Breaking News

ಕರ್ನಾಟಕ

ಗ್ರಾಪಂ ಎರಡನೇ ಅವಧಿಯ ಅಧ್ಯಕ್ಷ ಉಪಾಧ್ಯಕ್ಷರಿಗೆ ಸನ್ಮಾನ

ಕುಂದಗೋಳ : ಗುಡೇನಕಟ್ಟಿ ಗ್ರಾಮ ಪಂಚಾಯಿತಿಯ ಎರಡನೇ ಅವಧಿಗೆ ಅಧ್ಯಕ್ಷರಾಗಿ ಆಯ್ಕೆಯಾದ ಶಾಂತವ್ವ ಗು ಹೊಸಳ್ಳಿ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ತಾಯವ್ವ ವಿ ಕೆಂಚನ್ನವರ ಇವರನ್ನು ಸಮಸ್ತ ಗುಡೆನಕಟ್ಟಿ ಗ್ರಾಮ ಪಂಚಾಯಿತಿ ಸರ್ವ ಸದಸ್ಯರುಗಳು ಹಾಗೂ ಗ್ರಾಮ ಪಂಚಾಯಿತಿ ಆಡಳಿತ ಸಿಬ್ಬಂದಿ ಸನ್ಮಾನ ಮಾಡಿ ಗೌರವಿಸಿದರು.

Read More »

ಸಿದ್ಧವಾದ 12 ಲಕ್ಷ ರೂಪಾಯಿ ಮೌಲ್ಯದ ಅಮೆರಿಕನ್ ಡೈಮಂಡ್ ಗಣಪತಿ

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಕಲಾವಿದ ಮಹೇಶ ಮುರಗೋಡ ಹಾಗೂ ತಂಡದವರು ನಿರ್ಮಿಸಿದ 12 ಲಕ್ಷ ರೂಪಾಯಿಗಳ ಮೌಲ್ಯದ ಅಮೆರಿಕನ್ ಡೈಮಂಡ್ ಹರಳುಗಳಿಂದ ನಿರ್ಮಿಸಿದ ಗಣಪತಿ ಮೂರ್ತಿ ಹುಬ್ಬಳ್ಳಿಯಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಿದೆ. ಹೌದು.. ಬಮ್ಮಾಪುರ ನಿವಾಸಿ ಮೂರ್ತಿ ಕಲಾವಿದ ಮಹೇಶ ಮುರಗೋಡ ಹಾಗೂ ಅವರ ತಂಡದವರು ನಿರ್ಮಿಸಿರುವ ಗಣೇಶ ಮೂರ್ತಿಯು ಬೆಂಗಳೂರ ರಾಜಾಜಿನಗರ 2ನೇ ಹಂತ ಮಿಲ್ಕ ಕಾಲೋನಿ 5ನೇ ಮುಖ್ಯ ರಸ್ತೆಯಲ್ಲಿ ಸ್ವಸ್ತಿಕ ಯುವಕರ ಸಂಘದಿಂದ ಸೆಪ್ಟೆಂಬರ್ 18 …

Read More »

