Breaking News

ಕರ್ನಾಟಕ

Featured Video Play Icon

3 ಲಕ್ಷ ಲೀಡ್ ನಿಂದ ಗೆಲ್ತಿನಿ: ಶೆಟ್ಟರ್ ಟಿಕೆಟ್ ತಪ್ಪಿಸುವ ತಂತ್ರ ಮಾಡಿಲ್ಲ ಎಂದ ಕೇಂದ್ರ ಸಚಿವ ಜೋಶಿ..!

ಹುಬ್ಬಳ್ಳಿ: ನಾನು ಮೂರು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತೇನೆ. ಜಗದೀಶ ಶೆಟ್ಟರ್ ನನಗೆ ಟಿಕೆಟ್ ತಪ್ಪಿಸಲು ತಂತ್ರ ಮಾಡಿದ್ದಾರೆ ಎಂಬುವಂತದ್ದನ್ನು ನಾನು ನಂಬುವುದಿಲ್ಲ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು. ಟಿಕೆಟ್ ಘೋಷಣೆ ಬೆನ್ನಲ್ಲೇ ಹುಬ್ಬಳ್ಳಿಗೆ ಆಗಮಿಸಿದ ವೇಳೆ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಮೋದಿ ಅವರು ದೇಶದ ಅತ್ಯಂತ ಜನಪ್ರೀಯ ನಾಯಕರು. ಇಂದು 72 ಸ್ಥಾನಗಳಿಗೆ ಟಿಕೆಟ್ ಘೋಷಣೆಯಾಗಿದೆ. ಕರ್ನಾಟಕದಲ್ಲಿ 20 ಅಭ್ಯರ್ಥಿಗಳ ಘೋಷಣೆ ಮಾಡಿದೆ. …

Read More »

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವತಿಯಿಂದ ರನ್ ಕಾರ್ಯಕ್ರಮ: ಚಾಲನೆ ನೀಡಿದ ಸಿಎಂ..

ಬೆಂಗಳೂರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವತಿಯಿಂದ ಸುವರ್ಣ ಮಹೋತ್ಸವ ಅಂಗವಾಗಿ ಆಯೋಜಿಸಿದ್ದ ಪೊಲೀಸ್ ರನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಗೃಹ ಸಚಿವ ಡಾ.ಜಿ. ಪರಮೇಶ್ವರ್, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳಾದ ಕೆ ಗೋವಿಂದರಾಜು ಹಾಗೂ ನಸೀರ್ ಅಹ್ಮದ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಡಿಜಿ ಮತ್ತು ಐಜಿಪಿ ಅಲೋಕ್ ಮೋಹನ್ ಮತ್ತು ಇತರ ಹಿರಿಯ ಪೊಲೀಸ್ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Read More »

Rameshwaram Café: ಹೇಗಾಯ್ತು ಸ್ಫೋಟ..? ಭಯಾನಕ ಸಿಸಿಟಿವಿ ದೃಶ್ಯ ನೋಡಿ..

ಬೆಂಗಳೂರು: ಕುಂದಲಹಳ್ಳಿ ರಾಮೇಶ್ವರಂ ಕೆಫೆಯಲ್ಲಿ (Rameshwaram Café) ನಡೆದ ಸ್ಫೋಟದ್ದು ಎನ್ನಲಾದ ಸಿಸಿಟಿವಿ ದೃಶ್ಯವೊಂದು (CCTV Footage) ನ್ಯೂಸ್ 18ಗೆ ಲಭ್ಯವಾಗಿದೆ. ಸಿಸಿಟಿವಿ ದೃಶ್ಯದ ಪ್ರಕಾರ ಘಟನೆ ನಿಖರವಾಗಿ ಮಧ್ಯಾಹ್ನ 12.55ಕ್ಕೆ ನಡೆದಿದೆ. ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮುಖ್ಯಮಂತ್ರಿಗಳು ಸಹ ಸುಧಾರಿತ ಸ್ಫೋಟಕ ಬ್ಲಾಸ್ಟ್ ಆಗಿರೋದನ್ನು ಖಚಿತಪಡಿಸಿದ್ದಾರೆ. ಸ್ಫೋಟದಿಂದ ಇಡೀ ರಾಮೇಶ್ವರಂ ಕೆಫೆಯಲ್ಲಿ ಧೂಳು ಆವರಿಸಿಕೊಂಡಿದೆ. ಸ್ಪೋಟದಲ್ಲಿ ಒಟ್ಟು ಒಂಬತ್ತು ಜನರು ಗಾಯಗೊಂಡಿದ್ದು ಚಿಕಿತ್ಸೆ …

