Breaking News

ಮಂಡ್ಯ

ಸೆ.29 ರಿಂದ ಅಖಿಲ ಭಾರತ ಕಬ್ಬು ಬೆಳೆಗಾರರ ಸಂಘದ ರಾಷ್ಟ್ರೀಯ ಸಮಿತಿ ಸಭೆ

ಮಂಡ್ಯ: ಕಲಬುರಗಿಯಲ್ಲಿ ಅಖಿಲ ಭಾರತ ಕಬ್ಬು ಬೆಳೆಗಾರರ ಸಂಘದ ರಾಷ್ಟ್ರೀಯ ಸಮಿತಿ ಸಭೆ ಹಾಗೂ ಕಬ್ಬು ಬೆಳೆಗಾರರ ರಾಜ್ಯ ಸಮ್ಮೇಳನವು ಸೆ.29, 30 ರಂದು ನಡೆಯಲಿದೆ ಎಂದು ಸಂಘದ ರಾಜ್ಯ ಸಂಚಾಲಕ ಎನ್.ಎಲ್.ಭರತ್‌ರಾಜ್ ಹೇಳಿದರು. ಪಂಜಾಬ್, ಹರಿಯಾಣ, ತೆಲಂಗಾಣ, ಆಂಧ್ರಪ್ರದೇಶ, ಮಧ್ಯಪ್ರದೇಶ, ಉತ್ತರಾಖಂಡ್, ಮಹಾರಾಷ್ಟ್ರ, ತಮಿಳುನಾಡು, ಬಿಹಾರ, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಿಂದ ಕಬ್ಬು ಬೆಳೆಗಾರರ ಸಂಘದ ರಾಷ್ಟ್ರ ಮಟ್ಟದ ಮುಖಂಡರು ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. ಕಬ್ಬು ಬೆಳೆಗಾರರ ಸ್ಥಿತಿಗತಿ, ಮುಂದಿನ …

Read More »

ಜಿಲ್ಲಾಡಳಿತದ ವತಿಯಿಂದ ಸೆ.14 ಮತ್ತು 15 ರಂದು ಗಗನಚುಕ್ಕಿ ಜಲಪಾತೋತ್ಸವ

ಮಂಡ್ಯ: ಜಿಲ್ಲಾಡಳಿತದ ವತಿಯಿಂದ ಮಳವಳ್ಳಿ ತಾಲ್ಲೂಕಿನಲ್ಲಿ ಗಗನಚುಕ್ಕಿ ಜಲಪಾತೋತ್ಸವವನ್ನು ಸೆಪ್ಟೆಂಬರ್ 14 ಹಾಗೂ 15 ರಂದು ಆಯೋಜಿಸಲಾಗಿದೆ ಎಂದು ಮಳವಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಪಿ.ಎಂ‌.ನರೇಂದ್ರಸ್ವಾಮಿ ಅವರು ತಿಳಿಸಿದರು. ಶಿವನಸಮುದ್ರದ ಲಕ್ಷದ್ವೀಪ ಹೋಟೆಲ್ ನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಸೆಪ್ಟೆಂಬರ್ 14 ರಂದು ಮಾನ್ಯ ಮುಖ್ಯಮಂತ್ರಿಗಳು ಕಾರ್ಯಕ್ರಮ ಉದ್ಘಾಟಿಸಲಿದ್ದು, ಇದರೊಂದಿಗೆ ಲೇಜರ್ ಹಾಗೂ ಲೈಟಿಂಗ್ ಗಗಳನ್ನು ಸಹ ಉದ್ಘಾಟಿಸುವರು ಎಂದರು. ಗಗನಚುಕ್ಕಿಯನ್ನು ಪ್ರಸಿದ್ಧ ಪ್ರವಾಸಿತಾಣವಾಗಿಸಲು ಹಾಗೂ ಹೆಚ್ಚಿನ ಯುವಜನರನ್ನು …

Read More »

ಮನೆ ಗೋಡೆ ಕುಸಿದು‌ ಮಹಿಳೆ ಸಾವು

ಶ್ರೀರಂಗಪಟ್ಟಣ: ಮನೆಯೊಂದರ ಗೋಡೆ ಕುಸಿದು‌ ಮಹಿಳೆ ಮೃತಪಟ್ಟಿರುವ ಘಟನೆ ತಾಲ್ಲೂಕಿನ ನೆಲಮನೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಎನ್.ಸಿ. ರಾಜಕುಮಾರ್ ಅವರ ಪತ್ನಿ ಶಾಂತಮ್ಮ (45) ಮೃತಪಟ್ಟಿದ್ದಾರೆ. ಗ್ರಾಮದ ಬಳಿ ಹರಿಯುವ ವಿಶ್ವೇಶ್ವರಯ್ಯ ವಿತರಣಾ ನಾಲೆಯಲ್ಲಿ ಪಾತ್ರೆ ತೊಳೆಯುತ್ತಿದ್ದ ಶಾಂತಮ್ಮ ಅವರ ಮೇಲೆ 6 ಅಡಿ ಎತ್ತರದ, 20 ಅಡಿ ಉದ್ದದ ಗೋಡೆ ದಿಢೀರ್ ಕುಸಿದಿದೆ ಶಾಂತಮ್ಮ ಗೋಡೆಯ ಅವಶೇಷಗಳ ಅಡಿ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಾಬು ಎಂಬುವರ ಮನೆಯ ಗೋಡೆ …

