Breaking News

ಕರ್ನಾಟಕ

ಅಣ್ಣಾಮಲೈ ಚುನಾಯಿತ ಪ್ರತಿನಿಧಿಯಲ್ಲ

ಬೆಂಗಳೂರು : ಅಣ್ಣಾಮಲೈ ಚುನಾಯಿತ ಪ್ರತಿನಿಧಿಯಲ್ಲ, ಅವರು ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಮಾತ್ರ. ಸರಕಾರದ ಭಾಗವಲ್ಲ. ತಮಿಳುನಾಡಿನಲ್ಲಿ ಸರಕಾರದ ಭಾಗವಾಗಿರುವುದು ಕಾಂಗ್ರೆಸ್ ಎಂಬುದು ಸಿದ್ದರಾಮಯ್ಯನವರಿಗೆ ಗೊತ್ತಿಲ್ಲವೇ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಪ್ರಶ್ನಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ಸಿದ್ದರಾಮಯ್ಯ ರಾಜಕೀಯ ಕಾರಣಕ್ಕಾಗಿ ಈ ಆರೋಪ ಮಾಡುತ್ತಿದ್ದಾರೆ. ಕರ್ನಾಟಕಕ್ಕೆ ಹಂಚಿಕೆಯಾದ ನೀರಿನ ಬಗ್ಗೆ ವಿವಾದ ತೆಗೆಯಬೇಡಿ ಎಂದು ತಮಿಳುನಾಡು ಕಾಂಗ್ರೆಸ್ ಶಾಸಕರಿಗೆ ಮೊದಲು ಬುದ್ಧಿ ಹೇಳಿ ಎಂದು ಟೀಕಿಸಿದರು.

Read More »

ಕರ್ತವ್ಯನಿರತ ಸಿಆರ್​ಪಿಎಫ್ ಯೋಧ ಸಾವು

ಕೋಲಾರ: ಹೃದಯಾಘಾತದಿಂದ ಕರ್ತವ್ಯನಿರತ ಸಿಆರ್​ಪಿಎಫ್(CRPF)​ ಯೋಧ ಸಾವನ್ನಪ್ಪಿದ್ದಾರೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಅನಿಗಾನಹಳ್ಳಿಯ ಯೋಧ  ಸುರೇಶ್(45) ಮೃತಪಟ್ಟಿದ್ದಾರೆ. ನಿನ್ನೆ ಸಂಜೆ (ಜನವರಿ, 07) ಜಾರ್ಖಂಡ್​ನ ಮಿಲಿಟರಿ ಕ್ಯಾಂಪ್​ನಲ್ಲಿ ತರಬೇತಿ ನೀಡುವಾಗ ಹೃದಯಾಘಾತದಿಂದ  ಸಾವನ್ನಪ್ಪಿದ್ದಾರೆ.

Read More »

ಡಿಕೆಶಿಗೆ ಯೋಗೇಶ್ವರ್‌ ಟಾಂಗ್‌

ಬೆಂಗಳೂರು : ನಾನು ಬಿಜೆಪಿ ಪಕ್ಷದ ಶಿಸ್ತಿನ ಸಿಪಾಯಿಯಾಗಿದ್ದು, ಪಕ್ಷದ ವರಿಷ್ಟರು ಎಲ್ಲಿ ಸ್ಪರ್ಧೆ ಮಾಡು ಎನ್ನುತ್ತಾರೋ ಅಲ್ಲಿಂದ ಸ್ಪರ್ಧೆಮಾಡುವುದಕ್ಕೆ ಸಿದ್ದನಿದ್ದೇನೆ. ಒಂದು ವೇಳೆ ಕನಕಪುರದಿಂದ ಸ್ಪರ್ಧೆ ಮಾಡು ಎಂದರೂ ಸ್ಪರ್ಧಿಸಲು ನಾನು ಸಿದ್ಧ ಎಂದು ಹೇಳುವ ಮೂಲಕ ಮೇಲ್ಮನೆ ಸದಸ್ಯ ಹಾಗೂ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರಿಗೆ ಟಾಂಗ್‌ ನೀಡಲು ಸಿದ್ಧನಿದ್ದೇನೆ ಎಂಬ ಸಂದೇಶವನ್ನು ರವಾನಿಸಿದ್ದಾರೆ.

Read More »

60 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್ ಲಸಿಕೆ

ಬೆಂಗಳೂರು : ರಾಜ್ಯದಲ್ಲಿ ಜನವರಿ 10 ರಿಂದ 60 ವರ್ಷ ಮೇಲ್ಪಟ್ಟವರಿಗೆ ಮತ್ತು ಬೇರೆ ಬೇರೆ ರೋಗ ಲಕ್ಷಣಗಳಿಂದ ಬಳಲುತ್ತಿರುವವರಿಗೆ ಬೂಸ್ಟರ್ ಡೋಸ್ ಲಸಿಕೆ ಹಾಕಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಜನವರಿ 10 ರಿಂದ 60 ವರ್ಷ ಮೇಲ್ಪಟ್ಟವರು, ವೈದ್ಯರು, ಆರೋಗ್ಯ ಕಾರ್ಯಕರ್ತರು ಸೇರಿದಂತೆ ಎಲ್ಲ ಮುಂಚೂಣಿ ವಾರಿಯರ್ ಗಳಿಗೆ ಮೂರನೇ ಅಥವಾ ಬೂಸ್ಟರ್ ಡೋಸ್ ಲಸಿಕೆ ನೀಡಲಾಗುವುದು ಎಂದು …

