BigTv News
September 11, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ನೆದರ್ಲ್ಯಾಂಡ್ಸ್ ಪ್ರಧಾನಿ ಮಾರ್ಕ್ ರುಟ್ಟೆ ಇಂದು ಬೆಂಗಳೂರಿಗೆ ಭೇಟಿ ನೀಡಿದ್ದು, ಹೂಡಿಕೆಗಳ ಸಂಬಂಧ ರಾಜ್ಯ ಸರ್ಕಾರ, ಉದ್ಯಮಿಗಳ ಜೊತೆ ಸಭೆ ನಡೆಸಲಿದ್ದಾರೆ. ವಾರ್ಷಿಕ ಜಿ20 ಶೃಂಗಸಭೆಗೆ ಭಾರತಕ್ಕೆ ಆಗಮಿಸಿರುವ ನೆದರ್ಲ್ಯಾಂಡ್ಸ್ ಪ್ರಧಾನ ಮಂತ್ರಿ ಮಾರ್ಕ್ ರುಟ್ಟೆ ಇಂದು ದೇಶದ ಸಿಲಿಕಾನ್ ಸಿಟಿ ಬೆಂಗಳೂರಿಗೆ ಭೇಟಿ ನೀಡಿದ್ದಾರೆ. 120 ಮಂದಿ ಉದ್ಯಮಿಗಳ ದೊಡ್ಡ ನಿಯೋಗದೊಂದಿಗೆ ಅವರು ಬೆಂಗಳೂರಿಗೆ ಭೇಟಿ ನೀಡಿದ್ದಾರೆ. ಅವರಿಗೆ ನೆದರ್‌ಲ್ಯಾಂಡ್ಸ್ ನ ವಿದೇಶಿ ವ್ಯಾಪಾರ ಮತ್ತು ಅಭಿವೃದ್ಧಿ …
Read More »
BigTv News
September 11, 2023
ಕರ್ನಾಟಕ, ದಕ್ಷಿಣ ಕನ್ನಡ, ಮಂಗಳೂರು, ಸುದ್ದಿ
ಮಂಗಳೂರು (ದಕ್ಷಿಣ ಕನ್ನಡ): ನಗರದ ಪ್ರತಿಷ್ಠಿತ ಮೋತಿ ಮಹಲ್ ಹೋಟೆಲ್‌ನ ಈಜುಕೊಳದಲ್ಲಿ ಬ್ಯಾಂಕ್ ಮ್ಯಾನೇಜರ್ವೊಬ್ಬರ ಮೃತದೇಹ ಪತ್ತೆಯಾಗಿದೆ. ಕೇರಳದ ತಿರುವನಂತಪುರಂ ನಿವಾಸಿ ಗೋಪು ಆರ್.ನಾಯರ್ ಮೃತಪಟ್ಟವರು. ಇವರು ಕೇರಳದಲ್ಲಿ ಯೂನಿಯನ್ ಬ್ಯಾಂಕ್ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದರು. ಗೋಪು ಆರ್.ನಾಯರ್ ಅವರು ಸ್ಮಿಮ್ಮಿಂಗ್ ಪೂಲ್ನಲ್ಲಿ ಮುಳುಗಿ ಸಾವನ್ನಪ್ಪಿರುವ ಕುರಿತು ಅನುಮಾನ ವ್ಯಕ್ತವಾಗಿದೆ. ನಿನ್ನೆ (ಭಾನುವಾರ) ಮಂಗಳೂರಿಗೆ ಬಂದು ಹೋಟೆಲ್ನಲ್ಲಿ ಉಳಿದುಕೊಂಡಿದ್ದರು. ಸಂಜೆ 4 ಗಂಟೆಯ ಸುಮಾರಿಗೆ ಕೊಠಡಿಯಿಂದ ಬ್ಯಾಂಕ್ ಅಧಿಕಾರಿ ಹೊರಹೋಗಿದ್ದರು. …
Read More »
BigTv News
September 11, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳ ‘ಅಡ್ಡ ಪರಿಣಾಮ’ದ ತೀವ್ರತೆ ಜನರಿಗೆ ತಟ್ಟುತ್ತಿದೆ. ಸರ್ಕಾರಿ ಸೌಲಭ್ಯಗಳ ಹಂಚಿಕೆಯಲ್ಲಿನ ಅಸಮಾನತೆ, ಪಕ್ಷಪಾತವು ಅರಾಜಕತೆ ಸೃಷ್ಟಿಸಿದೆ. ಅವೈಜ್ಞಾನಿಕ, ಅರೆಬೆಂದ ‘ಶಕ್ತಿ’ ಯೋಜನೆಯ ಫಲವಾಗಿ ಇವತ್ತು ಖಾಸಗಿ ಸಂಚಾರ ವ್ಯವಸ್ಥೆ ಬುಡ ಮೇಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಕುರಿತು X ಖಾತೆಯಲ್ಲಿ (ಹಿಂದಿನ ಟ್ವಿಟ್ಟರ್) ಸರಣಿಯಾಗಿ ಸಮಸ್ಯೆಗಳನ್ನು ಬರೆದಿರುವ ಅವರು, ಸಾಲಸೋಲ ಮಾಡಿ ಕ್ಯಾಬ್, ಆಟೋ ಓಡಿಸಿಕೊಂಡು …
Read More »
BigTv News
September 11, 2023
ಕರ್ನಾಟಕ, ಸುದ್ದಿ, ಹಾವೇರಿ
ಹಾವೇರಿ: ಜಿಲ್ಲೆಯ ಬ್ಯಾಡಗಿ ತಾಲೂಕಿನ ಕಾಟೇನಹಳ್ಳಿ ಗ್ರಾಮದಲ್ಲಿ ಗಣೇಶ ಚತುರ್ಥಿ, ದೀಪಾವಳಿ ಹಬ್ಬ ಬಂದರೆ ಸಾಕು ಸಂಭ್ರಮ ಮನೆ ಮಾಡಿರುತ್ತಿತ್ತು. ಆದರೆ ಈ ವರ್ಷದ ಸಂಭ್ರಮಕ್ಕೆ ಪಟಾಕಿ ದುರಂತದ ಕರಿಛಾಯೆ ಆವರಿಸಿದೆ. ಗ್ರಾಮದ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ ಸ್ಥಾಪಿಸಿ ಖುಷಿಪಡುತ್ತಿದ್ದ ಗ್ರಾಮದ ಮೂರು ಜೀವಗಳು ಪಟಾಕಿ ದುರಂತದಲ್ಲಿ ಬಲಿಯಾಗಿವೆ. ಕಾಟೇನಹಳ್ಳಿ ಗ್ರಾಮದ ಸ್ನೇಹಿತರಾಗಿದ್ದ ಶಿವಾನಂದ ಅಕ್ಕಿ(22), ದ್ಯಾಮಪ್ಪ ಓಲೇಕಾರ್ (25) ಹಾಗೂ ರಮೇಶ ಬಾರ್ಕಿ(26) ಪಟಾಕಿಯಲ್ಲಿ ದುರಂತದಲ್ಲಿ ಸಾವಿಗೀಡಾದವರು. …
Read More »
BigTv News
September 11, 2023
ಕರ್ನಾಟಕ, ಮೈಸೂರು, ಸುದ್ದಿ
ಮೈಸೂರು: ನನ್ನ ಇಡೀ ರಾಜಕಾರಣ ಕೋಮುವಾದಿ ಪಕ್ಷಗಳ ವಿರುದ್ಧವೇ ನಡೆದಿದೆ. ಹೀಗಿರುವಾಗ ನಾನು ಬಿಜೆಪಿಗೆ ಹೋಗುತ್ತೇನೆಂದರೆ ಯಾರಾದರೂ ನಂಬುತ್ತಾರೆಯೇ?. ಅದು ನಂಬುವ ಮಾತೇ? ನಾನು ಬಿಜೆಪಿಗೆ ಸೇರಲು ಹೋಗಿದ್ದೆ ಎಂಬ ಕುಮಾರಸ್ವಾಮಿ ಹೇಳಿಕೆ ನಗೆಪಾಟಲಿನದು. ನನ್ನ ಹೆಣವೂ ಬಿಜೆಪಿಗೆ ಹೋಗುವುದಿಲ್ಲ ಎಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನ ಆದಿಚುಂಚನಗಿರಿ ಶಾಖಾಮಠದ ಕಾರ್ಯಕ್ರಮದಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಈ ವೇಳೆ ಮಾಧ್ಯಮಗಳ …
Read More »
BigTv News
