Breaking News

ಕರ್ನಾಟಕ

ಮಹಾರಾಷ್ಟ್ರ ಸಿಎಂ ಭಾವಚಿತ್ರ ಸುಟ್ಟು ಹಾಕಿ ಆಕ್ರೋಶ ಹೊರ ಹಾಕಿದ ಕನ್ನಡಪರ ಸಂಘಟನೆಗಳು

ಹುಬ್ಬಳ್ಳಿ: ಕನ್ನಡ ಧ್ವಜವನ್ನು ಸುಟ್ಟು ಹಾಕಿದ ಕಿಡಿಗೇಡಿಗಳನ್ನು ಬಂಧಿಸಿ, ಅವರ ಮೇಲೆ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿ, ಹಾಗೂ ಮಹಾರಾಷ್ಟ್ರ ಸಿಎಂ ಭಾವಚಿತ್ರವನ್ನು ಸುಟ್ಟು ಹಾಕಿ, ವಿವಿಧ ಕನ್ನಡ ಪರ ಸಂಘಟನೆಗಳು ನಗರದ ಸಂಗೊಳ್ಳಿ ರಾಯಣ್ಣ ಸರ್ಕಲ್ ಬಳಿ ಪ್ರತಿಭಟನೆ ಮಾಡುತ್ತ ತಮ್ಮ ಆಕ್ರೋಶ ಹೊರ ಹಾಕಿದರು. ನಂತರ ತಹಶೀಲ್ದಾರರ ಕಚೇರಿ ವರೆಗೆ ಬಂದು ತಹಶೀಲ್ದಾರರ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಮನವಿ ನೀಡಿದರು

Read More »

ಅಪ್ರಾಪ್ತ ಬಾಲಕಿ ಅಪಹರಿಸಿ ಕೊಲೆ ಬೆದರಿಕೆ ಹಾಕಿದ್ದ ಆರೋಪಿ ಅರೆಸ್ಟ್

ಚಿತ್ರದುರ್ಗ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಎಸಗಿ ಕೊಲೆ ಬೆದರಿಕೆ ಹಾಕಿದ್ದ ಆರೋಪಿಯನ್ನು, ಮಹಿಳಾ ಪೊಲೀಸ್  ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೂಡಲಗಿರಿಯಪ್ಪ(35) ಬಂಧಿತ ಆರೋಪಿ. ಹೊಸದುರ್ಗ ತಾಲ್ಲೂಕಿನ ಪಾಣಿ ಕಿಟ್ಟದಹಳ್ಳಿ ಗ್ರಾಮದವನಾಗಿರುವ ಮೂಡಲಗಿರಿಯಪ್ಪ, ನಗರದ ವಿವೇಕಾನಂದ ನಗರದ ಅಪ್ರಾಪ್ತ ಬಾಲಕಿಯ ಮನೆ ಮುಂಭಾಗದಲ್ಲಿ ವಾಸವಾಗಿದ್ದ, ಅಪ್ರಾಪ್ತ ಬಾಲಕಿಯನ್ನು ಬಟ್ಟೆ ತೊಳೆದುಕೊಂಡು ಬರೋಣ ಎಂದು ಪುಸಲಾಯಿಸಿ ಹತ್ತಿರದಲ್ಲಿ ಇದ್ದ ಗುಡ್ಡಕ್ಕೆ ಕರೆದುಕೊಂಡು ಹೋಗಿ, ಯಾರು ಇಲ್ಲದ ಸಮಯದಲ್ಲಿ ಬಾಲಕಿಯ ಕೈ ಕಾಲಿಗೆ …

Read More »