ಇಂಜಿನಿಯರ್ಸ್ ದಿನಾಚರಣೆ ಧಾರವಾಡ ನಗರದಲ್ಲಿ ಭವ್ಯ ಮೆರವಣಿಗೆ

ಸರ್ ಎಂ ವಿಶ್ವೇಶ್ವರಯ್ಯನವರ ಜನ್ಮದಿನದ ಅಂಗವಾಗಿ ಇಂಜಿನಿಯರ್‌ಗಳ ದಿನಾಚರಣೆಯಲ್ಲಿ ವಿಶ್ವೇಶ್ವರಯ್ಯನವರ ಭಾವಚಿತ್ರದ ಮೆರವಣಿಯನ್ನು ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಇಂಜಿನಿಯರ್ಸ್, ಧಾರವಾಡ ಲೋಕಲ್ ಸೆಂಟರನವರು ಧಾರವಾಡದ ಪ್ರಮುಖ ರಸ್ತೆಗಳ ಮೂಲಕ ಕಲಾಭವನದಿಂದ ಡಿಸಿ ಕಂಪೌಂಡಿನಲ್ಲಿರುವ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರ್ಸ್ ಆವರಣದಲ್ಲಿಯ ಸರ್ ಎಂ ವಿಶ್ವೇಶ್ವರಯ್ಯ ಅವರ ಮೂರ್ತಿಯವರೆಗೆ ಭವ್ಯ ಮೇರವಣಿಗೆ ಜರುಗಿತು. ವಾಲ್ಮಿಯ ಸೂಪರಿಂಟೆಂಡೆಂಟ್ ಇಂಜಿನಿಯರ .ಬಸವರಾಜ ಬಂಡಿವಡ್ಡರವರು ಜಗ್ಗಲಗಿಯನ್ನು ಬಾರಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು. ಈ ಮೆರವಣಿಗೆಯಲ್ಲಿ ಜಗ್ಗಲಗಿಯ …

Read More »
Featured Video Play Icon

ಕಾನೂನು ಎಲ್ಲರಿಗೂ ಒಂದೇ ಶಾಂತಿಯುತವಾಗಿ ವರ್ತಿಸಿ: ಕಮೀಷನರ್ ರೇಣುಕಾ ಸುಕುಮಾರ ಎಚ್ಚರಿಕೆ…

ಹುಬ್ಬಳ್ಳಿ: ಶಾಂತಿಯುತವಾಗಿ ಪ್ರತಿಭಟನಾ ನಡೆಸುತ್ತಿದ್ದರು. ಆದರೇ ಧೀಡಿರ್ ಆಗಿ ರಸ್ತೆ ಬಂದ್ ಮಾಡಿದ್ದಾರೆ.‌ಪ್ರತಿಭಟನೆಯಿಂದ ಸಾರ್ವಜನಿಕರಿಗೆ ತೊಂದ್ರೆ ಆಗಿದೆ. ತಕ್ಷಣವೇ ಪ್ರತಿಭಟನಾಕಾರರನ್ನ ವಾಪಸ್ ಕಳಸಿ, ರಸ್ತೆ ಸಂಚಾರವನ್ನು ಸುಗಮಗೊಳಿಸಿದ್ದೇವೆ ಎಂದು ಪೊಲೀಸ್ ಕಮೀಷನರ್ ರೇಣುಕಾ ಸುಕುಮಾರ ಹೇಳಿದರು.ಪ್ರತಿಭಟನೆ ಸ್ಥಳಕ್ಕೆ ಆಗಮಿಸಿದ ವೇಳೆ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಮುಂದಿನ ಒಂದು ಗಂಟೆಯಲ್ಲಿ ಪಾಲಿಕೆ ಆಯುಕ್ತರು ತೀರ್ಮಾನ ತೆಗೆದುಕೊಳ್ಳುತ್ತಾರೆ. ಅಲ್ಲಿಯವರೆಗೂ ಶಾಂತಿ ಕಾಪಾಡಿ ಎಂದು ಪ್ರತಿಭಟನಾಕಾರರಿಗೆ ಹೇಳಿದ್ದೇವೆ ಎಂದರು.ಧಿಡೀರಾಗಿ ರಸ್ತೆ ತಡೆ ನಡೆಸಿದ್ದಾರೆ, …

Read More »

ಮಹಿಳೆ ಹಾಗೂ ಇಬ್ಬರು ಮಕ್ಕಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ….

ಚಾಮರಾಜನಗರ: ಮಹಿಳೆ ಹಾಗೂ ಇಬ್ಬರು ಮಕ್ಕಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೇಘಾ (24) ಮತ್ತು ಮಕ್ಕಳಾದ ಪುನ್ವಿತಾ (06) ಹಾಗೂ ಮನ್ವಿತಾ (03) ಮೃತರು.

