Breaking News

ಕರ್ನಾಟಕ

ಧಾರವಾಡ ಜಿಲ್ಲಾ SP ಆಗಿ ಗೋಪಾಲ್ ಬ್ಯಾಕೋಡ್ ಅವರನ್ನು ನೇಮಕ

ಧಾರವಾಡ: ಅವಳಿ ನಗರದಲ್ಲಿ ಡಿಸಿಪಿ ಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಗೋಪಾಲ ಬ್ಯಾಕೋಡ್ ಅವರನ್ನು ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನಾಗಿ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕಳೆದ ಒಂದುವರೆ ವರ್ಷದಿಂದ ಅವಳಿ ನಗರದಲ್ಲಿ ಸಂಚಾರಿ ಹಾಗೂ ಅಪರಾಧ ವಿಭಾಗದ ಡಿಸಿಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರನ್ನು ರಾಜ್ಯ ಸರ್ಕಾರ ಬೆಂಗಳೂರಿಗೆ ವರ್ಗಾವಣೆ ಮಾಡಿತ್ತು.ಇನ್ನು ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೊಕೇಶ್ ಜಗಲಾಸುರ್ ಅವರನ್ನು ಧಾರವಾಡದಿಂದ ಪೊಲೀಸ್ ಅಕಾಡೆಮಿ ಮೈಸೂರಿಗೆ ವರ್ಗಾವಣೆ ಮಾಡಿದ್ದು, …

Read More »

ಕ್ರಿಕೆಟ್ ಆಡಿದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್…

ಧಾರವಾಡ: ಬೆಳ್ಳಂಬೆಳಿಗ್ಗೆ ಧಾರವಾಡದ ಕೆಸಿಡಿ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ಸ್ಥಳೀಯ ಆಟಗಾರರೊಂದಿಗೆ ಕ್ರಿಕೆಟ್ ಅಡಿ ಖುಷಿಪಟ್ಟರು. ಕಾರ್ಮಿಕ ಸಚಿವರಾಗಿ ಸರ್ಕಾರದ ಹಲವಾರು ಜವಾಬ್ದಾರಿ ಕೆಲಸಗಳ ನಡುವೆ ಬಿಡುವು ಮಾಡಿಕೊಂಡು ಯುವ ಪ್ರತಿಭೆಗಳ ಜೊತೆ ಕ್ರಿಕೆಟ್ ಆಡಿದ್ದು ಬಹಳ ಖುಷಿ ನೀಡಿತು ಹಾಗೂ ಈ ಎಲ್ಲ ಮಕ್ಕಳ ಕ್ರೀಡಾ ಭವಿಷ್ಯಕ್ಕೆ ಸಚಿವ ಲಾಡ್ ಅವರು ಶುಭ ಹಾರೈಸಿದರು.

Read More »

ನನ್ನೊಂದಿಗೆ ಇರಲು ಬಯಸಿರುವ ಬೆಂಬಲಿಗರು ಬಿಜೆಪಿಯಲ್ಲೇ ಇದ್ದಾರೆ:ಎಸ್.ಟಿ ಸೋಮಶೇಖರ್.

ಬೆಂಗಳೂರು: ಪಕ್ಷ ಬಿಡುವ ಕುರಿತು ನಾನು ಯಾರೊಂದಿಗೂ ಮಾತುಕತೆ ನಡೆಸಿಲ್ಲ, ಮುಂಬರಲಿರುವ ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಮತ್ತು ಬಿಬಿಎಂಪಿ ಚುನಾವಣೆಗೆ ಸ್ಪರ್ಧೆ ಬಯಸಿರುವವರು ಮಾತ್ರ ಕಾಂಗ್ರೆಸ್ ಸೇರಿದ್ದಾರೆ. ನನ್ನೊಂದಿಗೆ ಇರಲು ಬಯಸಿರುವ ಬೆಂಬಲಿಗರು ಬಿಜೆಪಿಯಲ್ಲೇ ಇದ್ದಾರೆ ಎಂದು ಯಶವಂತಪುರ ಬಿಜೆಪಿ ಶಾಸಕ ಎಸ್.ಟಿ ಸೋಮಶೇಖರ್ ಸ್ಪಷ್ಟೀಕರಣ ನೀಡಿದ್ದಾರೆ. ಯಶವಂತಪುರ ಕ್ಷೇತ್ರದ ಶಾಸಕರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾನು ಪಕ್ಷ ಬಿಡುವ ಬಗ್ಗೆ ಯಾರ ಜತೆಗೂ ಚರ್ಚೆ …