Read More »

ರಾಜ್ಯದ ‘ಪೊಲೀಸ್ ಪೇದೆ’ಗಳಿಗೆ ಗುಡ್ ನ್ಯೂಸ್: ‘ಪತಿ-ಪತ್ನಿ ಅಂತರ ಜಿಲ್ಲಾ ವರ್ಗಾವಣೆ’ಗೆ ಗ್ರೀನ್ ಸಿಗ್ನಲ್…

(Police Department)​ ಸಿಬ್ಬಂದಿಗಳ ಅಂತರ್ ಜಿಲ್ಲಾ ವರ್ಗಾವಣೆಗೆ (Inter District Transfer) ಕೊನೆಗೂ ರಾಜ್ಯ ಸರ್ಕಾರ ಗ್ರೀನ್‌ ಸಿಗ್ನಲ್‌ (Government Green Signal) ನೀಡಿದೆ. ರಾಜ್ಯದಲ್ಲಿ ಪತಿ-ಪತ್ನಿ ಪೊಲೀಸ್‌ ವರ್ಗಾವಣೆಗೆ (Husband-wife transfer) ಸಂಬಂಧಿಸಿ ಭಾರಿ ಆಗ್ರಹ ಕೇಳಿಬಂದಿತ್ತು. ಅಂತರ್ಜಿಲ್ಲಾ ವರ್ಗಾವಣೆ (Police Transfer) ಕೊಡದೆ ಇದ್ದರೆ ದಯಾ ಮರಣವನ್ನಾದರೂ ಕೊಡಿ ಎಂದೂ ಕೆಲವರು ಮನವಿ ಮಾಡಿದ್ದರು. ಇದೆಲ್ಲ ವಿಚಾರಗಳನ್ನು ಗಂಭೀರವಾಗಿ ಪರಿಗಣಿಸಿದ ಗೃಹ ಸಚಿವ ಜಿ. ಪರಮೇಶ್ವರ್‌ (G …

Read More »

ಧಾರವಾಡದಲ್ಲಿ ಹೃದಯ ವಿದ್ರಾವಕ ಘಟನೆ; ಹೆತ್ತ ಮಕ್ಕಳನ್ನೇ ಕೊಂದು ನೇಣು ಬಿಗಿದುಕೊಂಡಿದ್ಯಾಕೆ ತಾಯಿ..?

ಧಾರಾಡದ ಜಿಲ್ಲೆಯ ನವಲಗುಂದ ತಾಲೂಕಿನ ಮೊರಬ್ ಗ್ರಾಮದಲ್ಲಿ ಇಬ್ಬರು ಮಕ್ಕಳನ್ನು ಹತ್ಯೆಗೈದು ತಾಯಿ‌ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಶನಿವಾರ ತಡ ರಾತ್ರಿ ನಡೆದಿದೆ.ತಾಯಿ ಸಾವಿತ್ರಿ ಸರಕಾರ (32) ಎಂಬಾಕೆಯೇ ಆತ್ಮಹತ್ಯೆಗೆ ಶರಣಾಗಿದ್ದು, ಮಕ್ಕಳಾದ ದರ್ಶನ್ (4) ಹಾಗೂ ಸುಮಾ (5) ಇವರನ್ನ ಕತ್ತು ಹಿಸುಕಿ ಕೊಲೆಗೈದಿದ್ದಾಳೆ.ಈ ಘಟನೆ ಸಂಬಂಧಿಸಿದಂತೆ ಕಾರಣ ಏನೆಂಬುದು ತಿಳಿದು ಬಂದಿಲ್ಲ. ಬೆಳಿಗ್ಗೆ ನವಲಗುಂದ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ …

Read More »

ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ʻಗ್ಯಾರಂಟಿ ಯೋಜನೆʼಗಳು ರದ್ದಾಗಲ್ಲ : ಡಿಸಿಎಂ ಡಿ.ಕೆ.ಶಿವಕುಮಾರ್.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ನಗರದ ಅಲ್ಲಮಪ್ರಭು ಮೈದಾನದಲ್ಲಿ ಏರ್ಪಡಿಸಿದ್ದ ಸರ್ಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಜಾತಿಯ ಆಧಾರದಲ್ಲಿ ಅಲ್ಲ. ಬದಲಾಗಿ ನೀತಿಯ ಆಧಾರದಲ್ಲಿ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ. ಚುನಾವಣಾ ಪೂರ್ವ ಸಮಿತಿಯನ್ನು ರಚಿಸಿ, ಗ್ಯಾರಂಟಿ ಕಾರ್ಡುಗಳನ್ನು ಮನೆ ಮನೆಗಳಿಗೆ ತಲುಪಿಸಿದಂತೆ ಸರ್ಕಾರ ರಚನೆಯಾದ ತಕ್ಷಣ ಯೋಜನೆಗಳನ್ನು ಜಾರಿ ಮಾಡಿ ನಡೆದಂತೆ ನುಡಿದಿದ್ದೇವೆ ಎಂದರು.ಹೆಣ್ಣು ಕುಟುಂಬದ ಕಣ್ಣು. ಅವರ ಕುಟುಂದಲ್ಲಿ …

Read More »

ಪ್ರೀತಿ, ಪ್ರೇಮ, ಮದುವೆ, ಡಿವೋರ್ಸ್.. ಪ್ರತಿ ತಿಂಗಳು 5000 ರೂ ನೀಡುವಂತೆ ಮಹಿಳೆಗೆ ಕೋರ್ಟ್ ಆದೇಶ..

ಮಧ್ಯ ಪ್ರದೇಶದ ಕೌಟುಂಬಿಕ ನ್ಯಾಯಾಲಯವು ವಿಶೇಷ ಪ್ರಕರಣ ಒಂದರಲ್ಲಿ ವಿಚ್ಛೇದಿತ ಪತ್ನಿಯು ಪತಿಗೆ ಜೀವನಾಂಶವಾಗಿ ಪ್ರತಿ ತಿಂಗಳು 5 ಸಾವಿರ ರೂಪಾಯಿ ಹಣ ನೀಡಬೇಕು ಎಂದು ಆದೇಶ ನೀಡಿದೆ.ಪತಿ-ಪತ್ನಿ ಕಿತ್ತಾಟ, ದೂರು ಪ್ರತಿದೂರು ದಾಖಲುಮಹಿಳೆ ಒಬ್ಬಳು ತನ್ನ ಗಂಡ ವರದಕ್ಷಿಣೆಗಾಗಿ ನಿತ್ಯವೂ ಕಿರುಕುಳ ನೀಡುತ್ತಾನೆ. ಮಾನಸಿಕವಾಗಿಯೂ ಹಿಂಸೆ ನೀಡುತ್ತಿದ್ದಾನೆ. ಆತನಿಂದ ನನಗೆ ಮುಕ್ತಿ ಕರುಣಿಸಿ ಎಂದು ಆರೋಪಿಸಿ ಪತಿಯ ವಿರುದ್ಧ ಕೋರ್ಟ್​ನಲ್ಲಿ ದೂರು ನೀಡಿದ್ದಳು. ಪ್ರತಿಯಾಗಿ ಪತಿಯೂ ಕೂಡ ಪತ್ನಿ …

Read More »
Featured Video Play Icon

ಆಸ್ತಿಗಾಗಿ ಬಿತ್ತು ಹೆಣ..

ಹುಟ್ಟುತ್ತ ಅಣ್ಣ ತಮ್ಮಂದಿರು ಬೆಳೆಯುತ್ತ ದಾಯಾದಿಗಳು ಎಂಬ ವಾಡಿಕೆ ಮಾತಿಗೆ ಪುಷ್ಟಿ ನೀಡುವಂತೆ ಧಾರವಾಡದಲ್ಲಿ ಜಗಳ ನಡೆದಿದ್ದು, ಕೊಲೆಯಲ್ಲಿ ಅಂತ್ಯವಾಗಿದೆ. ಅಷ್ಟಕ್ಕೂ ಇದರ ಡಿಟೈಲ್ಸ್ ನೋಡುವುದಾದ್ರೇ, ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಸಹೋದರರ ಮಧ್ಯೆ ಮಾರಾಮಾರಿ ನಡೆದಿದ್ದು, ಸಹೋದರನ ಹೊಡೆತಕ್ಕೆ ತಮ್ಮ ಸಾವನ್ನಪ್ಪಿದ ಘಟನೆ ಧಾರವಾಡ ತಾಲೂಕಿನ ತಲವಾಯಿ ಗ್ರಾಮದಲ್ಲಿ ನಡೆದಿದೆ. ಫಕ್ಕೀರಪ್ಪ ಕಮ್ಮಾರ ಹಾಗೂ ಅಶೋಕ ಕಮ್ಮಾರ ಎಂಬುವ ಸಹೋದರರ ಮಧ್ಯೆ ಈ ಮಾರಾಮಾರಿ ನಡೆದಿದೆ. ಮನೆ ಹಾಗೂ ಹೊಲದ …

