admin
December 14, 2021
Breaking News, ಅಪರಾಧ, ಕರ್ನಾಟಕ, ಧಾರವಾಡ
ಧಾರವಾಡ : ತಾಲೂಕಿನ ಮುಳಮುತ್ತಲ ಗ್ರಾಮದಲ್ಲಿ ತನ್ನ ಪತಿಯನ್ನೇ ಸತಿಯೊಬ್ಬಳು ಕೊಲೆ ಮಾಡಿದ ಘಟನೆ ನಡೆದಿದ್ದು, ಇದಕ್ಕೆ ಅನೈತಿಕ ಸಂಬಂಧ ಕಾರಣವೆನ್ನಲಾಗಿದೆ. ಮುಳಮುತ್ತಲ ಗ್ರಾಮದಲ್ಲಿನ ಭೀಮಪ್ಪ ಸಿದ್ಧಣ್ಣವರ ಎಂಬಾತನನ್ನ ಈತನ ಪತ್ನಿ ಕಾವೇರಿ ಹಾಗೂ ಆಕೆಯ ಪ್ರಿಯಕರ ಶಿವು ನಿಂಬೋಜಿ ಕೂಡಿಕೊಂಡು ಕೊಡಲಿಯಿಂದ ಹೊಡೆದು ಕೊಲೆ ಮಾಡಲಾಗಿದೆ. ಭೀಮಣ್ಣನ ಸತಿ ಕಾವೇರಿ ಮದುವೆಯಾದ ನಂತರವೂ ಶಿವುನ ಜೊತೆ ಅನೈತಿಕ ಸಂಬಂಧ ಹೊಂದಿದ್ದಳು. ಇದೇ ಕಾರಣಕ್ಕೆ ಪದೇ ಪದೇ ಮನೆಯಲ್ಲಿ ಜಗಳ …
Read More »
admin
December 13, 2021
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಧಾರವಾಡ :ಹುಬ್ಬಳ್ಳಿ ಧಾರವಾಡ ಮಧ್ಯದಲ್ಲಿ ಎರಡು ಅಪಘಾತ ಗಳಾಗಿದ್ದು ಈ ಎರಡು ಪ್ರತ್ಯೇಕವಾದ ಅಪಘಾತಗಳಲ್ಲಿ ಮೂವರು ಗಾಯಗೊಂಡಿದ್ದು ಹಲವಾರು ಕಾರು ಮತ್ತು ಆಟೋಗಳು ಜಖಂಗೊಂಡಿವೆ. ಹೌದು ಧಾರವಾಡದ ಯಾಲಕ್ಕಿ ಶೆಟ್ಟರ ಕಾಲೋನಿಯ ವಿಶಾಲ ಮಾರ್ಟ್ ಮುಂದೆ ನಡೆದ ಒಂದು ಅಪಘಾತದಲ್ಲಿ ಕಾರಿಗೆ ಆಟೋ ಗುದ್ದಿದ ಪರಿಣಾಮವಾಗಿ ಎರಡು ಕಾರು ಗಳು ಒಂದು ಆಟೋ ಜಖಂ ಆಗಿದ್ದು ಇನ್ನೂ ಆಟೋ ಚಾಲಕ ಗಾಯಗೊಂಡಿದ್ದು ಇನ್ನೂ ಪೊಲೀಸ ಆಯುಕ್ತರ ಕಚೇರಿ ಮುಂದೆ ನಡೆದ …
Read More »
BigTv News
December 13, 2021
Breaking News, ಅಪರಾಧ, ಕರ್ನಾಟಕ, ಧಾರವಾಡ
ಧಾರವಾಡ: ತಾಲೂಕಿನ ಹೆಬ್ಬಳ್ಳಿ ಗ್ರಾಮದ ರಸ್ತೆಯ ಬಳಿ ಅಪರಿಚಿತ ವ್ಯಕ್ತಿಯೊಬ್ಬನ ಶವ ಪತ್ತೆಯಾಗಿದೆ. ಸುಮಾರು 35 ರಿಂದ 40 ವರ್ಷ ವಯಸ್ಸಿನ ವ್ಯಕ್ತಿ ಈತನಾಗಿದ್ದು, ತಲೆಗೆ ಗಂಭೀರ ಸ್ವರೂಪದ ಗಾಯವಾಗಿ ಮೃತಪಟ್ಟಿದ್ದಾನೆ. ಇದನ್ನು ನೋಡಿದವರು ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ. ಸಾವಿಗೀಡಾಗಿರುವ ವ್ಯಕ್ತಿ ಚಪ್ಪಲಿ ಬಿಟ್ಟ ಸ್ಥಳಕ್ಕೂ ಬಿದ್ದು ಸಾವಿಗೀಡಾಗಿರುವ ಸ್ಥಳಕ್ಕೂ ಅಂತರವಿದೆ. ತಲೆಗೆ ಬಲವಾದ ಪೆಟ್ಟಾಗಿದೆ. ಸದ್ಯ ಸ್ಥಳಕ್ಕೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ
Read More »
admin
December 11, 2021
Breaking News, ಅಪರಾಧ, ಕರ್ನಾಟಕ, ಮಂಗಳೂರು