ಒಕ್ಕಲಿಗರ ಸಂಘದ ಚುನಾವಣಾ ಫಲಿತಾಂಶ- ವೀಜೆತರನ್ನು ಘೋಷಣೆ ಮಾಡಿದ ಚುನಾವಣಾಧಿಕಾರಿ

ಬೆಂಗಳೂರು: ತೀವ್ರ ಕುತೂಹಲ ಮೂಡಿಸಿದ್ದ ಒಕ್ಕಲಿಗರ ಸಂಘದ ಚುನಾವಣೆ ಫಲಿತಾಂಶ ಕೊನೆಗೂ ಪ್ರಕಟವಾಗಿದೆ. ಅರಮನೆ ಮೈದಾನದಲ್ಲಿ ತಡರಾತ್ರಿ 12 ಗಂಟೆಯ ತನಕ ಮತ ಎಣಿಕೆ ನಡೆದಿದ್ದು, ಚುನಾವಣಾಧಿಕಾರಿ ರವೀಂದ್ರ ಅವರು ವಿಜೇತರ ಘೋಷಣೆ ಮಾಡಿದ್ದಾರೆ. ಬಳಿಕ ಮಾತನಾಡಿದ ಅವರು, ಮೊದಲ ಬಾರಿಗೆ ಒಕ್ಕಲಿಗ ಸಂಘದ ಫಲಿತಾಂಶ ಒಂದೇ ದಿನದಲ್ಲಿ ಮುಗಿದಿದ್ದು, ಪಾರದರ್ಶಕವಾಗಿ ಫಲಿತಾಂಶ ನೀಡಿದ್ದೇವೆ ಎಂದು ಹೇಳಿದ್ದರು. ಇನ್ನೂ ಜಿಲ್ಲೆಯಾದ್ಯಂತ ಅಭ್ಯರ್ಥಿಗಳ ಫಲಿತಾಂಶ ಕೈ ಸೇರಿದ್ದು, ರಾಜ್ಯಾದ್ಯಂತ 35 ಕಾರ್ಯಕಾರಿ ಸಮಿತಿಗೆ …

Read More »

ಸದ್ಯಕ್ಕೆ ಪ್ರಾಥಮಿಕ, ಪೂರ್ವ ಪ್ರಾಥಮಿಕ ಶಾಲೆ ತೆರೆಯದಂತೆ ಸೂಚನೆ

ದೆಹಲಿ: ದೇಶದಲ್ಲಿ ಒಮಿಕ್ರಾನ್ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಾಥಮಿಕ ಮತ್ತು ಪೂರ್ವ ಪ್ರಾಥಮಿಕ ಶಾಲೆಗಳು ತೆರೆಯದಂತೆ ಕೇಂದ್ರ ಗೃಹ ವ್ಯವಹಾರಗಳ ಸಂಸದೀಯ ಸಮಿತಿ ಸೂಚನೆ ನೀಡಿದೆ. ಪರಿಸ್ಥಿತಿ ನಿಯಂತ್ರಣಕ್ಕೆ ಬರುವವರೆಗೂ ಮತ್ತು ಲಸಿಕೆಗಳು ಲಭ್ಯವಾಗುವವರೆಗೂ ಆನ್ ಲೈನ್ ಶಿಕ್ಷಣ ಮುಂದುವರಿಸುವಂತೆ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಮಕ್ಕಳಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಾಗಿರುವುದರಿಂದ ಯಾವುದೇ ಹಾನಿ ಉಂಟಾಗುವುದಿಲ್ಲ ಎಂದು ಆರ್ಗನೈಸ್ಡ್ ಮೆಡಿಸಿನ್ ಅಕಾಡೆಮಿಕ್ ಗಿಲ್ಡ್ ನ ಹಿರಿಯ ಆರೋಗ್ಯ …

Read More »

ಕಾರು-ಬೈಕ್ ಡಿಕ್ಕಿ – ಬೈಕ್ ಸವಾರ ಬೀಳುತ್ತಿರುವ ವೀಡಿಯೋ ವೈರಲ್

ಹಾಸನ: ವೇಗವಾಗಿ ಬಂದ ಕಾರು ಹಿಂಬದಿಯಿಂದ ಬೈಕ್‌ಗೆ ಗುದ್ದಿದ ಪರಿಣಾಮ ಬೈಕ್ ಸವಾರ ಕೆಳಗೆ ಬೀಳುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಹಾಸನ ಜಿಲ್ಲೆಯ ಮೊಸಳೆಹೊಸಹಳ್ಳಿ ಸಮೀಪದಲ್ಲಿ ಈ ಘಟನೆ ನಡೆದಿದೆ. ಬಸ್ತಿಹಳ್ಳಿಯ ಮಂಜುನಾಥ್ ಗಾಯಗೊಂಡ ಬೈಕ್ ಸವಾರ. ವೇಗವಾಗಿ ಬರುತ್ತಿದ್ದ ಕಾರು, ಬೈಕ್‌ಗೆ ಡಿಕ್ಕಿ ಹೊಡೆದಿದೆ. ಕಾರಿನ ಡಿಕ್ಕಿ ರಭಸಕ್ಕೆ ಬೈಕ್ ಸವಾರ, ಬೈಕ್ ಸಮೇತ ಕಾರಿನ ಮೇಲೆ ಜಂಪ್ ಆಗಿ ಬಿದ್ದಿದ್ದಾರೆ. ಈ ಭೀಕರ ಅಪಘಾತದ ದೃಶ್ಯ …

