ಬೆಂಗಳೂರು: ಕರ್ನಾಟಕ ಬಂದ್ – ಶಾಲಾ, ಕಾಲೇಜುಗಳಿಗೆ ರಜೆ ಕೊಡುವ ಅಧಿಕಾರ ಡಿಸಿಗಳಿಗೆ ಕೊಟ್ಟ ಶಿಕ್ಷಣ ಇಲಾಖೆ. ಬೆಂಗಳೂರು ಸೆಪ್ಟಂಬರ್ 29ರಂದು ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆ, ಕಾಲೇಜುಗಳಿಗೆ ರಜೆ ನೀಡುವ ಅಧಿಕಾರವನ್ನು ಶಿಕ್ಷಣ ಇಲಾಖೆ ಜಿಲ್ಲಾಧಿಕಾರಿಗೆ ನೀಡಿದೆ.ಈ ಕುರಿತು ಸೂಚನೆ ನೀಡಿರುವ ಶಿಕ್ಷಣ ಇಲಾಖೆ, ಪರಿಸ್ಥಿತಿಯನ್ನು ಗಮನಿಸಿಕೊಂಡು ಜಿಲ್ಲಾಧಿಕಾರಿಗಳು ರಜೆ ನೀಡಬಹುದು ಎಂದಿದೆ.ಈ ಕುರಿತು ಸೂಚನೆ ನೀಡಿರುವ ಶಿಕ್ಷಣ ಇಲಾಖೆ, ಪರಿಸ್ಥಿತಿಯನ್ನು ಗಮನಿಸಿಕೊಂಡು ಜಿಲ್ಲಾಧಿಕಾರಿಗಳು ರಜೆ ನೀಡಬಹುದು …
Read More »ಹಿಂದೂ-ಮುಸ್ಲಿಂ ಭಾವೈಕ್ಯತೆ ಸಾಕ್ಷಿಯಾದ ಹಳೇ ಹುಬ್ಬಳ್ಳಿ: ಗಣಪತಿ ವಿಸರ್ಜನೆಯಲ್ಲಿ ಸೌಹಾರ್ದತೆ..
ಹುಬ್ಬಳ್ಳಿ: ರಾಜ್ಯದಲ್ಲಿಯೇ ಎರಡನೇ ಅತಿದೊಡ್ಡ ಮಹಾನಗರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹುಬ್ಬಳ್ಳಿಯಲ್ಲಿ ಹಿಂದೂ ಮುಸ್ಲಿಂ ಭಾವೈಕ್ಯತೆ ಹಾಗೂ ಸೌಹಾರ್ದತೆ ನಿಜಕ್ಕೂ ಸುತ್ತಮುತ್ತಲಿನ ಜಿಲ್ಲೆಗಳಿಗೆ ಮಾರ್ಗದರ್ಶನವಾಗಿದೆ. ಇಂತಹ ಮಹತ್ವದ ಸಂದೇಶಕ್ಕೆ ಹಳೇ ಹುಬ್ಬಳ್ಳಿಯ ಜನರು ಸಾಕ್ಷಿಯಾಗಿದ್ದಾರೆ.ಹೌದು.. ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯ ವ್ಯಾಪ್ತಿಯ ನ್ಯೂ ಆನಂದನಗರದಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆ ಮತ್ತು ಸೌಹಾರ್ದತೆಯ ಅಂಗವಾಗಿ ಗಣೇಶ ಮೂರ್ತಿ ವಿಸರ್ಜನೆಯ ಕಾಲಕ್ಕೆ ಹಿಂದೂ ಮುಸ್ಲಿಂ ಜನತೆ ಅನ್ಯೋನ್ಯವಾಗಿ ಸ್ನೇಹ ಬಾಂಧವ್ಯದಿಂದ ಆಚರಿಸುವ ಮೂಲಕ ಕಣ್ಮನ …
Read More »ಬಂದೋಬಸ್ತ್ ಪೊಲೀಸರಿಗೆ ನೀಡಿದ ಟಿಫನ್ ನಲ್ಲಿ ಸತ್ತ ಇಲಿ ಪತ್ತೆ….
