Breaking News

ಕರ್ನಾಟಕ

ಯುವ ಜನಕ್ಕೆ ಮಾದರಿ ಆಗಲಿರುವ ಬಾಬಾ ಸಾಹೇಬ್ ಅಂಬೇಡ್ಕರ್ ಸಂಘಟನೆ……

ವಿದ್ಯಾನಗರದ ಹೃದಯಬಾಗದಲ್ಲಿರುವಂತ ಲೋಕಪ್ಪನಹಕ್ಕಲ ಆ ಭಾಗದ ಯುವಕರು ಸೇರಿ ಒಗ್ಗಟ್ಟಿನಿಂದ ಆ ಯುವ ಶಕ್ತಿ ಸದ್ಭಾಳಿಕೆ ಆಗಬೇಕು, ಸದುಪಯೋಗ ಆಗಬೇಕು ಎಂದು ಒಂದು ಸಂಘಟನೆ ಹುಟ್ಟು ಹಾಕಿದ್ದಾರೆ. ಅದು ನಮ್ಮೆಲ್ಲರ ಅಭಿಮಾನದ ಸಂಕೇತ ನಮ್ಮ ದೇಶ ವಿಶ್ವ ಮೆಚ್ಚುವಂತಹ ಸಂವಿಧಾನ ಶಿಲ್ಪಿ ಡಾ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹೆಸರಿನಲ್ಲಿ ಒಂದು ಸೇವಾ ಸಂಘ ವನ್ನು ಪ್ರೀತಿ, ಅಭಿಮಾನದಿಂದ ಉದ್ಘಾಟನೆ ಮಾಡಿದ್ದೇವೆ. ಅದರ ಉದ್ದೇಶ ಯುವಕರು ಹೇಳಿದ ಹಾಗೆ ಸಮಾಜಕ್ಕೆ …

Read More »

ಸಂಕಷ್ಟಕ್ಕೆ ಸಿಲುಕಿರುವ ತೆಂಗು ಬೆಳೆಗಾರರ ನೆರವಿಗೆ ಕೇಂದ್ರ ಸರಕಾರ ಧಾವಿಸಿದೆ….

ಬೆಂಗಳೂರು: ಕೊಬ್ಬರಿ ದರ ಇಳಿಕೆಯಿಂದ ಸಂಕಷ್ಟಕ್ಕೆ ಸಿಲುಕಿರುವ ತೆಂಗು ಬೆಳೆಗಾರರ ನೆರವಿಗೆ ಕೇಂದ್ರ ಸರಕಾರ ಧಾವಿಸಿದೆ. ಸರಕಾರ ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ)ಯನ್ನು ಕ್ವಿಂಟಾಲ್‌ಗೆ 300 ರೂ. ಏರಿಕೆ ಮಾಡಿದ್ದು, ಉಂಡೆ ಕೊಬ್ಬರಿಗೆ 250 ರೂ. ಹೆಚ್ಚಿಸಿದ್ದು ಸ್ವಾಗತಾರ್ಹ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯ ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿಯು 2024ರ ಋತುವಿಗೆ ಕೊಬ್ಬರಿಯ ಕನಿಷ್ಠ …

Read More »

ಸಚಿವ ಪ್ರಲ್ಹಾದ್‌ ಜೋಶಿ ಕರೆದ ಸಭೆಗೆ ಜಗದೀಶ್‌ ಶೆಟ್ಟರ್‌ ಸಹೋದರ ಹಾಗೂ ಆಪ್ತ ಗೈರಾಗಿದ್ದಾರೆ….

ಹುಬ್ಬಳ್ಳಿ: ವಿಧಾನಸಭಾ ಚುನಾವಣೆ ಬಳಿಕ ಬಿಜೆಪಿ ಹಿರಿಯ ನಾಯಕರೇ ಸ್ವಪಕ್ಷದ ನಾಯಕರ ವಿರುದ್ಧ ಬುಸುಗುಡುತ್ತಿದ್ದಾರೆ. ಕಳೆದ ಚುನಾವಣೆ ವೇಳೆ ಪಕ್ಷದಲ್ಲಿ ಹುಟ್ಟಿಕೊಂಡ ಅಸಮಾಧಾನ ಹಾಗೂ ಭಿನ್ನಮತ ಮತ್ತೆ ಮುಂದುವರೆದಿದ್ದು, ಭಿನ್ನಮತ ಶಮನಕ್ಕೆ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಕರೆದ ಸಭೆಗೆ ಜಗದೀಶ್‌ ಶೆಟ್ಟರ್‌ ಸಹೋದರ ಹಾಗೂ ಆಪ್ತ ಗೈರಾಗಿದ್ದಾರೆ. ಒಂದು ಕಾಲದಲ್ಲಿ ಹುಬ್ಬಳ್ಳಿ-ಧಾರವಾಡ ಬಿಜೆಪಿಯ ಭದ್ರಕೋಟೆಯಾಗಿತ್ತು. ಆದರೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಬಿಜೆಪಿ ತೊರೆದು …