Read More »

ಪುತ್ತೂರು, ಸುಳ್ಯ, ಬೆಳ್ತಂಗಡಿ, ಕಡಬ ತಾಲೂಕಿನಲ್ಲಿ ನಿಷೇಧಾಜ್ಞೆ ಜಾರಿ

ಮಂಗಳೂರು: ಪುತ್ತೂರು ಉಪವಿಭಾಗ ವ್ಯಾಪ್ತಿಯಲ್ಲಿ ಬರುವ 4 ತಾಲೂಕಿನಲ್ಲಿ ತಕ್ಷಣದಿಂದ ಡಿಸೆಂಬರ್ 17ರ ಮಧ್ಯರಾತ್ರಿವರೆಗೆ 144 ಸೆಕ್ಷನ್ ನಡಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಮಂಗಳವಾರ ರಾತ್ರಿ ಉಪ್ಪಿನಂಗಡಿ ಪೊಲೀಸ್ ಠಾಣೆಯ ಎದುರು ಪಿಎಫ್‍ಐ ಕಾರ್ಯಕರ್ತರ ಮೇಲೆ ಲಾಠಿಚಾರ್ಜ್ ನಡೆದಿತ್ತು. ಇದರ ಬೆನ್ನಲ್ಲೇ ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತ ಡಾ.ಯತೀಶ್ ಉಳ್ಳಾಲ್ ಅವರು ಪುತ್ತೂರು, ಬೆಳ್ತಂಗಡಿ, ಸುಳ್ಯ ಮತ್ತು ಕಡಬ ತಾಲೂಕಿನಾದ್ಯಂದ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ. ಪುತ್ತೂರು ಉಪವಿಭಾಗದಲ್ಲಿ ಕೋಮುಗಲಭೆ ತಡೆಯುವ …

Read More »

ಮೇಲ್ಮನೆಯಲ್ಲಿ ಮಾದಕ ದ್ರವ್ಯಗಳ ತಿದ್ದುಪಡಿ ವಿಧೇಯಕ ಮಂಡನೆ

ನವದೆಹಲಿ,:ಲೋಕಸಭೆಯಲ್ಲಿ ಸೋಮವಾರ ಅಂಗೀಕಾರಗೊಂಡ ನಾರ್ಕೋಟಿಕ್ ಡ್ರಗ್ಸ್ ಆಯಂಡ್ ಸೈಕೋಟ್ರೋಪಿಕ್ ಸಬ್‍ಸ್ಟ್ರಾನ್ಸಸ್ (ತಿದ್ದುಪಡಿ) ವಿಧೇಯಕ 2021 ಇಂದು ರಾಜ್ಯಸಭೆಯ ಮುಂದೆ ಪರಿಗಣನೆ ಮತ್ತು ಅನುಮೋದನೆಗಾಗಿ ಬರಲಿದೆ. ಮೇಲ್ಮನೆ ಕಲಾಪದ ದ್ವಿತೀಯಾರ್ಧದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ವಿಧೇಯಕವನ್ನು ಮಂಡಿಸುವ ಸಾಧ್ಯತೆ ಇದೆ. ಪಿ ಆರ್‌ ಎಸ್‌. ಶಾಸಕಾಂಗ ಸಂಶೋಧನೆ ಪ್ರಕಾರ ಈ ಮಸೂದೆಯು ನಾರ್ಕೋಟಿಕ್ ಡ್ರಗ್ಸ್ ಆಯಂಡ್ ಸೈಕೋಟ್ರೋಪಿಕ್ ಸಬ್‍ಸ್ಟ್ಯಾನ್ಸಸ್ ಕಾಯ್ದೆ 1985ಕ್ಕೆ ತಿದ್ದುಪಡಿ ತರಲಿದೆ. ಆ ಕಾಯ್ದೆಯ ಒಂದು …

Read More »

