Breaking News

ಅಪರಾಧ

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು: ಮಳೆಯಿಂದ ಜಿಲ್ಲೆಯಲ್ಲಿ ಒಂದಿಲ್ಲೊಂದು ಅಪಘಾತ

ತುಮಕೂರು: ಜಿಲ್ಲೆಯಲ್ಲಿ ಮಳೆಯಿಂದ ಒಂದಿಲ್ಲೊಂದು ಅವಘಡಗಳು ಸಂಭವಿಸುತ್ತಲೇ ಇವೆ. ಅಕಾಲಿಕ ಮಳೆಯಿಂದ ಬೆಳೆಗಳು ನೆಲಕಚ್ಚಿವೆ. ಇನ್ನೊಂದೆಡೆ, ರಸ್ತೆ ಅಪಘಾತಗಳು ಕೂಡಾ ಸಂಭವಿಸುತ್ತಿವೆ.‌ ಗುಬ್ಬಿ ತಾಲೂಕಿನ ತೊರೆಹಳ್ಳದ ಕೆರೆಕೋಡಿ ಬಳಿ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಕ್ಕದಲ್ಲೇ ಹರಿಯುತ್ತಿದ್ದ ಹಳ್ಳಕ್ಕೆ ಬಿದ್ದಿದೆ. ಈ ವೇಳೆ, ಕಾರಿನಲ್ಲಿದ್ದ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದ್ರೆ ಹಳ್ಳದಲ್ಲಿ ಮುಳುಗಿದ್ದ ಕಾರನ್ನು ಹೊರತೆಗೆಯಲು ತಕ್ಷಣಕ್ಕೆ ಸಾಧ್ಯವಾಗಿರಲಿಲ್ಲ. ನಂತರ ಸ್ಥಳೀಯರ ಸಹಕಾರದಿಂದ ಕ್ರೇನ್ ಬಳಸಿ ಕಾರನ್ನು ಹಳ್ಳದಿಂದ ಮೇಲೆತ್ತಲಾಗಿದೆ. …

Read More »

21 ವರ್ಷಗಳ ನಂತರ ಬಂಧನಕ್ಕೊಳಗಾದ ಕಿಸೆಗಳ್ಳ- ಹು-ಧಾ ಪೋಲಿಸರಿಂದ ಯಶಸ್ವಿ ಕಾರ್ಯಾಚರಣೆ

ಹುಬ್ಬಳ್ಳಿ : ಹುಬ್ಬಳ್ಳಿ – ಧಾರವಾಡ ಮಹಾನಗರದಲ್ಲಿ ಕಿಸೆಗಳ್ಳತನ ಮಾಡಿ ಗೋವಾದಲ್ಲಿ ತಲೆಮರೆಸಿಕೊಂಡಿದ್ದ ಕಳ್ಳನನ್ನು ಹುಬ್ಬಳ್ಳಿ ನಗರ ಠಾಣೆ ಪೊಲೀಸರು 21 ವರ್ಷಗಳ ಬಳಿಕ ಪತ್ತೆ ಹಚ್ಚಿ ಬಂಧಿಸಿರುವ ಘಟನೆ ನಡೆದಿದೆ. ಹುಬ್ಬಳ್ಳಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2000 ರಲ್ಲಿ ಹುಬ್ಬಳ್ಳಿಯ ಗಣೇಶಪೇಟೆ ಅಬ್ದುಲ್‌ ವಾಚಮೇಕರ್‌ ಎಂಬಾತನನ್ನು ಕಿಸೆಗಳ್ಳತನ ಪ್ರಕರಣದಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು. ನಂತರ ಅಬ್ದುಲ್ ಬೇಲ್‌ನಿಂದ ಹೊರಗಡೆ ಮರಳಿ ಕೋರ್ಟ್‌ಗೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ …

Read More »

ಠಾಣೆಯಲ್ಲಿ ಸಿಬ್ಬಂದಿ ಎದುರು ಅಸಭ್ಯ ವರ್ತನೆ ಆರೋಪ: ಹುಬ್ಬಳ್ಳಿ ಪೊಲೀಸ್​ ಕಾನ್ಸ್​​ಟೇಬಲ್​ ಅಮಾನತು

