂಬ ದೇಗುಲದ ಬಾಗಿಲು ನವೆಂಬರ್ 2ರಂದು ತೆರೆದಿದ್ದು, ಭಕ್ತರಿಗೆ ದರ್ಶನಕ್ಕೆ ನವೆಂಬರ್ 3ರಂದು ಅವಕಾಶ ಕಲ್ಪಿಸಲಾಗಿತ್ತು. ಅಂದಿನಿಂದ ಹಲವು ರಾಜಕಾರಣಿಗಳು ಕೂಡ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆಯುತ್ತಿದ್ದಾರೆ. ಹಾಗೆಯೇ 5ನೇ ದಿನವಾದ ನಾಳೆ (ನವೆಂಬರ್ 07) ಸಿಎಂ ಸಿದ್ದರಾಮಯ್ಯ ಅವರು ಭೇಟಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ. ನಾಳೆ (ನವೆಂಬರ್ 07) ಬೆಳಗ್ಗೆ 12-30ಕ್ಕೆ ಹಾಸನಾಂಬೆ ದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದಾರೆ. ಈ ವೇಳೆ …
Read More »
BigTv News
November 6, 2023
News, ಕರ್ನಾಟಕ, ಜಿಲ್ಲೆ, ಬೆಂಗಳೂರು, ರಾಜಕೀಯ, ರಾಜಕೀಯ ಸುದ್ದಿ
ಬೆಂಗಳೂರು: ಕಾಂಗ್ರೆಸ್ ಕರ್ನಾಟಕವನ್ನು ಎಲ್ಲಾ ವಲಯಗಳಲ್ಲಿಯೂ ದಿವಾಳಿ ಮಾಡಲು ಅಧಿಕಾರಕ್ಕೆ ಬಂದಿದೆ. ರಾಜ್ಯದ ಆರ್ಥಿಕ ಸ್ಥಿತಿಯನ್ನು ಹದಗೆಡಿಸುವ ಜೊತೆ ಕಾನೂನು ಸುವ್ಯವಸ್ಥೆಯನ್ನು ಹದಗೆಡಿಸುತ್ತಿರುವುದು ನಿಜಕ್ಕೂ ಆತಂಕಕಾರಿ ಎಂದು ರಾಜ್ಯ ಬಿಜೆಪಿ ಟ್ವೀಟ್ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬಂದಾಗಲಿಂದ ನೇಕಾರರ ಬದುಕಿಗೆ ಮರಣ ಶಾಸನ ಬರೆಯುತ್ತಿದೆ ಎಂಬುದಕ್ಕೆ ತುಮಕೂರು ಜಿಲ್ಲೆಯೊಂದರಲ್ಲೇ 150ಕ್ಕೂ ಹೆಚ್ಚು ನೇಕಾರರ ಕುಟುಂಬಗಳು ಬೀದಿಗೆ ಬಿದ್ದಿರುವುದು ತಾಜಾ ನಿದರ್ಶನ. ಕಾಂಗ್ರೆಸ್ ಸರ್ಕಾರ …
Read More »
BigTv News
November 6, 2023
News, ಕರ್ನಾಟಕ, ಜಿಲ್ಲೆ, ಬೆಂಗಳೂರು, ರಾಜಕೀಯ, ರಾಜಕೀಯ ಸುದ್ದಿ
ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಎಚ್. ಡಿ. ಕುಮಾರಸ್ವಾಮಿ ಘೋಷಣೆ ಮಾಡಿದ್ದ ‘ರೈತ ಸಾಂತ್ವನ ಯಾತ್ರೆ’ಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಾಗತ ಮಾಡಿದ್ದರು. ಈ ಕುರಿತು ಭಾನುವಾರ ಅವರು ಪೋಸ್ಟ್ ಹಾಕಿದ್ದರು. ಸೋಮವಾರ ಈ ಪೋಸ್ಟ್‌ಗೆ ಎಚ್. ಡಿ. ಕುಮಾರಸ್ವಾಮಿ ಉತ್ತರ ನೀಡಿದ್ದಾರೆ. ‘ಪ್ರತಿಪಕ್ಷಗಳ ಕೆಲಸ ಗುರುತಿಸುವ ನಿಮ್ಮ ‘ಹೃದಯ ವೈಶಾಲ್ಯತೆ’ಗೆ ನಾನು ಆಭಾರಿ. ರೈತ ಸಾಂತ್ವನ ಯಾತ್ರೆಯನ್ನು ಸ್ವಾಗತ ಮಾಡಿರುವ ನಿಮ್ಮ ‘ದೊಡ್ಡ’ ಗುಣವನ್ನು ಮನಸಾರೆ ಕೊಂಡಾಡುತ್ತೇನೆ. …
Read More »
BigTv News
November 6, 2023
News, ಕರ್ನಾಟಕ, ಜಿಲ್ಲೆ, ಬೆಂಗಳೂರು, ರಾಜಕೀಯ, ರಾಜಕೀಯ ಸುದ್ದಿ
ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ. ರೋಮ್ ಹತ್ತಿ ಉರಿಯುತಿದ್ದರೆ ನಿರೋ ಪಿಟೀಲು ಬಾರಿಸುತ್ತಿದ್ದ” ಎಂಬಂತೆ ರಾಜ್ಯ ಬರದ ಬೇಗುದಿಯಲ್ಲಿ ನರಳುತ್ತಿದ್ದರೆ ರಾಜ್ಯದ ಕಾಂಗ್ರೆಸ್ ಸರ್ಕಾರ “ನಾನು ಮುಖ್ಯಮಂತ್ರಿ ನಾನು ಮುಖ್ಯಮಂತ್ರಿ” ಆಟ ಆಡಿ ಜನರ ನೋವನ್ನು ಕಡೆಗಣಿಸುತ್ತಿದೆ ಎಂದು ಮಾಜಿ ಸಚಿವ ಸಿ ಟಿ ರವಿ ಕಿಡಿಕಾರಿದ್ದಾರೆ. ಈ ಕುರಿತು ಮಾತನಾಡಿದ ಸಿ ಟಿ ರವಿ ಅವರು, ರಾಜ್ಯ ಸರ್ಕಾರ ತನ್ನ ಜವಾಬ್ದಾರಿ …
Read More »
bigtvnews22
November 6, 2023
News, ಕರ್ನಾಟಕ
ಹೈದರಾಬಾದ್: ತೆಲಂಗಾಣ ವಿಧಾನಸಭೆ ಚುನಾವಣೆಯು ದೇಶದಾದ್ಯಂತ ಭಾರೀ ಕುತೂಹಲ ಕೆರಳಿಸಿದೆ. ಆಡಳಿತರೂಢ ಭಾರತ್ ರಾಷ್ಟ್ರ ಸಮಿತಿ ( ಬಿಆರ್‌ಎಸ್ ), ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಆದರೆ, ಚುನಾವಣೆ ಹತ್ತಿರವಾಗುತ್ತಿದಂತೆ ಬಿಜೆಪಿ ಮಂಕಾಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಈಗ ತೆಲಂಗಾಣದಲ್ಲಿ ಬಿಆರ್‌ಎಸ್ ಹಾಗೂ ಕಾಂಗ್ರೆಸ್ ನಡುವೆ ಹಣಾಹಣಿ ಇರುವುದು ಸಮೀಕ್ಷೆಗಳಿಂದ ತಿಳಿದುಬಂದಿದೆ. 119 ಸ್ಥಾನಗಳನ್ನು ಹೊಂದಿರುವ ತೆಲಂಗಾಣ ವಿಧಾನಸಭೆಗೆ ನವೆಂಬರ್ 30 ರಂದು ಮತದಾನ …
Read More »
BigTv News
November 6, 2023
News, ಕರ್ನಾಟಕ, ಗದಗ, ಜಿಲ್ಲೆ
ಗದಗ ರೋಣ:ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಎಮ್.ಗುರುಮೂರ್ತಿ ಶಿವಮೊಗ್ಗ,ರಾಜ್ಯ ಸಂ.ಸಂಚಾಲಕ ಎಸ್.ಫಕೀರಪ್ಪನವರು,ವಿಭಾಗಿಯ ಸಂಚಾಲಕ ಪ್ರಕಾಶ ಹೊಸಳ್ಳಿ ಅವರ ನಿರ್ದೇಶನದಂತೆ ಜಿಲ್ಲಾ ಸಂಚಾಲಕ ಶರಣು ಪೂಜಾರ ಅವರು ರೋಣ ತಾಲೂಕು ಸಂಚಾಲಕರಾಗಿ ಸೋಮಶೇಖರ ನಾಗರಾಜ ಅವರನ್ನು ನೇಮಕ ಮಾಡಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Read More »
BigTv News
November 6, 2023
News, ಜಿಲ್ಲೆ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಧಾರವಾಡ: ದೇವಸ್ಥಾನ ಕಟ್ಟೆಯೊಂದರ ಮೇಲೆ ತಾನು ವಾಸ ಮಾಡುತ್ತಿದ್ದು, ತನಗೆ ಸೂರು ಒದಗಿಸಬೇಕು ಎಂದು ವಿಶೇಷ ಚೇತನ ಮಹಿಳೆಯೊಬ್ಬರು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರಿಗೆ ಮೊರೆ ಇಟ್ಟಿದ್ದಾರೆ. ಧಾರವಾಡ ತಾಲೂಕಿನ ಚಿಕ್ಕಮಲ್ಲಿಗವಾಡ ಗ್ರಾಮದ ಶಂಕ್ರಮ್ಮ ಏಣಗಿ ಎಂಬ ವಿಶೇಷ ಚೇತನ ಮಹಿಳೆ ಧಾರವಾಡದ ಸೃಜನಾ ರಂಗಮಂದಿರದಲ್ಲಿ ನಡೆಯುತ್ತಿದ್ದ ಸಚಿವ ಸಂತೋಷ ಲಾಡ್ ಅವರ ಜನತಾ ದರ್ಶನ ಕಾರ್ಯಕ್ರಮಕ್ಕೆ ಬಂದು ತನಗೆ ಸೂರು ಒದಗಿಸಬೇಕು ಎಂದು ಮನವಿ ಮಾಡಿದ್ದಾರೆ. …
