Breaking News

News

ಹೊಸೂರು ಸರ್ಕಲ್‌ ಬಳಿ ಭೀಕರ ಅಪಘಾತ,ಪಾದಾಚಾರಿ ಸ್ಥಳದಲ್ಲೇ ಸಾವು.

ಹುಬ್ಬಳ್ಳಿ : ರಸ್ತೆ ದಾಟುತ್ತಿದ್ದ ಪಾದಾಚಾರಿಯ ಮೇಲೆ ಮರಳು ಸಾಗಾಟ ಮಾಡುತ್ತಿದ್ದ ಲಾರಿಯೊಂದು ಹರಿದ ಪರಿಣಾಮ ಪಾದಾಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ಈಗಷ್ಟೇ ನಡೆದಿದೆ.ಹುಬ್ಬಳ್ಳಿಯ ಗಾಳಿ ದುರ್ಗಮ್ಮ ದೇವಸ್ಥಾನದ ಬಳಿಯಲ್ಲಿ ರಸ್ತೆ ದಾಟುತ್ತಿದ್ದಾಗ ಲಾರಿ ಪಾದಚಾರಿ ಮೇಲೆ ಹರಿದು ಈ ಘಟನೆ ನಡೆದಿದೆ. ಇನ್ನು ಮೃತಪಟ್ಟ ವ್ಯಕ್ತಿ ಯಾರು ಎಂಬ ಮಾಹಿತಿ ಇನ್ನು ಲಭ್ಯವಾಗಿಲ್ಲ.ಸ್ಥಳಕ್ಕೆ ಉತ್ತರ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿದ್ದು ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಹುಬ್ಬಳ್ಳಿಯ ಕೀಮ್ಸ್ …

Read More »

ಅವಳಿನಗರದಲ್ಲಿ ಹೆಚ್ಚುತ್ತಿವೆ ಸೈಬರ್‌ ಕ್ರೈಂ- ಸಾಲದ ನೆಪದಲ್ಲಿ 1.50 ಲಕ್ಷ ರೂ ಎಗರಸಿದ ಭೂಪ

ಹುಬ್ಬಳ್ಳಿ: ಅವಳಿ ನಗರಗಳಲ್ಲಿ ಸೈಬರ್​ ಅಪರಾಧ ಪ್ರಕರಣಗಳು (cyber crime)ಹೆಚ್ಚಾಗುತ್ತಿವೆ. ಅಪರಿಚಿತನೊಬ್ಬ ಲೋನ್ ನೀಡುವುದಾಗಿ ಕರೆ ಮಾಡಿ ವ್ಯಕ್ತಿಯೊಬ್ಬರ ಖಾತೆಯಿಂದ 1.50 ಲಕ್ಷ ವರ್ಗಾಯಿಸಿಕೊಂಡು ಹುಬ್ಬಳ್ಳಿಯಲ್ಲಿ ವಂಚಿಸಿದರೆ, ಗೋಧಿ ಹಿಟ್ಟು ಖರೀದಿ ನೆಪದಲ್ಲಿ 59 ಸಾವಿರ ರೂಪಾಯಿ ಎಗರಿಸಿದ ಘಟನೆ ಧಾರವಾಡದಲ್ಲಿ ವರದಿಯಾಗಿದೆ.ಧಾರವಾಡದ ಜೈಭೀಮ ನಗರದ ಕೃಷ್ಣ ಕಟ್ಟಿಮನಿ ಎಂಬುವವರಿಗೆ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ ಲೋನ್​ ನೀಡುವುದಾಗಿ ತಿಳಿಸಿದ್ದಾನೆ. ವಿಳಾಸ ದಾಖಲೆ, ಬ್ಯಾಂಕ್​ ಖಾತೆ, ಎಟಿಎಂ ಮತ್ತಿತರ ದಾಖಲೆಗಳನ್ನು ಪಡೆದಿದ್ದಾನೆ. …

Read More »