ಹುಬ್ಬಳ್ಳಿ: ಠಾಣೆಯಲ್ಲಿ ಅಸಭ್ಯ ವರ್ತನೆ ತೋರಿದ ಆರೋಪದಡಿ ನಗರದ ಕಸಬಾಪೇಟ ಪೊಲೀಸ್ ಠಾಣೆಯ ಕಾನ್ಸ್​ಟೇಬಲ್​ ಶ್ರೀಕಾಂತ ಗೋಣೆಪ್ಪನವರ ಅವರನ್ನು ಅಮಾನತು ಮಾಡಲಾಗಿದೆ. ಶಿಸ್ತಿನ ಇಲಾಖೆಯಲ್ಲಿ ಶ್ರೀಕಾಂತ ಅಶಿಸ್ತಿನಿಂದ ವರ್ತಿಸುತ್ತಿದ್ದರು. ಠಾಣೆಯಲ್ಲಿ ಅಧಿಕಾರಿ, ಸಿಬ್ಬಂದಿ ಎದುರು ಶರ್ಟ್ ಬಿಚ್ಚಿ ಅಸಭ್ಯವಾಗಿ ವರ್ತಿಸಿದ್ದರು. ಹೀಗೆ ಮಾಡದಂತೆ ಹಿರಿಯ ಅಧಿಕಾರಿಗಳು ಎಚ್ಚರಿಕೆ ನೀಡಿದ್ದರೂ ದುರ್ವರ್ತನೆ ಮುಂದುವರಿಸಿದ್ದರು ಎನ್ನಲಾಗ್ತಿದೆ. ಈ ಕಾರಣಕ್ಕೆ ಡಿಸಿಪಿ ಕೆ. ರಾಮರಾಜನ್ ಅವರು ತಮ್ಮ ವರ್ಗಾವಣೆಗೂ ಮುನ್ನವೇ ಶ್ರೀಕಾಂತ ಅಮಾನತು ಆದೇಶ ಹೊರಡಿಸಿದ್ದಾರೆ

Read More »

ವೈದ್ಯರ ಮೇಲೆ ಹಲ್ಲೆ ನಡೆಸಿದರೇ ಕಾನೂನು ಕ್ರಮ

ಹುಬ್ಬಳ್ಳಿ: ವೈದ್ಯರ ಮೇಲೆ ರೋಗಿಗಳ ಸಂಬಂಧಿಕರು ಹಲ್ಲೆ ನಡೆಸಿದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಹುಬ್ಬಳ್ಳಿ- ಧಾರವಾಡ ಪೊಲೀಸ್ ಕಮಿಷನರೇಟ್ ಖಡಕ್ ಎಚ್ಚರಿಕೆ ನೀಡಿದೆ. ಹೌದು. ರೋಗಿಗಳ ಸಂಬಂಧಿಕರಿಂದ ವೈದ್ಯರ ಮೇಲೆ ನಡೆಯುವ ಹಲ್ಲೆ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳುವಂತೆ ಕೋರಿ ನಗರದ ಖ್ಯಾತ ಮನೋರೋಗ ತಜ್ಞ ಡಾ. ವಿನೋದ ಕುಲಕರ್ಣಿ ಅವರು ಪಿಐಎಲ್ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ವೈದ್ಯರ ರಕ್ಷಣೆಗೆ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಸೂಚಿಸಿತ್ತು. ನಗರದ …

Read More »

ಹಾಡಹಗಲೇ ರೈಲ್ವೆ ನೌಕರನಿಗೆ ಚಾಕು ಇರಿತ: ಗಾಯಾಳು ಆಸ್ಪತ್ರೆಗೆ ದಾಖಲು…!

ಹುಬ್ಬಳ್ಳಿ: ಹಾಡಹಗಲೇ ಮಾರಕಾಸ್ತೃಗಳು ಸದ್ದು ಮಾಡುತ್ತಿವೆ. ದುಷ್ಕರ್ಮಿಗಳು ರೈಲ್ವೆ ನೌಕರನಿಗೆ ಚಾಕುವಿನಿಂದ ಇರಿದಿರುವ ಘಟನೆ ನಗರದ ರೇಲ್ವೆ ಶೆಡ್ ಮುಂಭಾಗದಲ್ಲಿ ನಡೆದಿದೆ. ಹುಬ್ಬಳ್ಳಿ- ಗದಗ ರಸ್ತೆಯಲ್ಲಿರುವ ಲೋಕೋ ಶೆಡ್ ಮುಂಭಾಗದಲ್ಲಿಯೇ ಚಂದ್ರಶೇಖರ ನಾಯ್ಡು ಎಂಬುವವರಿಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ಮೂರ್ನಾಲ್ಕು ಬಾರಿ ಇರಿದಿದ್ದರಿಂದ ತೀವ್ರವಾದ ರಕ್ತಸ್ರಾವವಾಗಿದೆ. ತಕ್ಷಣವೇ ರೈಲ್ವೆ ಆಸ್ಪತ್ರೆಗೆ ತೆಗೆದುಕೊಂಡು ಹೋಗಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಧಾರವಾಡದ ಸತ್ತೂರ ಬಳಿಯ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನೆಯ …

