admin
January 22, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ರೂಪಾಂತರಿ ಮೂರನೇ ಅಲೆಯಲ್ಲಿ ರೋಗಿಗಳಿಗೆ ಉಸಿರಾಟದ ತೊಂದರೆ ಕಂಡು ಬರ್ತಿಲ್ಲ, ಸೋಂಕಿತರಲ್ಲಿ ಶೀತ, ಜ್ವರ ಬಿಟ್ಟರೆ ಬೇರೆ ಲಕ್ಷಣಗಳೇ ಇಲ್ಲ. ಬಲವಂತದ ಕೊರೊನಾ ಪರೀಕ್ಷೆ ನಿಲ್ಲಿಸಿ ಎಂದು ಮೂಡಲಪಾಳ್ಯದ ಸಾಗರ್ ಕ್ಲಿನಿಕ್ ನ ಡಾ. ರಾಜು ಎಂಬುವವರು ಸಿಎಂ ಗೆ ಬಹಿರಂಗವಾಗಿ ಪತ್ರ ಬರೆದಿದ್ದಾರೆ. ರಾಜ್ಯದಲ್ಲಿ ಬಲವಂತದ ಕೊರೊನಾ ಪರೀಕ್ಷೆಗಳು ನಡೆಯುತ್ತಿದ್ದು, ಕಡ್ಡಾಯ ಕೊರೊನಾ ಪರೀಕ್ಷೆ ಸಂಪೂರ್ಣವಾಗಿ ಅವೈಜ್ಞಾನಿಕವಾಗಿದೆ. ಈಗಿರುವಂತಹ ಸಂದರ್ಭದಲ್ಲಿ ಸರ್ಕಾರಿ ಹಾಗೂ ಖಾಸಗಿ ಕಚೇರಿಯಲ್ಲಿ ಅವೈಜ್ಞಾನಿಕ ಟೆಸ್ಟ್ …
Read More »
admin
January 22, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು : ಮಾಜಿ ಪ್ರಧಾನಿ, ರಾಜ್ಯಸಭಾ ಸದಸ್ಯ ಹೆಚ್.ಡಿ.ದೇವೇಗೌಡ ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಅವರು ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗೌಡರು ನಿನ್ನೆ ಪರೀಕ್ಷೆಗೆ ಒಳಪಟ್ಟಿದ್ದು, ಕೊರೊನಾ ಸೋಂಕು ದೃಢಪಟ್ಟಿದೆ. ಪಾಸಿಟಿವ್ ಬಂದಿದ್ದರೂ ದೇವೇಗೌಡರು ಆರೋಗ್ಯವಾಗಿದ್ದು, ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
Read More »
admin
January 22, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ರಾಜ್ಯದಲ್ಲಿ ICMR ಮಾರ್ಗಸೂಚಿಯಂತೆ ಕೊರೊನಾ ಲಕ್ಷಣ ಹೊಂದಿರುವವರಿಗೆ ಮಾತ್ರ ಟೆಸ್ಟ್ ಮಾಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು, ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಆದರೆ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಕಡಿಮೆ ಆಗಿರುವುದು ಸಮಾಧಾನ ತಂದಿದೆ. ವೈಜ್ಞಾನಿಕವಾಗಿ ಪರಾಮರ್ಶೆ ಮಾಡಿ, ತಜ್ಞರ ಅಭಿಪ್ರಾಯ ಪಡೆದು ಸರ್ಕಾರ ವೀಕೆಂಡ್ ಕರ್ಫ್ಯೂ ರದ್ದು ಮಾಡಿದೆ ಎಂದು ಹೇಳಿದರು.