ಆಹಾರದಲ್ಲಿ ಸತ್ತ ಇಲಿ ಪತ್ತೆ.. ಪೋಲೀಸರಿಗೇ ಹೀಗೆ ಮಾಡೋದ..? ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಷಯದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಇಂದು ಸೆ.26ರಂದು ಕನ್ನಡ ಪರ ಸಂಘಟನೆಗಳು ಮತ್ತು ರೈತರು ಮಾಡಿದ ಬಂದ್ಗೆ ಬೆಂಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇದೀಗ ಬಂದಗೆ ನಿರತರಾಗಿರುವ ಪೊಲೀಸರಿಗೆ ಅಸಮರ್ಪಕ ಆಹಾರವನ ಪೂರೈಕೆ ಮಾಡಿರುವುದು ಬಯಲಾಗಿದೆ.ಬೆಂಗಳೂರು ಬಂದ್ ಹಿನ್ನೆಲೆ ಬಂದೋಬಸ್ತ್ ನಿಯೋಜನೆಗೊಂಡಿದ್ದ ಯಶವಂತಪುರ ಸಂಚಾರಿ ಪೊಲೀಸರಿಗೆ ನೀಡಿದ ಬೆಳಗ್ಗಿನ ಉಪಹಾರದಲ್ಲಿ ಸತ್ತ ಇಲಿಯೊಂದು …
Read More »ಮಳೆಯ ಅವಾಂತರವೋ ಪಾಲಿಕೆ ನಿರ್ಲಕ್ಷ್ಯವೋ: ಚರಂಡಿ ನೀರಿನ ವಾಸನೆಯಲ್ಲಿಯೇ ಗಜಾನನ..!
ಹುಬ್ಬಳ್ಳಿ: ಮಳೆ ಬಾರದೇ ಇದ್ದರೇ ಜನರು ಕಂಗಾಲಾಗುತ್ತಾರೆ. ಆದರೆ ಹುಬ್ಬಳ್ಳಿಗೆ ಮಳೆ ಬಂದರೇ ಏನಾದರೂ ಒಂದು ಅವಾಂತರ ಆಗುವುದಂತೂ ಖಂಡಿತ. ಗಣಪತಿ ಪ್ರತಿಷ್ಟಾಪನೆ ಮಾಡಿರುವಲ್ಲಿಯೇ ಮಳೆಯಿಂದ ಚರಂಡಿ ನೀರು ನುಗ್ಗಿದ್ದು, ಸಂಪೂರ್ಣ ಜಲಾವೃತವಾಗಿದೆ.ಹೌದು.. ಹುಬ್ಬಳ್ಳಿಯ ತುಳಜಾ ಭವಾನಿ ಸರ್ಕಲ್ ಬಳಿಯಲ್ಲಿರುವ ಗಣೇಶ ಮಂಟಪಕ್ಕೆ ಮಳೆಯ ನೀರು ಹಾಗೂ ಚರಂಡಿ ನೀರು ನುಗ್ಗಿದ್ದು, ಅವ್ಯವಸ್ಥೆ ಸೃಷ್ಟಿಯಾಗಿದೆ. ಈಗಾಗಲೇ ಅವಳಿನಗರದಲ್ಲಿ ಇಂತಹ ಸಾಕಷ್ಟು ಸಮಸ್ಯೆಗಳಿವೆ. ಹೀಗಿದ್ದರೂ ಕೂಡ ಸ್ಥಳೀಯ ಆಡಳಿತ ಮಂಡಳಿ ಹಾಗೂ …
Read More »ಮಳೆರಾಯನ ಅಬ್ಬರಕ್ಕೆ ತಬ್ಬಿಬ್ಬಾದ ಜನರು: ವಿದ್ಯಾರ್ಥಿಗಳ ಪರದಾಟ..!
ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ವರುಣನ ಅಬ್ಬರ ಜೋರಗಿದೆ. ಅಲ್ಲದೇ ಮಳೆಯ ಅಬ್ಬರದಿಂದ ರಸ್ತೆಯಲ್ಲಿ ಸಾಕಷ್ಟು ನೀರು ಹರಿದು ಬಂದಿದ್ದು, ವಿದ್ಯಾರ್ಥಿಗಳು ರಸ್ತೆದಾಟಲು ಪರದಾಡುವಂತಾಗಿದೆ.ಹೌದು.. ಹುಬ್ಬಳ್ಳಿಯ ಲ್ಯಾಮಿಂಗ್ಟನ್ ರಸ್ತೆಯಲ್ಲಿಯೇ ಸಾಕಷ್ಟು ಪ್ರಮಾಣದಲ್ಲಿ ನೀರು ಹರಿಯುತಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಶಾಲೆ ಬಿಡುವ ಟೈಮಿನಲ್ಲಿಯೇ ಮಳೆ ಜೋರಾಗಿದ್ದು, ವಿದ್ಯಾರ್ಥಿಗಳು ನೀರಿನಲ್ಲಿ ಪರದಾಡುವಂತಾಗಿದೆ.ಇನ್ನೂ ಅವಳಿನಗರದಲ್ಲಿ ಬಹುತೇಕ ಕಡೆಯಲ್ಲಿ ಸರಿಯಾಗಿ ನೀರು ಹರಿದು ಹೋಗಲು ವ್ಯವಸ್ಥೆಯಿಲ್ಲದ ಕಾರಣ ಜನರು ಪರದಾಡುವಂತಾಗಿರುವುದು ಸರ್ವೇಸಾಮಾನ್ಯವಾಗಿದೆ.