ಭೀಕರ ರಸ್ತೆ ಅಪಘಾತ: ರಸ್ತೆಯಲ್ಲೇ ಹೊತ್ತಿ ಉರಿದ ಟಿಪ್ಪರ್,ಬೈಕ ಸವಾರ ಸ್ಥಳದಲ್ಲೇ ದುರ್ಮರಣ

ಚಿತ್ರದುರ್ಗ: ಬೈಕ್ ಮತ್ತು ಟಿಪ್ಪರ್ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಹಿನ್ನೆಲೆ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಟಿಪ್ಪರ್ ಧಗಧಗನೆ ಹೊತ್ತಿ ಉರಿದ ಘಟನೆ ಚಿತ್ರದುರ್ಗ ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ.ಚಿತ್ರದುರ್ಗ ತಾಲೂಕಿನ ಇಂಗಳದಾಳ್ ಗ್ರಾಮದ ರಂಗಪ್ಪ (60) ಮೃತ ವ್ಯಕ್ತಿ. ಜೋಗಿಮಟ್ಟಿ ರಸ್ತೆ ನಿವಾಸಿ ಹನುಮಂತಪ್ಪ ಗಂಭೀರವಾಗಿ ಗಾಯಗೊಂಡಿದ್ದು, ದಾವಣಗೆರೆ ಎಸ್ ಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾಂಧರ್ಭಿಕ ಚಿತ್ರ ಚಿತ್ರದುರ್ಗದಿಂದ ಚಳ್ಳಕೆರೆ ಕಡೆಗೆ ಟಿಪ್ಪರ್ ಹೊರಟಿತ್ತು. …

Read More »

ಪ್ರೀತಿಸಿದಾಕೆ ಕೈ ಕೋಟ್ಟಿದ್ದಕ್ಕೇ ಈ ಪಾಗಲ್‌ ಮಾಡಿದ್ದೇನು-14 ದಿನ ನ್ಯಾಯಾಂಗ ಬಂಧನಕ್ಕೆ ಒಳಗಾದ ಪಾಗಲ್‌ ಪೇಮಿ…

ಆರೋಪಿ ಬಸವರಾಜು ಹೈದರಾಬಾದ್​: ಪ್ರಿಯತಮೆ ಮೋಸ ಮಾಡಿದ್ದಾಳೆ ಎಂದು ಆಕೆಯ ಮೇಲೆ ಮನಬಂದಂತೆ ಚಾಕುವಿನಿಂದ ಹಲ್ಲೆ ಮಾಡಿದ್ದ ಆರೋಪಿ ಬಸವರಾಜು ಎಂಬಾತನನ್ನು ಬಂಧಿಸಲಾಗಿದ್ದು, ಪೊಲೀಸರು ರಂಗಾರೆಡ್ಡಿ ನ್ಯಾಯಾಲಯಕ್ಕೆ (Rangareddy Court) ಹಾಜರುಪಡಿಸಿದ್ದರು. ಈಗ ನ್ಯಾಯಾಲಯ ಆತನಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಪೊಲೀಸರು ಬಸವರಾಜುನನ್ನು ಚರ್ಲಪಲ್ಲಿ ಜೈಲಿಗೆ (Charlapalli jail) ಸ್ಥಳಾಂತರಿಸಿದ್ದಾರೆ. ಪ್ರಿಯಕರ ಬಸವರಾಜುನಿಂದ ಗಾಯಗೊಂಡಿರುವ ಯುವತಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. 24 ಗಂಟೆಗಳ …

Read More »

100 ಮಹಿಳಾ ಶವಗಳ ಮೇಲೆ ಅತ್ಯಾಚಾರ- 24 ವರ್ಷಗಳ ಬಳಿಕ ಡೇವಿಡ್ ಬಂಧನ

ಲಂಡನ್ : ನೂರು ಮಹಿಳಾ ಶವಗಳ (Female Corpses) ಮೇಲೆ ಅತ್ಯಾಚಾರ ಎಸಗಿದ್ದ ವ್ಯಕ್ತಿಯನ್ನು 34 ವರ್ಷಗಳ ಬಳಿಕ ದೋಷಿ ಎಂದು ನ್ಯಾಯಾಲಯ ತೀರ್ಪು ನೀಡಿದೆ. ಇಂಗ್ಲೆಂಡ್ ನ ಈಸ್ಟ್ ಸುಸೆಕ್ಸ್ ನಲ್ಲಿ ನಡೆದಿದೆ. ಇಲ್ಲಿಯ ಟೌನ್ ಹಿಥಫ್ಲೀಡ್ (Heathfield East Sussex ) ಮೂಲದ ವ್ಯಕ್ತಿಗೆ ಶಿಕ್ಷೆ ಪ್ರಕಟವಾಗುತ್ತಿದೆ.ಸದ್ಯ ಅಪರಾಧಿಗೆ 67 ವರ್ಷ. ಅಪರಾಧಿ ಡೇವಿಡ್ ಫುಲ್ಲರ್ (David Fuller) ಸಹ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ. ದೋಷಿ 12 …

Read More »