Read More »

ಗಾಂಜಾ ಘಾಟು : ಹುಬ್ಬಳ್ಳಿಯಲ್ಲಿ ಇಬ್ಬರು ಅರೆಸ್ಟ್..

ಹುಬ್ಬಳ್ಳಿ: ಇಲ್ಲಿಯ ಗಬ್ಬೂರು ಬೈಪಾಸ್ ಡಿಸ್ನಿ ಲ್ಯಾಂಡ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಆರ್ಥಿಕ ಮತ್ತು ಮಾದಕ ಅಪರಾಧ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿತರಿಂದ 28,260 ರೂ. ಮೌಲ್ಯದ 3 ಕೆ.ಜಿ. 626 ಗ್ರಾಂ ಗಾಂಜಾ ಹಾಗೂ ಒಂದು ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ಆರ್ಥಿಕ ಮತ್ತು ಮಾದಕ ಅಪರಾಧ ಠಾಣಿ ಇನ್‌ಸ್ಪೆಕ್ಟರ್‌ ಎಂ.ಎಸ್. ಹೂಗಾರ, ಪಿಎಸ್‌ಐ ಸದಾಶಿವ ಕಾನಶೆಟ್ಟಿ ನೇತೃತ್ವದ ತಂಡ ದಾಳಿ …

Read More »

ಚಲಿಸುತ್ತಿದ್ದ ರೈಲಿನಲ್ಲಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ ನದಿ ಪಾಲಾದ ಯುವಕ

ಯುವಕನ ಮೃತ ದೇಹ ಶೋಧಕಾರ್ಯ ಬೆಂಗಳೂರು: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಯುವಕನೋರ್ವ ಮೊಬೈಲ್​ನಲ್ಲಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ ರೈಲ್ವೆ (selfie death in Mandya) ಮೇಲ್ಸೇತುವೆಯಿಂದ ನದಿಗೆ ಬಿದ್ದು ಪ್ರಾಣ ಕಳೆದುಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ‌.ಪಾಂಡವಪುರ ಮೂಲದ ಅಭಿಷೇಕ್ ಮೃತ ಯುವಕ. ಪಾಂಡವಪುರಕ್ಕೆ ತೆರಳುತ್ತಿದ್ದ ವೇಳೆ ರೈಲಿನ ಬಾಗಿಲಿನಲ್ಲಿ ನಿಂತು ಸೆಲ್ಫಿ ತೆಗೆದುಕೊಳ್ಳಲು ಹೋಗಿ, ಕಂಬಿ ಡಿಕ್ಕಿಯಾಗಿ ಸೇತುವೆ ಮೇಲಿಂದ ಲೋಕಪಾವನಿ ನದಿಗೆ ಬಿದ್ದು, ಮೃತ ಪಟ್ಟಿದ್ದಾನೆ. ಘಟನೆ ಹಿನ್ನೆಲೆ …

Read More »

