BigTv News
September 9, 2023
ಕರ್ನಾಟಕ, ಮಂಡ್ಯ, ಸುದ್ದಿ
ಮಂಡ್ಯ: ತಮಿಳುನಾಡಿಗೆ ರಾಜ್ಯ ಸರ್ಕಾರ ಕಾವೇರಿ ನೀರನ್ನು ಹರಿಸುತ್ತಿರುವ ಕುರಿತು ರಾಜ್ಯಾದ್ಯಂತ ತೀವ್ರ ಖಂಡನೆ ವ್ಯಕ್ತವಾಗುತ್ತಿದೆ. ಮತ್ತೊಂದೆಡೆ, ಕೆಆರ್‌ಎಸ್ ಅಣೆಕಟ್ಟೆಗೆ ಬಿಜೆಪಿ ಮುಖಂಡರ ನಿಯೋಗ ಶುಕ್ರವಾರ ಭೇಟಿ ನೀಡಿ ಜಲಾಶಯ ವೀಕ್ಷಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು. ಕೆಆರ್‌ಎಸ್ ವೀಕ್ಷಣೆಗೆ ಆಗಮಿಸಿದ ಮಾಜಿ ಸಿಎಂ ನೇತೃತ್ವದ ಬಿಜೆಪಿ ನಿಯೋಗಕ್ಕೆ ಆರಂಭದಲ್ಲೇ ಪೊಲೀಸರು ಅಡ್ಡಿಪಡಿಸಿದರು. ಮುಖ್ಯ ದ್ವಾರದ ಬಳಿಯೇ ಬ್ಯಾರಿಕೇಡ್ಗಳನ್ನ ಹಾಕಿ ತಡೆಯೊಡ್ಡಿದ ಪೊಲೀಸರು ಪೂರ್ವಾನುಮತಿ ಇರುವ ಕೆಲವರಿಗಷ್ಟೇ ಡ್ಯಾಂ ವೀಕ್ಷಣೆಗೆ ಅವಕಾಶ …
Read More »
BigTv News
September 2, 2023
ಕರ್ನಾಟಕ, ಮಂಡ್ಯ, ಸುದ್ದಿ
ಮಂಡ್ಯ: ಪಾಂಡವಪುರ ಪುರಸಭೆ ವ್ಯಾಪ್ತಿಯ ಒಳಚರಂಡಿ ಕಾಮಗಾರಿಗೆ ಭೂಮಿ ನೀಡಿದ ರೈತರಿಗೆ ಭೂ ಪರಿಹಾರ ನೀಡದ ಹಿನ್ನೆಲೆ, ನ್ಯಾಯಾಲಯ ಆದೇಶದಂತೆ ಉಪವಿಭಾಗಾಧಿಕಾರಿ ಕಚೇರಿಯ ಉಪಕರಣ ಮತ್ತು ಅಧಿಕಾರಿ ವಾಹನ ಹಾಗೂ ಪುರಸಭೆ ಕಚೇರಿಯ ಪೀಠೋಪಕರಣ ಜಪ್ತಿ ಮಾಡಲಾಯಿತು. ಪಾಂಡವಪುರ ಅಪರ ಸಿವಿಲ್ ನ್ಯಾಯಾಲಯ ಆದೇಶದ ಮೇರೆಗೆ ನ್ಯಾಯಾಲಯದ ಅಮಿನ್ ಸಿಬ್ಬಂದಿಯಾದ ನಾರಾಯಣಗೌಡ, ಸಿದ್ದರಾಜ್, ತ್ರಿವೇಣಿ, ಆನಂದ್ರವರು ವಕೀಲ ಧರ್ಮಪುರ ಲೋಕೇಶ್ ಸಮ್ಮುಖದಲ್ಲಿ ಪಾಂಡವಪುರ ಉಪವಿಭಾಗಾಧಿಕಾರಿ ಕಚೇರಿಯಲ್ಲಿದ್ದ 13 ಕಂಪ್ಯೂಟರ್, ಅಧಿಕಾರಿಗೆ …
Read More »
BigTv News
July 26, 2023
ಕರ್ನಾಟಕ, ಮಂಡ್ಯ, ಸುದ್ದಿ
ಮಂಡ್ಯ: ಕಾವೇರಿ ನದಿಯ ಉಗಮ ಕೊಡಗು ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು ಮಂಡ್ಯ ಜಿಲ್ಲೆಯ ಜೀವನಾಡಿ ಕೃಷ್ಣರಾಜ ಸಾಗರ ಅಣೆಕಟ್ಟೆಯ (ಕೆಆರ್‌ಎಸ್) ನೀರಿನ ಮಟ್ಟ 100 ಅಡಿ ತಲುಪಿದೆ. ಡ್ಯಾಂಗೆ ಹರಿದು ಬರುತ್ತಿರುವ ನೀರಿನ ಪ್ರಮಾಣ ಕ್ಷಣ ಕ್ಷಣಕ್ಕೂ ಹೆಚ್ಚಳವಾಗುತ್ತಿದ್ದು, ಕಾವೇರಿ ಜಲಾಶಯಕ್ಕೆ ಜೀವಕಳೆ ತಂದಿದೆ. ಕಳೆದ 24 ಗಂಟೆಯಲ್ಲಿ 4 ಟಿಎಂಸಿ ನೀರು ಹರಿದು ಬಂದಿದೆ.ಇಂದು ಬೆಳಗ್ಗೆ 51,508 ಕ್ಯೂಸೆಕ್ ನೀರು ಹರಿದು ಬರುತ್ತಿತ್ತು. 124.80 ಅಡಿ ಗರಿಷ್ಠ …