ಗಾಂಜಾ ಸೇವಿಸುತ್ತಿದ್ದ ವಿದ್ಯಾರ್ಥಿಗಳು ಅರೆಸ್ಟ್: ಮಾದಕ ವ್ಯಸನದ ನಂಟು

ಹುಬ್ಬಳ್ಳಿ: ಇಲ್ಲಿನ ತೋಳನಕೆರೆ ಬಳಿ ಗಾಂಜಾ ಸೇವನೆ ಮಾಡುತ್ತಿದ್ದ ನಾಲ್ವರು ವಿದ್ಯಾರ್ಥಿಗಳನ್ನು ಗೋಕುಲ ರೋಡ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿತರಿಂದ 75 ಗ್ರಾಂ ಗಾಂಜಾ, ಗಾಂಜಾ ಸೇವನೆಗೆ ಬಳಸುತ್ತಿದ್ದ ವಸ್ತುಗಳು ಹಾಗೂ 3 ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ. ರಬಕವಿಯ ದಾದಾ ಎಂಬಾತನ ಬಳಿ ಗಾಂಜಾ ಖರೀದಿಸಿದ್ದ ಯುವಕರು, ತೋಳನಕೆರೆಗೆ ಬಳಿ ಸೇವಿಸುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಇನ್‌ಸ್ಪೆಕ್ಟರ್‌ ಜೆ.ಎಂ.ಕಾಲಿಮಿರ್ಚಿ ಹಾಗೂ ಸಿಬ್ಬಂದಿ ದಾಳಿ ನಡೆಸಿದ್ದರು. ಗಾಂಜಾ ಮಾರಾಟಗಾರ …

Read More »

ಬೆಳಗಾವಿಯಲ್ಲೇ ಚಳಿಗಾಲ ಅಧಿವೇಶನ: ವಿ.ಪ ಸಭಾಪತಿ ಹೊರಟ್ಟಿ ಭರವಸೆ

ಹುಬ್ಬಳ್ಳಿ: ಬೆಳಗಾವಿಯ ಸುವರ್ಣ ಸೌಧದಲ್ಲೇ ಈ ಭಾರಿಯ ಚಳಿಗಾಲ ಅಧಿವೇಶನ ನಡೆಯಲಿದೆ. ಉತ್ತರ ಕರ್ನಾಟಕದವರೇ ಮುಖ್ಯಮಂತ್ರಿ ಹಾಗೂ ಸಭಾಪತಿ ಇರುವಾಗ ವ್ಯವಸ್ಥಿತವಾಗಿ ಡಿಸೆಂಬರ್ ವಾರದಲ್ಲಿ ಅಧಿವೇಶನ ನಡೆಯಲಿದೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸುಮಾರು ಮೂರು ವರ್ಷಗಳಿಂದ ಬೆಳಗಾವಿಯಲ್ಲಿ ಅಧಿವೇಶನ ನಡೆದಿಲ್ಲ. ಈ ನಿಟ್ಟಿನಲ್ಲಿ ಈ ಬಾರಿಗೆ ಯಾವುದೇ ರೀತಿಯ ಸಮಸ್ಯೆ ಉಂಟಾಗದಂತೆ ವ್ಯವಸ್ಥಿತ ರೀತಿಯಲ್ಲಿ ಪ್ರತಿಪಕ್ಷ ನಾಯಕರ ಜೊತೆಗೆ …

Read More »

ಸಿಎಂ ಬೊಮ್ಮಾಯಿಯವರು ಮಹಾದಾಯಿ, ಮೇಕೆದಾಟು ಬಗ್ಗೆ ಚಕಾರ ಎತ್ತಿಲ್ಲ:ಡಿ.ಕೆ.ಶಿವಕುಮಾರ್ ಗುಡುಗು

ಹುಬ್ಬಳ್ಳಿ: ರಾಜ್ಯದ ಜನರಿಗೆ ಒಳ್ಳೆಯದು ಆಗಬೇಕು ಅಂದರೆ ಈ ಬಿಜೆಪಿ ಸರ್ಕಾರದಿಂದ ಆಗಲ್ಲ. ಸಿಎಂ‌ ಬಸವರಾಜ ಬೊಮ್ಮಾಯಿ ಈವರೆಗೆ ಮಹದಾಯಿ ಹಾಗೂ ಮೇಕೆದಾಟು ಬಗ್ಗೆ ಚಕಾರ ಎತ್ತಿಲ್ಲ. ಅವರ ಬಗ್ಗೆ ಒಳ್ಳೆಯ ನಿರೀಕ್ಷೆ ಇತ್ತು, ಆದರೆ ಈವರೆಗೆ ಅದರ ಬಗ್ಗೆ ಯಾರೂ ಚಕಾರ ಎತ್ತಿಲ್ಲ. ದೇಶದಲ್ಲಿ ಡಬಲ್ ಇಂಜಿನ್ ಸರ್ಕಾರ ಇದ್ದರೂ ಯಾವುದೇ ಕೆಲಸಗಳಾಗಿಲ್ಲ ಎಂದುಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಸಿಎಂ ವಿರುದ್ಧ ವಾಗ್ದಾಳಿ ನಡೆಸಿದರು. ನಗರದ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದ …

Read More »