Read More »

ಕುಡಿದ ಮತ್ತಿನಲ್ಲಿ ತುಂಬು ಗರ್ಭಿಣಿ ಹೆಂಡತಿಯ ಕೊಲೆ…

ಮೈಸೂರು: ಕುಡಿದ ಮತ್ತಿನಲ್ಲಿ ತುಂಬು ಗರ್ಭಿಣಿ ಹೆಂಡತಿಯನ್ನು ಆಕೆಯ ಪತಿಯೇ ಕೊಲೆಗೈದಿರುವ ಘಟನೆ ನಂಜನಗೂಡು ನಗರದ ಚಾಮಲಾಪುರ ಹುಂಡಿಯಲ್ಲಿ ನಡೆದಿದೆ. ಶೋಭಾ (26) ಮೃತ ಮಹಿಳೆ. ಮಂಜು ಅಲಿಯಾಸ್ ಮಂಜುನಾಥ್ (27) ಕೊಲೆ ಆರೋಪಿ. 8 ವರ್ಷಗಳ ಹಿಂದೆ ಶೋಭಾ ಮತ್ತು ಮಂಜು ಇಬ್ಬರು ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಇಬ್ಬರ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು ಎನ್ನಲಾಗಿದೆ. ಈ ದಂಪತಿಗೆ ಈಗಾಗಲೇ 5 ವರ್ಷದ ಗಂಡು ಮಗುವಿದೆ. ಮತ್ತೊಂದು ಮಗುವಿಗೆ …

Read More »

ಸರ್ಕಾರದ ಆಡಳಿತ ಸುಧಾರಣೆ ಕಂದಾಯ ಇಲಾಖೆಯ ಮೂಲಕವೇ ಆಗಬೇಕು….

ಧಾರವಾಡ: ಅಧಿಕಾರಿಗಳು ಒಳ್ಳೆಯ ಕೆಲಸ ಮಾಡಿದರೆ, ಜನಪರ ಕೆಲಸ ಮಾಡಿದರೆ ಅವರಿಗೆ ಪ್ರಶಸ್ತಿ ನೀಡಲಾಗುವುದು. ಅಲ್ಲದೇ ತಪ್ಪು ಮಾಡಿದರೆ ಅಮಾನತು ಮಾತ್ರವಲ್ಲ. ಕ್ರಿಮಿನಲ್ ಪ್ರಕರಣವನ್ನು ದಾಖಲಿಸುತ್ತೇವೆ ಎಂದು ಅಧಿಕಾರಿಗಳಿಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಎಚ್ಚರಿಕೆ ನೀಡಿದರು. ನಗರದಲ್ಲಿ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ಆಡಳಿತ ಸುಧಾರಣೆ ಕಂದಾಯ ಇಲಾಖೆಯ ಮೂಲಕವೇ ಆಗಬೇಕು. ಹೀಗಾಗಿ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡಬೇಕು. ಒಳ್ಳೆ …

Read More »

ಸುಧಾಕರ್ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಬೇಕು: ಗೋವಿಂದ ಕಾರಜೋಳ.

ಬೆಂಗಳೂರು: ಯಲಹಂಕದಲ್ಲಿ ದಲಿತ ಮಹಿಳೆ ಮೇಲೆ ದೌರ್ಜನ್ಯ ಮಾಡಿದ ಸುಧಾಕರ್ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಬೇಕು ಎಂದು ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಒತ್ತಾಯಿಸಿದರು. ಯಲಹಂಕದಲ್ಲಿ ಸಚಿವರಿಂದ ದೌರ್ಜನ್ಯಕ್ಕೊಳಗಾದ ದಲಿತ ಮಹಿಳೆ ಮುನಿಯಮ್ಮರನ್ನು ಬಿಜೆಪಿ ನಿಯೋಗವು ಇಂದು ಭೇಟಿ ಮಾಡಿತು. ಕುಟುಂಬದ ಅಹವಾಲು ಆಲಿಸಿತು. ನಂತರ ಮಾತನಾಡಿದ ಮಾಜಿ ಡಿಸಿಎಂ ಕಾರಜೋಳ, ದಲಿತರ ಆಸ್ತಿ ಕಬಳಿಕೆಗೆ ಸಚಿವರೇ ಮುಂದಾಗಿರುವುದು ನಾಚಿಕೆಗೇಡಿನ ಸಂಗತಿ. ಸ್ವಾತಂತ್ರ್ಯೋತ್ತರದ 75 ವರ್ಷಗಳ ಆಡಳಿತದಲ್ಲಿ …

