Shaikh BigTv
September 14, 2023
Breaking News, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿಯ ಮಿನಿವಿಧಾನಸೌಧಕ್ಕೆ ಭೇಟಿ ನೀಡಿದ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಹುಬ್ಬಳ್ಳಿಯ ಗ್ರಾಮೀಣ ಹಾಗೂ ನಗರ ತಹಶಿಲ್ದಾರರರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.ಹೌದು.. ಧಾರವಾಡ ಜಿಲ್ಲೆಯ ಪ್ರವಾಸ ಕೈಗೊಂಡಿರುವ ಸಚಿವರು ತಾಲೂಕಿನ ಆಡಳಿತ ಹಾಗೂ ಅಧಿಕಾರಿಗಳ ಕಾರ್ಯವೈಖರಿ ಪರಿಶೀಲನೆ ನಡೆಸಲು ಮುಂದಾಗಿದ್ದು, ಕಲಘಟಗಿ ತಾಲೂಕಿನ ಸರ್ಕಾರಿ ಕಚೇರಿಯ ಭೇಟಿಯ ಬಳಿಕ ಹುಬ್ಬಳ್ಳಿಯ ಮಿನಿವಿಧಾನಸೌಧಕ್ಕೆ ಆಗಮಿಸಿ ತಾಲೂಕಾಡಳಿತದ ಕಾರ್ಯವೈಖರಿ ಬಗ್ಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.ಇನ್ನೂ ತಹಶಿಲ್ದಾರರಾದ ಕಲಗೌಡ ಪಾಟೀಲ ಹಾಗೂ ಪ್ರಕಾಶ ನಾಶಿಯವರನ್ನು …
Read More »
BigTv News
September 13, 2023
ಕರ್ನಾಟಕ, ಮೈಸೂರು, ಸುದ್ದಿ
ಮೈಸೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸಂಸದ ಪ್ರತಾಪ್ ಸಿಂಹ 3 ಲಕ್ಷ ಮತಗಳ ಅಂತರದಿಂದ ನೂರಕ್ಕೆ ನೂರರಷ್ಟು ಸೋಲುತ್ತಾರೆ. ಏನಾದರೂ ಪ್ರತಾಪ್ ಸಿಂಹ ಗೆದ್ದರೆ ನಾನು ಊರನ್ನೇ ಬಿಟ್ಟು ಬಿಡುತ್ತೇನೆ ಎಂದು ಕೆಪಿಸಿಸಿ ಮಾಧ್ಯಮ ವಕ್ತಾರ ಎಂ. ಲಕ್ಷ್ಮಣ್ ಅವರು ಪ್ರತಾಪ್ ಸಿಂಹ ಅವರಿಗೆ ನೇರ ಹಾಕಿದ್ದಾರೆ. ಇಂದು ಮೈಸೂರಿನ ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಸಂಸದ ಪ್ರತಾಪ್ ಸಿಂಹ ಸೋಲಿನ ಭೀತಿಯಲ್ಲಿದ್ದಾರೆ. ಇದೇ ಕಾರಣದಿಂದ ಕಂಡ …
Read More »
BigTv News
September 13, 2023
ಉಡುಪಿ, ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು/ಉಡುಪಿ: ಉದ್ಯಮಿಯೊಬ್ಬರಿಗೆ ವಂಚಿಸಿರುವ ಆರೋಪದ ಹಿನ್ನೆಲೆಯಲ್ಲಿ ಹಿಂದೂಪರ, ಹಾಗು ಸಾಮಾಜಿಕ ಕಾರ್ಯಕರ್ತೆ ಚೈತ್ರಾ ಕುಂದಾಪುರ ಸೇರಿ 6 ಮಂದಿ ಆರೋಪಿಗಳನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮೋಹನ್ ಕುಮಾರ್ ಅಲಿಯಾಸ್ ಗಗನ್ ಕಡೂರು, ರಮೇಶ್ (ವಿಶ್ವನಾಥ್ ಪಾತ್ರಧಾರಿ), ಧನರಾಜ್, ಶ್ರೀಕಾಂತ್ ಹಾಗೂ ಪ್ರಜ್ವಲ್ ಇನ್ನುಳಿದ ಬಂಧಿತರು. ವಂಚನೆಗೊಳಗಾದ ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬವರು ಬಂಡೆಪಾಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ಸಿಸಿಬಿಗೆ ವರ್ಗಾವಣೆಯಾಗಿತ್ತು. 3 ಪ್ರತ್ಯೇಕ ತಂಡ …
Read More »
BigTv News
September 13, 2023
