Breaking News

ಕರ್ನಾಟಕ

ಕೋವಿಡ್ ನಿಯಮ ಗಾಳಿಗೆ ತೋರಿ ಹುಟ್ಟು ಹಬ್ಬ ಆಚರಿಸಿಕೊಂಡ ಬಿಜೆಪಿ ಶಾಸಕ

ದಾವಣಗೆರೆ: ಕೋವಿಡ್-19 ಸೋಂಕು ಹರಡುವುದನ್ನು ನಿಯಂತ್ರಿಸಲು ಭಾನುವಾರ ರಾಜ್ಯಾದ್ಯಂತ ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿದ್ದರೂ, ಜಗಳೂರಿನ ಬಿಜೆಪಿ ಶಾಸಕ ಎಸ್‌ವಿ ರಾಮಚಂದ್ರ ಅವರು ನಿಯಮಗಳ ಉಲ್ಲಂಘಿಸಿ ಇಲ್ಲಿನ ತಮ್ಮ ನಿವಾಸದ ಎದುರು ಹುಟ್ಟುಹಬ್ಬ ಆಚರಿಸಿಕೊಂಡರು. ದಾವಣಗೆರೆ ಕೆ.ಬಿ. ಬಡಾವಣೆಯಲ್ಲಿರುವ ಶಾಸಕರ ಮನೆಯ ಮುಂದೆ ಶಾಮಿಯಾನ, ವೇದಿಕೆ, ಕುರ್ಚಿಗಳನ್ನು ಹಾಕಲಾಗಿತ್ತು. ಅಭಿಮಾನಿಗಳು, ಜನಪ್ರತಿನಿಧಿಗಳು, ಬಿಜೆಪಿ ಕಾರ್ಯಕರ್ತರು, ಅಧಿಕಾರಿಗಳು, ಪೊಲೀಸರು ಭಾಗವಹಿಸಿ ಶಾಸಕರಿಗೆ ಶುಭಕೋರಿದರು. ಕೋವಿಡ್ ನಿಯಮ ಪಾಲನೆ ಮಾಡದೆಯೇ ಜನುಮದಿನದ ಆಚರಣೆ ನಡೆಯಿತು. …

Read More »

ವಿಶೇಷ ರೀತಿಯಲ್ಲಿ ಸಂಕ್ರಾಂತಿ ಹಬ್ಬ ಆಚರಣೆ

ಮಂಡ್ಯ : ಇತ್ತೀಚೆಗೆ ಅಪ್ಪು ಅವರನ್ನು ಚಿತ್ರರಂಗ ಕಳೆದುಕೊಂಡು ಅನಾಥ ವಾಗಿದೆ. ಅವರನ್ನು ನೆನದು ಮಾಡಿರುವಂತಂಹ ಕಾರ್ಯಕ್ರಮವಿಲ್ಲ ಹಾಗೂ ಪೂಜೆಗಳು ಇಲ್ಲಾ. ಇಷ್ಟು ಬೇಗ ಅವರನ್ನ ಕರೆದುಕೊಂಡ ಯಮನಿಗೆ ಇಡೀ ಶಾಪ ಹಾಕುತ್ತಿದ್ದಾರೆ. ಜೊತೆಗೆ ದೇವರ ಪೂಜೆಗಳಲ್ಲೂ ಅಪ್ಪು ಅವರನ್ನ ಮುಂದಿಡುತ್ತಿದ್ದಾರೆ. ಇದೀಗ ಸಂಕ್ರಾಂತಿ ಹಬ್ಬಕ್ಕೂ ಅಪ್ಪು ನೆನೆದಿದ್ದಾರೆ ಮಂಡ್ಯ ಜನ. ಈ ವೇಳೆ ಎತ್ತುಗಳ ಮೈ ಮೇಲೆ ಅಪ್ಪು ಭಾವಚಿತ್ರ ಬಿಡಿಸಿರುವುದು ಕಂಡು ಬಂದಿದೆ. ಜೊತೆಗೆ ದೇವರೊಟ್ಟಿಗೆ ಅಪ್ಪು …

