BigTv News
September 6, 2023
News, ಕರ್ನಾಟಕ, ಜಿಲ್ಲೆ, ಹುಬ್ಬಳ್ಳಿ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ ಇಂದು ತಾಲೂಕು ಆಡಳಿತಸೌಧದ ತಹಸೀಲ್ದಾರ ಕಾರ್ಯಾಲಯದ ಸಭಾಭವನದಲ್ಲಿ ತಾಲೂಕು ಆಡಳಿತದ ವತಿಯಿಂದ ಶ್ರೀ ಕೃಷ್ಣನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪಾರ್ಪಣೆ ಮಾಡುವ ಮೂಲಕ ಶ್ರೀ ಕೃಷ್ಣ ಜಯಂತಿಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಹುಬ್ಬಳ್ಳಿ ಶಹರ ತಹಸೀಲ್ದಾರರಾದ ಕಲಗೌಡ ಪಾಟೀಲ, ಹುಬ್ಬಳ್ಳಿ ಗ್ರಾಮೀಣ ತಹಸೀಲ್ದಾರರಾದ ಪ್ರಕಾಶ ನಾಶಿ, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಸಿ.ವಿ. ಕರವೀರಮಠ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ, ಸಮಾಜದ ಮುಖಂಡರು, ಸಾರ್ವಜನಿಕರು ಹಾಜರಿದ್ದರು
Read More »
BigTv News
September 5, 2023
News, ಕರ್ನಾಟಕ, ಬೆಂಗಳೂರು
90ರ ದಶಕದಲ್ಲಿ ಬೆಂಗಳೂರಿನ ರಸ್ತೆಗಳಲ್ಲಿ ಡಬಲ್ ಡೆಕ್ಕರ್ ಬಸ್ಗಳು ಅತ್ಯಂತ ಗಮನ ಸೆಲೆಯುತ್ತಿದ್ದವು. ಈ ಬಸ್ಗಳಿಗೆ ಹತ್ತಿ ಮುಂಬದಿ ಸಿಟ್ ಹಿಡಿದು ನಗರದ ಸೌಂದರ್ಯ ಸವಿಯುವುದಕ್ಕೆ ಜನ ಮುಗಿಬೀಳುತ್ತಿದ್ದರು. ಆದರೆ ಕಾಲಾಕ್ರಮೇಣ ಮರೆಯಾಗಿದ್ದ ಡಬಲ್ ಡೆಕ್ಕರ್ ಬಸ್ಗಳು ಮತ್ತೆ ನಗರದಲ್ಲಿ ರಸ್ತೆಗಿಳಿಸಲು ಬಿಎಂಟಿಸಿ ತೀರ್ಮಾನಿಸಿದೆ.ಈಗಾಗಲೇ ಟೆಂಡರ್ ಕರೆದಿದ್ದು,ಶೀಘ್ರದಲ್ಲೇ ಬಸ್ ಗಳು ರೋಡಿಗಿಳಿಯೋ ಸುಳಿವು ಸಿಕ್ಕಿದೆ.. SSĻC PU ಪರೀಕ್ಷೆ ವಿಧಾನದಲ್ಲಿ ಬದಲಾವಣೆ: ವರ್ಷಕ್ಕೆ 3 ವಾರ್ಷಿಕ ಪರೀಕ್ಷೆ ನಡೆಸಲು ನಿರ್ಧಾರ! …
Read More »
BigTv News
September 5, 2023
News, ಉಡುಪಿ, ಕರ್ನಾಟಕ, ಜಿಲ್ಲೆ, ಸುದ್ದಿ