Read More »

ಬೇರೆಯವರು ಬಂದು ಊಟ ಮಾಡುವಷ್ಟು ತಟ್ಟೆಯಲ್ಲಿ ಊಟವಿದೆ: ಮಧು ಬಂಗಾರಪ್ಪ

ಶಿರಸಿ(ಉತ್ತರ ಕನ್ನಡ): ಕಾಂಗ್ರೆಸ್​ ಪಕ್ಷಕ್ಕೆ ಈಗಾಗಲೇ ಹೊಟ್ಟೆ ತುಂಬಿದೆ. ಆದರೆ ಬೇರೆಯವರು ಬಂದು ಊಟ ಮಾಡುವಷ್ಟು ತಟ್ಟೆಯಲ್ಲಿ ಊಟವಿದೆ. ಕಾರಣ ಪಕ್ಷದ ಹಿತದೃಷ್ಟಿಯಿಂದ ಬೇರೆ ಪಕ್ಷದ ನಾಯಕರು ಬಂದಲ್ಲಿ ಸ್ವಾಗತ ಎಂದು ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.‌ ಶಿರಸಿಯಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿಕೊಂಡು ಬರುವ ಶಾಸಕರಿಗೆ, ಮಾಜಿ ಶಾಸಕರಿಗೆ ಬರಲು ಸ್ವಾಗತ. ಅಸಮಾಧಾನ ಇದ್ದಲ್ಲಿ ಅದನ್ನು ಹಿರಿಯ …

Read More »

ಹಾಡಹಗಲೇ ಸಿನಿಮೀಯ ಶೈಲಿಯಲ್ಲಿ ಬಾಲಕಿಗೆ ಚಾಕುವಿನಿಂದ ಇರಿತ….

ರಾಮನಗರ: ಹಾಡಹಗಲೇ ಸಿನಿಮೀಯ ಶೈಲಿಯಲ್ಲಿ ಬಾಲಕಿಗೆ ಚಾಕುವಿನಿಂದ ಇರಿದು ಅಪಹರಣ ಮಾಡಿದ ಘಟನೆ ರೇಷ್ಮೆನಗರಿ ರಾಮನಗರದ ಕಾಲೇಜುವೊಂದರ ಬಳಿ ಇಂದು ಬೆಳಗ್ಗೆ ನಡೆದಿತ್ತು. ಸ್ವಲ್ಪ ಸಮಯದ ಬಳಿಕ ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿ ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿರುವುದು ಬೆಳಕಿಗೆ ಬಂದಿದೆ. ಕಿಡ್ನಾಪ್ ಆಗಿದ್ದ ಬಾಲಕಿ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಎಂದು ತಿಳಿದಬಂದಿದೆ. ಕಾರಿನಲ್ಲಿ ಅಪಹರಣ ಮಾಡುವ ಮೊದಲು ಆಕೆಯ ಕೈ ಹಾಗೂ ಭುಜದ ಭಾಗಕ್ಕೆ ಚಾಕುವಿನಿಂದ ಹಲ್ಲೆ ಮಾಡಿರುವ ಗಾಯಗಳಾಗಿವೆ …

Read More »

ಜಿಲ್ಲೆಯ ನೂತನ ಪೊಲೀಸ್​ ವರಿಷ್ಠಾಧಿಕಾರಿಯಾಗಿ ಉಮಾ ಪ್ರಶಾಂತ್​ ಇಂದು ಅಧಿಕಾರ ಸ್ವಿಕಾರ….

ದಾವಣಗೆರೆ: ಜಿಲ್ಲೆಯ ನೂತನ ಪೊಲೀಸ್​ ವರಿಷ್ಠಾಧಿಕಾರಿಯಾಗಿ ಉಮಾ ಪ್ರಶಾಂತ್​ ಇಂದು ಅಧಿಕಾರ ವಹಿಸಿಕೊಂಡರು. ನೂತನ ಎಸ್​ಪಿಗೆ ವರ್ಗಾವಣೆಗೊಂಡ ಡಾ. ಅರುಣ್​ ಅಧಿಕಾರ ಹಸ್ತಾಂತರಿಸಿದರು. ಈ ಮೂಲಕ ಎಸ್​ಪಿ ಉಮಾ ಪ್ರಶಾಂತ್ ಅವರು ಜಿಲ್ಲೆಯ ಮೂರನೇ ಮಹಿಳಾ ಪೊಲೀಸ್​ ವರಿಷ್ಠಾಧಿಕಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಈ ಹಿಂದೆ ಮಾಲಿನಿ‌ ಕೃಷ್ಣಮೂರ್ತಿ ಹಾಗೂ ಸೋನಿಯಾ ನಾರಂಗ್ ದಾವಣಗೆರೆ ಎಸ್​ಪಿಯಾಗಿ ಕಾರ್ಯನಿರ್ವಹಿಸಿದ್ದರು. ಇತ್ತೀಚಿಗೆ ಉಮಾ ಪ್ರಶಾಂತ್ ​ಅವರನ್ನು ಚಿಕ್ಕಮಗಳೂರಿನಿಂದ ದಾವಣಗೆರೆಗೆ ವರ್ಗಾವಣೆ ಮಾಡಲಾಗಿತ್ತು. ನಿರ್ಗಮಿತ ಎಸ್​ಪಿ ಡಾ.ಅರುಣ್ …

Read More »

ನವಿಲುತೀರ್ಥ ಜಲಾಶಯದ ಬಳಿಕಳೆದ ಭಾನುವಾರ ಧಾರವಾಡ ಮೂಲದ ಆಸ್ಟ್ರೇಲಿಯಾ ನಿವಾಸಿ ಪ್ರಿಯದರ್ಶಿನಿ ಶವ ಪತ್ತೆ…

ಧಾರವಾಡ: ಸವದತ್ತಿ ತಾಲೂಕಿನ ನವಿಲುತೀರ್ಥ ಜಲಾಶಯದ ಬಳಿಕಳೆದ ಭಾನುವಾರ ಧಾರವಾಡ ಮೂಲದ ಆಸ್ಟ್ರೇಲಿಯಾ ನಿವಾಸಿ ಪ್ರಿಯದರ್ಶಿನಿ ಲಿಂಗರಾಜ್ ಪಾಟೀಲ (40) ಎಂಬ ಮಹಿಳೆಯ ಶವ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಇನ್ನು ಮಹಿಳೆ ಡೆತ್ ನೋಟ್ ಬರೆದು ಅದನ್ನು ತಮ್ಮ ತಂದೆಗೆ ರವಾನಿಸಿದ್ದಾರೆ ಎಂದು ಹೇಳಲಾಗುತ್ತಿದೆ. ತಮಗೆ ಹಲವರು ಕಿರುಕುಳ ನೀಡಿದ್ದಾರೆ. ಕುಟುಂಬಕ್ಕೋಸ್ಕರ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಡೆತ್​ನೋಟ್​ನಲ್ಲಿ ಮಹಿಳೆ ಬರೆದಿದ್ದಾರೆಂದು ಗೊತ್ತಾಗಿದೆ. “ಪ್ರಿಯದರ್ಶಿನಿಗೆ ಇಬ್ಬರು ಮಕ್ಕಳಿದ್ದು, …

Read More »