ಮಂಗಳೂರು: ಕರಾವಳಿಯ ಜನ ಭಯ, ಭಕ್ತಿಯಿಂದ ಆರಾಧಿಸುವ ದೈವಸ್ಥಾನಗಳಿಗೆ ನುಗ್ಗಿ ದೈವಗಳ ಆಭರಣ ಕದಿಯುತ್ತಿದ್ದ ಕುಖ್ಯಾತ ಕಳ್ಳರ ಜಾಲವನ್ನು ಮಂಗಳೂರು ಪೊಲೀಸರು ಭೇದಿಸಿದ್ದಾರೆ. ಒಂಟಿ ಮನೆಗಳು, ದೇವಸ್ಥಾನಗಳನ್ನು ಟಾರ್ಗೆಟ್ ಮಾಡಿ ದೋಚುತ್ತಿದ್ದ ಈ ಖದೀಮರು ಬಳಿಕ ಒಂದು ಚೂರು ಸಾಕ್ಷ್ಯ ಸಿಗದ ರೀತಿ ಕೆಲಸ ಮುಗಿಸುತ್ತಿದ್ದರು.ಆದರೆ ಈಗ ಕಳ್ಳರ ಪಾಪದ ಕೊಡ ತುಂಬಿದ್ದು, ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಈ ಇಬ್ಬರು ಕಳ್ಳರ ಮೂಲಕ ಒಟ್ಟು 16 ಕಳ್ಳತನ ಪ್ರಕರಣಗಳಿಗೆ ಇತಿಶ್ರೀ …
Read More »
admin
December 11, 2021
Breaking News, ಅಪರಾಧ, ಕರ್ನಾಟಕ, ಹಾಸನ
ಹಾಸನ : ಅನಾರೋಗ್ಯ ಪೀಡಿತ ಮಹಿಳೆಯನ್ನು ಗುಣಪಡಿಸುವ ನೆಪದಲ್ಲಿ ಪೂಜೆ ವೇಳೆ ಪೂಜಾರಿ ಬೆತ್ತದ ಏಟು ನೀಡಿದ ಪರಿಣಾಮವಾಗಿ ಮಹಿಳೆ ಸಾವನ್ನಪ್ಪಿರುವ ಘಟನೆ ಚನ್ನರಾಯಪಟ್ಟಣದಲ್ಲಿ ನಡೆದಿದೆ. ಪಾರ್ವತಿ (47) ಎಂಬುವರು ಮೃತಪಟ್ಟ ಮಹಿಳೆ. ಕಳೆದ ಕೆಲ ದಿನಗಳಿಂದ ತಲೆ ನೋವಿನಿಂದ ಬಳಲುತ್ತಿದ್ದ ಮಹಿಳೆ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದರೂ ಗುಣಮುಖವಾಗಿರಲಿಲ್ಲ.ಹೀಗಾಗಿ, ದೇವರ ಮೊರೆ ಹೋಗಿದ್ದರು. ನೀವು ಗುಣಮುಖರಾಗಲು ಪೂಜೆ ಮಾಡಿಸಬೇಕು ಎಂದು ಮಹಿಳೆಗೆ ಹಿರಿಯಾಪಟ್ಟಣದಮ್ಮ ದೇವರ ಪೂಜಾರಿ ತಿಳಿಸಿದ್ದನಂತೆ. ನಂತರ ಪೂಜೆ …
Read More »
admin
December 11, 2021
Breaking News, ಅಪರಾಧ, ಕರ್ನಾಟಕ, ಮಂಗಳೂರು
ಮಂಗಳೂರು : ಹಿಂದೂ ಧರ್ಮದ ಮಹಿಳೆಯನ್ನು ಮುಸ್ಲಿಂ ಧರ್ಮಕ್ಕೆ ಮತಾಂತರ ಮಾಡಲು ಪ್ರಯತ್ನಿಸಿದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ನೂರ್ ಜಹಾನ್ ಅವರನ್ನು ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದರು. ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿಸೆಂಬರ್ 8ರಂದು ಮಂಗಳೂರಿನ ಮೋರ್ಗನ್ ಗೇಟ್ ಬಳಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದರು. ನಾಗೇಶ್ ಎಂಬ ವ್ಯಕ್ತಿ ತನ್ನಿಬ್ಬರು ಮಕ್ಕಳು ಮತ್ತು ಹೆಂಡತಿಯನ್ನು …
Read More »
BigTv News
December 11, 2021
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಇಲ್ಲಿನ ವಿದ್ಯಾನಗರದ ಶಿರೂರ ಪಾರ್ಕ್ ಖೋಡೆ ಹಾಸ್ಟೆಲ್ ಬಳಿ 2019ರಲ್ಲಿ ಗಾಂಜಾ ಮಾರಾಟ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 1 ವರ್ಷ ಜೈಲು ಶಿಕ್ಷೆ ಹಾಗೂ 25,000 ರೂ. ದಂಡ ವಿಧಿಸಿ ಧಾರವಾಡದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ. ಸಂಗಮೇಶ ಅಂದಾನಪ್ಪ ಅಂಗಡಿ ಶಿಕ್ಷೆಗೆ ಒಳಗಾದ ಅಪರಾಧಿ. 2019ರ ಜುಲೈ 31ರಂದು ಹಾಸ್ಟೆಲ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಕುರಿತು ಖಚಿತ ಮಾಹಿತಿ ಮೇರೆಗೆ ಇನ್ಸ್ಪೆಕ್ಟರ್ …
