Shaikh BigTv
September 15, 2024
Breaking News, ಧಾರವಾಡ, ಧಾರವಾಡ
ಧಾರವಾಡ : ಡಾ.ಬಿ.ಆರ್.ಅಂಬೇಡ್ಕರ್ ಅವರು ಬರೆದ ಸಂವಿಧಾನದಲ್ಲಿ ಎಲ್ಲರಿಗೂ ಸ್ವಾತಂತ್ರ್ಯ, ಸಮಾನತೆ ಹಾಗೂ ಭಾತೃತ್ವ ದೊರೆಯುವಂತೆ ಮಾಡಿದ್ದಾರೆ. ಪ್ರತಿಯೊಬ್ಬರೂ ದೇಶದ ಏಕತೆಯನ್ನು ಕಾಪಾಡಿಕೊಂಡು ಹೋಗಬೇಕು ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋμï ಲಾಡ್ ಹೇಳಿದರು. ಇಂದು ಕರ್ನಾಟಕ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಬೃಹತ್ ಮಾನವ ಸರಪಳಿ ನಿರ್ಮಾಣ ಕಾರ್ಯಕ್ರಮಕ್ಕೆ ನಗಾರಿ ಬಾರಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು. ಪ್ರಜಾಪ್ರಭುತ್ವವು ಸ್ವಾತಂತ್ರ್ಯ, …
Read More »
Shaikh BigTv
September 15, 2024
Breaking News, ಧಾರವಾಡ
ಧಾರವಾಡ: ಧಾರವಾಡದ ಸಿಎಸ್‌ಐ ಕಾಲೇಜಿನಲ್ಲಿ ಕಾಮರ್ಸ್ ಪದವಿ ಪಡೆದಿರುವ ತೆಲಗು ನಟ ಶ್ರೀಕಾಂತ ಅವರು ಭಾನುವಾರ ಧಾರವಾಡಕ್ಕೆ ಬಂದು ತಮ್ಮ ಹಳೆಯ ಗೆಳೆಯರನ್ನು ಭೇಟಿ ಮಾಡಿ, ಉಪಹಾರ ಸೇವಿಸಿ ಹೋಗಿದ್ದಾರೆ. ಮೂಲತಃ ಗಂಗಾವತಿಯವರಾದ ಶ್ರೀಕಾಂತ, ಧಾರವಾಡ ಸಿಎಸ್‌ಐ ಕಾಲೇಜಿನಲ್ಲಿ ಕಾಮರ್ಸ್ ಪದವಿ ಪಡೆದಿದ್ದಾರೆ. ಬೆಂಗಳೂರಿನಿಂದ ವಿಮಾನದ ಮೂಲಕ ಹುಬ್ಬಳ್ಳಿಗೆ ಬಂದ ಅವರು, ತಮ್ಮ ಸ್ವಂತ ಊರು ಗಂಗಾವತಿಗೆ ಹೊರಟಿದ್ದರು. ಈ ವೇಳೆ ಧಾರವಾಡದ ತಮ್ಮ ಸ್ನೇಹಿತ ಉಪವನ ಹೋಟೆಲ್ ಮಾಲೀಕರಾದ …
Read More »
Shaikh BigTv
September 14, 2024
Breaking News, ಧಾರವಾಡ
ಅಣ್ಣಿಗೇರಿ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ನವಲಗುಂದ ತಾಲೂಕ ಶಾಸಕರ ಮಾದರಿ ಕೇಂದ್ರ ಶಾಲೆ, ಸರಕಾರಿ ಕನ್ನಡ ಹೆಣ್ಣು ಮಕ್ಕಳ ಶಾಲೆ, ಶ್ರೀ ಅಮೃತೇಶ್ವರ ಪದವಿ ಪೂರ್ವ ಕಾಲೇಜು ಅಣ್ಣಿಗೇರಿ ಇವರ ಸಂಯುಕ್ತಾಶ್ರಯದಲ್ಲಿ ಶನಿವಾರ ನವಲಗುಂದ ವಿಧಾನಸಭಾ ಮತಕ್ಷೇತ್ರ ಅಣ್ಣಿಗೇರಿ ನಗರದ ಶಾಸಕರ ಮಾದರಿ ಶಾಲೆ ಆವರಣದಲ್ಲಿ ಹಮ್ಮಿಕೊಂಡಿದ್ದ ನವಲಗುಂದ ತಾಲೂಕಾ ಮಟ್ಟದ ಪ್ರಾಥಮಿಕ & ಪ್ರೌಡ ಶಾಲೆಗಳ ಇಲಾಖಾ 2024-25ರ ಕ್ರೀಡಾಕೂಟ ಉದ್ಘಾಟನೆಯನ್ನು ಶಾಸಕ ಕೋನ ರೆಡ್ಡಿ ಅವರು ನೆರವೇರಿಸಿದರು. …