ಉಡುಪಿ : ಉಡುಪಿ ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಲ್ಬುರ್ಗಿ ಪೊಲೀಸ್ ತರಬೇತಿ ಸಂಸ್ಥೆಯ ಪ್ರಾಂಶುಪಾಲ ಡಾ. ಅರುಣ್ ಕೆ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ನೀಡಿದೆ. ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೆ ಮಚ್ಚೀಂದ್ರ ಅವರನ್ನು ವರ್ಗಾವಣೆ ಮಾಡಲಾಗಿದೆ. ಕರಾವಳಿ ಕಾವಲು ಪೊಲೀಸ್ ಇದರ ಪೊಲೀಸ್ ವರಿಷ್ಠಾಧಿಕಾರಿ ಅಬ್ದುಲ್ ಅಹದ್ ಅವರನ್ನು ಬೆಂಗಳೂರು ಸಿಟಿ ಸೆಂಟ್ರಲ್ ಡಿವಿಜನ್ ಡಿಸಿಪಿಯಾಗಿ ವರ್ಗಾವಣೆಗೊಳಿಸಲಾಗಿದೆ. ಇವರಿಂದ ತೆರವಾದ ಸ್ಥಾನಕ್ಕೆ …
Read More »
BigTv News
September 5, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಹುಬ್ಬಳ್ಳಿ-ಧಾರವಾಡ
ನವಲಗುಂದ : ವಿಧಾನಸಭಾ ಮತಕ್ಷೇತ್ರದ ಹುಬ್ಬಳ್ಳಿ ತಾಲ್ಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ಮಳೆಯಿಂದ ಹಾನಿಗೊಳಗಾದ ಮನೆಗಳನ್ನು ಶಾಸಕ ಎನ್.ಹೆಚ್.ಕೋನರಡ್ಡಿ ವೀಕ್ಷಣೆ ಮಾಡಿದರು. ಹಲವು ದಿನದಿಂದ ಸುರಿಯುತ್ತಿರುವ ಮಳೆಗೆ ತಾಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ಅನೇಕ ಮನೆಗಳಿಗೆ ಹಾನಿಯಾಗಿದ್ದು, ಶಾಸಕ ಕೋನರಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
Read More »
BigTv News
September 5, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಹುಬ್ಬಳ್ಳಿ-ಧಾರವಾಡ
ನವಲಗುಂದ: ಸಾಲ ಭಾದೆ ತಾಳಲಾರದೇ ಯುವ ರೈತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಅಮರಗೋಳ ಗ್ರಾಮದಲ್ಲಿ ನಡೆದಿದೆ. ತಾಲೂಕಿನ ಅಮರಗೋಳ ಗ್ರಾಮದ ನಿವಾಸಿ ಸಿದ್ದಪ್ಪ ವೀರಭದ್ರಪ್ಪ ಮಾದರ (35) ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಇವರು 3 ಎಕರೆ ಜಮೀನು ಹೊಂದಿದ್ದ ಇವರು ಸ್ಥಳೀತ ಬ್ಯಾಂಕ್‌ನಲ್ಲಿ 2 ಲಕ್ಷ ರೂಪಾಯಿ ಸಾಲ ಪಡೆದಿದ್ದರು. ಸರಿಯಾಗಿ ಮಳೆ ಮತ್ತು ಬೆಳೆ ಬಾರದೆ ಇರುವುದರಿಂದ ಸಾಲ ತೀರಿಸಲಾಗದೆ ನೋಟಿಸ್‌ಗಳಿಗೆ ಹೆದರಿ ವಿಷ ಸೇವಿಸಿ …
Read More »
BigTv News
September 4, 2023
