Shaikh BigTv
February 13, 2024
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ ನಗರದ ಕಿಮ್ಸ್ ಆಸ್ಪತ್ರೆಯ ಹಿಂಭಾಗದಲ್ಲಿ ಅಪರಿಚಿತ ವ್ಯಕ್ತಿಯೋರ್ವನ ಅಸ್ಥಿಪಂಜರ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.ಆಸ್ಪತ್ರೆಯ ಮಹಿಳಾ ಹಾಸ್ಟೆಲ್ ಹಿಂಭಾಗದಲ್ಲಿನ ಚರಂಡಿಯ ಸ್ವಚ್ಚತೆ ಮಾಡುತ್ತಿದ್ದ ಸಂದರ್ಭದಲ್ಲಿ ಸಿಬ್ಬಂದಿಗೆ ಅಸ್ಥಿಪಂಜರದ ಮೂಳೆ ಹಾಗೂ ತಲೆ ಬುರುಡೆ ಪತ್ತೆಯಾಗಿದೆ. ಕಳೆದ ಐದಾರು ತಿಂಗಳು ವ್ಯಕ್ತಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದ್ದು, ವ್ಯಕ್ತಿ ಧರಿಸಿರುವ ಬಟ್ಟೆಯಲ್ಲಿ ಪಿಓಪಿ ಫೌಡರ್ ಇದ್ದು, ಅದರಳೊಗೆ ಮೂಳೆಗಳು ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ …
Read More »
BigTv News
February 11, 2024
Breaking News, ಕರ್ನಾಟಕ, ಮೈಸೂರು, ರಾಜಕೀಯ ಸುದ್ದಿ
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ� ಫೆ.11 ರವಿವಾರ ತಡರಾತ್ರಿ 2 ಗಂಟೆ ವೇಳೆಗೆ� ಮೈಸೂರಿಗೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಜಿಲ್ಲಾಡಳಿತದ ವತಿಯಿಂದ ಬಿಜೆಪಿ ರಾಜ್ಯಾಧ್ಯಕ್ಷ� ಬಿ.ವೈ.ವಿಜಯೇಂದ್ರ ಅವರು ಮೈಸೂರು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಡಾ.ರಾಜೇಂದ್ರ ಅವರು ಜಿಲ್ಲಾಡಳಿತದ ವತಿಯಿಂದ ಸ್ವಾಗತಿಸಿದರು. ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ,ಸಂಸದ ಪ್ರತಾಪ ಸಿಂಹ, ಶಾಸಕರಾದ ಶ್ರೀ ವತ್ಸ,ಮಾಜಿ ಶಾಸಕರಾದ ನಾಗೇಂದ್ರ, ಹರ್ಷವರ್ಧನ್ ನಗರ ಪೊಲೀಸ್ …
Read More »
Shaikh BigTv
February 11, 2024
Breaking News, ಕರ್ನಾಟಕ, ಬೆಳಗಾವಿ, ಹುಬ್ಬಳ್ಳಿ-ಧಾರವಾಡ