Read More »

ನೈರುತ್ಯ ರೈಲ್ವೆಯು ಏಪ್ರಿಲ್ – ಆಗಸ್ಟ್ 2023ರ ಅವಧಿಯಲ್ಲಿ ಸರಕು ಸಾಗಣೆಯಲ್ಲಿ ಹೆಚ್ಚು ಆದಾಯ ಗಳಿಸಿ ದಾಖಲೆ…

ಹುಬ್ಬಳ್ಳಿ: ನೈರುತ್ಯ ರೈಲ್ವೆಯು ಏಪ್ರಿಲ್ – ಆಗಸ್ಟ್ 2023ರ ಅವಧಿಯಲ್ಲಿ ಸರಕು ಸಾಗಣೆಯಲ್ಲಿ ಹೆಚ್ಚು ಆದಾಯ ಗಳಿಸಿ ದಾಖಲೆ ಮಾಡಿದೆ.‌ ನೈರುತ್ಯ ರೈಲ್ವೆಯು 19.27 ದಶಲಕ್ಷ ಟನ್ ಸರಕುಗಳನ್ನು ಲೋಡ್ ಮಾಡಿ ರೂ. 1,909.77 ಕೋಟಿ ಆದಾಯ ಗಳಿಸಿದೆ. ಇದಲ್ಲದೆ 8.27 ಮಿಲಿಯನ್ ಟನ್ ಕಬ್ಬಿಣದ ಅದಿರನ್ನು ಲೋಡ್ ಮಾಡಿದೆ. ಇದು ಕಳೆದ ವರ್ಷಕ್ಕೆ ಹೋಲಿಸಿದರೆ ಸುಮಾರು ಶೇ. 37.6 ರಷ್ಟು ಹೆಚ್ಚಾಗಿದೆ. ಇದರ ಜೊತೆಗೆ ನ 270 ಆಟೋಮೊಬೈಲ್ …

Read More »

ಪರೀಕ್ಷೆ ಮುಗಿದ 48 ಗಂಟೆಗಳ ಒಳಗೆ ಫಲಿತಾಂಶ ಪ್ರಕಟಿಸಿ ಶೈಕ್ಷಣಿಕ ದಾಖಲೆ ಸೃಷ್ಟಿ….

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ ಬಿಸಿಎ (ಬ್ಯಾಚಲರ್ ಆಫ್ ಕಂಪ್ಯೂಟರ್ ಅಪ್ಲಿಕೇಶನ್ಸ್) ಪದವಿಯ 5 ಮತ್ತು 6ನೇ ಸೆಮಿಸ್ಟರ್​ಗಳ ಪರೀಕ್ಷೆ ಮುಗಿದ 48 ಗಂಟೆಗಳ ಒಳಗೆ ಫಲಿತಾಂಶ ಪ್ರಕಟಿಸಿ ಶೈಕ್ಷಣಿಕ ದಾಖಲೆ ಸೃಷ್ಟಿಸಿದೆ. ಶೀಘ್ರ ಮೌಲ್ಯಮಾಪನಕ್ಕೆ ಹೆಸರಾಗಿರುವ ಕುವೆಂಪು ವಿವಿಯು ಈ ಹಿಂದೆಯೂ ಶೀಘ್ರವಾಗಿ ಫಲಿತಾಂಶ ನೀಡಿ ವಿದ್ಯಾರ್ಥಿಗಳಿಗೆ ನೆರವಾಗಿತ್ತು. ಪ್ರಸ್ತುತ ನಾನ್ – ಎನ್​ಇಪಿ ಬ್ಯಾಚ್​ನ ಬಿಸಿಎ ಪದವಿಯ 5 ಮತ್ತು 6ನೇ ಸೆಮಿಸ್ಟರ್​ ಪರೀಕ್ಷೆಗಳ ಫಲಿತಾಂಶವನ್ನು ಪರೀಕ್ಷೆ ಮುಕ್ತಾಯಗೊಂಡ …

Read More »