September 11, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ರಾಜ್ಯಾದ್ಯಂತ ಕಳೆದ ಕೆಲವು ದಿನಗಳ ಅವಧಿಯಲ್ಲಿ ಸುಮಾರು 7 ಸಾವಿರಕ್ಕೂ ಅಧಿಕ ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ. ಈ ಸಂಬಂಧ ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇದರಲ್ಲಿ 4 ಸಾವಿರಕ್ಕೂ ಅಧಿಕ ಪ್ರಕರಣಗಳು ಬೆಂಗಳೂರು ನಗರವೊಂದರಲ್ಲೇ ಕಂಡುಬಂದಿದೆ. ಡೆಂಗ್ಯೂ ಕ್ಷಿಪ್ರಗತಿಯಲ್ಲಿ ವ್ಯಾಪಿಸುತ್ತಿರುವ ಬಗ್ಗೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಮಾತನಾಡಿ, ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ ಎಂದು …
Read More »
BigTv News
September 9, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು : ದೇಶದ ಆಸ್ತಿ ಮತ್ತು ಉತ್ಪಾದನೆ ಕೆಲವೇ ವ್ಯಕ್ತಿಗಳ ಕೈಯಲ್ಲಿ ಸಂಗ್ರಹ ಆಗುತ್ತಿರುವುದರಿಂದ ಇನ್ನೂ ಸಾಮಾಜಿಕ, ಆರ್ಥಿಕ ಅಸಮಾನತೆ ಮುಂದುವರೆಯುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕಮಲಾ ಹಂಪನಾ ಸಾಹಿತ್ಯ ವೇದಿಕೆ ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ‘ಬೆಳಕು ಬಿತ್ತಿದವರು’, ‘ಪ್ರಾಕೃತಾ ಕಥಾ ಸಾಹಿತ್ಯ’ ಮತ್ತು ‘ದ ಜರ್ನಿ ಆಫ್ ಲೈಫ್’ ಕೃತಿಗಳನ್ನು ಬಿಡುಗಡೆ ಮಾಡಿ ಮಾತನಾಡಿದ ಸಿಎಂ, ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ದೇಶಕ್ಕೆ …
Read More »
BigTv News
September 9, 2023
ಕರ್ನಾಟಕ, ಧಾರವಾಡ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಧಾರವಾಡ: ಇಂದಿನಿಂದ ನಾಲ್ಕು ದಿನಗಳ ಕಾಲ ನಡೆಯುವ ಕೃಷಿ ಮೇಳವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದ್ದಾರೆ. ಕೃಷಿ ವಿಶ್ವ ವಿದ್ಯಾಲಯದ ರೈತ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ಆಯೋಜಿಸಿರುವ ಫಲಪುಷ್ಪ ಪ್ರದರ್ಶನ ಹಾಗೂ ವಿಸ್ಮಯಕಾರಿ ಕೀಟ ಪ್ರಪಂಚ ಸೇರಿದಂತೆ ಹಲವು ಮೇಳಗಳನ್ನು ಸಿಎಂ ಉದ್ಘಾಟಿಸಿದರು.