Read More »

ಹೆಣ್ಣು ಭ್ರೂಣ ಹತ್ಯೆ ಪ್ರಕರಣ:12 ಆರೋಪಿಗಳು ಬಂಧನ

ಮಂಡ್ಯ: ಹೆಣ್ಣು ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಅಭಿಷೇಕ್​ ಎಂಬಾತನನ್ನು ಬಂಧಿಸಲಾಗಿದೆ. ಸಾವಿರಾರು ಕರುಳಬಳ್ಳಿ ಕೊಂದಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಸಿಐಡಿಗೂ ಚಳ್ಳೆಹಣ್ಣು ತಿನ್ನಿಸಿ ದಂಧೆ ವಿಸ್ತರಿಸಿದ್ದ ಅಭಿಷೇಕ್​ ಪ್ರಮುಖ ಆರೋಪಿಯಾಗಿದ್ದಾನೆ. ಅಭಿಷೇಕ್ ಜೊತೆ ವಿರೇಶ್ ಸೇರಿದಂತೆ 12 ಆರೋಪಿಗಳನ್ನು ಬಂಧಿಸಲಾಗಿದ್ದು ಈಗಾಗಲೇ ಭ್ರೂಣ ಹತ್ಯೆ ಕೇಸ್ ​ನಲ್ಲಿ ವಿರೇಶ್​ ಜೈಲು ಸೇರಿ ಬೇಲ್ ಮೇಲೆ ಹೊರ ಬಂದಿದ್ದ. ಬಂಧಿತರಿಂದ 2 ಸ್ಕ್ಯಾನಿಂಗ್ ಮಷಿನ್, …

Read More »

ಆಪರೇಷನ್ ಕಮಲದ ಬಗ್ಗೆ ಕಾಂಗ್ರೆಸ್ ಶಾಸಕ ಆರೋಪ

ಮಂಡ್ಯ: ನಮ್ಮ 50 ಶಾಸಕರ ಖರೀದಿಗೆ ಪ್ರಯತ್ನ ನಡೆಯುತ್ತಿದ್ದು, ಒಬ್ಬೊಬ್ಬರಿಗೆ 100 ಕೋಟಿಯ ಆಫರ್ ಮಾಡಿದ್ದಾರೆ ಎಂದು ಆಪರೇಷನ್ ಕಮಲದ ಬಗ್ಗೆ ಕಾಂಗ್ರೆಸ್ ಶಾಸಕ ಗಣಿಗ ರವಿಕುಮಾರ್ ಆರೋಪ ಮಾಡಿದ್ದಾರೆ. ಸುದ್ದಿಗೋಷ್ಟಿ ನಡೆಸಿ ಮಾತನಾಡಿರುವ ಗಣಿಗ ರವಿಕುಮಾರ್.. ಬಿಜೆಪಿಯ ಬೋಕರ್‌ಗಳು ಪ್ರತಿನಿತ್ಯ ನಮ್ಮ ಶಾಸಕರನ್ನ ಸಂಪರ್ಕಿಸುತ್ತಿದ್ದಾರೆ. ಮೊದಲು 50 ಕೋಟಿಯಿಂದ 100 ಕೋಟಿಗೆ ಆಫರ್ ಏರಿಕೆ ಆಗಿದೆ. ಮೊನ್ನೆಯೂ ಕೆಲ ಕಾಂಗ್ರೆಸ್ ಶಾಸಕರಿಗೆ ಕರೆಗಳು ಬಂದಿವೆ. 100 ಕೋಟಿ ರೆಡಿ.. …

Read More »

ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಮಾತನಾಡುವುದಕ್ಕೆ ಯಾರಿಗೂ ಯೋಗ್ಯತೆ ಇಲ್ಲ:ಪಿ.ಎಂ. ನರೇಂದ್ರಸ್ವಾಮಿ.