ಕರ್ನಾಟಕ, ಮೈಸೂರು, ಸುದ್ದಿ
ಮೈಸೂರು : ಸಿದ್ದರಾಮಯ್ಯ ಯಾವಾಗಲೂ ತಮ್ಮ ಶಕ್ತಿಯ ಮೇಲೆ ಸಿಎಂ ಆಗಿಲ್ಲ, 2013 ರಲ್ಲಿ ಬಿಜೆಪಿ, ಕೆಜೆಪಿ ಎಂದು ವಿಭಾಗ ಆಗಿತ್ತು. ಅದರ ಲಾಭ ಪಡೆದು ಸಿದ್ದರಾಮಯ್ಯ ಅಂದು ಮುಖ್ಯಮಂತ್ರಿ ಆದರು. ಈಗ ಗ್ಯಾರಂಟಿ ಎಂದು ಹೇಳಿಕೊಂಡು ಸಿಎಂ ಆಗಿದ್ದಾರೆ. ಯಾವಾಗಲೂ ಲಾಟರಿ ಮುಖ್ಯಮಂತ್ರಿ ಎಂದು ಮೈಸೂರಿನಲ್ಲಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ವಾಗ್ದಾಳಿ ನಡೆಸಿದರು. ಮೈಸೂರಿಗೆ ಪಕ್ಷದ ಕಾರ್ಯಕ್ರಮದ ಹಿನ್ನೆಲೆ ಆಗಮಿಸಿದ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ …
Read More »
BigTv News
September 4, 2023
News, ಕರ್ನಾಟಕ, ಜಿಲ್ಲೆ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಧಾರವಾಡ ರಾಜ್ಯ ಸರ್ಕಾರದ ಕಾರ್ಯವೈಖರಿಗೆ ಅಸಮಾಧಾನಗೊಂಡು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದ ಯಲಬುರ್ಗಾ ಶಾಸಕ ಬಸವರಾಜ ರಾಯರೆಡ್ಡಿ ಕಾಂಗ್ರೆಸ್ ಬಿಟ್ಟು ಹೋಗುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ. ಧಾರವಾಡದ ಮಮತಾ ಫಾರ್ಮಹೌಸ್ ನಲ್ಲಿ ಮಾತನಾಡಿದ ಅವರು ನಾನು ಕಟ್ಟಾ ಕಾಂಗ್ರೇಸ್ಸಿಗ, ನನಗೆ ಬಿಜೆಪಿ ಸಿದ್ಧಾಂತ ಆಗಿ ಬರಲ್ಲ. ಹೀಗಾಗಿ ಕಾಂಗ್ರೇಸ್ ಬಿಟ್ಟು ಹೋಗಲ್ಲ ಎಂದಿದ್ದಾರೆ. ಕಾಂಗ್ರೇಸ್, ಬಿಜೆಪಿ ಪಕ್ಷದವರು ಎಲ್ಲರನ್ನು ಕರೆಯುತ್ತಿರುತ್ತಾರೆ.ಹಾಗಂತ ಹೋಗೋಕೆ ಆಗಲ್ಲ ಎಂದು ಸ್ಪಷ್ಟಪಡಿಸಿದರು. ನನಗೆ ಮುಖ್ಯಮಂತ್ರಿ ಸಿದ್ದರಾಮಯ್ಯ …
Read More »
BigTv News
September 2, 2023
ಕರ್ನಾಟಕ, ದೊಡ್ಡಬಳ್ಳಾಪುರ, ಸುದ್ದಿ
ದೊಡ್ಡಬಳ್ಳಾಪುರ: ಬಿಯರ್ನಲ್ಲಿ ಸೆಡಿಮಂಟ್ ಅಂಶ ಶೇಖರಣೆಯಾಗಿರುವ ಹಿನ್ನೆಲೆ ಸುಮಾರು 33ಲಕ್ಷ ರೂ. ಮೌಲ್ಯದ ಬಿಯರ್ ಬ್ರಾಂಡ್ ಬಾಟಲಿಗಳನ್ನು ಅಬಕಾರಿ ಇಲಾಖೆ ಅಧಿಕಾರಿಗಳು ನಾಶಪಡಿಸಿದ್ದಾರೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನಲ್ಲಿರುವ ಯುನೈಟೆಡ್ ಬ್ರಿವರೀಸ್ ಲಿಮಿಟೆಡ್ನಲ್ಲಿ ಜುಲೈ 15 ರಂದು 7 ಇ ಮತ್ತು 7ಸಿ ಬ್ಯಾಚ್ನಲ್ಲಿ ತಯಾರಾದ ಪ್ರತಿಷ್ಠಿತ ಬ್ರಾಂಡ್ನ ಸ್ಟ್ರಾಂಗ್ ಮತ್ತು ಅಲ್ಟ್ರಾ ಲ್ಯಾಗರ್ ಬಿಯರ್ನಲ್ಲಿ ಸೆಡಿಮೆಂಟ್ ಅಂಶ ಪತ್ತೆಯಾಗಿತ್ತು. ಮಾನವ ಆರೋಗಕ್ಕೆ ಸೆಡಿಮೆಂಟ್ ಅಂಶ ಹಾನಿ ಮಾಡುವ ಹಿನ್ನೆಲೆ …
Read More »
BigTv News
September 2, 2023
ಕರ್ನಾಟಕ, ಕಾರವಾರ, ಸುದ್ದಿ
ಕಾರವಾರ: ಗುಡ್ಡಗಾಡು ಪ್ರದೇಶಗಳಿಂದ ಕೂಡಿರುವ ಉತ್ತರ ಕನ್ನಡ ಜಿಲ್ಲೆಯಲ್ಲಿ ನೆಟ್‌ವರ್ಕ್ ಸಮಸ್ಯೆಯಿಂದ ಒಬ್ಬರನ್ನೊಬ್ಬರು ಸಂಪರ್ಕ ಮಾಡುವುದೇ ದೊಡ್ಡ ಸವಾಲು. ಅದರಲ್ಲಿಯೂ ಸರ್ಕಾರಿ ಯೋಜನೆಗಳು ಸೇರಿದಂತೆ ಅಗತ್ಯ ಸೇವೆಗಳಿಗೆ ನೆಟ್‌ವರ್ಕ್ ಪ್ರಮುಖ ಸಾಧನವಾಗಿದ್ದರೂ ಸಂಪರ್ಕ ಸಾಧ್ಯವಾಗದೆ ಜನ ಪರದಾಡುವಂತಾಗಿದೆ. ಆದರೆ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಉತ್ತರ ಕನ್ನಡ ಜಿಲ್ಲೆಗೆ ಕೇಂದ್ರ ಸರ್ಕಾರ ದೂರಸಂಪರ್ಕ ಇಲಾಖೆಯಿಂದ 232 ಹೊಸ ಮೊಬೈಲ್ ಟವರ್‌ಗಳನ್ನು ಮಂಜೂರು ಮಾಡಲಾಗಿತ್ತಾದರೂ ಇದೀಗ ಈ ಯೋಜನೆಗೂ ವಿಘ್ನ ಎದುರಾಗಿದೆ. ಬಹುಭಾಗ …
Read More »
BigTv News
September 1, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಹೆಚ್ಚು ಡಿಸಿಎಂಗಳ ನೇಮಕ ವಿಚಾರ ಹೈಕಮಾಂಡ್ಗೆ ಬಿಟ್ಟಿದ್ದು, ಆ ಬಗ್ಗೆ ನನಗೇನೂ ಗೊತ್ತಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ಸದಾಶಿವನಗರದಲ್ಲಿ ಇಂದು ಮಾತನಾಡಿದ ಅವರು, ನಾವು ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದರು.ಬಿಜೆಪಿ ನಾಯಕರ ರಿವರ್ಸ್ ಆಪರೇಷನ್ ವಿಚಾರವಾಗಿ ಪ್ರತಿಕ್ರಿಯಿಸಿ, ಎಲ್ಲವೂ ಗೊತ್ತಾಗುತ್ತದೆ, ಸ್ವಲ್ಪ ದಿನದಲ್ಲೇ ನೋಡಿ. ಯಾರ ಸಂಪರ್ಕದಲ್ಲಿ ಯಾರಿದ್ದಾರೆ ಅನ್ನೋದು ತಿಳಿಯಲಿದೆ ಎಂದು ಹೇಳಿದರು. ವಿರೋಧ ಪಕ್ಷದ ನಾಯಕನ ನೇಮಕ ವಿಳಂಬ ವಿಚಾರವಾಗಿ, ಸಂವಿಧಾನಾತ್ಮಕವಾಗಿ ವಿಪಕ್ಷ …
Read More »