Breaking News

ಕರ್ನಾಟಕ

ವೋಟ್ ಬ್ಯಾಂಕ್ ರಾಜಕಾರಣ ಮಾಡಿಕೊಂಡು ಬರುತ್ತಿದ್ದಾರೆ: ಗೋವಿಂದ ಕಾರಜೋಳ.

ಬೆಂಗಳೂರು: ಬಿಜೆಪಿ ಸರ್ಕಾರವೂ ನೀರು ಬಿಟ್ಟಿತ್ತು ಎಂದು ಆರೋಪ ಮಾಡುವ ಮುನ್ನ ನಮ್ಮ ಕಾಲದಲ್ಲಿ ತಮಿಳುನಾಡಿಗೆ ಬಿಟ್ಟ ನೀರಿನ ದಾಖಲೆ ಬಿಡುಗಡೆ ಮಾಡಲಿ ಎಂದು ಡಿಸಿಎಂ ಡಿಕೆ ಶಿವಕುಮಾರ್​ಗೆ ಮಾಜಿ ನೀರಾವರಿ ಸಚಿವ ಗೋವಿಂದ ಕಾರಜೋಳ ತಿರುಗೇಟು ನೀಡಿದ್ದಾರೆ. ಇನ್ನು ಮಾಜಿ ಸಿಎಂ ಬೊಮ್ಮಾಯಿ ಅವರೂ ಕಾಂಗ್ರೆಸ್​ ಸರ್ಕಾರ ವಿರುದ್ಧ ಹರಿಹಾಯ್ದಿದ್ದಾರೆ. ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ನಾಯಕ ಗೋವಿಂದ ಕಾರಜೋಳ ಅವರು, ನಮ್ಮ …

Read More »

ತೀವ್ರ ಜ್ವರದಿಂದ ಬಳಲುತ್ತಿರುವ ಮಾಜಿ ಮುಖ್ಯಮಂತ್ರಿ…

ಬೆಂಗಳೂರು : ತೀವ್ರ ಜ್ವರದಿಂದ ಬಳಲುತ್ತಿರುವ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಜಯನಗರದಲ್ಲಿರುವ ಅಪೊಲೋ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸುಸ್ತು ಹಾಗೂ ತೀವ್ರ ಜ್ವರದಿಂದಾಗಿ ಇಂದು ಬೆಳಗಿನಜಾವ 3.40ರ ಸುಮಾರಿಗೆ ಕುಮಾರಸ್ವಾಮಿ ಅವರು ಆಸ್ಪತ್ರೆಗೆ ದಾಖಲಾಗಿದ್ದು, ತಕ್ಷಣ ಅವರನ್ನು ತಪಾಸಣೆ ನಡೆಸಿ ಚಿಕಿತ್ಸೆ ನೀಡಲಾಗಿದೆ. ಕುಮಾರಸ್ವಾಮಿ ಅವರು ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ. ಅವರ ಆರೋಗ್ಯದ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಪ್ರಕಟಣೆಯಲ್ಲಿ …

Read More »

ಮಲೆನಾಡಿಗರ ಬಹುದಿನದ ಕನಸು ಇಂದು ನನಸು…

ಶಿವಮೊಗ್ಗ: ಮಲೆನಾಡಿಗರ ಬಹುದಿನದ ಕನಸು ಇಂದು ನನಸಾಗುತ್ತಿದೆ. ಇಂದಿನಿಂದ ಶಿವಮೊಗ್ಗದಲ್ಲಿ ಲೋಹದ ಹಕ್ಕಿಗಳ ಹಾರಾಟ ಪ್ರಾರಂಭವಾಗಲಿದೆ. ಇಂದು (ಗುರುವಾರ) ಬೆಳಗ್ಗೆ ಬೆಂಗಳೂರಿನಿಂದ ಇಂಡಿಗೋ ವಿಮಾನ ಶಿವಮೊಗ್ಗದ ಕುವೆಂಪು ವಿಮಾನ ನಿಲ್ದಾಣಕ್ಕೆ ಆಗಮಿಸಲಿದೆ. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಇಂದು ಬೆಳಗ್ಗೆ 9:50ಕ್ಕೆ ಇಂಡಿಗೋ 6E 7731 ವಿಮಾನವು ಕುವೆಂಪು ವಿಮಾನ ನಿಲ್ದಾಣಕ್ಕೆ ಸುಮಾರು 11:05ಕ್ಕೆ ಆಗಮಿಸಲಿದೆ. ಈ ಮೂಲಕ ನಾಗರಿಕ ವಿಮಾನ ಹಾರಾಟ ಪ್ರಥಮವಾಗಿ ಪ್ರಾರಂಭವಾಗಲಿದೆ. ಇಂಡಿಗೋ ವಿಮಾನ …

Read More »

ಬರಗಾಲ ಘೋಷಣೆ ಮಾಡುವಂತೆ ಆಗ್ರಹ….