ಆಂಧ್ರಪ್ರದೇಶದಲ್ಲಿ ನದಿಗೆ ಉರುಳಿದ ಬಸ್: 8 ಪ್ರಯಾಣಿಕರು ಸಾವು

ಪಶ್ಚಿಮ ಗೋದಾವರಿ: ಆಂಧ್ರಪ್ರದೇಶದಲ್ಲಿ ಖಾಸಗಿ ಬಸ್ ( Privet Bus ) ಒಂದು ಸೇತುವೆಯ ಮೇಲಿನಿಂದ ನದಿಗೆ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಪರಿಣಾಮ, 8 ಮಂದಿ ಪ್ರಯಾಣಿಕರು ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ. ಪಶ್ಚಿಮ ಗೋದಾವರಿ ಜಿಲ್ಲೆಯ ಜಂಗಾರೆಡ್ಡಿ ಗುಡೇರಿ ಸಮೀಪದ ಜಲ್ಲೇರು ಬಳಿಯಲ್ಲಿ ಖಾಸಗಿ ಬಸ್ ಒಂದು ನಿಯಂತ್ರಣ ತಪ್ಪಿ ನದಿಗೆ ಉರುಳಿ ಬಿದ್ದಿದೆ. ಇದರಿಂದಾಗಿ ಬಸ್ ನಲ್ಲಿದ್ದಂತ 8 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. …

Read More »

ಮೊಟ್ಟೆ ವಿತರಣೆಗೆ ವಿರೋಧಿಸಿದವರ ವಿರುದ್ಧ ಧಿಕ್ಕಾರ: ವಾಣಿಜ್ಯನಗರಿಯಲ್ಲಿ ಸ್ವಾಮೀಜಿಗಳ ನಡೆಗೆ ವಿರೋಧ

ಹುಬ್ಬಳ್ಳಿ: ಸರ್ಕಾರಿ ಶಾಲೆಗಳಲ್ಲಿ ಮೊಟ್ಟೆ ವಿತರಣೆಗೆ ಮಠಾಧೀಶರಿಂದ ವಿರೋಧ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸಾಕಷ್ಟು ವಿರೋಧ ವ್ಯಕ್ತವಾಗುತ್ತಿದ್ದು, ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿಯೂ ಕೂಡ ವಿವಿಧ ದಲಿತ ಸಂಘಟನೆಗಳ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಿ ಮಠಾಧೀಶರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸಮತಾ ಸೇನೆ ಸೇರಿದಂತೆ ವಿವಿಧ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ ನಡೆಸಿದ್ದು, ನಗರದ ಅಂಬೇಡ್ಕರ್ ವೃತ್ತದಿಂದ ತಹಶೀಲ್ದಾರ ಕಚೇರಿ ವರೆಗೂ ಪ್ರತಿಭಟನೆ ಮಾಡಿದ ಕಾರ್ಯಕರ್ತರು, ಮೊಟ್ಟೆ ವಿರೋಧಿಗಳಿಗೆ, ಸಂತರಿಗೆ ಧಿಕ್ಕಾರ ಕೂಗಿ ಪ್ರತಿಭಟನೆ …

Read More »

ದೇವಸ್ಥಾನದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್: ಕ್ಷಮೆಯಾಚಿಸಿದ ಪಾಲಿಕೆ ಸದಸ್ಯ ಬಡಿಗೇರ

ಹುಬ್ಬಳ್ಳಿ: ದೇವಸ್ಥಾನದ ವಿರುದ್ಧ ಅವಹೇಳನಕಾರಿ ಹೇಳಿಕೆಯೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಆರೋಪದ ಹಿನ್ನಲೆಯಲ್ಲಿ ಅಚಾತುರ್ಯದಿಂದ ಘಟನೆ ಸಂಭವಿಸಿರುವುದಾಗಿ ಪಾಲಿಕೆ ಸದಸ್ಯ ರಾಮಣ್ಣ ಬಡಿಗೇರ ಕ್ಷಮೆಯಾಚನೆ ಮಾಡಿದ್ದಾರೆ. ಹೌದು…ಹು-ಧಾ ಪಾಲಿಕೆ ಸದಸ್ಯ ರಾಮಣ್ಣ ಬಡಿಗೇರ ವಿರುದ್ಧ ಅವಹೇಳನಕಾರಿ ಪೋಸ್ಟ್ ಆರೋಪ ವಿಚಾರವಾಗಿ ಸ್ಪಷ್ಟನೆ ನೀಡಿದ ಅವರು, ಅಚಾತುರ್ಯದಿಂದ ನಡೆದ ಘಟನೆಯಾಗಿದೆ ಎಂದು ಕ್ಷಮೆಯಾಚಿಸಿದ್ದಾರೆ. ಮೊನ್ನೆ ರಾಮಣ್ಣ ಬಡಿಗೇರ ವಿರುದ್ಧ ಬೆಳಗಾವಿ ಜಿಲ್ಲೆಯ ಸಿರಸಂಗಿ ಕಾಳಿಕಾದೇವಿ ದೇವಸ್ಥಾನದ ಟ್ರಸ್ಟ್ ಸದಸ್ಯರಿಂದ ಆರೋಪ …

Read More »