ಮಂಡ್ಯ: ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಮಾತನಾಡುವುದಕ್ಕೆ ಯಾರಿಗೂ ಯೋಗ್ಯತೆ ಇಲ್ಲ. ಈ ಬಗ್ಗೆ ಯಾರಿಗೂ ಹಕ್ಕು ಕೊಟ್ಟಿಲ್ಲ. ಸಿಎಂ ವಿಚಾರ ಏನಿದ್ದರೂ ಹೈಕಮಾಂಡ್‌ಗೆ ಬಿಟ್ಟಿದ್ದು ಎಂದು ಮಳವಳ್ಳಿ ಶಾಸಕ ಪಿ.ಎಂ. ನರೇಂದ್ರಸ್ವಾಮಿ ವಾಗ್ದಾಳಿ ನಡೆಸಿದರು. ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಬದಲಾವಣೆ ಏನಿದ್ದರೂ ಎಐಸಿಸಿ ಅಧ್ಯಕ್ಷರು, ಸೋನಿಯಾಗಾಂಧಿ, ರಾಹುಲ್‌ಗಾಂಧಿ ಅವರಿಗೆ ಬಿಟ್ಟ ವಿಚಾರ. ಇದು ಬಹಿರಂಗವಾಗಿ ಸಿಎಂ ವಿಚಾರ ಮಾತನಾಡೋ ಯೋಗ್ಯತೆ ನಮಗೆ ಯಾರಿಗೂ ಇಲ್ಲ. ಮಾತನಾಡುವುದು ಅಕ್ಷಮ್ಯ ಎಂದು …

Read More »

ವಿಠಲಾಪುರದ ಪ್ರಗತಿಪರ ರೈತ ಸುಬ್ಬೇಗೌಡರು ಮಾತ್ರ ಭಿನ್ನವಾಗಿದ್ದಾರೆ…..

ಮಂಡ್ಯ: ಮಂಡ್ಯ ಜಿಲ್ಲೆಯಲ್ಲಿ ರೈತರು ಕಬ್ಬು ಮತ್ತು ಭತ್ತವನ್ನು ಬೆಳೆಯುತ್ತಾ ಬಂದಿದ್ದಾರೆ. ಇದೆರಡು ಬೆಳೆಯನ್ನು ಬೆಳೆಯ ಬೇಕಾದರೆ ಹೆಚ್ಚಿನ ಪ್ರಮಾಣದಲ್ಲಿ ನೀರು ಬೇಕಾಗುತ್ತದೆ. ಈ ಬಾರಿ ಮಳೆಯ ಕೊರೆತೆಯಿಂದಾಗಿ ಬೆಳೆ ಬೆಳೆಯುವುದು ಕಷ್ಟವಾಗಿದೆ. ಇಂತಹ ಸಂದರ್ಭದಲ್ಲಿ ಬಹುತೇಕ ರೈತರು ನೀರಿಲ್ಲದ ಕಾರಣದಿಂದ ಬೆಳೆ ಬೆಳೆಯಲಾಗದೆ ಆಕಾಶ ನೋಡುವಂತಾಗಿದೆ. ಆದರೆ ಕೆ.ಆರ್.ಪೇಟೆ ತಾಲೂಕಿನ ವಿಠಲಾಪುರದ ಪ್ರಗತಿಪರ ರೈತ ಸುಬ್ಬೇಗೌಡರು ಮಾತ್ರ ಭಿನ್ನವಾಗಿದ್ದಾರೆ. ಇದಕ್ಕೆ ಕಾರಣವೂ ಇದೆ. ಅವರು ಕಬ್ಬು, ಭತ್ತಕ್ಕೆ ಜೋತು …

Read More »

ಪುತ್ರ ನಿಖಿಲ್‌ ಕುಮಾರಸ್ವಾಮಿ ಅವರನ್ನ ಕರೆದುಕೊಂಡು ಹೋಗಿದ್ದು, ಸಾಕಷ್ಟು ಪ್ರಶ್ನಗೆಗಳನ್ನ ಹುಟ್ಟುಹಾಕುವಂತೆ ಮಾಡಿದೆ….

ಮಂಡ್ಯ: 2024 ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಆಡಳಿತರೂಢ ಕಾಂಗ್ರೆಸ್‌ ಗೆ ಠಕ್ಕರ್‌ ಕೊಡಲು ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಾಗಿದೆ. ಇತ್ತ ಬಿಜೆಪಿಗೆ 24 ಹಾಗೂ ಜೆಡಿಎಸ್‌ ಗೆ 4 ಕ್ಷೇತ್ರಗಳ ಕುರಿತು ಚರ್ಚೆಯಾಗಿದ್ದು, ದಸರಾ ಹಬ್ಬದ ಬಳಿಕ ಇನ್ನೊಂದು ಸುತ್ತಿನ ಮಾತುಕತೆ ನಂತರ ಕ್ಷೇತ್ರ ಹಂಚಿಕೆ ಅಂತಿಮವಾಗಲಿದೆ. ಲೋಕಸಭಾ ಚುನಾವಣೆಯಲ್ಲಿ ರಾಜ್ಯ ಕಾಂಗ್ರೆಸ್‌ ಭರ್ಜರಿ ಗೆಲುವು ಸಾಧಿಸುವ ನಿಟ್ಟಿನಲ್ಲಿ ಕಾಂಗ್ರೆಸ್‌ ನಾಯಕರು ಪ್ಲಾನ್‌ ನಡೆಸಿದ್ದು, ಇತ್ತ 28 ಕ್ಷೇತ್ರಗಳ ಪೈಕಿ …