Read More »

ಸಿಎಂಗೆ ಎಚ್ಚರಿಕೆ ಕೊಟ್ಟ ಹೆಚ್.ಡಿ.ರೇವಣ್ಣ

ಹಾಸನ: ರಾಜ್ಯ ಬಿಜೆಪಿ ಸರ್ಕಾರ ಶಿಕ್ಷಣ ಇಲಾಖೆಯಲ್ಲಿಯೂ ರಾಜಕೀಯ ಮಾಡುತ್ತಿದೆ. ಸರ್ಕಾರದ ತಾರತಮ್ಯ ನೀತಿ ವಿರುದ್ಧ ಸಿಎಂ ಬಸವರಾಜ್ ಬೊಮ್ಮಾಯಿ ಮನೆ ಮುಂದೆ ಧರಣಿ ಮಾಡುತ್ತೇನೆ. ಹೊಳೆನರಸಿಪುರ ಮಹಿಳಾ ಕಾಲೇಜಿಗೆ ಎಂಎಸ್ ಸಿ ಪದವಿ ಮಂಜೂರು ಮಾಡಲು ರಾಜ್ಯ ಸರ್ಕಾರ ಮಿನಾಮೇಷ ಎಣಿಸುತ್ತಿದೆ ಎಂದು ಜೆಡಿಎಸ್ ಮುಖಂಡ, ಶಾಸಕ ಹೆಚ್.ಡಿ.ರೇವಣ್ಣ ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಶಿಕ್ಷಣ ಇಲಾಖೆ ಕಾರ್ಯದರ್ಶಿ ಒಪ್ಪಿಗೆ ನೀಡಿದ್ದಾರೆ. ಮೈಸೂರು ವಿವಿಯವರು ಸಹ ಭೇಟಿ ನೀಡಿ ಪರಿಶೀಲನೆ …

Read More »

ಬೆಂಗಳೂರುನಲ್ಲಿ 20,121 ಜನರಲ್ಲಿ ಕೊರೋನಾ ದೃಢ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸಾವಿನ ಪ್ರಮಾಣ ಕೂಡಾ ಏರಿಕೆ ಉಂಟಾಗುತ್ತಿದೆ. ರಾಜ್ಯದಲ್ಲಿ ಒಟ್ಟು 28,723 ಮಂದಿಯಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದ್ದು, 14 ಜನರು ಸಾವನ್ನಪ್ಪಿದ್ದಾರೆ. ಪಾಸಿಟಿವಿಟಿ ಪ್ರಮಾಣ ಶೇ 12.98 ಇದ್ದು, ಅಪಾಯದ ಹಂತ ಮುಟ್ಟಿದೆ. ರಾಜ್ಯದಲ್ಲಿ ಪ್ರಸ್ತುತ 1,41,337 ಸಕ್ರಿಯ ಪ್ರಕರಣಗಳಿವೆ. ಬೆಂಗಳೂರಿನಲ್ಲಿ 20,121 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು.

Read More »

ಕೊರೊನಾ ದೃಢ : ಕಾಡಸಿದ್ದೇಶ್ವರ ಕಾಲೇಜು ಸೀಲ್ ಡೌನ್

ಹುಬ್ಬಳ್ಳಿ: ಕೊರೋನಾ ಸೋಂಕು ಪತ್ತೆಯಾಗಿದ್ದು, ಈ ಹಿನ್ನೆಲೆಯಲ್ಲಿ ಇಲ್ಲಿನ ವಿದ್ಯಾನಗರದ ಪ್ರತಿಷ್ಠಿತ ಶ್ರೀ ಕಾಡಸಿದ್ದೇಶ್ವರ ಕಲಾ ಮಹಾವಿದ್ಯಾಲಯ ಹಾಗೂ ಎಚ್. ಎಸ್.ಕೋತಂಬ್ರಿ ಕಾಲೇಜಿನಲ್ಲಿ ಇಂದು ಹು-ಧಾ ಮಹಾನಗರ ಪಾಲಿಕೆಯಿಂದ ಸೀಲ್ ಡೌನ್ ಮಾಡಲಾಯಿತು. ಕಾಲೇಜಿನ ಪ್ರಾಚಾರ್ಯರು, ಶಿಕ್ಷಕ ವೃಂದ, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗದವರಿಗೆ ಕಳೆದೆರಡು ದಿನಗಳ ಹಿಂದೆ ಕೊರೊನಾ ಪರೀಕ್ಷೆ ನಡೆಸಲಾಗಿತ್ತು. ಅದರಂತೆ ನಿನ್ನೆ ವರದಿ ಬಂದಿದ್ದು ಅದರಲ್ಲಿ ಕೆಲ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೆ ಸೋಂಕು ವಕ್ಕರಿಸಿದ್ದು ತಿಳಿದು …