ಕರ್ನಾಟಕ, ದಕ್ಷಿಣ ಕನ್ನಡ, ಸುದ್ದಿ, ಸುಳ್ಯ
ಸುಳ್ಯ (ದಕ್ಷಿಣ ಕನ್ನಡ) : ಕೋಝಿಕ್ಕೋಡ್ನಲ್ಲಿ ಇಬ್ಬರು ಶಂಕಿತ ನಿಫಾ ವೈರಸ್‌ನಿಂದ ಮೃತಪಟ್ಟಿದ್ದಾರೆ ಎಂದು ಕೇರಳದ ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಕೇರಳ ರಾಜ್ಯಕ್ಕೆ ಹೊಂದಿಕೊಂಡಿರುವ ಸುಳ್ಯ ಸೇರಿದಂತೆ ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಕರ್ನಾಟಕ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಈಗಾಗಲೇ ನಿಫಾ ವೈರಸ್ ಪತ್ತೆಯಾಗಿ ಇಬ್ಬರು ಮೃತಪಟ್ಟ ಕೇರಳದ ಕೊಝಿಕ್ಕೋಡ್ ಜಿಲ್ಲೆಯ ಮರುದ್ವಾಂಕರ, ಆಯಂಚೇರಿ, ಕಾವಿಲಂಪ್ಪಾರ, ವಿಲ್ಯಾಂಪಳ್ಳಿ, ಕುಟ್ಯಾಡಿ, ಮಂಗಲಾಡ್ ಸೇರಿದಂತೆ ಹಲವಾರು …
Read More »
BigTv News
September 13, 2023
ಕರ್ನಾಟಕ, ಶಿವಮೊಗ್ಗ, ಸುದ್ದಿ
ಶಿವಮೊಗ್ಗ: ತನ್ನ ಅಪ್ರಾಪ್ತ ವಯಸ್ಸಿನ ಮಗನ ಕೈಗೆ ಓಮ್ನಿ ಕಾರನ್ನು ಚಲಾಯಿಸಲು ನೀಡಿದ ತಂದೆಗೆ ಶಿವಮೊಗ್ಗ ಕೋರ್ಟ್ 25 ಸಾವಿರ ರೂಪಾಯಿ ದಂಡ ವಿಧಿಸಿದೆ. ಸೆಪ್ಟಂಬರ್ 9 ರಂದು ಶಿವಮೊಗ್ಗ ಕರ್ನಾಟಕ ಸಂಘದ ಬಳಿ ಸಂಚಾರಿ ಪೊಲೀಸ್ ಠಾಣೆಯ ಪಿಸಿಐ ಹೆಚ್ ಎಸ್ ಶಿವಣ್ಣನವರ್ ವಾಹನ ತಪಾಸಣೆ ನಡೆಸುವಾಗ ಓಮ್ನಿ ಕಾರನ್ನು ತಪಾಸಣೆ ನಡೆಸಿದಾಗ ವಾಹನವನ್ನು 17 ವರ್ಷದ ಬಾಲಕ ಚಲಾಯಿಸುತ್ತಿರುವುದು ಕಂಡು ಬರುತ್ತದೆ. ನಂತರ ವಾಹನದ ದಾಖಲಾತಿ ಪರಿಶೀಲಿಸಿದಾಗ …
Read More »
BigTv News
September 13, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ವಿಧಾನಸೌಧದಲ್ಲಿ ಇಂದು ಕರೆಯಲಾಗಿರುವ ಸರ್ವಪಕ್ಷ ಸಭೆಗೆ ಬಿಜೆಪಿ ಹಿರಿಯ ನಾಯಕ, ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಗೈರಿನ ಬೆನ್ನಲ್ಲೇ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೂಡ ಸಭೆಗೆ ಹಾಜರಾಗುತ್ತಿಲ್ಲ ಎನ್ನುವ ಸಂದೇಶ ಕಳಿಸಿದ್ದಾರೆ. ಹಾಗಾಗಿ ಬಿಜೆಪಿಯ ಪ್ರಮುಖ ನಾಯಕರೇ ಸರ್ವಪಕ್ಷ ಸಭೆಗೆ ಗೈರಾಗುತ್ತಿದ್ದಾರೆ. ಪಕ್ಷದ ಕೇಂದ್ರ ಚುನಾವಣಾ ಸಮಿತಿ ಸಭೆ ನಿಮಿತ್ತ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಸರ್ವ ಪಕ್ಷ ಸಭೆಗೆ ಆಗಮಿಸುತ್ತಿಲ್ಲ ಎಂದು ತಿಳಿಸಿದ …
Read More »
BigTv News
September 12, 2023
ಕರ್ನಾಟಕ, ಚಿಕ್ಕಮಗಳೂರು, ಸುದ್ದಿ