Read More »

ದರ್ಶನ್ ಅಭಿಮಾನಿಗಳು, ರಾಜಸ್ಥಾನ ಸಮಾಜ, ಮಂಗಳಮುಖಿಯರು, ಎಸ್‌ಡಿಪಿಐ ಹಾಗೂ ವಿಶ್ವಕರ್ಮ ಸಮಾಜ ಕಾರ್ಯಕರ್ತರು ಮಂಡ್ಯದಲ್ಲಿ ಪ್ರತಿಭಣೆ….

ಮಂಡ್ಯ: ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ಸರ್ಕಾರದ ವಿರುದ್ಧ ಕನ್ನಡ ಸಂಘಟನೆಗಳ ಒಕ್ಕೂಟ ಕರೆ ನೀಡಿದ್ದ ಕರ್ನಾಟಕ ಬಂದ್ ಬೆಂಬಲಿಸಿ ಚಿತ್ರನಟ ದರ್ಶನ್ ಅಭಿಮಾನಿಗಳು, ರಾಜಸ್ಥಾನ ಸಮಾಜ, ಮಂಗಳಮುಖಿಯರು, ಎಸ್‌ಡಿಪಿಐ ಹಾಗೂ ವಿಶ್ವಕರ್ಮ ಸಮಾಜ ಕಾರ್ಯಕರ್ತರು ಮಂಡ್ಯದಲ್ಲಿ ಪ್ರತಿಭಟಿಸಿದರು ನಗರದ ಸಿಲ್ವರ್ ಜ್ಯೂಬಿಲಿ ಪಾರ್ಕಿನಿಂದ ದರ್ಶನ್ ಸೇನಾ ಸಮಿತಿ ಆಶ್ರಯದಲ್ಲಿ ಮೆರವಣಿಗೆ ಹೊರಟ ದರ್ಶನ್ ತೂಗುದೀಪ್ ಅಭಿಮಾನಿಗಳು ಬೆಂಗಳೂರು-ಮೈಸೂರು ಹೆದ್ದಾರಿ ಮೂಲಕ ಸಾಗಿ ನಾವು ಎಂದೆಂದಿಗೂ ರೈತಪರ …

Read More »

ಮೂರು ಡಿಸಿಎಂ ಹುದ್ದೆಯ ಬೇಡಿಕೆ ತಪ್ಪಲ್ಲ: ಡಾ.ಜಿ.ಪರಮೇಶ್ವರ್.

ಮಂಡ್ಯ: ಮೂರು ಡಿಸಿಎಂ ಹುದ್ದೆಯ ಬೇಡಿಕೆ ತಪ್ಪಲ್ಲ ಎಂದು ಮಂಡ್ಯದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದರು. ನಗರದಲ್ಲಿ ಮಾತನಾಡಿದ ಅವರು, ಇದೆಲ್ಲ ನಮ್ಮ ವರಿಷ್ಠರು ತೀರ್ಮಾನ ಮಾಡುವಂಥದ್ದು. ವೈಯಕ್ತಿಕ ಅಭಿಪ್ರಾಯಗಳನ್ನು ನಮ್ಮವರು ಆಗಾಗ್ಗೆ ಹೇಳುತ್ತಿರುತ್ತಾರೆ ಎಂದರು. ಈ ವಿಚಾರವನ್ನು ಹೈಕಮಾಂಡ್​ಗೆ ಬಿಟ್ಟು ಬಿಡೋಣ. ಅದನ್ನು ಅವರೇ ಕೇಳಬೇಕು. ನಾನು ಹೈಕಮಾಂಡ್ ಗಮನಕ್ಕೆ ಈ ವಿಷಯವನ್ನು ತರುವುದಕ್ಕೆ ಆಗಲ್ಲ. ಅವರ ಅಭಿಪ್ರಾಯ ಹೇಳಿದ್ದಾರೆ ತಪ್ಪಲ್ಲ ಎಂದು ಹೇಳಿದರು. ಕಾವೇರಿ ನಿರ್ವಾಹಣಾ ಪ್ರಾಧಿಕಾರದ …

Read More »