Read More »
Shaikh BigTv
September 14, 2024
Breaking News, ಧಾರವಾಡ
ನವಲಗುಂದ : ತಾಲೂಕಿನ ಕಾಲವಾಡ ಗ್ರಾಮದ ಕ್ರಾಸ್‌ನಲ್ಲಿ ಬಸ್ ನಿಲುಗಡೆಗಾಗಿ ಆಗ್ರಹಿಸಿ ಕಾಲವಾಡ ಗ್ರಾಮದ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಟ್ರ್ಯಾಕ್ಟರ್‌ಗಳಲ್ಲಿ ನವಲಗುಂದಕ್ಕೆ ಬಂದು ತಹಶೀಲ್ದಾರ್ ಕಾರ್ಯಾಲಯದ ಎದುರಿಗೆ ಕೆಲ ಕಾಲ ಪ್ರತಿಭಟನೆ ನಡೆಸಿದರು. ತಾಲೂಕು ಕೇಂದ್ರದಿಂದ 12ಕಿ. ಮೀ ದೂರದಲ್ಲಿರುವ ಕಾಲವಾಡ ಗ್ರಾಮದ ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ಶಾಲೆ, ಕಾಲೇಜುಗಳಿಗೆ ತೆರಳಲು ಅನುಕೂಲವಾಗುವಂತೆ ಗ್ರಾಮದಿಂದ 2 ಕಿ.ಮೀ ದೂರದಲ್ಲಿರುವ ಕಾಲವಾಡ ಕ್ರಾಸ್‌ನಲ್ಲಿ ಬಸ್ ನಿಲುಗಡೆ ಮಾಡದಿರುವುದರಿಂದ ತೊಂದರೆಯಾಗುತ್ತಿದೆ ಎಂದು ಪ್ರತಿಭಟನಕಾರರು …
Read More »
Shaikh BigTv
September 14, 2024
Breaking News, ಧಾರವಾಡ
ನವಲಗುಂದ: ನೇಪಾಳದಲ್ಲಿ ನಡೆದ ಅಂತಾರಾಷ್ಟ್ರೀಯ ಕುಸ್ತಿ ಪಂದ್ಯಾವಳಿಯಲ್ಲಿ ನವಲಗುಂದ ತಾಲೂಕಿನ ಹನಸಿ ಗ್ರಾಮದ ಬಸವರಾಜ ವಡ್ಡರ ಅವರು 80 ಕೆಜಿ ಕುಸ್ತಿ ವಿಭಾಗದಲ್ಲಿ ಸ್ಪರ್ಧಿಸಿ ಬಂಗಾರದ ಪದಕ ಮುಡಿಗೇರಿಸಿಕೊಂಡಿದ್ದಾರೆ. ನೇಪಾಳದಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ಭಾರತ ದೇಶದ ಪರವಾಗಿ 80 ಕೆಜಿ ವಿಭಾಗದ 30 ವರ್ಷ ವಯಸ್ಸಿನ ಒಳಗಿನ ಕುಸ್ತಿ ಪಂದ್ಯಾವಳಿಯಲ್ಲಿ ಬಂಗಾರದ ಪದಕವನ್ನು ಗೆದ್ದು ದೇಶದ, ನಾಡಿನ ಹಿರೇಮೆ ಜೊತೆಗೆ ರೈತ ಬಂಡಾಯ ನಾಡಿನ ಕೀರ್ತಿ …
Read More »
Shaikh BigTv
September 14, 2024
Breaking News, ಧಾರವಾಡ
ನವಲಗುಂದ: ನಗರದ ಪುರಸಭೆಯಲ್ಲಿ ಇರುವ ಜನನ ಮತ್ತು ಮರಣ ವಿಭಾಗದ ಅಧಿಕಾರಿಗಳ ಕಣ್ಣು ತಪ್ಪಿ ಈ ಕೆಲಸ ನಡೆದಿದೆ ಎಂದು ಶಾಸಕ ಎನ್.ಎಚ್.ಕೋನರಡ್ಡಿ ಹೇಳಿದರು. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪುರಸಭೆ ಅಧಿಕಾರಿಗಳಿಗೆ ಈ ಬಗ್ಗೆ ಮಾಹಿತಿ ಇರುವುದಿಲ್ಲ. ನಮ್ಮ ಪುರಸಭೆ ಸದಸ್ಯರಿಗೆ ಈಗಾಗಲೇ ನಾನು ಸೂಕ್ತ ಮಾಹಿತಿ ಇಲ್ಲದೆ ಸಹಿ ಮಾಡಬಾರದು ಎಂದು ತಾಕೀತು ಮಾಡಿದ್ದೇನೆ ಎಂದರು.