Read More »
BigTv News
June 23, 2023
News, ಮಂಡ್ಯ, ಮಂಡ್ಯ, ಮಂಡ್ಯ
ಮಂಡ್ಯ: 40 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ತಹಶೀಲ್ದಾರ್ ಒಬ್ಬರು ಲೋಕಾಯುಕ್ತರ ಬಲೆಗೆ ಬಿದ್ದಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಪಾಂಡವಪುರ ತಹಶೀಲ್ದಾರ್ ಸೌಮ್ಯಾ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಗುರುವಾರ ಲೋಕಾಯುಕ್ತ ಇನ್ಸ್ಪೆಕ್ಟರ್ ಬ್ಯಾಟರಾಯಗೌಡ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ತಹಶೀಲ್ದಾರ್ ಕಚೇರಿಯಲ್ಲಿ 40 ಸಾವಿರ ರೂ. ಲಂಚ ತೆಗೆದುಕೊಳ್ಳುತ್ತಿದ್ದಾಗ ಸೌಮ್ಯಾ ಸಿಕ್ಕಿಬಿದ್ದಿದ್ದಾರೆ. ಗ್ರಾಮಲೆಕ್ಕಾಧಿಕಾರಿ ಒಬ್ಬರ ವರ್ಗಾವಣೆ ವಿಚಾರಕ್ಕೆ ಸೌಮ್ಯಾ 40 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಗ್ರಾಮಲೆಕ್ಕಾಧಿಕಾರಿ ಮರಿಸ್ವಾಮಿ …
Read More »
BigTv News
December 28, 2022
Breaking News, ಜಿಲ್ಲೆ, ಮಂಡ್ಯ
ಮಂಡ್ಯ : ಡಿ.30 ರಂದು ಮಂಡ್ಯದಲ್ಲಿ ಬೃಹತ್ ಸಮಾವೇಶ ನಡೆಯುತ್ತಿದ್ದು, ಅಮಿತ್ ಶಾ ಅವರ ಸ್ವಾಗತಕ್ಕೆ ಭರ್ಜರಿ ಸಿದ್ದತೆ ಮಾಡಲಾಗುತ್ತಿದೆ. ಮಂಡ್ಯದ ಸರ್ಕಾರಿ ಮಹಾ ವಿದ್ಯಾಲಯದಲ್ಲಿ ಸಕಲ ಸಿದ್ದತೆ ನಡೆಯುತ್ತಿದೆ. ಅಮಿತ್ ಶಾ ಡಿಸೆಂಬರ್ 30 ರಂದು ಮಂಡ್ಯಕ್ಕೆ ಆಗಮಿಸಲಿದ್ದಾರೆ. ಡಿ.30 ರಂದು ಮಂಡ್ಯದಲ್ಲಿ ಬೃಹತ್ ಸಮಾವೇಶ ನಡೆಸಲಾಗುತ್ತದೆ. ಮಂಡ್ಯದ ಸರ್ಕಾರಿ ಮಹಾವಿದ್ಯಾಲಯದ ಆವರಣದಲ್ಲಿ ಬೃಹತ್ ಸಮಾವೇಶ ನಡೆಯಲಿದೆ. ರಾಜ್ಯ ಬಿಜೆಪಿ ಪಕ್ಷದಿಂದ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಸರ್ಕಾರಿ ಮಹಾವಿದ್ಯಾಲಯದ …