ಧಾರವಾಡ ಬರೋಬ್ಬರಿ 89 ವರ್ಷದ ದೊಡಮನಿ ಮಾರ್ಕಂಡೇಯ ಯಲ್ಲಪ್ಪ ಮಂಡಿಸಿದ ‘ಶಿವಶರಣ ಡೋಹರ ಕಕ್ಕಯ್ಯ: ಒಂದು ಅಧ್ಯಯನ’ ಮಹಾಪ್ರಬಂಧಕ್ಕೆ ಕರ್ನಾಟಕ ವಿಶ್ವವಿದ್ಯಾಲಯ ಪಿಎಚ್.ಡಿ ಪದವಿಗೆ ಅಂಗೀಕರಿಸಿದೆ. ಇಳಿ ವಯಸ್ಸಿನಲ್ಲಿ ಅವರು 18 ವರ್ಷ ಅಧ್ಯಯನ ನಡೆಸಿದ್ದಾರೆ…2006 ನವೆಂಬರ್‌ನಲ್ಲಿ ಪಿಎಚ್.ಡಿ ಅಧ್ಯಯನಕ್ಕೆ ಮಾರ್ಕಂಡೇಯ ಅವರು ನೋಂದಣಿ ಮಾಡಿಸಿದರು. ಆದರೆ, ಮಾರ್ಗದರ್ಶಕರಾಗಿದ್ದ ಕರ್ನಾಟಕ ಕಾಲೇಜಿನ ಪ್ರೊ.ತಳವಾರ ನಿಧನರಾದರು. ನಂತರ, ಕರ್ನಾಟಕ ವಿಶ್ವವಿದ್ಯಾಲಯದ ಡಾ.ಆರ್.ಸಿ.ಹಿರೇಮಠ ಕನ್ನಡ ಅಧ್ಯಯನ ಪೀಠದ ಸಹಾಯಕ ಪ್ರಾಧ್ಯಾಪಕ ನಿಂಗಪ್ಪ ಎನ್.ಹಳ್ಳಿ …
Read More »
BigTv News
February 10, 2024
Breaking News, ಕರ್ನಾಟಕ, ರಾಜಕೀಯ ಸುದ್ದಿ
ರಾಷ್ಟ್ರ ಧ್ರೋಹಿಗಳನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ಜಾರಿಗೆ ತರಬೇಕು ಎಂಬ ಹೇಳಿಕೆ ಕುರಿತಂತೆ ಮಾಜಿ ಸಚಿವ ಕೆ ಎಸ್ ಈಶ್ವರಪ್ಪಗೆ ದಾವಣಗೆರೆ ಪೊಲೀಸರು ನೋಟಿಸ್ ಜಾರಿ ಮಾಡಿರುವ ವಿಷಯಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಈಶ್ವರಪ್ಪ ಅವರು ಹೇಳಿರುವಂತಹದ್ದು ದೇಶದ್ರೋಹಿಗಳಿಗೆ ಗುಂಡಿಕ್ಕಿ ಕೊಲ್ಲುವ ಕಾನೂನು ತನ್ನಿ ಅಂತ ಹೇಳಿದ್ದು, ಅದರಿಂದ ಇವತ್ತು ಅವರ ವಿರುದ್ಧ ಟಿಕೆ ಟಿಪ್ಪಣಿಗಳ ನಡೆಯುತ್ತಿವೆ. ಅವರು ಹೇಳಿರುವದಕ್ಕೂ …
Read More »
BigTv News
February 9, 2024
Breaking News, ಕರ್ನಾಟಕ
ಚಿಂತಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಶಿವಮೊಗ್ಗದ ಜಯನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ದತಾ ಪರೀಕ್ಷೆ ವೇಳಾಪಟ್ಟಿ ವಿಷಯದಲ್ಲಿ ಧಾರ್ಮಿಕ ಭಾವನೆ ಕೆರಳಿಸಿರುವ ಆರೋಪದ ಹಿನ್ನೆಲೆಯಲ್ಲಿ ದೂರು ದಾಖಲಾಗಿತ್ತು.ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ವೇಳಾಪಟ್ಟಿ ಪ್ರಕಟಿಸಿದೆ. ಐದು ವಿಷಯಗಳು ಬೆಳಗ್ಗೆ 10:15ಕ್ಕೆ ಆರಂಭವಾದರೆ ಮಾರ್ಚ್ 1ರ ವಿಜ್ಞಾನ ಪರೀಕ್ಷೆ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದೆ. ಮಾರ್ಚ್ 1 ಶುಕ್ರವಾರ ಒಂದೇ ದಿನ …