ಮದುವೆ ದಿಬ್ಬಣಕ್ಕೆ ಹೊರಟಿದ್ದ ಬಸ್ಸಿನ ಬ್ರೇಕ್ ಫೇಲ್: ಧಾರವಾಡದಲ್ಲಿ ತಪ್ಪಿದ ದುರಂತ

ಸಾಂದರ್ಭಿಕ ಚಿತ್ರ ಧಾರವಾಡ: ಮದುವೆಗೆ ಹೊರಟಿದ್ದ ಸಾರಿಗೆ ಸಂಸ್ಥೆ ಬಸ್ಸಿನ ಬ್ರೇಕ್ ಫೇಲ್ ಆಗಿ ಬಸ್ಸು ನವಲೂರು ಬ್ರಿಜ್ನ ತಡೆಗೋಡೆಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಕೊಪ್ಪಳ ಡಿಪೊದ ಸಾರಿಗೆ ಸಂಸ್ಥೆ ಬಸ್ಸು ಇದಾಗಿದ್ದು, ಹುಬ್ಬಳ್ಳಿ ಕಡೆಗೆ ಮದುವೆಗೆಂದು ಹೊರಟಿತ್ತು. ಬಸ್ಸಿನಲ್ಲಿ 50 ಜನ ಪ್ರಯಾಣಿಸುತ್ತಿದ್ದರು. ನವಲೂರು ಬಳಿ ಬರುತ್ತಿದ್ದಂತೆ ಬಸ್ಸಿನ ಬ್ರೇಕ್ ಫೇಲ್ ಆಗಿದ್ದು, ಕೂಡಲೇ ಎಚ್ಚೆತ್ತುಕೊಂಡ ಚಾಲಕ ಬಸ್ಸನ್ನು ಮುಖ್ಯ ರಸ್ತೆ ಬಿಟ್ಟು ಪಕ್ಕದ ರಸ್ತೆಗೆ ತೆಗೆದುಕೊಂಡು …

Read More »

ಹುಬ್ಬಳ್ಳಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ದೇವಸ್ಥಾನದ ಅರ್ಚಕರ ಮೇಲೆ ಹಲ್ಲೆ

ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ದೇವಸ್ಥಾನದ ಅರ್ಚಕರ ಮೇಲೆ ಹಲ್ಲೆ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ನಗರದ ಗೊಕುಲ ರಸ್ತೆಯಲ್ಲಿರುವ ಗ್ರೀನ ಗಾರ್ಡನ್ ಕಾಲೋನಿಯ ಶ್ರೀ ಕರೆಯಮ್ಮ ದೇವಸ್ಥಾನದ ಅರ್ಚಕಾದ ಮಂಜುನಾಥ ಹೆಬ್ಬಾರ ಅವರ ಮೇಲೆ ಸಂದೀಪ ಜಡಿ ಹಾಗೂ ರೇಶ್ಮಾ ಜಡಿ ಎಂಬುವರು ಹಲ್ಲೆ ಮಾಡಿದ್ದಾರೆ. ನವೆಂಬರ್ ೧ ರಂದು ಕರ್ನಾಟಕ ರಾಜ್ಯೋತ್ಸವ ಹಿನ್ನಲೆಯಲ್ಲಿ ದೇವಸ್ಥಾನ ದ ಮುಂದೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಸಮಯದಲ್ಲಿ ದೇವಸ್ಥಾನ ಅರ್ಚಕರು, ಗಾರ್ಡನಲ್ಲಿರುವ ಕರಕಿಯನ್ನು …

Read More »

ಹುಬ್ಬಳ್ಳಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ದೇವಸ್ಥಾನದ ಅರ್ಚಕರ ಮೇಲೆ ಹಲ್ಲೆ

ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ದೇವಸ್ಥಾನದ ಅರ್ಚಕರ ಮೇಲೆ ಹಲ್ಲೆ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ನಗರದ ಗೊಕುಲ ರಸ್ತೆಯಲ್ಲಿರುವ ಗ್ರೀನ ಗಾರ್ಡನ್ ಕಾಲೋನಿಯ ಶ್ರೀ ಕರೆಯಮ್ಮ ದೇವಸ್ಥಾನದ ಅರ್ಚಕಾದ ಮಂಜುನಾಥ ಹೆಬ್ಬಾರ ಅವರ ಮೇಲೆ ಸಂದೀಪ ಜಡಿ ಹಾಗೂ ರೇಶ್ಮಾ ಜಡಿ ಎಂಬುವರು ಹಲ್ಲೆ ಮಾಡಿದ್ದಾರೆ. ನವೆಂಬರ್ ೧ ರಂದು ಕರ್ನಾಟಕ ರಾಜ್ಯೋತ್ಸವ ಹಿನ್ನಲೆಯಲ್ಲಿ ದೇವಸ್ಥಾನ ದ ಮುಂದೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಸಮಯದಲ್ಲಿ ದೇವಸ್ಥಾನ ಅರ್ಚಕರು, ಗಾರ್ಡನಲ್ಲಿರುವ ಕರಕಿಯನ್ನು …

Read More »