Read More »
admin
December 10, 2021
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ನಾಲ್ಕು ವರ್ಷಗಳಿಂದ ತವರು ಮನೆ ಸೇರಿರುವ ಹೆಂಡತಿಯನ್ನು ವಾಪಸ್ ಕಳುಹಿಸಲಿಲ್ಲ ಎಂಬ ಆಕ್ರೋಶದಿಂದ, ಅಳಿಯನೊಬ್ಬ ಅತ್ತೆಗೆ ಬ್ಲೇಡ್ ನಿಂದ ಇರಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ನವನಗರದ ನಿವಾಸಿ ಸೋಮವ್ವ ಮಲ್ಲಾಡ ಹಲ್ಲೆಗೀಡಾದವರು. ಪಡದಯ್ಯನ ಹಕ್ಕಲದ ರಮೇಶ ದೊಡ್ಡಮನಿ ಎಂಬ ಅಳಿಯನೇ ಹಲ್ಲೆ ನಡೆಸಿದ ಆರೋಪಿಯಾಗಿದ್ದಾನೆ. ನಾಲೈದು ವರ್ಷಗಳ ಹಿಂದೆ ಪತಿ ರಮೇಶನೊಂದಿಗೆ ಜಗಳವಾಡಿ ಪತ್ನಿ ತವರು ಸೇರಿದ್ದರು. ಡಿ .7 ರಂದು ಪತ್ನಿ ಜೊತೆ ರಮೇಶ ಜಗಳ …
Read More »
admin
December 10, 2021
Breaking News, ಅಪರಾಧ, ಕರ್ನಾಟಕ, ದೇಶ-ವಿದೇಶ, ಬೆಂಗಳೂರು
ಮುಂಬೈ: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಅವರಿಗೆ ಸೈಬರ್ ವಂಚಕರು 1 ಲಕ್ಷ ರೂ. ವಂಚಿಸಿರುವ ಘಟನೆ ಬಾಂದ್ರಾದಲ್ಲಿ ನಡೆದಿದೆ.ಪ್ರಸಿದ್ಧ ಬ್ಯಾಂಕ್‌ನ ಪ್ರತಿನಿಧಿಯೆಂದು ಕಾಂಬ್ಳಿಗೆ ಕರೆ ಮಾಡಿದ್ದಾರೆ. ನಂತರ ಕೆವೈಸಿ ಅಪ್ಡೇಟ್ ಮಾಡಲು ತಿಳಿಸಿದ್ದಾರೆ. ಬಳಿಕ ಅವರ ಬ್ಯಾಂಕ್ ವಿವರಗಳನ್ನೆಲ್ಲಾ ತೆಗೆದುಕೊಂಡು ಅಪ್‌ಲೊಡ್ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.ಸ್ವಲ್ಪ ಸಮಯದ ನಂತರ ಅವರ ಖಾತೆಯಿಂದ ಒಂದು ಲಕ್ಷ ರೂ.ವನ್ನು ವಂಚಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಘಟನೆ ಸಂಬಂಧಿಸಿದಂತೆ ಕಾಂಬ್ಳಿ ಅಪರಿಚಿತ ವ್ಯಕ್ತಿಯ …
Read More »
admin
December 9, 2021
Breaking News, ಅಪರಾಧ, ಕರ್ನಾಟಕ, ತುಮಕೂರು
ಕೊರಟಗೆರೆ ಪಟ್ಟಣದ ಖಾಸಗಿ ಶಾಲೆಯಲ್ಲಿ 8ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಬಾಲಕಿ ಗೆಳತಿಯ ಮನೆಗೆ ಪುಸ್ತಕ ತೆಗೆದುಕೊಂಡು ಹೋಗಲು ಬಂದಿದ್ದಳು. ಈ ವೇಳೆ ಆರೋಪಿಯು ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ್ದಾನೆ. ತುಮಕೂರು: ಕುಡಿಯುವ ನೀರಿನಲ್ಲಿ ಪ್ರಜ್ಞೆ ತಪ್ಪುವ ಔಷಧಿ ಬೆರೆಸಿಕೊಟ್ಟು ನಂತರ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಮಾಡಿರುವ ಪ್ರಕರಣ ತುಮಕೂರು ಜಿಲ್ಲೆಯ ಕೊರಟಗೆರೆಯಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೊರಟಗೆರೆ ಪಟ್ಟಣದ ಖಾಸಗಿ ಶಾಲೆಯಲ್ಲಿ 8ನೇ ತರಗತಿ ವ್ಯಾಸಂಗ ಮಾಡುತ್ತಿದ್ದ …
Read More »