Read More »
Shaikh BigTv
February 2, 2024
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ ಯುವಕನ ಕೊಲೆ ಪ್ರಕರಣ: ಹೆಂಡತಿಗೆ ಕಿರುಕುಳ ನೀಡಿದ್ದಕ್ಕೆ ಆಪ್ತ ಸ್ನೇಹಿತನಿಂದಲೇ ಮರ್ಡರ್…ಯುವಕನ ಬರ್ಬರ ಹತ್ಯೆ ಮಾಡಿ ಸುಟ್ಟ ಪ್ರಕರಣದ ಆರೋಪಿ ಬಂಧಿಸುವಲ್ಲಿ ಹಳೆಹುಬ್ಬಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮೃತನ ಆಪ್ತ ಸ್ನೇಹಿತಮಂಟೂರ ರಸ್ತೆಯ ಮಿಲ್ಲತ್ ನಗರದ ನಿವಾಸಿ ಸೈಯದ್ ಅಜರ್ (25) ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ ಎಂದು ಹು-ಧಾ ಪೊಲೀಸ್ ಕಮೀಷನರ್ ರೇಣುಕಾ ಸುಕುಮಾರ್ ಮಾಹಿತಿ ನೀಡಿದರು. ಅಜರ್ ಮತ್ತು ಮೃತ ವಿಜಯ ಬಸವ ಆಪ್ತ ಗೆಳೆಯರಾಗಿದ್ದರು. ಆದರೆ ಮೃತ …
Read More »
BigTv News
January 27, 2024
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು : ಬಿ ವೈ ವಿಜಯೇಂದ್ರ ರಾಜ್ಯಾಧ್ಯಕ್ಷನಾದ ಬಳಿಕ ಬೆಂಗಳೂರಿನಲ್ಲಿ ನಡೆಯುತ್ತಿರುವ ಮೊದಲ ಕಾರ್ಯಕಾರಣಿ ಸಭೆ ಆರಂಭವಾಗಿದ್ದು, ಮಾಜಿ ಸಿಎಂ ಯಡಿಯೂರಪ್ಪ ಮತ್ತು ವಿಜಯೇಂದ್ರ ನೇತೃತ್ವ ವಹಿಸಿದ್ದಾರೆ. ಲೋಕಸಭೆ ಸಮರಕ್ಕೆ ತಾಲೀಮು ನಡೆಸುತ್ತಿರುವ ತಂದೆ, ಮಗ, ಇಂದು ನಡೆಯುತ್ತಿರುವ ಕಾರ್ಯಕಾರಿಣಿಯಲ್ಲಿ ಮಂದಿನ ರೂಪುರೇಷಗಳ ಬಗ್ಗೆ ಚರ್ಚಿಸಲಿದ್ದಾರೆ. ಕಾರ್ಯಕಾರಿಣಿಯಲ್ಲಿ 900ಕ್ಕೂ ಹೆಚ್ಚು ಆಹ್ವಾನಿತರು ಭಾಗಿಯಾಗುವ ಸಾಧ್ಯತೆಗಳಿದ್ದು, ಕಾರ್ಯಕಾರಣಿ ಸಭೆಯನ್ನು ಕೇಂದ್ರ ಸಚಿವ ಭೂಪೇಂದ್ರ ಯಾದವ್ ಉದ್ಘಾಟಿಸಿದರು. ಸಭೆಯಲ್ಲಿ ಮಾಜಿ ಸಿಎಂಗಳು, ಮಾಜಿ …
Read More »
BigTv News
January 24, 2024
Breaking News, ಅಪರಾಧ, ಕರ್ನಾಟಕ