Read More »
BigTv News
November 25, 2022
Breaking News, ಮಂಡ್ಯ
ಮಂಡ್ಯ: ಜಿಲ್ಲೆಯ ಪಾಂಡವಪುರ ಪಟ್ಟಣದಲ್ಲಿರುವ ಕ್ರೀಡಾಂಗಣದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಪುನೀತೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಡಾ.ರಾಜ್ ಕುಮಾರ್ ಅಪ್ಪಟ ಅಭಿಮಾನಿಯೂ ಆಗಿರುವ ಮೇಲುಕೋಟೆ ಕ್ಷೇತ್ರದ ಜೆಡಿಎಸ್ ಶಾಸಕ ಸಿ.ಎಸ್.ಪುಟ್ಟರಾಜು ನೇತೃತ್ವದಲ್ಲಿ ಆಯೋಜಿಸಿರುವ ಈ ಕಾರ್ಯಕ್ರಮಕ್ಕೆ ಸಂಜೆ ನಟ ನಿಖಿಲ್ ಕುಮಾರಸ್ವಾಮಿ ಅವರು ಚಾಲನೆ ನೀಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಸ್ಯಾಂಡಲ್ವುಡ್ನ ಹಲವು ನಟ ಮತ್ತು ನಟಿಯರು ಭಾಗಿಯಾಗಲಿದ್ದಾರೆ. ಕಾರ್ಯಕ್ರಮದಲ್ಲಿ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ , ಗಾಯಕ ವಿಜಯ ಪ್ರಕಾಶ್ …
Read More »
BigTv News
November 24, 2022
Breaking News, ಮಂಡ್ಯ
ಮಂಡ್ಯ : ರೆಬಲ್ ಸ್ಟಾರ್ ಅಂಬರೀಶ್ ಮತ್ತು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ದೈಹಿಕವಾಗಿ ದೂರವಾಗಿದ್ದರೂ ಸಹ ಕನ್ನಡಿಗರ ಹೃದಯ ಸಾಮ್ರಾಜ್ಯದಲ್ಲಿ ಅವರು ಸದಾ ಅಮರ. ಇದೀಗ ಪುನೀತ್ ರಾಜ್‌ಕುಮಾರ್ ಮತ್ತು ಅಂಬರೀಷ್ ಅವರ ಅಭಿಮಾನಿಗಳು ಒಂದೇ ಗುಡಿಯಲ್ಲಿ ಇಬ್ಬರು ಮೇರು ನಟರ ಮೂರ್ತಿಗಳನ್ನು ಪ್ರತಿಷ್ಠಾಪಿಸುವ ಮೂಲಕ ಅಭಿಮಾನ ಮೆರೆದಿದ್ದಾರೆ. ಮದ್ದೂರು ತಾಲೂಕಿನ ಡಿ.ಹೊಸೂರು ಗ್ರಾಮದ ಅಪ್ಪು ಮತ್ತು ಅಂಬಿ ಫ್ಯಾನ್ಸ್ ಇಂತಹ ಅಪರೂಪದ ಕಾರ್ಯಕ್ಕೆ ಸಾಕ್ಷಿಯಾಗಿದ್ದಾರೆ. ಒಂದೇ …
Read More »
BigTv News
November 14, 2022
Breaking News, ಜಿಲ್ಲೆ, ಮಂಡ್ಯ