Read More »
BigTv News
November 5, 2023
News, ಕರ್ನಾಟಕ, ಜಿಲ್ಲೆ, ಬೆಂಗಳೂರು
ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು ಸುತ್ತೋಲೆಯನ್ನು ಹೊರಡಿಸಲಾಗಿದೆ. ಆಸಕ್ತರು, ಅರ್ಹರು ಒಂದು ವಾರದೊಳಗೆ ಲಿಖಿತ ಮನವಿಯನ್ನು ಸಲ್ಲಿಕೆ ಮಾಡುವಂತೆ ಸೂಚನೆ ನೀಡಲಾಗಿದೆ. ಸರ್ಕಾರದ ಪರವಾಗಿ ಗಾಯತ್ರಿ ಜಿ. ಎನ್. ಸರ್ಕಾರದ ಅಧೀನ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಸಿಬ್ಬಂದಿ) ಈ ಕುರಿತು 3ಸುತ್ತೋಲೆ ಹೊರಡಿಸಿದ್ದಾರೆ. ಸುತ್ತೋಲೆಯು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ …
Read More »
BigTv News
November 5, 2023
News, ಕ್ರಿಕೆಟ್, ಕ್ರಿಕೆಟ್, ಕ್ರೀಡೆ
ಭಾನುವಾರ, ನವೆಂಬರ್ 5ರಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಸ್ಟೇಡಿಯಂನಲ್ಲಿ ನಡೆಯತ್ತಿರುವ 2023ರ ಐಸಿಸಿ ಏಕದಿನ ವಿಶ್ವಕಪ್‌ನ 37ನೇ ಹೈ-ವೋಲ್ಟೇಜ್ ಪಂದ್ಯದಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗಿವೆ. ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಮಾಡುವ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ತೆಂಬಾ ಬವುಮಾ ನಾಯಕತ್ವದ ದಕ್ಷಿಣ ಆಫ್ರಿಕಾ ತಂಡ ಮೊದಲು ಫೀಲ್ಡಿಂಗ್ ಮಾಡಲಿದೆ. ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಈಗಾಗಲೇ 2023ರ …
Read More »
BigTv News
November 5, 2023
News, ಕರ್ನಾಟಕ, ಜಿಲ್ಲೆ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಕಾರ್ ಮೇಲೆ ಪ್ರೆಸ್ ಅಂತಾ ಬರೆಯಿಸಿ ಅಕ್ರಮವಾಗಿ ಬೇರೆ ರಾಜ್ಯದಿಂದ ಸಾರಾಯಿ ತಂದು ಮಾರಾಟ ಮಾಡುತ್ತಿದ್ದ ಖತರ್ನಾಕ್ ಆಸಾಮಿಯನ್ನು ಸಿಸಿಬಿ ಪೊಲೀಸರು ಜೈಲಿಗೆ ಕಳುಹಿಸಿದ್ದಾರೆ. ವೃತ್ತಿಯಲ್ಲಿ ಕಾರು ಚಾಲಕನಾಗಿದ್ದ ವಿಶ್ವೇಶ್ವರ ನಗರದ ಶ್ರೀಕಾಂತಯ್ಯ ಹಿರೇಮಠ ಎಂಬಾತ ತನ್ನ ಎಲ್ಲೋ ಬೋರ್ಡ್ ಕಾರ್ ಮೇಲೆ ಪ್ರೆಸ್ ಅಂತಾ ಬರೆಯಿಸಿ ಗೋವಾ ರಾಜ್ಯದಿಂದ ಅಕ್ರಮವಾಗಿ ಮದ್ಯ ತಂದು ನಗರದಲ್ಲಿ ಮಾರಾಟ ಮಾಡುವ ಕಾಯಕವನ್ನು ನಡೆಸಿದ್ದ. ಈ ಬಗ್ಗೆ ಖಚಿತ ಮಾಹಿತಿಯನ್ನು ಆಧರಿಸಿ …
Read More »