Read More »
admin
January 22, 2022
Breaking News, ಕರ್ನಾಟಕ, ಹುಬ್ಬಳ್ಳಿ
ಹುಬ್ಬಳ್ಳಿ: ಗಂಗಾವತಿಯ ರೈಲು ನಿಲ್ದಾಣದಲ್ಲಿ ನೂರಾರು ಭತ್ತ ಕೊಯ್ಲು ಯಂತ್ರಗಳನ್ನು ಸಾಲಾಗಿ ನಿಲ್ಲಿಸಿ ರೈಲ್ವೆ ಬೋಗಿಗಳಿಗೆ ಹತ್ತಿಸಲಾಯಿತು. ಗಂಗಾವತಿ ಭಾಗಕ್ಕೆ ರೈಲು ಸೇವೆ ಸಿಕ್ಕ ಬಳಿಕ ಇದೇ ಮೊದಲ ಬಾರಿಗೆ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕೊಯ್ಲು ಯಂತ್ರಗಳನ್ನು ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ಸಾಗಿಸಲಾಗುತ್ತಿದೆ.. ಭತ್ತದ ಕಣಜ ಎಂದು ಹೆಸರು ಪಡೆದಿರುವ ಗಂಗಾವತಿ ಹಾಗೂ ಸುತ್ತಲಿನ ಪ್ರದೇಶದಲ್ಲಿ ಭತ್ತದ ಕೊಯ್ಲು ಬಹುತೇಕ ಪೂರ್ಣಗೊಂಡಿದೆ. ಇದರಿಂದ ನೂರಾರು ಭತ್ತದ ಕೊಯ್ಲು ಯಂತ್ರಗಳು …
Read More »
admin
January 20, 2022
Breaking News, ಕರ್ನಾಟಕ, ಬಳ್ಳಾರಿ
ಬಳ್ಳಾರಿ : ಜಿಲ್ಲೆಯ ಕುರಗೋಡು ತಾಲೂಕಿನ ಯರಂಗನಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 46 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ವಸತಿ ಶಾಲೆಯ 236 ವಿದ್ಯಾರ್ಥಿಗಳ ಪೈಕಿ 35 ವಿದ್ಯಾರ್ಥಿನಿಯರು, 11 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
Read More »
admin
January 19, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು : ವೀಕೆಂಡ್ ಕರ್ಪ್ಯೂ, ನೈಟ್ ಕರ್ಪ್ಯೂ ತೆಗೆಯುವ ವಿಚಾರದಲ್ಲಿ ತಜ್ಞರ ಸಲಹೆ ಪಡೆದೇ ಮುಂದಿನ ಹೆಜ್ಜೆ ಇಡುವುದು ಸೂಕ್ತ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ. ಜೆಪಿ ಭವನದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಸುದ್ದಿಗಾರರಿಗೆ ಈ ಹೇಳಿಕೆ ನೀಡಿದ್ದಾರೆ.ವಿಕೆಂಡ್ ಕರ್ಪ್ಯೂ, ನೈಟ್ ಕರ್ಫ್ಯೂ ಗೆ ಪರ ವಿರೋಧ ಅಭಿಪ್ರಾಯ ವ್ಯಕ್ತವಾಗುತ್ತಿದೆ.