ಚಿಕ್ಕಮಗಳೂರು: ಕೆಎಸ್ಆರ್ಟಿಸಿ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿ 9 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಬೇಲೇನಹಳ್ಳಿ ಗ್ರಾಮದ ಬಳಿ ಇಂದು ಬೆಳಗಿನ ಜಾವ ಈ ಘಟನೆ ನಡೆದಿದೆ. ತರಿಕೆರೆಯಿಂದ ಭದ್ರಾವತಿ ಕಡೆಗೆ ಬರುತ್ತಿದ್ದ ಕಾರಿಗೆ ಬೆಂಗಳೂರು ಕಡೆ ಹೊರಟಿದ್ದ ಸಾರಿಗೆ ಬಸ್ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ 9 ಜನರಿಗೆ ಗಂಭೀರ ಗಾಯಗಳಾಗಿವೆ. ಇದರಿಂದ …
Read More »
BigTv News
September 12, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ವಿಚಾರ ಖಚಿತವಾದ ಬೆನ್ನಲ್ಲೇ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿವೆ. ಇಂದು ರಾಜ್ಯ ಪದಾಧಿಕಾರಿಗಳ ಸಭೆ ಕರೆಯಲಾಗಿದೆ. ಪಕ್ಷದ ಮುಂದಿನ ಸಂಘಟನಾತ್ಮಕ ಚಟುವಟಿಕೆ, ಲೋಕಸಭಾ ಚುನಾವಣೆಗೆ ಸಿದ್ಧತೆ ಮತ್ತು ಜೆಡಿಎಸ್‌ನೊಂದಿಗಿನ ಹೊಂದಾಣಿಕೆಯ ನಂತರದ ಬೆಳವಣಿಗೆಗಳ ಕುರಿತು ಮಹತ್ವದ ಚರ್ಚೆ ನಡೆಸಲಾಗುತ್ತದೆ. ಇಂದು ಬೆಳಿಗ್ಗೆ 10.30ಕ್ಕೆ ಸಭೆ ಆಯೋಜಿಸಲಾಗಿದೆ. ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ಬಿಜೆಪಿ ಹಿರಿಯ ನಾಯಕ ಹಾಗೂ …
Read More »
BigTv News
September 12, 2023
ಕರ್ನಾಟಕ, ವಿಜಯನಗರ, ಸುದ್ದಿ
ವಿಜಯನಗರ: ಥಾಯ್ಲೆಂಡ್ ದೇಶದ ಹವಾಡ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆದ ಯೋಗ ಚಾಂಪಿಯನ್‌ಶಿಪ್‌ನಲ್ಲಿ ಭಾರತ ದೇಶವನ್ನು ಪ್ರತಿನಿಧಿಸಿದ ಹಂಪಿಯ ಬಾಲ ಯೋಗಪಟುಗಳು ಚಿನ್ನ, ಬೆಳ್ಳಿ ಪದಕ ಗೆದ್ದಿದ್ದಾರೆ. ನಾಗಮ್ಮ ಮತ್ತು ಗಣೇಶ್ ಎಂಬಿಬ್ಬರು 16-18 ವರ್ಷದೊಳಗಿನ ಯೋಗ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಮಹಿಳಾ ವಿಭಾಗದಲ್ಲಿ ನಾಗಮ್ಮ ಮೊದಲ ಸ್ಥಾನ ಪಡೆದು ಚಿನ್ನ ಗೆದ್ದರು. ಪುರುಷರ ವಿಭಾಗದಲ್ಲಿ ಗಣೇಶ್ ದ್ವಿತೀಯ ಸ್ಥಾನ ಗಳಿಸಿ ಬೆಳ್ಳಿ ಪದಕಕ್ಕೆ ಕೊರಳೊಡ್ಡಿದರು. ಈ ಇಬ್ಬರು ಬಾಲ ಪ್ರತಿಭೆಗಳು ಹಂಪಿಯ …
Read More »
BigTv News
September 11, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಕರ್ನಾಟಕ ಸರ್ಕಾರದ ಶಕ್ತಿ ಯೋಜನೆ ವಿರುದ್ಧ ಅಸಮಾಧಾನ, ಖಾಸಗಿ ವಾಹನ ಚಾಲಕರಿಗೆ ಮಾಸಿಕ 10 ಸಾವಿರ ರೂಪಾಯಿ ಧನಸಹಾಯ, ರಸ್ತೆ ತೆರಿಗೆ ರದ್ದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟವು ಬೆಂಗಳೂರಿನಲ್ಲಿ ಇಂದು ಖಾಸಗಿ ಸಾರಿಗೆ ಬಂದ್‌ಗೆ ಕರೆ ನೀಡಿದೆ. ಭಾನುವಾರ ಮಧ್ಯರಾತ್ರಿಯಿಂದ ಸೋಮವಾರ ರಾತ್ರಿ 12ರವರೆಗೆ ಖಾಸಗಿ ವಾಹನಗಳ ಸಂಚಾರ ಸ್ಥಗಿತಗೊಳಿಸಿ ಬಂದ್‌ಗೆ ಒಕ್ಕೂಟ ನಿರ್ಧರಿಸಿದೆ. ಇದರಿಂದ ಸಾರ್ವಜನಿಕರ ಸಂಚಾರಕ್ಕೆ …
Read More »