ಶಿರಸಿ(ಉತ್ತರ ಕನ್ನಡ): ಮಳೆಯ ಕೊರತೆಯಿಂದ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಪೂರ್ವ ಭಾಗದಲ್ಲಿ ಭತ್ತ, ಮೆಕ್ಕೆ ಜೋಳ ಬೆಳೆಗಳು ಒಣಗಿ ಹಾಳಾಗಿದ್ದು, ಹಸಿರಿನಿಂದ ಕಂಗೊಳಿಸಬೇಕಾಗಿದ್ದ ಹೊಲಗಳು ಬರಿದಾಗಿದೆ. ಇದು ರೈತರನ್ನು ಮಮ್ಮಲ ಮರುವಂತೆ ಮಾಡಿದ್ದು, ಬರಗಾಲ ಘೋಷಣೆ ಮಾಡುವಂತೆ ಆಗ್ರಹ ಹೆಚ್ಚಾಗಿದೆ. ಬನವಾಸಿ, ಬದನಗೋಡ, ಸಂತೊಳ್ಳಿ ವ್ಯಾಪ್ತಿಯು ಮಳೆಯಾಶ್ರಿತ ಭತ್ತದ ಬೆಳೆಯ ಪ್ರದೇಶವಾಗಿದ್ದು, ಪ್ರಸಕ್ತ ಸಾಲಿನಲ್ಲಿ 2,480 ಹೆಕ್ಟೇರ್ ಭತ್ತ, 1,550 ಹೆಕ್ಟೇರ್​ ಅಡಿಕೆ, ನೂರಾರು ಎಕರೆ ಮೆಕ್ಕೆ …

Read More »

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆಗಸ್ಟ್ 31 ರಂದು ಟರ್ಮಿನಲ್ 2 ಕ್ಕೆ ಸ್ಥಳಾಂತರ ಕಾರ್ಯಾಚರಣೆ ಮುಂದೂಡಿಕೆ…

ದೇವನಹಳ್ಳಿ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆಗಸ್ಟ್ 31 ರಂದು ಟರ್ಮಿನಲ್ 2 ಕ್ಕೆ ಸ್ಥಳಾಂತರಗೊಳ್ಳಬೇಕಿದ್ದ ಅಂತಾರಾಷ್ಟ್ರೀಯ ವಿಮಾನಗಳ ಕಾರ್ಯಾಚರಣೆಯನ್ನು ಕಾರಣಾಂತರಗಳಿಂದ ಮುಂದೂಡಿರುವ ಬಗ್ಗೆ ಬಿಐಎಎಲ್ ವಕ್ತಾರರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದು, ಸಂಬಂಧಪಟ್ಟ ಇಲಾಖೆಗಳೊಂದಿಗೆ ಚರ್ಚಿಸಿ ಕಾರ್ಯಾಚರಣೆಯ ಮುಂದಿನ ದಿನಾಂಕವನ್ನು ತಿಳಿಸುವುದಾಗಿ ಹೇಳಿದ್ದಾರೆ. ಅಂತಾರಾಷ್ಟ್ರೀಯ ಕಾರ್ಯಾಚರಣೆ ಸ್ಥಳಾಂತರದ ಅಂತಿಮ ಹಂತದ ಸಿದ್ಧತೆ ಮತ್ತು ಪರೀಕ್ಷಾ ಸಂದರ್ಭದಲ್ಲಿ ಪ್ರಯಾಣಿಕರಿಗೆ ಸೂಕ್ತ ಹಾಗೂ ಸುಗಮ ಪ್ರಯಾಣವನ್ನು ಒದಗಿಸುವ ನಿಟ್ಟಿನಿಂದ ಈ ನಿರ್ಧಾರ …

Read More »

ಗೃಹಲಕ್ಷ್ಮಿ ಕಾರ್ಯಕ್ರಮಕ್ಕೆ ಬಂದಿದ್ದ ಮಹಿಳೆ ತಲೆ ಮೇಲೆ ಬಿದ್ದ ಹಲಸಿನ ಕಾಯಿ:

ಬೆಂಗಳೂರು: ಇಂದು ಮೈಸೂರಿನಲ್ಲಿ ಗೃಹಲಕ್ಷ್ಮಿ ಕಾರ್ಯಕ್ರಮ ಚಾಲನೆ ಹಿನ್ನೆಲೆ ರಾಜ್ಯದ ಎಲ್ಲಾ ಕಡೆಗಳನ್ನು ಕಾರ್ಯಕ್ರಮ ನಡೆಸಲಾಗುತ್ತಿದೆ. ನಾನು ರಾಜಕಾರಣದಿಂದ ಒಂದು ಹೆಜ್ಜೆ ಹೊರಗಡೆ ಇಟ್ಟಿದ್ದೇನೆ ಎನ್ನುವ ಭಾವನೆ ಯಾರಿಗೂ ಬೇಡ: ನಿಖಿಲ್ ಅದರಂತೆ ಆನೆಕಲ್​ನಲ್ಲೂ ಗೃಹಲಕ್ಷ್ಮಿ ಯೋಜನೆ ಚಾಲನೆ ಕಾರ್ಯಕ್ರಮ ಆಯೋಜಿಸಲಾಗಿದೆ. ಮಂಟಪ ಗ್ರಾಮ ಪಂಚಾಯಿತಿ ಕಚೇರಿ ಬಳಿ ಕಾರ್ಯಕ್ರಮ ಆಯೋಜಿಸಲಾಗಿದ್ದು ಕುಳಿತುಕೊಳ್ಳಲು ಸರಿಯಾದ ವ್ಯವಸ್ಥೆ ಇಲ್ಲದೆ ಮಹಿಳೆಯರು ಪರದಾಡುತ್ತಿದ್ದಾರೆ. ಇನ್ನು ಮಹಿಳೆ ತಲೆಯ ಮೇಲೆ ಹಲಸಿನ ಕಾಯಿ ಬಿದ್ದಿದ್ದು …

Read More »

ಚುನಾವಣೆಯ ಗಿಮಿಕ್ ಇಟ್ಟುಕೊಂಡೇ ಸಿಲಿಂಡರ್ ದರ ಇಳಿಸಿದ್ದಾರೆ ಶೆಟ್ಟರ್ ಗಂಭೀರ ಆರೋಪ

ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ಮುಂದಿನ ಲೋಕಸಭಾ ಚುನಾವಣೆಯ ಗಿಮಿಕ್ ಇಟ್ಟುಕೊಂಡೇ ಸಿಲಿಂಡರ್ ದರ ಇಳಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿಪ ಸದಸ್ಯ ಜಗದೀಶ್ ಶೆಟ್ಟರ್ ಗಂಭೀರವಾಗಿ ಆರೋಪಿಸಿದರು. ರಾಜ್ಯದ ಮಹತ್ವಾಕಾಂಕ್ಷಿ ಯೋಜನೆ ಗೃಹಲಕ್ಷ್ಮಿ ಯೋಜನೆಗೆ ಇಲ್ಲಿನ ಶಬರಿ ನಗರದಲ್ಲಿ ಸಾಂಕೇತಿಕವಾಗಿ ಚಾಲನೆ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸೆಂಬರ್’ದೊಳಗೆ ಲೋಕಸಭಾ ಚುನಾವಣೆ ಮಾಡುವ ಸಂಭವವಿದ್ದು, ಅಷ್ಟರೊಳಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಲವು ದರಗಳನ್ನು ಇಳಿಸಬಹುದು ಹಾಗೂ ಸಾಧ್ಯವಾದರೇ …

Read More »