ಮಂಡ್ಯ ಜಿಲ್ಲೆಯ ಮೇಲುಕೋಟೆ ಶಿಕ್ಷಕಿ ದೀಪಿಕಾ ನಾಪತ್ತೆ ಹಾಗೂ ಕೊಲೆ ಪ್ರಕರಣ ಬೆಳಕಿಗೆ ಬಂದ 30 ಗಂಟೆಯಲ್ಲೇ ಪೊಲೀಸರು ಹಂತಕನನ್ನು ಅರೆಸ್ಟ್ ಮಾಡಿದ್ದಾರೆ. ಕೊಲೆಗೈದು ತಲೆಮರೆಸಿಕೊಂಡಿದ್ದ ಆರೋಪಿ ನಿತೀಶ್‌ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮೇಲುಕೋಟೆ ಬೆಟ್ಟದ ತಪ್ಪಲಲ್ಲಿ ಮಾಣಿಕ್ಯನಹಳ್ಳಿ ಗ್ರಾಮದ ದೀಪಿಕಾಳನ್ನು (28) ಅದೇ ಗ್ರಾಮದ ನಿತೀಶ್ ಕೊಲೆ ಮಾಡಿ ಹೂತು ಹಾಕಿದ್ದ…ಶನಿವಾರ ಮಧ್ಯಾಹ್ನ ಶಾಲೆಯಿಂದ ತೆರಳಿದ್ದ ದೀಪಿಕಾ ನಿಗೂಢವಾಗಿ ನಾಪತ್ತೆಯಾಗಿದ್ದು,ಅಂದು ಸಂಜೆ ಬೆಟ್ಟದ ಹಿಂಭಾಗದ ರಸ್ತೆ ಸಮೀಪ ದೀಪಿಕಾ …
Read More »
BigTv News
January 21, 2024
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಸಿಹಿಸುದ್ದಿ ನೀಡಿದ್ದು, ವಾರದಲ್ಲಿ 30 ಲಕ್ಷ ರೈತರಿಗೆ ಮೊದಲ ಕಂತಿನ ಬರ ಪರಿಹಾರ ಖಾತೆಗೆ ಜಮಾ ಮಾಡಲು ನಿರ್ಧರಿಸಿದೆ. ಈ ಕುರಿತು ಸಚಿವ ಕೃಷ್ಣ ಬೈರೇಗೌಡ ಮಾಹಿತಿ ನೀಡಿದ್ದು, ಬರ ಘೋಷಿಸಿ ನಾಲ್ಕು ತಿಂಗಳಾದರೂ ಕೇಂದ್ರದಿಂದ ಬರ ಪರಿಹಾರ ಹಣ ಇನ್ನೂ ಬಂದಿಲ್ಲ. ಎನ್‌ಡಿಆರ್‌ಎಫ್ ಮಾರ್ಗಸೂಚಿ ಅನ್ವಯ 18,177.44 ಕೋಟಿ ರೂ. ಪರಿಹಾರ ನೀಡುವಂತೆ ಸೆಪ್ಟೆಂಬರ್ 22ರಂದೇ ಕೇಂದ್ರ ಕೃಷಿ ಸಚಿವಾಲಯಕ್ಕೆ ಮನವಿ …
Read More »
BigTv News
January 19, 2024
Breaking News, ಅಪರಾಧ, ಕರ್ನಾಟಕ
ಜನವರಿ 22ರಂದು ಸೋಮವಾರ ಅಯೋಧ್ಯೆಯ ಶ್ರೀರಾಮಮಂದಿರದಲ್ಲಿ (Ayodhya Ram Mandir) ರಾಮಲಲ್ಲಾ ಪ್ರಾಣಪ್ರತಿಷ್ಠೆ ನೆರವೇರಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಬಿಗಿ ಭದ್ರತೆ ನಿಯೋಜಿಸಲಾಗುತ್ತಿದೆ. ಬಾಲರಾಮನ ಮೂರ್ತಿ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಜ.22ರಂದು ಯಾವುದೇ ಪೊಲೀಸ್ (Police) ಸಿಬ್ಬಂದಿಗೆ ರಜೆ ನೀಡದಂತೆ ಸೂಚಿಸಲಾಗಿದೆ. ಒಂದು ವೇಳೆ ರಜೆಯಲ್ಲಿರುವವರು ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗಲೇಬೇಕು ಎಂದು ಹಿರಿಯ ಅಧಿಕಾರಿಗಳು ಸೂಚಿಸಿರುವುದಾಗಿ ಮೂಲಗಳು ತಿಳಿಸಿವೆ ಈ ಹಿಂದಿನ ಕೋಮುಗಲಭೆಗಳ (Communal Riots) ಬಗ್ಗೆ ಮಾಹಿತಿ ಪಡೆದಿರುವ ಪೊಲೀಸರು, …
Read More »