Read More »
Shaikh BigTv
September 14, 2024
Breaking News, ಧಾರವಾಡ
ನವಲಗುಂದ: ಪಟ್ಟಣದ ಪುರಸಭೆ ಅಧಿಕಾರಿಗಳು ಜೀವಂತ ಇದ್ದ ವ್ಯಕ್ತಿಗೆ ಮರಣ ಪ್ರಮಾಣ ಪತ್ರ ನೀಡಿದ ಕುರಿತು ಜಿಲ್ಲಾಧಿಕಾರಿ ದಿವ್ಯಪ್ರಭು ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಈಗಾಗಲೇ ಪುರಸಭೆ ಮುಖ್ಯಾಧಿಕಾರಿಯೊಂದಿಗೆ ಚರ್ಚೆ ಮಾಡಿದ್ದೇನೆ. ತನಿಖಾ ತಂಡ ರಚಿಸಿ, ಈ ಪ್ರಕರಣದಲ್ಲಿ ಭಾಗಿ ಆದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.
Read More »
BigTv News
September 14, 2024
Breaking News, ಧಾರವಾಡ
ಧಾರವಾಡ: ದೇಶದ ಟಾಪ್ ಟೆನ್ ಕೃಷಿ ವಿಶ್ವವಿದ್ಯಾಲಯಗಳ ಪಟ್ಟಿಯಲ್ಲಿರುವ ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕೃಷಿ ಮೇಳವನ್ನು ಇದೇ ಸೆಪ್ಟೆಂಬರ್ 21ರಿಂದ 24 ರವರೆಗೆ ನಡೆಸಲಾಗುತ್ತಿದೆ ಎಂದು ಕೃಷಿ ವಿವಿ ಕುಲಪತಿ ಡಾ. ಪಿ.ಎಲ್. ಪಾಟೀಲ್ ಹೇಳಿದರು. ಕೆವಿವಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹವಾಮಾನ ವೈಪರೀತ್ಯ ನಿರ್ವಹಣೆಗೆ ಕೃಷಿ ತಾಂತ್ರಿಕತೆಗಳು ವಿಷಯದ ಮೇಲೆ ಕೃಷಿ ಮೇಳವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದು, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ, ಸಭಾಪತಿ ಬಸವರಾಜ ಹೊರಟ್ಟಿ, ಕೇಂದ್ರ …
Read More »
Shaikh BigTv
September 14, 2024
Breaking News, ಧಾರವಾಡ
ಧಾರವಾಡ: ಕೇಂದ್ರ ಪುರಸ್ಕøತ ಜನಪರ ಕಲ್ಯಾಣ ಯೋಜನೆಗಳು ರೈತರಿಗೆ ಜನ ಸಾಮಾನ್ಯರಿಗೆ ಅಧಿಕಾರಿಗಳು ಸರಿಯಾದ ಸಮಯಕ್ಕೆ ತಲುಪಿಸಲಿ ಎಂದು ಕೇಂದ್ರ ಗ್ರಾಹಕರ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣೆ ಹಾಗೂ ನವೀಕರಿಸಬಹುದಾದ ಇಂಧನ ಸಚಿವರು ಹಾಗೂ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಚಿವರಾದ ಪ್ರಲ್ಹಾದ ಜೋಶಿ ತಿಳಿಸಿದರು. ಧಾರವಾಡ ಜಿಲ್ಲಾ ಪಂಚಾಯತನಲ್ಲಿ ಇಂದು ಜರುಗಿದ ದಿಶಾ ಸಮಿತಿಯ ಮೊದಲನೇ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಬೆಳೆ ಪರಿಹಾರ …
Read More »
Shaikh BigTv
September 14, 2024
Breaking News, ಧಾರವಾಡ
ಧಾರವಾಡ : ಈಗ ರೈತರು ಸಂಕಷ್ಟದಲ್ಲಿದ್ದೂ ಅನಗತ್ಯವಾಗಿ ಕೆಲವು ಬ್ಯಾಂಕ್ ಗಳು ಬೆಳೆಸಾಲ ನೀಡಲು ರೈತರಿಗೆ ಸಿಬಿಲ್ ರೇಟ್ ಕಡ್ಡಾಯ ಮಾಡುತ್ತಿವೆ. ಇದರಿಂದ ರೈತರಿಗೆ ಮತ್ತು ರೈತರು ಉತ್ಪಾದಿಸುವ ಆಹಾರದ ಮೇಲೆ ನೇರ ಪ್ರಭಾವ ಬೀರುತ್ತದೆ. ಬ್ಯಾಂಕರ್ಸ್ ಗಳು ಅನ್ವಯವಾಗದ ಕಾಯ್ದೆ, ನಿಯಮಗಳನ್ನು ಹೇಳಿ ರೈತರಿಗೆ ಬೆಳೆ ಸಾಲ ನೀಡುವಲ್ಲಿ ವಿನಾಕಾರಣ ತೊಂದರೆ ಕೊಡಬಾರದು. ಯಾವುದೇ ತಕರಾರು ಇಲ್ಲದೆ ರೈತರಿಗೆ ರೂ.10 ಲಕ್ಷ ವರೆಗೆ ಬೆಳೆಸಾಲ ನೀಡಲು ಆರ್.ಬಿ.ಐ ಮಾರ್ಗಸೂಚಿಗಳಿವೆ. …
Read More »