Read More »

ಮೈಸೂರು : 50 ಅಂಗಡಿಗಳ ತೆರುವು

50 ಅಂಗಡಿಗಳ ತೆರುವುಮೈಸೂರು: 50 ಅಂಗಡಿಗಳನ್ನು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಇಲ್ಲಿನ ದೇವನೂರು 3ನೇ ಹಂತದ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಪೂರ್ವ ಕಚೇರಿಯ ಅಕ್ರಮವಾಗಿ ನಿರ್ಮಾಣವಾಗಿದ್ದ ಅಂಗಡಿಗಳನ್ನುಶುಕ್ರವಾರ ತೆರವುಗೊಳಿಸಿದರು. ಇಲ್ಲಿ ಅನಧಿಕೃತವಾಗಿ ವಾಹನ ಚಾಲನಾ ತರಬೇತಿ ಶಾಲೆಗಳು, ಚಹಾದಂಗಡಿಗಳು, ಹೋಟೆಲ್ ನಿರ್ಮಾಣವಾಗಿದ್ದವು. ಸಾಕಷ್ಟು ಬಾರಿ ಎಚ್ಚರಿಕೆ ನೀಡಿದ್ದರೂ ಮಾಲೀಕರು ತೆರವುಗೊಳಿಸಿರಲಿಲ್ಲ.

Read More »

ಪಂಜಾಬ್ ಸರ್ಕಾರದ ಭದ್ರತಾ ವೈಫಲ್ಯ ಖಂಡಿಸಿ ಪ್ರತಿಭಟನೆ

ಹುಬ್ಬಳ್ಳಿ,: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪಂಜಾಬ್‍ಗೆ ಭೇಟಿ ನೀಡಿದ ಸಂದರ್ಭದಲ್ಲಿ ಅಲ್ಲಿನ ಕಾಂಗ್ರೆಸ್ ಸರ್ಕಾರದ ಭದ್ರತಾ ವೈಫಲ್ಯ ಖಂಡಿಸಿ ಹುಬ್ಬಳ್ಳಿ ಧಾರವಾಡ ಮಹಾನಗರ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಹುಬ್ಬಳ್ಳಿಯ ಇಎಸ್‍ಐ ಆಸ್ಪತ್ರೆಯಿಂದ ಕಾರವಾರ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿವರೆಗೆ ಮೆರವಣಿಗೆ ನಡೆಸಿ ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪಂಜಾಬ್ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ಅವರ ಭಾವ ಚಿತ್ರವನ್ನು ದಹನಮಾಡಿ ಆಕ್ರೋಶ ವ್ಯಕ್ತ ಪಡಿಸಲಾಯಿತು.ಪ್ರತಿಭಟನೆಯಲ್ಲ್ಲಿ ಯುವ …

Read More »

ರಾಜ್ಯದಲ್ಲಿ ಇಂದು ರಾತ್ರಿ 8 ರಿಂದ ನೈಟ್ ಕರ್ಫ್ಯೂ ಜಾರಿ

ರಾಜ್ಯದಲ್ಲಿ ಕೊರೋನಾ ಹಾಗೂ ಒಮಿಕ್ರಾನ್ ಹಾವಳಿ ಹೆಚ್ಚಾಗುತ್ತಿದ್ದು, ಇಂದು ರಾತ್ರಿ 8 ಗಂಟೆಯಿಂದ ವೀಕೆಂಡ್ ಕರ್ಫ್ಯೂ ಜಾರಿಯಾಗಲಿದೆ. ರಾತ್ರಿ 8 ರಿಂದ ಸೋಮವಾರ ಬೆಳಗ್ಗೆ 5 ಗಂಟೆವರೆಗೆ ಕರ್ಫ್ಯೂ ಇರಲಿದೆ. ಇಂದಿನಿಂದ ಎರಡು ದಿನ ಏನಿರತ್ತೆ? ಏನಿರಲ್ಲ?ವೀಕೆಂಡ್ ಕರ್ಫ್ಯೂ ವೇಳೆ ಹೋಟೆಲ್‌ಗಳಲ್ಲಿ ಪಾರ್ಸೆಲ್, ಅತ್ಯಗತ್ಯ ಸೇವೆಗಳು, ವೈದ್ಯಕೀಯ ಸೇವೆಗಳು, ಬಿಎಂಟಿಸಿ ಬಸ್ ಸಂಚಾರ ಇರುವುದಿಲ್ಲ. ಯಾರ‍್ಯಾರು ಓಡಾಡಬಹುದು?ಕೇಂದ್ರ ಮತ್ತು ರಾಜ್ಯ ಸರ್ಕಾರಿ ಉದ್ಯೋಗಿಗಳು,ಕಾರ್ಪೋರೇಷನ್ ಸಿಬ್ಬಂದಿ, ಪೊಲೀಸ್. ಹೋಂ ಗಾರ್ಡ್, ಸಿವಿಲ್ …