Read More »

ಜನಪ್ರಿಯ ಸ್ಟಂಟ್ ಡೈರೆಕ್ಟರ್ ಜಾಲಿ ಬಾಸ್ಟಿನ್ ನಿಧನ……

ಡಿಸೆಂಬರ್ ತಿಂಗಳು ಕನ್ನಡ ಚಿತ್ರರಂಗಕ್ಕೆ ಅಶುಭ ಅನ್ನೋದು ಮತ್ತೊಮ್ಮೆ ಸಾಬೀತಾಗುತ್ತಿದೆ. ಇತ್ತೀಚೆಗೆ ಹಿರಿಯ ನಟಿ ಲೀಲಾವತಿ ಅಪಾರ ಅಭಿಮಾನಿಗಳನ್ನು ಅಗಲಿದ್ದರು. ಇನ್ನೇನು ಸಿನಿಪ್ರೇಮಿಗಳು ಆ ನೋವನ್ನು ಮರೆಯಲು ಯತ್ನಿಸುತ್ತಿರುವಾಗಲೇ ಮತ್ತೊಂದು ಶಾಕಿಂಗ್ ನ್ಯೂಸ್ ಬಂದಿದೆ. ಕನ್ನಡ ಸೇರಿದಂತೆ ಹಲವು ಭಾಷೆಯ ಸಿನಿಮಾಗಳಿಗೆ ಸಾಹಸ ನಿರ್ದೇಶನ ಮಾಡಿದ್ದ ಜನಪ್ರಿಯ ಸ್ಟಂಟ್ ಡೈರೆಕ್ಟರ್ ಜಾಲಿ ಬಾಸ್ಟಿನ್ ನಿಧನರಾಗಿದ್ದಾರೆ. ಮಂಗಳವಾರ (ಡಿಸೆಂಬರ್ 26)ಹೃದಯಾಘಾತದಿಂದ ಜಾಲಿ ಬಾಸ್ಟಿನ್ ನಿಧನರಾಗಿದ್ದಾರೆ. 57 ವರ್ಷ ಜಾಲಿ ಬಾಸ್ಟಿನ್ ಕನ್ನಡದ …

Read More »

ಭಾರತದ ಇತಿಹಾಸದಲ್ಲಿ ಮೋದಿಯವರಷ್ಟು ಸುಳ್ಳು ಹೇಳುವ ಪ್ರಧಾನಿ ಇವತ್ತಿನವರೆಗೂ ಬಂದಿಲ್ಲ ಸಿದ್ದರಾಮಯ್ಯ ಕಿಡಿ…

ಬೆಂಗಳೂರು: ಪ್ರಧಾನಿ ಮೋದಿಯವರೇ ಕರ್ನಾಟಕ ರಾಜ್ಯದಲ್ಲಿ ನಮ್ಮ ಕಾಂಗ್ರೆಸ್ ಸರ್ಕಾರ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ. ನಿಮ್ಮ ಮಾತು ಸುಳ್ಳಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ರಾಜ್ಯ ಸರ್ಕಾರದ ಐತಿಹಾಸಿಕ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆಯ ಚಾಲನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಿದ್ದರಾಮಯ್ಯ ಅವರು, ಯುವನಿಧಿ ಜತೆಗೆ ಉಚಿತ ತರಬೇತಿ, ಅರ್ಜಿ ಶುಲ್ಕವೂ ಉಚಿತ. ರಾಜ್ಯದ ಜನರಿಗೆ ಇದು ಮುಟ್ಟಿದೆ. ವರ್ಷಕ್ಕೆ ಎರಡು …

Read More »

ಮತ್ತೆ ರಾಜ್ಯದಲ್ಲಿ ಪ್ರತ್ಯೇಕ ಲಿಂಗಾಯತ ಧರ್ಮದ ಚರ್ಚೆಯ ಹುಟ್ಟು….