ತಾಲೂಕು ಅಭಿವೃದ್ಧಿಗೆ ಉದ್ಯಮಿದಾರರ ಹೂಡಿಕೆ ಅಗತ್ಯ ಕೋನರಡ್ಡಿ

ನವಲಗುಂದ : ತಾಲೂಕು ಅಭಿವೃದ್ಧಿಗೆ ಉದ್ಯಮಿದಾರರ ಹೂಡಿಕೆ ಅಗತ್ಯವಾದದ್ದು, ಕ್ಷೇತ್ರದ ಸಮಗ್ರ ಅಭಿವೃದ್ಧಿ ಕುರಿತು ಕೈಗೊಳ್ಳುವ ಕೆಲಸಕ್ಕೆ ನಿಮ್ಮ ಹೂಡಿಕೆ ಮುಖ್ಯವಾದದ್ದು ಎಂದು ಶಾಸಕ ಎನ್.ಎಚ್.ಕೋನರಡ್ಡಿ ಹೇಳಿದರು. ಅವರು ಅಣ್ಣಿಗೇರಿ ಪಟ್ಟಣದ ಸುರಕೋಡ ಸಹೋದರರಿಂದ ಹಮ್ಮಿಕೊಂಡಿದ್ದ ಸನ್ಮಾನ ಹಾಗೂ ಪ್ರೀತಿಯ ಭೋಜನ ಕೂಟದಲ್ಲಿ ಭಾಗವಹಿಸಿ ಮಾತನಾಡಿದರು. ಈ ಸಂಧರ್ಬದಲ್ಲಿ ಅಣ್ಣಿಗೇರಿ ಪುರಸಭೆಯ ಮಾಜಿ ಅಧ್ಯಕ್ಷ ಈಶ್ವರಪ್ಪ ಉಳ್ಳಾಗಡ್ಡಿ ಮಾಜಿ ಕ್ರಡಲ್ ಅಧ್ಯಕ್ಷರಾದ ಷಣ್ಮುಖ ಗುರಿಕಾರ, ಅಣ್ಣಿಗೇರಿ ಬ್ಲಾಂಕ್ ಕಾಂಗ್ರೆಸ್ ಅಧ್ಯಕ್ಷ …

Read More »

ಪಟಾಕಿ ಗೊಡೋನ್ ಗೆ ಬೆಂಕಿ: ಸುಮಾರು 1 ಕೋಟಿ ಮೌಲ್ಯದ ಸಿಡಿಮದ್ದು ಸುಟ್ಟು ಭಸ್ಮ

ಹಾವೇರಿ: ವೆಲ್ಡಿಂಗ್ ಮಾಡುವಾಗ ಬೃಹತ್ ಪಟಾಕಿಯ ಗೊಡೋನ್ ಗೆ ಬೆಂಕಿ ತಗುಲಿ ಸುಮಾರು 1 ಕೋಟಿ ಮೌಲ್ಯದ ಸಿಡಿಮದ್ದು ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ಹಾವೇರಿ ತಾಲೂಕಿನ ಆಲದಕಟ್ಟಿ ಗ್ರಾಮದ ಬಳಿಯ ಇರುವ ಭೂಮಿಕಾ ಟ್ರೇಡರ್ಸ್ ಎಂಬ ಗೊಡೋನ್ ನಲ್ಲಿ ನಡೆದಿದೆ. ಸಿ ಜಿ ವಿರೇಶ್ ಎಂಬುವವರಿಗೆ ಸೇರಿದ್ದ ಗೊಡೋನ್ ಆಗಿದ್ದು, ಕೆಲಸ ಮಾಡುತ್ತಿದ್ದ ಆರು ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತಮಿಳುನಾಡಿನ ಶಿವಕಾಶಿ ಎಂಬಲ್ಲಿಯಿಂದ ಬಂದಿದ್ದ ಪಟಾಕಿ ಸಾಮಾಗ್ರಿಗಳನ್ನು ಇಂದು …

Read More »

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದ ರೈತರು..

ಹುಬ್ಬಳ್ಳಿ: ಅವರೆಲ್ಲರೂ ಹೊಲದಲ್ಲಿ ಬೆವರು ಹರಿಸಿ ದೇಶಕ್ಕ ಅನ್ನ ಹಾಕುವ ಅನ್ನದಾತ. ಆದರೆ ಅನ್ನದಾತ ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಲು ಮುಂದಾಗಿದ್ದಾನೆ. ಹೆಸ್ಕಾಂ ಕಚೇರಿಯ ಮುಂದೆಯೇ ಅಡುಗೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗೃಹ ಜ್ಯೋತಿ ಯೋಜನೆಯಿಂದ ಒಂದು ಕಡೆಗೆ ಖುಷಿಯ ಕ್ಷಣಗಳನ್ನು ಮೆಲುಕು ಹಾಕುವಷ್ಟರಲ್ಲಿಯೇ ಅನ್ನದಾತನಿಗೆ ಸಂಕಷ್ಟ ಎದುರಾಗಿದೆ. ಒಂದು ಕಡೆ ಕೈಕೊಟ್ಟ ಮಳೆ, ಇನ್ನೊಂದೆಡೆ ಬರಗಾಲದ ಛಾಯೆ. ಇನ್ನೂ ಅಲ್ಪ ಸ್ವಲ್ಪ ಇರುವ ನೀರಾವರಿಗೆ ಸಮರ್ಪಕ ವಿದ್ಯುತ್ ಸರಬರಾಜು …

Read More »