Read More »
admin
January 19, 2022
Breaking News, ಕರ್ನಾಟಕ
ಬೆಂಗಳೂರು: ತಾಂತ್ರಿಕ ತೊಂದರೆಯ ಕಾರಣ ನೀಡಿ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ದಿಢೀರ್ ಸ್ಥಗಿತಗೊಳಿಸಲಾಗಿದೆ. ಸಾರ್ವಜನಿಕ ಶಿಕ್ಷಣ ಇಲಾಖೆ ಕೌನ್ಸೆಲಿಂಗ್ ದಿಢೀರ್ ಸ್ಥಗಿತಗೊಳಿಸಿದ್ದರಿಂದ ನೂರಾರು ಶಿಕ್ಷಕರು ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರಿನ ಶಿಕ್ಷಕರ ಸದನದಲ್ಲಿ ಮಂಗಳವಾರ ಕೌನ್ಸೆಲಿಂಗ್ ಗೆ ಹಾಜರಾಗಿದ್ದ ಶಿಕ್ಷಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಾಂತ್ರಿಕ ಸಮಸ್ಯೆಯ ಕಾರಣ ನೀಡಿ ದಿಢೀರನೆ ವರ್ಗಾವಣೆ ಪ್ರಕ್ರಿಯೆ ರದ್ದುಗೊಳಿಸಿರುವುದಕ್ಕೆ ಶಿಕ್ಷಕ ಸಮುದಾಯ ಆಕ್ರೋಶ ವ್ಯಕ್ತಪಡಿಸಿದೆ. ಸುಮಾರು ಒಂದು ತಿಂಗಳಿನಿಂದ ಸ್ಥಗಿತವಾಗಿದ್ದ ವರ್ಗಾವಣೆ ಪ್ರಕ್ರಿಯೆ ಕಳೆದ ವಾರ …
Read More »
admin
January 18, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ಮತ್ತೆ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಕೊಂಚ ಮಟ್ಟಿನ ಏರಿಕೆಯಾಗಿದ್ದು, ಇಂದು ನಗರದಲ್ಲಿ 22,966 ಜನರಲ್ಲಿ ಪಾಸಿಟಿವ್ ದೃಢಪಟ್ಟಿದೆ. ಬೊಮ್ಮನಹಳ್ಳಿ ವಲಯದಲ್ಲಿ 2725, ದಾಸರಹಳ್ಳಿ 590, ಬೆಂಗಳೂರು ಪೂರ್ವ 3661, ಮಹದೇವಪುರ 3020, ಆರ್‍ಆರ್ ನಗರ 1672, ದಕ್ಷಿಣ ವಲಯ 3549, ಪಶ್ಚಿಮ 2232, ಯಲಹಂಕ 1489, ಅನೇಕಲ್ 950, ಬೆಂಗಳೂರು ಹೊರವಲಯ 1204 ಸೇರಿ ಒಟ್ಟು 22,966 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ.
Read More »
admin
January 18, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಕವಿ ಡಾ.ಚಂದ್ರಶೇಖರ ಕಂಬಾರ ಅವರ ಪತ್ನಿ ಸತ್ಯಭಾಮ ( 76 ವರ್ಷ) ಇಂದು ಬೆಳಗ್ಗೆ ನಿಧನರಾದರು. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಸತ್ಯಭಾಮ ಅವರನ್ನು ಜ.3ರಂದು ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಬೆಳಗ್ಗೆ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದರು. ಕತ್ರಿಗುಪ್ಪೆಯ ಸಿರಿ ಸಂಪಿಗೆ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
Read More »
admin
January 17, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ಭೀಮ ಜುವೆಲರ್ಸ್‌ನ ಮೊದಲ ರಾಯಭಾರಿ ಆಗಿ ನಟಿ ಪೂಜಾ ಹೆಗ್ಡೆ ಅವರನ್ನು ನೇಮಿಸಲಾಗಿದೆ ಎಂದು ತಿಳಿಸಿದೆ. ತನ್ನ 97 ವರ್ಷಗಳ ಇತಿಹಾಸದಲ್ಲಿ ಬ್ರ್ಯಾಂಡ್ ರಾಯಭಾರಿಯನ್ನು ನೇಮಿಸುತ್ತಿರುವುದು ಇದೇ ಮೊದಲು ಎಂದು ಕಂಪನಿಯು ತಿಳಿಸಿದೆ. ‘ಹೊಸ ಮಾರುಕಟ್ಟೆಗಳು ಮತ್ತು ಹೊಸ ಗ್ರಾಹಕರನ್ನು ತಲುಪಲು ಪೂಜಾ ಹೆಗ್ಡೆ ಅವರು ನಮಗೆ ನೆರವಾಗಲಿದ್ದಾರೆ’ ಎಂದು ಭೀಮ ಜುವೆಲರ್ಸ್‌ನ ವ್ಯವಸ್ಥಾಪಕ ನಿರ್ದೇಶಕ ವಿಷ್ಣುಶರಣ್ ಭಟ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Read More »