ಬೆಂಗಳೂರು: ದಾವಣಗೆರೆಯಲ್ಲಿ ನಡೆದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಸಮಾವೇಶದಲ್ಲಿ ಪ್ರಮುಖ ಬೇಡಿಕೆಯೊಂದು ಈಗ ಮತ್ತೆ ರಾಜ್ಯದಲ್ಲಿ ಪ್ರತ್ಯೇಕ ಲಿಂಗಾಯತ ಧರ್ಮದ ಚರ್ಚೆಯನ್ನು ಹುಟ್ಟುಹಾಕಿದೆ. ವೀರಶೈವ ಲಿಂಗಾಯತ ಮಹಾಸಭಾದಲ್ಲಿ ಲಿಂಗಾಯತರಿಗೆ ಪ್ರತ್ಯೇಕ ಧರ್ಮ ಮಾನ್ಯತೆ ನೀಡಬೇಕು ಎಂದು ಸಮುದಾಯದ ಒಂದು ವರ್ಗ ಮತ್ತೆ ಒತ್ತಾಯಿಸಿದೆ. ಧರ್ಮದ ಅಂಕಣದಲ್ಲಿ ವೀರಶೈವ ಅಥವಾ ಲಿಂಗಾಯತ ಎಂದು ಬಳಸಲು ಸಮುದಾಯದ ಸದಸ್ಯರಿಗೆ ಮನವಿ ಸೇರಿದಂತೆ ಎಂಟು ನಿರ್ಣಯಗಳನ್ನು ಸಮಾವೇಶವು ಅಂಗೀಕರಿಸಿದೆ. ವೀರಶೈವ ಲಿಂಗಾಯತ …

Read More »

ಬಿಜೆಪಿ ಯವರು ತಾವು ಅಧಿಕಾರದಲ್ಲಿದ್ದಾಗ ಈ ಜನೋಪಯೋಗಿ ಯೋಜನೆಯನ್ನು ಏಕೆ ಜಾರಿಗೆ ತರಲಿಲ್ಲ: ಸಿದ್ದರಾಮಯ್ಯ.

ಬೆಂಗಳೂರು: ಏಪ್ರಿಲ್ ವೇಳೆಗೆ 1400 ಹೊಸ ಎಲೆಕ್ಟ್ರಿಕ್ ಬೆಂಗಳೂರು ಮಹಾನಗರ ಬಸ್ ಗಳು ನಗರ ಸಾರಿಗೆಗೆ ಸೇರ್ಪಡೆ ಆಗಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.ವಿಧಾನಸೌಧದ ಪೂರ್ವದ್ವಾರದ ಮುಂಭಾಗದಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 100 ವಿದ್ಯುತ್ ಚಾಲಿತ ಬಸ್ ಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಇಲ್ಲಿಯವರೆಗೂ ರಾಜ್ಯ ಸಾರಿಗೆಯ ಬಸ್ ಗಳಲ್ಲಿ 120 ಕೋಟಿ ಮಹಿಳೆಯರು ಉಚಿತವಾಗಿ ಬಸ್ ಗಳಲ್ಲಿ ಪ್ರಯಾಣಿಸಿದ್ದಾರೆ. ನಿತ್ಯ 40 ಲಕ್ಷ …

Read More »