ಮರಳು ಸಾಗಾಟ ಮಾಡುತ್ತಿದ್ದ ಟ್ರ್ಯಾಕ್ಟರ್​ ಡಿಕ್ಕಿ ಹೊಡೆದು ವಿದ್ಯಾರ್ಥಿ ಮೃತ…

ರಾಯಚೂರು: ಮರಳು ಸಾಗಾಟ ಮಾಡುತ್ತಿದ್ದ ಟ್ರ್ಯಾಕ್ಟರ್​ ಡಿಕ್ಕಿ ಹೊಡೆದು ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ರಾಯಚೂರು ತಾಲೂಕಿನ ಕೊತ್ತದೊಡ್ಡಿ ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ. ಮಲ್ಲೇಶ್(16) ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಎಸ್​ಆರ್​ಪಿಎಸ್​ ಪದವಿಪೂರ್ವ ಕಾಲೇಜಿನಲ್ಲಿ ಕಲಾ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಮಲ್ಲೇಶ್​ ಎಂದಿನಂತೆ ಕಾಲೇಜಿಗೆ ತೆರಳಲು ಗ್ರಾಮದ ಬಸ್ ನಿಲ್ದಾಣಕ್ಕೆ ಹೋಗುತ್ತಿದ್ದ. ಈ ವೇಳೆ ಇಡಪನೂರು ಗ್ರಾಮದ ಬಳಿ ತುಂಗಭದ್ರಾ ನದಿಯಿಂದ ಮರಳು ಸಾಗಾಟ ಮಾಡುತ್ತಿದ್ದ ಟ್ರ್ಯಾಕ್ಟರ್ ಗುದ್ದಿದೆ ಎಂದು …

Read More »

ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಬೆಂಗಳೂರಿಗೆ ಆಗಮನ..

ಬೆಂಗಳೂರು: ಚಂದ್ರಯಾನ 3 ಯಶಸ್ಸಿಗಾಗಿ ಶ್ರಮಿಸಿದ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಮುಂಜಾನೆ ನಗರಕ್ಕೆ ಆಗಮಿಸಿದ್ದಾರೆ. ಇನ್ನು ಇಸ್ರೋ ವಿಜ್ಞಾನಿಗಳ ಭೇಟಿಗೂ ಮುನ್ನ ಪ್ರಧಾನಿ ಮೋದಿ ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣದ ಹೊರಗೆ ಜನರನ್ನುದ್ದೇಶಿ ಮಾತನಾಡಿದರು. ಇಸ್ರೋ ವಿಜ್ಞಾನಿಗಳ ತಂಡಕ್ಕೆ ಅಭಿನಂದನೆ ಸಲ್ಲಿಸಲು ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ ಹೆಚ್.ಎ.ಎಲ್ ವಿಮಾನ ನಿಲ್ದಾಣದ ಮುಂದೆ ಸೇರಿದ್ದ ಜನತೆ ಉದ್ದೇಶಿಸಿ ಚುಟುಕು ಭಾಷಣ ಮಾಡಿದರು. ಇದು ಸೂರ್ಯೋದಯದ …

Read More »

ಆರೇಕುರಹಟ್ಟಿ ಗ್ರಾಮದ ಕೆರೆ ವೀಕ್ಷಣೆ…

ನವಲಗುಂದ : ತಾಲೂಕಿನ ಆರೇಕುರಹಟ್ಟಿ ಗ್ರಾಮದಲ್ಲಿ ಕುಡಿಯಲು ಬಳಸುವ ಕೆರೆ ಅಸ್ವಚ್ಛತೆಯಿಂದ ಇದ್ದು, ಅದನ್ನು ಸ್ವಚ್ಛಗೊಳಿಸಿ ನೀರು ಸರಬರಾಜು ಮಾಡಿ ಅಂತಾ ಗ್ರಾಮಸ್ಥರು ಆಗ್ರಹಿಸಿದ್ದರು. ಈಗಾ ಸ್ವಚ್ಛತೆ ಕಾರ್ಯ ಬಿರುಸಿನಿಂದ ನಡೆದಿದ್ದು, ತಾಪಂ ಇಓ ಭಾಗ್ಯಶ್ರೀ ಜಹಾಗೀರದಾರ ಅವರು ಇಂದು ಗ್ರಾಮಕ್ಕೆ ಭೇಟಿ ನೀಡಿ ನಡೆಯುತ್ತಿರುವ ಸ್ವಚ್ಛತಾ ಕಾರ್ಯ ಪರಿಶೀಲನೆ ನಡೆಸಿದರು. ಈ ವೇಳೆ ಗ್ರಾಮಸ್ಥರು ಅವರೊಂದಿಗೆ ಇದ್ದರು.

Read More »