Read More »

ಹು- ಧಾ 30 ಪೊಲೀಸರಿಗೆ ಕೊರೋನಾ ದೃಢ

ಹುಬ್ಬಳ್ಳಿ :ಅವಳಿ ನಗರದಲ್ಲಿ ದಿನೇ ದಿನೇ ಕೊರೋನಾ ಹೆಚ್ಚಳವಾಗುತ್ತೀದ್ದು ಎಲ್ಲರಿಗೂ ಆತಂಕ ಉಂಟು ಮಾಡಿದರೆ.   ಪೊಲೀಸ್ ಕಮಿಷನರೇಟ್ನಲ್ಲಿರುವ 30ಕ್ಕೂ ಅಧಿಕ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದೆ. ಪೊಲೀಸ್ ಆಯುಕ್ತರ ಆದೇಶದ ಹಿನ್ನೆಲೆ ಹು-ಧಾ ಅವಳಿ ನಗರದ ಎಲ್ಲಾ ಅಧಿಕಾರಿ, ಸಿಬ್ಬಂದಿಯನ್ನು ಆರ್ಟಿಪಿಸಿಆರ್ ತಪಾಸಣಿಗೆ ಒಳಪಡಿಸಲಾಗಿತ್ತು. ವರದಿಯಲ್ಲಿ 30ಕ್ಕೂ ಅಧಿಕ ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸೋಂಕಿತರನ್ನ ಐಸೋಲೇಷನ್ಗೆ ಒಳಪಡಿಸಲಾಗಿದೆ. ಪಾಸಿಟಿವ್ ಬಂದವರಲ್ಲಿ ಬಹುತೇಕರಿಗೆ ಯಾವುದೇ ರೋಗದ …

Read More »

ನನ್ನನ್ನು ಕ್ಷಮಿಸು ಮಗಳೇ : ಮುಗಿಲು ಮುಟ್ಟಿದ ತಂದೆಯ ಆಂಕ್ರದನ

ಬೆಂಗಳೂರು: ಕನ್ನಡ ಖಾಸಗಿ ವಾಹಿನಿ ಜನಪ್ರಿಯ ರಿಯಾಲಿಟಿ ಶೋ ಸ್ಪರ್ಧಿಯಾಗಿದ್ದ ಸಮನ್ವಿ(6) ಸಾವನ್ನಪ್ಪಿರುವ ಘಟನೆ ಕುಮಾರಸ್ವಾಮಿ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.  ತಾಯಿಯೊಂದಿಗೆ ದ್ವಿಚಕ್ರ ವಾಹನದಲ್ಲಿ ಸಮನ್ವಿ ತೆರಳುತ್ತಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿದ್ದು, ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ತನ್ನ ಪ್ರೀತಿಯ ಮಗಳನ್ನು ಕಳೆದುಕೊಂಡ ತಂದೆ ರೂಪೇಶ್ ಕಿಮ್ಸ್ ಆಸ್ಪತ್ರೆಯಲ್ಲಿ ಬಿಕ್ಕಿ – ಬಿಕ್ಕಿ ಅಳುತ್ತಿದ್ದಾರೆ. ನನ್ನನ್ನು ಕ್ಷಮಿಸು ಮಗಳೇ ನಿನ್ನನ್ನು ಉಳಿಸಿಕೊಳ್ಳಲು ಆಗಲಿಲ್ಲ, ಎಂದು ಗಳಗಳನೇ ಕಣ್ಣೀರು ಹಾಕಿದ್ದಾರೆ. ಅಲ್ಲದೇ ತಡರಾತ್ರಿ …