Read More »

ಬಣ್ಣದ ಲೋಕಕ್ಕೆ ಮೇಘನಾ ಕಮ್ ಬ್ಯಾಕ್

😍 ಬೆಂಗಳೂರು: ಚಿರು ಸರ್ಜಾ ನಿಧನದ ಬಳಿಕ, ಮಗ ರಾಯನ್ ಜನಿಸಿದ ಮೇಲೆ ಮೇಘನಾ ಬಣ್ಣದ ಲೋಕದಿಂದ ದೂರವೇ ಉಳಿದಿದ್ದರು.ಆದರೇ ಮತ್ತೇ ಜೀವನದಲ್ಲಿ ಹೊಸ ಹೆಜ್ಜೆಯನ್ನು ಇಡಲು ರೆಡಿ ಆಗಿದ್ದಾರೆ. ಈ ರಿಯಾಲಿಟಿ ಶೋನಲ್ಲಿ ಈ ವಾರ ಮೇಘನಾ ತೀರ್ಪುಗಾರರಾಗಿ ಭಾಗಿಯಾಗಲಿದ್ದಾರೆ. ಇದು ಮೇಘನಾ ಪಾಲಿಗೆ ಮೊದಲ ಕಿರುತೆರೆ ಡ್ಯಾನ್ಸ್ ಶೋ. ಆದರೆ ಬಹಳ ದಿನಗಳ ನಂತರ ಬಣ್ಣದ ಲೋಕಕ್ಕೆ ಮರಳಿದ ಮೇಘನಾರನ್ನು ನೋಡಲು ಅಭಿಮಾನಿಗಳು ಕಾಯ್ತಿದ್ದಾರೆ. ಕಲರ್ಸ್ ಕನ್ನಡ …

Read More »

SSLC ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಮಾರ್ಚ್, ಏಪ್ರಿಲ್ 2022ರಲ್ಲಿ ನಡೆಯಲಿರುವಂತ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಿಸಿದೆ. ದಿನಾಂಕ 28-03-2022 ರಂದು ಪ್ರಥಮ ಭಾಷೆಗಳಾದಂತ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಇಂಗ್ಲೀಷ್ ( ಕೇಂದ್ರ ಪಠ್ಯಕ್ರಮ) ಸಂಸ್ಕೃತ ಪರೀಕ್ಷೆ ನಿಗದಿ ಪಡಿಸಲಾಗಿದೆ. 1. ದಿನಾಂಕ 29-03-2022ರಂದು ಯಾವುದೇ ಪರೀಕ್ಷೆ ಇರುವುದಿಲ್ಲ 2.  30-03-2022ರಂದು ದ್ವಿತೀಯ ಭಾಷೆ – …

Read More »

ಕಬ್ಬಿನ ಜಮೀನಿನಲ್ಲಿ ಆಕಸ್ಮಿಕ ಅಗ್ನಿ ಅವಘಡ – ಅಪಾರ ಪ್ರಮಾಣದ ಕಬ್ಬು ಬೆಂಕಿಗಾಹುತಿ..!

ಧಾರವಾಡ: ಆಕಸ್ಮಿಕ ಬೆಂಕಿ ಹೊತ್ತಿಕೊಂಡ ಪರಿಣಾಮ ಅಪಾರ ಪ್ರಮಾಣದ ಕಬ್ಬು ಬೆಂಕಿಗಾಹುತಿಯಾಗಿರುವಂತಹ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ಪಟ್ಟಣದ ಬಳಿ ನಡೆದಿದೆ. ಇನ್ನು ಬೆಂಕಿಯ ಕೆನ್ನಾಲಿಗೆ ಅಕ್ಕಪಕ್ಕದ ಜಮೀನುಗಳಿಗೆ ವ್ಯಾಪಿಸುತ್ತ ಸಾಗಿದ್ದು, ಅಕ್ಕಪಕ್ಕದ ಜಮೀನುಗಳ ರೈತರಲ್ಲಿ ಆತಂಕ ಮೂಡುವಂತೆ ಮಾಡಿದೆ. ಹೀಗಾಗಿ ಸ್ಥಳೀಯರು ಸಮರೋಪಾಧಿಯಲ್ಲಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಅಲ್ಲದೇ ಅಗ್ನಿ ಅವಘಡ ಸುದ್ದಿ ತಿಳಿಯುತ್ತಲೇ ಸಮಯ ಪಜ್ಞೆ ಮೆರೆದಿರುವ ಪೊಲೀಸ್ ಇಲಾಖೆಯ ಸಿಬ್ಬಂಧಿ ಹವಾಲ್ದಾರ ಮಲ್ಲಿಕಾರ್ಜುನ ಚೌಡಣ್ಣವರ …

Read More »