Read More »

ಮೂವರು ಅಪ್ರಾಪ್ತೆಯರ ಮೇಲೆ ಅತ್ಯಾಚಾರ, ಕಾಮುಕರ ಹೆಡೆಮುರಿ ಕಟ್ಟಿದ ಪೊಲೀಸರು..

ಪ್ರೇಮಿಗಳ ದಿನದಂದು ಮೂವರು ಅಪ್ರಾಪ್ತೆಯರ ಮೇಲೆ ಅತ್ಯಾಚಾರ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಅಲ್ಲದೆ, ಈ ಘಟನೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಬಾಗ ಪೊಲೀಸ್‌ ಠಾಣೆ ವ್ಯಾಪ್ತಿಯ ಅದ್ಧೂರಿ ಅಲಿಯಾಸ್ ಹಾಲಪ್ಪ ಸುರೇಶ ಬಬಲೇಶ್ವರ್, ಹಾಲಪ್ಪ ಗಿಡ್ಡವ್ವಗೋಳ ಮತ್ತು ಗೋಪಾಲ್ ಗಾಡಿವಡ್ಡರ್ ಬಂಧಿತ ಆರೋಪಿಗಳು..ಈ ಮೂವರು ಆರೋಪಿಗಳು ಇಬ್ಬರು 16 ವರ್ಷದ ಬಾಲಕಿಯರು ಮತ್ತು 15 ವರ್ಷದ ಒಬ್ಬ ಬಾಲಕಿಯನ್ನು ದೇವಸ್ಥಾನದ ಬಳಿ ಹೋಗುತ್ತಿದ್ದಾಗ ಬಲವಂತವಾಗಿ …

Read More »

ಸಂಚಾರ ನಿಯಮ ಉಲ್ಲಂಘನೆ; ನೋಂದಣಿ ಸಂಖ್ಯೆಯ ಫಲಕ ಮರೆಮಾಚಿದ್ದವನ ವಿರುದ್ಧ FIR..

ಸಂಚಾರ ನಿಯಮ ಉಲ್ಲಂಘನೆ ದಂಡದಿಂದ ತಪ್ಪಿಸಿಕೊಳ್ಳಲು ನೋಂದಣಿ ಸಂಖ್ಯೆಯ ಫಲಕ ಮರೆಮಾಚಿದ್ದ ಆರೋಪದಡಿ ದ್ವಿಚಕ್ರ ವಾಹನ ಸವಾರ ರಾಹುಲ್‌ಕುಮಾರ್ (23) ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ..ಎಚ್‌ಎಎಲ್ ಸಂಚಾರ ಠಾಣೆ ವ್ಯಾಪ್ತಿಯ ದೊಡ್ಡನೆಕ್ಕುಂದಿ ಜಂಕ್ಷನ್ ಬಳಿ ಹೊರಟಿದ್ದ ರಾಹುಲ್‌ಕುಮಾರ್‌ ದ್ವಿಚಕ್ರ ವಾಹನದ ಫಲಕ ಮರೆಮಾಚಿತ್ತು. ಇದರ ಫೋಟೊ ಕ್ಲಿಕ್ಕಿಸಿದ್ದ ಸಾರ್ವಜನಿಕರೊಬ್ಬರು ಸಾಮಾಜಿಕ ಮಾಧ್ಯಮಗಳಲ್ಲಿ ಅಪ್‌ಲೋಡ್ ಮಾಡಿದ್ದರು’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.’ಫೋಟೊ ಆಧರಿಸಿ ತನಿಖೆ ಕೈಗೊಂಡು ರಾಹುಲ್‌ನನ್ನು ವಶಕ್ಕೆ ಪಡೆಯಲಾಗಿದೆ. ದ್ವಿಚಕ್ರ …

Read More »