ಧಾರವಾಡ ಗಾಂಧೀಚೌಕ ಶ್ರೀ ದತ್ತಾತ್ರೇಯ ದೇವಸ್ಥಾನದಲ್ಲಿ ಹಗಲು ರಾತ್ರಿ ಅಖಂಡ ದತ್ತನಾಮಸ್ಮರಣೆ…

ಧಾರವಾಡ: ಗಾಂಧೀಚೌಕ ಶ್ರೀ ದತ್ತಾತ್ರೇಯ ದೇವಸ್ಥಾನದಲ್ಲಿ ಶ್ರೀ ಶಾಲಿವಾಹನ ಶಕೆ 1945 ನೇ ಶೋಭನನಾಮ ಸಂವತ್ಸರ, ದಕ್ಷಿಣಾಯನ ಹೇಮಂತ ಋತು ಮಾರ್ಗ ಶೀರ್ಷ ಶುಕ್ಲ ಸಪ್ತಮಿ ಮಂಗಳವಾರ ದಿ 19 ರಿಂದ ಮಾರ್ಗಶೀರ್ಷ ಕೃಷ್ಣ ಪಕ್ಷ ಪ್ರತಿಪದಾ ಬುಧವಾರ ದಿನಾಂಕ 27 ರ ವರೆಗೆ ಶ್ರೀ ಮ।।ಜ ॥ ಶಂಕರಾಚಾರ್ಯ ಸಂಸ್ಕೃತ ಪಾಠಶಾಲೆ, ಶ್ರೀ ದತ್ತ ಯುವಕ ಮಂಡಳ, ಶ್ರೀ ದತ್ತ ಭಜನಾ ಮಂಡಳಿ ಹಾಗೂ ಹಾಲಗೇರಿ ಹನುಮಂತ ದೇವರ …

Read More »

400 ಹೊಸ ಎಲೆಕ್ಟ್ರಿಕ್ ಬೆಂಗಳೂರು ಮಹಾನಗರ ಬಸ್ ಗಳು ನಗರ ಸಾರಿಗೆಗೆ ಸೇರ್ಪಡೆ ಆಗಲಿವೆ: ಸಿದ್ದರಾಮಯ್ಯ.

ಬೆಂಗಳೂರು: ಏಪ್ರಿಲ್ ವೇಳೆಗೆ 1400 ಹೊಸ ಎಲೆಕ್ಟ್ರಿಕ್ ಬೆಂಗಳೂರು ಮಹಾನಗರ ಬಸ್ ಗಳು ನಗರ ಸಾರಿಗೆಗೆ ಸೇರ್ಪಡೆ ಆಗಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ವಿಧಾನಸೌಧದ ಪೂರ್ವದ್ವಾರದ ಮುಂಭಾಗದಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 100 ವಿದ್ಯುತ್ ಚಾಲಿತ ಬಸ್ ಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಇಲ್ಲಿಯವರೆಗೂ ರಾಜ್ಯ ಸಾರಿಗೆಯ ಬಸ್ ಗಳಲ್ಲಿ 120 ಕೋಟಿ ಮಹಿಳೆಯರು ಉಚಿತವಾಗಿ ಬಸ್ ಗಳಲ್ಲಿ ಪ್ರಯಾಣಿಸಿದ್ದಾರೆ. ನಿತ್ಯ 40 ಲಕ್ಷ ಜನ …

Read More »

ವಿದ್ಯಾರ್ಥಿಗಳು ಮರೆವಾಡ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಜನರಲ್ಲಿ ಮತದಾನ ಜಾಗೃತಿ ಮೂಡಿಸಿದರು…..

ಧಾರವಾಡ : ತಾಲೂಕಿನ ಮರೆವಾಡ ಗ್ರಾಮದಲ್ಲಿ ಜಿಲ್ಲಾಡಳಿತ ಮತ್ತು ಸ್ವೀಪ್ ಸಮಿತಿ, ಅಂಜುಮನ್ ಮಹಾವಿದ್ಯಾಲಯದ, ಚುನಾವಣಾ ಸಾಕ್ಷರತಾ ಕ್ಲಬ್ ಮತ್ತು ಎನ್‌.ಎಸ್.ಎಸ್ ಘಟಕ ವತಿಯಿಂದ ಮತದಾರ ಜಾಗೃತಿ ಜಾಥಾ ಕಾರ್ಯಕ್ರಮ ನಡೆಯಿತು. ಬಲಿಷ್ಠ ಭಾರತ ನಿರ್ಮಾಣ ಮಾಡಲು ತಪ್ಪದೇ ಮತದಾನ ಮಾಡಿ, ದೇಶದ ಭವಿಷ್ಯ ನಿರ್ಮಾಣಕ್ಕಾಗಿ ಕಡ್ಡಾಯವಾಗಿ ಮತದಾನ ಮಾಡಿ, ನಮ್ಮ ಮತ ನಮ್ಮ ಹಕ್ಕು ಎಂಬ ಘೋಷವಾಕ್ಯ ಗಳೊಂದಿಗೆ ವಿದ್ಯಾರ್ಥಿಗಳು ಮರೆವಾಡ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಜನರಲ್ಲಿ …

Read More »