Read More »ಬೆಂಗಳೂರು ಬಂದ್ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು: ಬೆಂಗಳೂರು ಬಂದ್ ಶಾಂತಿಯುತವಾಗಿ ಆಗಿದೆ. ಬೆಂಗಳೂರು ನಾಗರಿಕರಿಗೆ ನನ್ನ ಅಭಿನಂದನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಕರ್ನಾಟಕದಲ್ಲಿ ಬರ ಇದ್ದಾಗಲೂ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಖಂಡಿಸಿ ರೈತ ಮುಖಂಡರು ಹಾಗೂ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಡಿಕೆಶಿ, ಪ್ರತಿಭಟನೆ ಮಾಡಲಿ. ಅವರ ಧ್ವನಿ, ಹೋರಾಟ ನಡೆಯಲಿ. ಎಲ್ಲರೂ ಸಹಕಾರ ಕೊಟ್ಟಿದ್ದಾರೆ. ಸಂಘಟನೆಯವರಿಗೆ ಅಭಿನಂದನೆಗಳು ಎಂದರು. ಕಾವೇರಿ ನಿರ್ವಹಣಾ ಸಮಿತಿ ಸಭೆ …
Read More »ಕಾವೇರಿ ನದಿ ನೀರು ವಿಚಾರ: ಸಿಎಂ ಸಿದ್ಧರಾಮಯ್ಯಗೆ ಮನವಿ ಪತ್ರ ಸಲ್ಲಿಸಿದ ಕಿಚ್ಚ ಸುದೀಪ್!
ಕಾವೇರಿ ನದಿ ನೀರಿನ ವಿಚಾರವಾಗಿ ಕನ್ನಡದ ಹೆಸರಾಂತ ನಟ ಕಿಚ್ಚ ಸುದೀಪ್ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಮನವಿಯೊಂದನ್ನು ಮಾಡಿಕೊಂಡಿದ್ದಾರೆ. ಸುದೀರ್ಘವಾಗಿ ಪತ್ರವೊಂದನ್ನು ಬರೆದಿರುವ ಸುದೀಪ್, ಆ ಪತ್ರವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಕಾವೇರಿ ಸಮಸ್ಯೆ ಈ ವರ್ಷವೂ ಶುರುವಾಗಿದೆ. ಕನ್ನಡ ಪರ ಸಂಘಟನೆಗಳು, ರೈತರು, ಹೋರಾಟ ನೆಡೆಸುತ್ತಿದ್ದಾರೆ. ಕನ್ನಡದ ನೆಲ, ಜಲ, ಭಾಷೆಯ ಎಲ್ಲ ಹೋರಾಟಗಳಲ್ಲೂ ನಾನು ಸದಾ ನಿಮ್ಮೊಂದಿಗೆ ಇದ್ದೇನೆ. ಮುಂಗಾರು ಮಳೆಯ ಅಭಾವದಿಂದ ರೈತರಿಗೆ ಜನತೆಯ …
Read More »ಕಾವೇರಿ ವಿಚಾರದಲ್ಲಿ ವಿಪಕ್ಷಗಳು ರಾಜಕೀಯ ಮಾಡುತ್ತಿವೆ: ಸಿಎಂ ಸಿದ್ದರಾಮಯ್ಯ
ಮೈಸೂರು: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ಮಾಡಲು ಅವಕಾಶವಿದೆ. ಪ್ರತಿಭಟನೆ ಮಾಡುವುದಕ್ಕೆ ನಾವು ಯಾವುದೇ ಅಡ್ಡಿಪಡಿಸುವುದಿಲ್ಲ. ಕಾವೇರಿ ನದಿ ವಿಚಾರದಲ್ಲಿ ವಿಪಕ್ಷಗಳು ರಾಜಕೀಯ ಮಾಡುತ್ತೀವೆ ಎಂದಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಮೈಸೂರಿನಲ್ಲಿ ಮಾತನಾಡಿದ ಅವರು, ಜನರ ಹಿತಕ್ಕಾಗಿ ವಿಪಕ್ಷಗಳು ಹೋರಾಟ ಮಾಡುತ್ತಿಲ್ಲ. ಕರ್ನಾಟಕ ಜನರ ಹಿತ ಕಾಪಾಡುವುದು ನಮ್ಮ ಸರ್ಕಾರ ಬದ್ಧ. ಕಾವೇರಿ ವಿಚಾರದಲ್ಲಿ ನಾವು ವಿಫಲವಾಗಿದ್ದೇವೆ ಅನ್ನೋದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು
Read More »ರೋಗಿಗಳಿಗೂ ತಟ್ಟಿದ ಬೆಂಗಳೂರು ಬಂದ್ ಎಫೆಕ್ಟ್: ಹೆಚ್ಚಿನ ಚಿಕಿತ್ಸೆಗೆ ಹೋಗಲು ಬಸ್ ಇಲ್ಲದೇ ಪರದಾಟ
ಬೆಂಗಳೂರು: ಬೆಂಗಳೂರು ಬಂದ್ ಎಫಕ್ಟ್ ರೋಗಿಗಳಿಗೂ ತಟ್ಟಿದೆ. ಶಿವಮೊಗ್ಗದ ಮಾನಸ ಆಸ್ಪತ್ರೆಗೆ ಹೋಗಲು ಆಂಧ್ರಪ್ರದೇಶದಿಂದ ಮೆಜೆಸ್ಟಿಕ್ಗೆ ಪ್ರಯಾಣಿಕರು ಬಂದಿದ್ದಾರೆ. ಇಲ್ಲಿಂದ ಚಿಕಿತ್ಸೆಗಾಗಿ ಶಿವಮೊಗ್ಗ ಹೋಗಲು ನಿರ್ಧರಿಸಿದ್ದಾರೆ. ಆದರೆ ಪ್ರಯಾಣಿಕ ಸಂಖ್ಯೆ ಇಲ್ಲ ಅಂತ ಕೆಎಸ್ಆರ್ಟಿಸಿ ಶಿವಮೊಗ್ಗಕ್ಕೆ ಬಸ್ ಬಿಡುತ್ತಿಲ್ಲ. ಹೀಗಾಗಿ ರೋಗಿಗಳು ಪರದಾಡುತ್ತಿದ್ದಾರೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವುತ್ತಿರುವುದನ್ನು ವಿರೋಧಿಸಿ ಬೆಂಗಳೂರು ಬಂದ್ಗೆ ಕರೆ ಕೊಟ್ಟಿದ್ದು, ಕೆ.ಆರ್.ಮಾರ್ಕೆಟ್ ವ್ಯಾಪಾರಿಗಳು ಬಂದ್ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಬಂದ್ ದಿಕ್ಕು ತಪ್ಪಿಸುವ ಕೆಲಸವಾಗಬಾರದು. ಜಲ್ಲಿಕಟ್ಟು …
Read More »ಕಾವೇರಿ ಹೊರಾಟ ಬೆಂಬಲಿಸಿ ಧಾರವಾಡದಲ್ಲಿ ರೈತ ಪ್ರತಿಭಟನೆ
ಧಾರವಾಡ: ಕಾವೇರಿ ಹೊರಾಟ ಬೆಂಬಲಿಸಿ ಧಾರವಾಡದಲ್ಲಿ ಕೂಡ ಪ್ರತಿಭಟನೆ ಮಾಡಲಾಗಿದ್ದು ಕರ್ನಾಟಕ ರಾಜ್ಯ ರೈತ ಸೇನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟಿಸಿ ರೈತರು ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಸೋಗಲಾಡಿ ಸರ್ಕಾರ ಹಾಗೂ ಎಂಪಿಗಳು ರಾಜೀನಾಮೆ ನೀಡಬೇಕು ಎಂದು ಒತ್ತಾಯ ಮಾಡಿದರು. ಈ ಕೂಡಲೇ ತಮಿಳುನಾಡಿಗೆ ನೀರು ನಿಲ್ಲಿಸಿ ಇಲ್ಲವಾದರೆ ರಾಜೀನಾಮೆ ನೀಡಿ ಎಂದು ರೈತರು ಆಗ್ರಹಿಸಿದರು ರಾಜ್ಯದ ರೈತರ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