ಮಂಡ್ಯ: ನಗರದ ಹೊರವಲಯದ ಕಾರಿಮನೆ ಗೇಟ್ ಬಳಿ ರಸ್ತೆ ಗುಂಡಿಯಿಂದಾಗಿ ಸಂಭವಿಸಿದ ಅಫಘಾತದಲ್ಲಿ ನಿವೃತ್ತ ಯೋಧ ಸ್ಥಳದಲ್ಲೇ ದುರಂತ ಅಂತ್ಯಕಂಡಿದ್ದಾರೆ. ಮಂಡ್ಯ ತಾಲೂಕಿನ ಸಾತನೂರು ಗ್ರಾಮದ ಬೀರೇಶ್ವರ ಬಡಾವಣೆಯ ನರಸಯ್ಯ ಅವರ ಮಗ ಕುಮಾರ್(34) ಮೃತರು.ಭಾರತೀಯ ಸೇನೆಯಲ್ಲಿ ನಿವೃತ್ತರಾದ ನಂತರ ಊರಿಗೆ ಆಗಮಿಸಿದ್ದ ಕುಮಾರ್ಗೆ ಗ್ರಾಮಸ್ಥರು ಅದ್ದೂರಿ ಮೆರವಣಿಗೆ ಮಾಡಿ ಸ್ವಾಗತಿಸಿದ್ದರು. ಪೊಲೀಸ್ ಇಲಾಖೆಗೆ ಕೆಲಸವೂ ಸಿಕ್ಕಿತ್ತು. ಬೆಂಗಳೂರಿನಲ್ಲಿ ಪೊಲೀಸ್ ಕಾನ್ಸ್ಟೆಬಲ್ ತರಬೇತಿಯನ್ನೂ ಪಡೆಯುತ್ತಿದ್ದ ಕುಮಾರ್, ರಜೆ ಮೇರೆಗೆ ಗ್ರಾಮಕ್ಕೆ …
Read More »
BigTv News
October 19, 2022
Breaking News, ಜಿಲ್ಲೆ, ಮಂಡ್ಯ
ಮಂಡ್ಯ: ಕಾಮುಕ ಟ್ಯೂಶನ್ ಶಿಕ್ಷಕನಿಂದ ಅತ್ಯಾಚಾರಕ್ಕೆ ಒಳಗಾಗಿ ಕೊಲೆಯಾದ ಮಳವಳ್ಳಿ ಪಟ್ಟಣದ ಬಾಲಕಿ ನಿವಾಸಕ್ಕೆ ಇಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ಮಂಡ್ಯ ಜಿಲ್ಲೆ ಮಳವಳ್ಳಿ ಪಟ್ಟಣದ ಮೈಸೂರು ರಸ್ತೆಯಲ್ಲಿರುವ ಬಾಲಕಿ ನಿವಾಸಕ್ಕೆ ತೆರಳಿ ಸಾಂತ್ವನ ಹೇಳಿದ್ದಾರೆ. ಇದೇ ವೇಳೆ ಮೃತ ಬಾಲಕಿ ಕುಟುಂಬಕ್ಕೆ ಶಾಸಕ ಜಮೀರ್ 5 ಲಕ್ಷ ರೂಪಾಯಿ ಪರಿಹಾರ ನೀಡಿದ್ದಾರೆ. ಬಳಿಕ ಮಾತನಾಡಿದ …
Read More »
BigTv News
October 17, 2022
Breaking News, ಮಂಡ್ಯ
ಮಂಡ್ಯ :16 ಕೆರೆಗಳನ್ನು ನಿರ್ಮಿಸುವ ಮೂಲಕ ದೇಶದ ಗಮನ ಸೆಳೆದಿದ್ದ ಹಾಗೂ ಈ ಕಾರಣಕ್ಕಾಗಿಯೇ ಪ್ರಧಾನಿ ನರೇಂದ್ರ ಮೋದಿಯವರ ಶ್ಲಾಘನೆಗೆ ಪಾತ್ರರಾಗಿದ್ದ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕು ದಾಸನದೊಡ್ಡಿ ಗ್ರಾಮದ ಕಲ್ಮನೆ ಕಾಮೇಗೌಡ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ 86 ವರ್ಷದ ಕಾಮೇಗೌಡ ಇಂದು ಮುಂಜಾನೆ ವಿಧಿವಶರಾಗಿದ್ದು, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಕಾಮೇಗೌಡರ ಸಾಮಾಜಿಕ ಕಾರ್ಯ ಪರಿಗಣಿಸಿ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿ, ಪುರಸ್ಕಾರಗಳು ಅವರನ್ನು ಹುಡುಕಿಕೊಂಡು ಬಂದಿದ್ದವು. ಪ್ರಧಾನಿ …
Read More »