ಬಳಿಕ ಹಲವು ಬಗೆಯ ಸಸ್ಯಗಳನ್ನು ಹಾಗೂ ವಿವಿಧ ಹೂವಿನ ಅಲಂಕಾರ ಸಿಎಂ ಸಿದ್ದರಾಮಯ್ಯ ವೀಕ್ಷಣೆ ಮಾಡಿದರು. ಸಿಎಂಗೆ ಸಚಿವ ಸಂತೋಷ್ ಲಾಡ್ ಹಾಗೂ ಕೃಷಿ ಸಚಿವ ಚಲುವರಾಯಸ್ವಾಮಿ ಸಾಥ್ ನೀಡಿದರು. …
Read More »
BigTv News
September 9, 2023
ಕರ್ನಾಟಕ, ಮಂಡ್ಯ, ಸುದ್ದಿ
ಮಂಡ್ಯ: ಕೃಷ್ಣರಾಜಸಾಗರ ಜಲಾಶಯದಿಂದ ತಮಿಳುನಾಡಿಗೆ ಹರಿಸುತ್ತಿದ್ದ ನೀರನ್ನು ಸ್ಥಗಿತ ಮಾಡಿರುವ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ನಡೆಸುತ್ತಿದ್ದ ಪ್ರತಿಭಟನಾ ಧರಣಿಯನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆ. ನಗರದ ಸರ್ ಎಂ ವಿ ಪ್ರತಿಮೆ ಎದುರು ಕಳೆದ 9 ದಿನದಿಂದ ನಡಸುತ್ತಿದ್ದ ಪ್ರತಿಭಟನೆಯನ್ನು ವಾಪಸ್ ಪಡೆಯಲಾಗಿದೆ ಎಂದು ರೈತ ಹಿತ ರಕ್ಷಣಾ ಸಮಿತಿ ಘೋಷಿಸಿದೆ. ಕಾವೇರಿ ಕೊಳ್ಳದ ಜಲಾಶಯಗಳಿಂದ ನಿರಂತರವಾಗಿ ನೀರು ಹರಿಸುತ್ತಿದ್ದ ಸರ್ಕಾರದ ವಿರುದ್ಧ ಪ್ರತಿಭಟನಾ ಧರಣಿ ನಡೆಸುತ್ತ …
Read More »
BigTv News
September 9, 2023
ಕರ್ನಾಟಕ, ಮಂಡ್ಯ, ಸುದ್ದಿ
ಮಂಡ್ಯ: ತಮಿಳುನಾಡಿಗೆ ರಾಜ್ಯ ಸರ್ಕಾರ ಕಾವೇರಿ ನೀರನ್ನು ಹರಿಸುತ್ತಿರುವ ಕುರಿತು ರಾಜ್ಯಾದ್ಯಂತ ತೀವ್ರ ಖಂಡನೆ ವ್ಯಕ್ತವಾಗುತ್ತಿದೆ. ಮತ್ತೊಂದೆಡೆ, ಕೆಆರ್‌ಎಸ್ ಅಣೆಕಟ್ಟೆಗೆ ಬಿಜೆಪಿ ಮುಖಂಡರ ನಿಯೋಗ ಶುಕ್ರವಾರ ಭೇಟಿ ನೀಡಿ ಜಲಾಶಯ ವೀಕ್ಷಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು. ಕೆಆರ್‌ಎಸ್ ವೀಕ್ಷಣೆಗೆ ಆಗಮಿಸಿದ ಮಾಜಿ ಸಿಎಂ ನೇತೃತ್ವದ ಬಿಜೆಪಿ ನಿಯೋಗಕ್ಕೆ ಆರಂಭದಲ್ಲೇ ಪೊಲೀಸರು ಅಡ್ಡಿಪಡಿಸಿದರು. ಮುಖ್ಯ ದ್ವಾರದ ಬಳಿಯೇ ಬ್ಯಾರಿಕೇಡ್ಗಳನ್ನ ಹಾಕಿ ತಡೆಯೊಡ್ಡಿದ ಪೊಲೀಸರು ಪೂರ್ವಾನುಮತಿ ಇರುವ ಕೆಲವರಿಗಷ್ಟೇ ಡ್ಯಾಂ ವೀಕ್ಷಣೆಗೆ ಅವಕಾಶ …
Read More »