Read More »

ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ತಾಯಿ

ಚಿತ್ರದುರ್ಗ: ಹೊಸದುರ್ಗ ತಾಲ್ಲೂಕಿನ ರಂಗವ್ವನಹಳ್ಳಿ ಮಂಜುಳಾ ಅವರು ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ನಗರದ  ಬಸವೇಶ್ವರ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ  ಮೂವರು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಒಂದು ಗಂಡು ಹಾಗೂ ಎರಡು ಹೆಣ್ಣು ಮಕ್ಕಳಿಗೆ ಮಂಜುಳಾ ಜನ್ಮ ನೀಡಿದ್ದಾರೆ. ತಾಯಿ ಹಾಗೂ ಮಕ್ಕಳು ಆರೋಗ್ಯವಾಗಿದ್ದು ಗುರುವಾರ ಮನೆಗೆ ಮರಳಿದ್ದಾರೆ.

Read More »

ಆರೋಗ್ಯ ಕೇಂದ್ರಗಳನ್ನು ಸನ್ನದ್ಧವಾಗಿಟ್ಟುಕೊಳ್ಳಬೇಕು

ಮಂಗಳೂರು: ಕೊರೊನಾ ಮತ್ತು ರೂಪಾಂತರಿ ಸೋಂಕಿನ ಚಿಕಿತ್ಸೆಗೆ ಜಿಲ್ಲೆಯ ತಾಲೂಕು ಆಸ್ಪತ್ರೆಗಳು ಮತ್ತು ಸಮುದಾಯ ಆರೋಗ್ಯ ಕೇಂದ್ರಗಳನ್ನು ಸನ್ನದ್ಧವಾಗಿಟ್ಟುಕೊಳ್ಳಬೇಕು. ವಿವಧೆಡೆಗಳ ರೋಗಿಗಳು ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್‌ ಆಸ್ಪತ್ರೆಗೆ ಬರುತ್ತಿರುವುದರಿಂದ ಇಲ್ಲಿ ಒತ್ತಡ ಬೀಳುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್‌. ಅಂಗಾರ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ ಸಭಾಂಗಣದಲ್ಲಿ ಬುಧವಾರ ಕೊರೊನಾ ಸೋಂಕು ಹಾಗೂ ಇತರ ವಿಷಯಗಳ ಕುರಿತಂತೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತಾಲೂಕು ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ …

Read More »

ಶಿವಮೊಗ್ಗದ ಜಿಲ್ಲಾಧಿಕಾರಿ ವರ್ಗಾವಣೆ

ಶಿವಮೊಗ್ಗ: ಜಿಲ್ಲೆಯಲ್ಲಿ ಕೋವಿಡ್ ಸ್ಫೋಟದ ನಡುವೆ ಎಲ್ಲರೂ ಬೇಸುತ್ತು ಹೋಗಿದ್ದಾರೆ.  ಅದರ ನಡುವೆ ಶಿವಮೊಗ್ಗ ಜನತೆಗೆ ಮತ್ತೊಂದು ವಿಷಯ ಅಘಾತಕಾರಿಯಾಗಿ ಸಂಭವಿಸಿದೆ.  ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್​ ಅವರನ್ನು ವರ್ಗಾವಣೆ ಮಾಡಿ ರಾಜ್ಯಸರ್ಕಾರ‌ ಆದೇಶ ಹೊರಡಿಸಿದೆ. ಶಿವಮೊಗ್ಗದ ನೂತನ ಜಿಲ್ಲಾಧಿಕಾರಿಯಾಗಿ ಡಾ.ಸೆಲ್ವಮಣಿ ಆರ್ ಅವರನ್ನು ನೇಮಕ ಮಾಡಲಾಗಿದೆ.

Read More »